Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 7:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಅರಸನು ದುಃಖಿಸುವನು, ಭಯವು ಪ್ರಭುವನ್ನು ಮುಸುಕುವುದು, ಸಾಧಾರಣಜನರ ಕೈಗಳು ತತ್ತರಿಸುವವು; ನಾನು ಅವರ ದುರ್ನಡತೆಗೆ ತಕ್ಕ ಪ್ರತಿಕಾರವನ್ನು ಮಾಡಿ, ಅವರ ದುಷ್ಟ ಕಾರ್ಯಗಳಿಗೆ ಸರಿಯಾಗಿ ದಂಡನೆಯನ್ನು ವಿಧಿಸುವೆನು; ಆಗ ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ರಾಜನು ದುಃಖಿಸುವನು, ದಿಗಿಲು ಒಡೆಯನನ್ನು ಮುಸುಕುವುದು, ಜನಸಾಮಾನ್ಯರ ಕೈಗಳು ತತ್ತರಿಸುವುವು; ನಾನು ಅವರ ದುರ್ನಡತೆಗೆ ತಕ್ಕ ಪ್ರತೀಕಾರವನ್ನು ಮಾಡಿ ಅವರ ದುಷ್ಕರ್ಮಗಳಿಗೆ ಸರಿಯಾದ ದಂಡನೆಯನ್ನು ವಿಧಿಸುವೆನು; ನಾನೇ ಸರ್ವೇಶ್ವರ ಎಂದು ಅವರಿಗೆ ಗೊತ್ತಾಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಅರಸನು ದುಃಖಿಸುವನು. ದಿಗಿಲು ಪ್ರಭುವನ್ನು ಮುಸುಕುವದು, ಸಾಧಾರಣ ಜನರ ಕೈಗಳು ತತ್ತರಿಸುವವು; ನಾನು ಅವರ ದುರ್ನಡತೆಗೆ ತಕ್ಕ ಪ್ರತೀಕಾರವನ್ನು ಮಾಡಿ ಅವರ ದುಷ್ಕರ್ಮಗಳಿಗೆ ಸರಿಯಾಗಿ ದಂಡನೆಯನ್ನು ವಿಧಿಸುವೆನು; ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಸತ್ತುಹೋದ ಜನರಿಗಾಗಿ ನಿಮ್ಮ ರಾಜನು ಗೋಳಾಡುವನು; ನಾಯಕನಿಗೆ ನಿರೀಕ್ಷೆಯು ಇಲ್ಲವಾಗುವುದು. ಸಾಮಾನ್ಯ ಜನರು ಭಯಗ್ರಸ್ತರಾಗುವರು. ಯಾಕೆಂದರೆ ನಾನು ಅವರ ನಡತೆಗೆ ತಕ್ಕಂತೆ ಅವರಿಗೆ ಮಾಡುವೆನು; ಅವರು ಬೇರೆಯವರಿಗೆ ನ್ಯಾಯ ತೀರಿಸಿದಂತೆ ನಾನು ಅವರಿಗೆ ನ್ಯಾಯತೀರಿಸುವೆನು. ನಾನೇ ಯೆಹೋವನೆಂದು ಆಗ ಅವರು ತಿಳಿದುಕೊಳ್ಳುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಅರಸನು ದುಃಖಿಸುವನು, ರಾಜಕುಮಾರನಿಗೆ ನಿರಾಶೆಯು ಅವನ ಉಡುಪಾಗಿರುತ್ತದೆ. ದೇಶದ ಜನರ ಕೈಗಳು ತತ್ತರಿಸುವುವು, ಅವರ ದುರ್ನಡತೆಗೆ ತಕ್ಕ ಪ್ರತೀಕಾರ ಮಾಡುವೆನು. ಅವರ ದುಷ್ಕರ್ಮಗಳ ಪ್ರಕಾರ ಅವರಿಗೆ ನ್ಯಾಯತೀರಿಸುವೆನು. “ ‘ಆಗ ನಾನೇ ಯೆಹೋವ ದೇವರೆಂದು ಅವರಿಗೆ ತಿಳಿಯುವುದು.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 7:27
22 ತಿಳಿವುಗಳ ಹೋಲಿಕೆ  

ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲ್ ವಂಶದವರೇ, ನಿಮ್ಮ ನಿಮ್ಮ ನಡತೆಗೆ ತಕ್ಕ ಹಾಗೆ ನಾನು ನಿಮಗೆ ತೀರ್ಪುಮಾಡುವೆನು; ಅಧರ್ಮವು ನಿಮ್ಮನ್ನು ನಾಶಮಾಡದಂತೆ ತಿರುಗಿಕೊಂಡು ನಿಮ್ಮ ಅಪರಾಧಗಳನ್ನೆಲ್ಲಾ ಬಿಟ್ಟುಬಿಡಿರಿ.


ಏಕೆಂದರೆ ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವುದಿಲ್ಲ. ಕರುಣೆಯು ನ್ಯಾಯತೀರ್ಪಿನ ಮೇಲೆ ಜಯ ಹೊಂದುತ್ತದೆ.


ನೀವು ಮಾಡುವ ತೀರ್ಪಿಗೆ ಸರಿಯಾಗಿ ನಿಮಗೂ ತೀರ್ಪಾಗುವುದು; ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆಯುವರು.


ನಿಮ್ಮ ದೇವರಾದ ಯೆಹೋವನು ನಾನೇ ಎಂದು ನಿಮಗೆ ಮನದಟ್ಟಾಗುವುದು. ಆಗ ನಾನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನಲ್ಲಿ ನೆಲೆಸುವುದರಿಂದ, ಯೆರೂಸಲೇಮ್ ಪವಿತ್ರವಾಗಿರುವುದು. ಅನ್ಯರು ಇನ್ನು ಅದರಲ್ಲಿ ಹಾದುಹೋಗುವುದಿಲ್ಲ.


ಆಗ ಸಮುದ್ರದ ಸುತ್ತುಮುತ್ತಲಿನ ಸಕಲ ಅರಸರು ತಮ್ಮ ಸಿಂಹಾಸನದಿಂದ ಇಳಿದು, ನಿಲುವಂಗಿಗಳನ್ನು ತೆಗೆದುಹಾಕಿ, ವಿಚಿತ್ರವಾಗಿ ಹೊಲೆದ ತಮ್ಮ ಕಸೂತಿಯ ಬಟ್ಟೆಯನ್ನು ಕಿತ್ತುಹಾಕಿ, ತತ್ತರವನ್ನೇ ಹೊದ್ದುಕೊಂಡು, ನೆಲದ ಮೇಲೆ ಕುಳಿತು, ಕ್ಷಣ ಕ್ಷಣಕ್ಕೂ ನಡುಗುತ್ತಾ, ನಿನ್ನ ವಿಷಯವಾಗಿ ಆಶ್ಚರ್ಯಪಡುವರು.


ಇಸ್ರಾಯೇಲಿನ ದೊರೆಯೇ, ದುಷ್ಟನೇ, ಭ್ರಷ್ಟನೇ! ನಿನಗೆ ಸಮಯವು ಹತ್ತಿರವಾಗಿದೆ; ಇದೇ ನಿನ್ನ ಅಪರಾಧದ ಕಡೆಗಾಲ.”


ದುಷ್ಟರ ಗತಿಯನ್ನು ಏನು ಹೇಳಲಿ! ಅವರ ಕಾರ್ಯಗಳಿಗೆ ತಕ್ಕ ಪ್ರತಿಫಲವು ಅವರಿಗೆ ದೊರಕುವುದು.


ಯೆಹೋವನು ನ್ಯಾಯತೀರಿಸುವವನಾಗಿ ತನ್ನನ್ನು ಪ್ರಕಟಿಸಿಕೊಂಡಿದ್ದಾನೆ; ದುಷ್ಟರು ತಾವೇ ಕಲ್ಪಿಸಿದ ಕುಯುಕ್ತಿಯಲ್ಲಿ ಸಿಕ್ಕಿಕೊಂಡಿದ್ದಾರಲ್ಲಾ. ಹಿಗ್ಗಾಯೋನ್ ಸೆಲಾ


ಆಗ ದೇವರ ಮನುಷ್ಯನು ಇಸ್ರಾಯೇಲರ ಅರಸನ ಬಳಿಗೆ ಬಂದು ಅವನಿಗೆ, “ಯೆಹೋವನು ಹೀಗೆನ್ನುತ್ತಾನೆ, ಯೆಹೋವನು ತಗ್ಗುಗಳ ದೇವರಲ್ಲ. ಬೆಟ್ಟಗಳ ದೇವರಾಗಿರುತ್ತಾನೆ ಅಂದುಕೊಂಡು ಬಂದಿರುವ ಈ ಅರಾಮ್ಯರ ಮಹಾ ಸಮೂಹವನ್ನು ನಿನ್ನ ಕೈಗೆ ಒಪ್ಪಿಸುವೆನು. ಇದರಿಂದ ನಾನು ಯೆಹೋವನೇ ಎಂದು ನಿನಗೆ ಗೊತ್ತಾಗುವುದು” ಎಂದು ಹೇಳಿದನು.


ನಿನ್ನ ಶತ್ರುಗಳನ್ನು ಅವಮಾನವು ಮುಸುಕುವುದು; ದುಷ್ಟರ ನಿವಾಸವು ನಿರ್ಮೂಲವಾಗುವುದು.”


ನನ್ನ ಕೇಡಿನಲ್ಲಿ ಹಿಗ್ಗುವವರೆಲ್ಲರು ಆಶಾಭಂಗಪಟ್ಟು ಅವಮಾನಹೊಂದಲಿ; ನನ್ನನ್ನು ಹೀಯಾಳಿಸಿ ಆತ್ಮಸ್ತುತಿಮಾಡಿಕೊಳ್ಳುವವರು, ಅವಮಾನವನ್ನೂ, ಅಪಕೀರ್ತಿಯನ್ನೂ ಹೊಂದಲಿ.


ಅವನು ಶಾಪವನ್ನೇ ವಸ್ತ್ರವನ್ನಾಗಿ ಹೊದ್ದುಕೊಳ್ಳಲಿ, ಅದು ನೀರಿನಂತೆ ಅವನ ಅಂತರಂಗದಲ್ಲಿಯೂ, ಎಣ್ಣೆಯಂತೆ ಎಲುಬುಗಳಲ್ಲಿಯೂ ಸೇರಲಿ.


ಶಾಪವೇ ಅವನ ಹೊದಿಕೆಯಂತೆಯೂ, ನಿತ್ಯವಾದ ನಡುಕಟ್ಟಿನಂತೆಯೂ ಆಗಲಿ.


ಮಾನಭಂಗವೇ ನನ್ನ ವಿರೋಧಿಗಳಿಗೆ ವಸ್ತ್ರವಾಗಲಿ; ನಾಚಿಕೆಯೇ ಅವರ ಹೊದಿಕೆಯಾಗಲಿ.


ಯೆಹೋಯಾಖೀನನು ಸೆರೆಯಾದ ಆರನೆಯ ವರ್ಷದ, ಆರನೆಯ ತಿಂಗಳಿನ, ಐದನೆಯ ದಿನದಲ್ಲಿ ನಾನೂ ಮತ್ತು ಯೆಹೂದದ ಹಿರಿಯರೂ ನನ್ನ ಮನೆಯೊಳಗೆ ಎದುರಾಗಿ ಕುಳಿತಿರಲು ಕರ್ತನಾದ ಯೆಹೋವನ ಹಸ್ತಸ್ಪರ್ಶದಿಂದ ನಾನು ಪರವಶನಾದೆನು.


ಈಗಲೇ ನಿನಗೆ ಅಂತ್ಯವು ಬಂದಿದೆ; ನಾನು ನನ್ನ ಕೋಪವನ್ನು ನಿನ್ನ ಮೇಲೆ ಬರಮಾಡಿ, ನಿನ್ನ ನಡತೆಗೆ ತಕ್ಕಂತೆ ನ್ಯಾಯತೀರಿಸಿ ನಿನ್ನ ಸಮಸ್ತ ಅಸಹ್ಯಕಾರ್ಯಗಳ ಫಲವನ್ನು ನಿನಗೆ ತಿನ್ನಿಸುವೆನು.


ನೀವು ಅವರ ದುರ್ಮಾರ್ಗ, ದುಷ್ಕೃತ್ಯಗಳನ್ನು ನೋಡುವಾಗ ಅವರಿಂದಲೇ ನಿಮಗೆ ಸಮಾಧಾನವಾಗುವುದು; ನಾನು ಯೆರೂಸಲೇಮಿಗೆ ಮಾಡಿದ್ದೆಲ್ಲಾ ಕಾರಣವಿಲ್ಲದೆ ಮಾಡಿದ್ದಲ್ಲವೆಂದು ನಿಮಗೆ ತಿಳಿದು ಬರುವುದು” ಇದು ಕರ್ತನಾದ ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು