Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 7:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ದೇಶ ನಿವಾಸಿಯೇ, ನಿನ್ನ ಗತಿ ಮುಗಿಯಿತು. ಸಮಯ ಬಂದಿತು, ದಿನ ಸಮೀಪಿಸಿತು; ಬೆಟ್ಟಗಳ ಮೇಲೆ ಕೇಳಿಸುವ ಧ್ವನಿಯು ಉತ್ಸಾಹ ಧ್ವನಿಯಲ್ಲ, ಅದು ಕಳವಳವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ದೇಶನಿವಾಸಿಯೇ, ನಿನ್ನ ಗತಿ ಮುಗಿಯಿತು, ಸಮಯ ಬಂದಿತು, ದಿನ ಸಮೀಪಿಸಿತು; ಬೆಟ್ಟಗಳ ಮೇಲೆ ಕೇಳಿಸುವ ಧ್ವನಿ ಉತ್ಸಾಹಧ್ವನಿಯಲ್ಲ , ಅದು ಬರೀ ಗೋಳೇ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ದೇಶನಿವಾಸಿಯೇ, ನಿನ್ನ ಗತಿ ಆಯಿತು. ಸಮಯ ಬಂತು, ದಿನ ಹತ್ತರಿಸಿತು; ಬೆಟ್ಟಗಳ ಮೇಲೆ ಕೇಳಿಸುವ ಧ್ವನಿಯು ಉತ್ಸಾಹ ಧ್ವನಿಯಲ್ಲ, ಕಳಕಳವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಇಸ್ರೇಲ್ ದೇಶದಲ್ಲಿ ವಾಸಿಸುವ ಜನರೇ, ನಿಮಗೆ ಆಪತ್ತು ಬರುವುದು, ಸಮಯವು ಬರುತ್ತಿದೆ. ದಿನವು ಸಮೀಪಿಸಿದೆ. ಬೆಟ್ಟಗಳ ಮೇಲೆ ಆನಂದ ಬೋಷಗಳ ಬದಲು ಯುದ್ಧದ ಕೂಗಾಟಗಳು ಇರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಓ ದೇಶ ನಿವಾಸಿಯೇ, ನಿನಗಾಗಿ ವಿನಾಶದ ದಿನ ಬಂದಿತು, ಕಾಲವು ಬಂತು, ತೊಂದರೆಯ ದಿನವು ಹತ್ತಿರವಾಯಿತು. ಪರ್ವತಗಳ ಮೇಲೆ ಸಂತೋಷವಲ್ಲ ಭೀತಿಯಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 7:7
16 ತಿಳಿವುಗಳ ಹೋಲಿಕೆ  

“ಆದಕಾರಣ ನೀನು ಅವರಿಗೆ ಹೀಗೆ ಹೇಳು, ‘ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ಇನ್ನು ಮೇಲೆ ನನ್ನ ಮಾತುಗಳಲ್ಲಿ ಯಾವುದೂ ನೆರವೇರದೆ ಇರದು; ನಾನಾಡುವ ಮಾತು ನೆರವೇರುವುದು ಖಂಡಿತ’ ಇದು ಕರ್ತನಾದ ಯೆಹೋವನ ನುಡಿ.”


ಸಮಯ ಬಂದಿದೆ, ದಿನ ಸಮೀಪಿಸಿತು; ಕೊಂಡುಕೊಳ್ಳುವವನು ಹರ್ಷಿಸದಿರಲಿ, ಮಾರುವವನು ದುಃಖಿಸದಿರಲಿ; ರೋಷಾಗ್ನಿಯು ಆ ಸಮೂಹದವರೆಲ್ಲರ ಮೇಲೆ ಹತ್ತಿದೆ.


ಸೇನಾಧೀಶ್ವರನಾದ ಯೆಹೋವನೆಂಬ ಕರ್ತನಿಂದ ದಿವ್ಯದರ್ಶನದ ಕಣಿವೆಗೆ ಗಲಿಬಿಲಿಯ ದಿನ, ತುಳಿದಾಟದ ದಿನ, ಭ್ರಾಂತಿಯ ದಿನ, ಕೋಟೆಯು ಒಡೆದು ಹೋಗಲು, ಕೂಗು ಬೆಟ್ಟವನ್ನು ಮುಟ್ಟುವ ದಿನ ಬಂದಿದೆ.


ಹೊತ್ತು ಮೂಡುವುದಕ್ಕೆ ಮುಂಚೆ ಆ ದೂತರು ಲೋಟನಿಗೆ, “ನೀನೆದ್ದು ಇಲ್ಲಿರುವ ನಿನ್ನ ಹೆಂಡತಿಯನ್ನೂ ನಿನ್ನ ಇಬ್ಬರು ಹೆಣ್ಣುಮಕ್ಕಳನ್ನೂ ಬೇಗ ಕರೆದುಕೊಂಡು ಹೋಗು; ಊರಿಗೆ ಉಂಟಾಗುವ ದಂಡನೆಯಿಂದ ನಿನಗೂ ನಾಶವುಂಟಾದೀತು” ಎಂದು ಹೇಳಿ ತ್ವರೆಪಡಿಸಿದರು.


ನ್ಯಾಯವಿಚಾರಣೆಯ ಸಮಯ ಬಂದಿದೆ. ಆ ವಿಚಾರಣೆಯು ದೇವರ ಮನೆಯಲ್ಲಿಯೇ ಪ್ರಾರಂಭವಾಗಿದೆಯಲ್ಲಾ. ಅದು ನಮ್ಮಲ್ಲಿ ಪ್ರಾರಂಭವಾಗುವುದಾದರೆ, ದೇವರ ಸುವಾರ್ತೆಯನ್ನು ನಂಬಲೊಲ್ಲದವರ ಅಂತ್ಯ ಹೇಗಿರಬಹುದು?


ಇಗೋ, ಪರ್ವತಗಳನ್ನು ರೂಪಿಸಿ, ಗಾಳಿಯನ್ನು ನಿರ್ಮಿಸಿ, ತನ್ನ ಸಂಕಲ್ಪವನ್ನು ಮನುಷ್ಯರಿಗೆ ವ್ಯಕ್ತಗೊಳಿಸಿ, ಉದಯವನ್ನು ಅಂಧಕಾರವನ್ನಾಗಿ ಮಾಡಿ ಮತ್ತು ಭೂಮಿಯ ಉನ್ನತ ಪ್ರದೇಶಗಳನ್ನು ತುಳಿದುಬಿಡುವಾತನು” ಸೇನಾಧೀಶ್ವರ ದೇವರಾದ ಯೆಹೋವನೆಂಬುದೇ ನನ್ನ ನಾಮಧೇಯ.


ಯೆಹೋವನೇ, ನೀನು ನನ್ನನ್ನು ಮರುಳುಗೊಳಿಸಿದಿ, ನಾನು ಮರುಳಾದೆನು; ನೀನು ನನಗಿಂತ ಬಲಿಷ್ಠನಾಗಿ ಗೆದ್ದುಕೊಂಡಿ; ನಾನು ಹಗಲೆಲ್ಲಾ ಗೇಲಿಗೆ ಗುರಿಯಾಗಿದ್ದೇನೆ, ಎಲ್ಲರೂ ನನ್ನನ್ನು ಅಣಕಿಸುತ್ತಾರೆ.


ಇಗೋ, ಸಂಜೆಯಲ್ಲಿ ಹೆದರಿ ಉದಯದೊಳಗಾಗಿ ಇಲ್ಲವಾಗುವರು! ನಮ್ಮನ್ನು ಸೂರೆ ಮಾಡುವವರಿಗೆ ಇದೇ ಗತಿ. ನಮ್ಮನ್ನು ಕೊಳ್ಳೆಹೊಡೆಯುವವರ ಪಾಡು ಇದೇ.


ಅವರ ಕೋಟೆಗಳಲ್ಲಿ ತೋಳಗಳೂ, ಅರಮನೆಗಳಲ್ಲಿ ನರಿಗಳೂ ಕೂಗುವವು. ಸಮಯವು ಹತ್ತಿರವಾಗಿದೆ. ಇನ್ನು ಆ ದಿನಗಳು ಬರುವುದಕ್ಕೆ ತಡವಾಗುವುದಿಲ್ಲ.


ಆಗ ಯೆಹೋವನು ಸೊದೋಮ್ ಗೊಮೋರಗಳ ಮೇಲೆ ಆಕಾಶದಿಂದ ಅಗ್ನಿಗಂಧಕಗಳನ್ನು ಸುರಿಸಿ


ಅದರ ಹೋರಿಗಳನ್ನೆಲ್ಲಾ ಕೊಲ್ಲಿರಿ, ಅವು ವಧ್ಯಸ್ಥಾನಕ್ಕೆ ಹೋಗಲಿ; ಅವುಗಳ ಗತಿಯನ್ನು ಏನೆಂದು ಹೇಳಲಿ! ಅವುಗಳಿಗೆ ವಿಪತ್ಕಾಲವು ಒದಗಿದೆ, ದಂಡನೆಯ ದಿನವು ಸಂಭವಿಸಿದೆ.


ಹರ್ಷಾನಂದಗಳು ತೋಟಗಳಿಂದ ತೊಲಗಿವೆ. ದ್ರಾಕ್ಷಿಯ ತೋಟಗಳಲ್ಲಿ ಉತ್ಸಾಹದ ಧ್ವನಿಯೂ, ಉಲ್ಲಾಸದ ಆರ್ಭಟವೂ ಇರುವುದಿಲ್ಲ. ತುಳಿಯುವವರು ದ್ರಾಕ್ಷಿಯ ತೊಟ್ಟಿಗಳಲ್ಲಿ ದ್ರಾಕ್ಷಾರಸವನ್ನು ತುಳಿದು ತೆಗೆಯುವುದಿಲ್ಲ. ಅವರ ಕೂಗಾಟವನ್ನು ನಿಲ್ಲಿಸಿಬಿಟ್ಟಿದ್ದೇನೆ.


ದಿನವು ಹತ್ತಿರವಾಯಿತು! ಹೌದು, ಯೆಹೋವನ ದಿನವು, ಕಾರ್ಮುಗಿಲಿನ ದಿನವು ಸಮೀಪಿಸಿತು; ಅದು ಜನಾಂಗಗಳಿಗೆ ನ್ಯಾಯತೀರಿಸುವ ಕಾಲವಾಗಿರುವುದು.


ಯೆಹೋವನು ಬರುವ ದಿನವು ಸಮೀಪಿಸಿತು. ಅದು ಸರ್ವಶಕ್ತನಾದ ಯೆಹೋವನಿಂದ ನಾಶವಾಗುವ ದಿನ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು