Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 7:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಿನ್ನನ್ನು ಕಟಾಕ್ಷಿಸುವುದಿಲ್ಲ, ಉಳಿಸುವುದಿಲ್ಲ, ನಿನ್ನ ದುರ್ಮಾರ್ಗಗಳಿಗೆ ತಕ್ಕ ಗತಿಯನ್ನು ಬರಮಾಡುವೆನು, ಆಗ ನಿನ್ನ ಅಸಹ್ಯಕಾರ್ಯಗಳು ನಿನ್ನ ಅನುಭವಕ್ಕೆ ಬರುವವು; ಯೆಹೋವನಾದ ನಾನು ದಂಡಿಸುವವನು ಎಂಬುದು ನಿನಗೆ ಗೊತ್ತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನಿನ್ನನ್ನು ಕಟಾಕ್ಷಿಸುವುದಿಲ್ಲ, ಉಳಿಸುವುದಿಲ್ಲ, ನಿನ್ನ ದುರ್ಮಾರ್ಗಗಳಿಗೆ ತಕ್ಕ ಗತಿಯನ್ನು ಬರಮಾಡುವೆನು. ಆಗ ನಿನ್ನ ಅಸಹ್ಯಕಾರ್ಯಗಳು ನಿನ್ನ ಅನುಭವಕ್ಕೆ ಬರುವುವು; ಸರ್ವೇಶ್ವರನಾದ ನಾನು ದಂಡಿಸುವವನು ಎಂಬುದು ನಿನಗೆ ಚೆನ್ನಾಗಿ ಗೊತ್ತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನಿನ್ನನ್ನು ಕಟಾಕ್ಷಿಸೆನು, ಉಳಿಸೆನು, ನಿನ್ನ ದುರ್ಮಾರ್ಗಗಳಿಗೆ ತಕ್ಕ ಗತಿಯನ್ನು ಕೊಡುವೆನು, ನಿನ್ನ ಅಸಹ್ಯ ಕಾರ್ಯಗಳು ನಿನ್ನ ಅನುಭವಕ್ಕೆ ಬರುವವು; ಯೆಹೋವನಾದ ನಾನು ದಂಡಿಸುವವನು ಎಂಬದು ನಿನಗೆ ಗೊತ್ತೇ ಆಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನಾನು ನಿಮಗೆ ಕರುಣೆ ತೋರಿಸೆನು. ನಿಮಗಾಗಿ ನಾನು ದುಃಖಿಸುವದಿಲ್ಲ. ನೀವು ಮಾಡಿದ ದುಷ್ಕೃತ್ಯಗಳಿಗಾಗಿ ನಾನು ನಿಮ್ಮನ್ನು ಶಿಕ್ಷಿಸುವೆನು. ಅಂಥಾ ಭಯಂಕರವಾದ ಕೃತ್ಯಗಳನ್ನು ನೀವು ಮಾಡಿದ್ದೀರಿ. ನಿಮ್ಮನ್ನು ದಂಡಿಸಿದಾತನು ಯೆಹೋವನಾದ ನಾನೇ ಎಂಬುದು ಆಗ ನಿಮಗೆ ತಿಳಿಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನಾನು ಕಟಾಕ್ಷಿಸುವುದೂ ಇಲ್ಲ, ನಿನ್ನನ್ನು ಕನಿಕರಿಸುವುದೂ ಇಲ್ಲ. ನಿನ್ನ ನಡತೆಗಳಿಗೂ, ನಿನ್ನ ಮಧ್ಯದಲ್ಲಿರುವ ಅಸಹ್ಯಗಳಿಗೂ ತಕ್ಕ ಹಾಗೆ ನಿನಗೆ ಮುಯ್ಯಿ ತೀರಿಸುತ್ತೇನೆ. ಆಗ ನಾನೇ ಹೊಡೆಯುತ್ತಿರುವ ಯೆಹೋವ ದೇವರೆಂದು ನಿಮಗೆ ತಿಳಿಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 7:9
13 ತಿಳಿವುಗಳ ಹೋಲಿಕೆ  

ಸಮುದ್ರವು ತನ್ನೊಳಗಿದ್ದ ಸತ್ತವರನ್ನು ಒಪ್ಪಿಸಿತು. ಮೃತ್ಯುವೂ ಪಾತಾಳವೂ ತಮ್ಮ ವಶದಲ್ಲಿದ್ದ ಸತ್ತವರನ್ನು ಒಪ್ಪಿಸಿದವು. ಅವರಲ್ಲಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳ ಪ್ರಕಾರ ನ್ಯಾಯತೀರ್ಪಾಯಿತು.


ಮೋಸಹೋಗಬೇಡಿರಿ. ದೇವರನ್ನು ಅಪಹಾಸ್ಯ ಮಾಡಲಾಗುವುದಿಲ್ಲ. ಮನುಷ್ಯನು ತಾನು ಏನು ಬಿತ್ತುತ್ತಾನೋ ಅದನ್ನೇ ಕೊಯ್ಯಬೇಕು.


ಯೆಹೋವನ ನಾಮದಲ್ಲಿ ಭಯಭಕ್ತಿಯಿಡುವುದು ಸುಜ್ಞಾನವೇ, ಎಂದು ಯೆರೂಸಲೇಮಿನ ಪಟ್ಟಣಕ್ಕೆ ಎಚ್ಚರಿಕೆ ನೀಡುವ ಯೆಹೋವನ ನುಡಿ. ಬೀಸಿ ಬರುವ ಶಿಕ್ಷೆಯ ದಂಡಕ್ಕೆ ಎಚ್ಚರವಾಗಿರಿ. ಅದನ್ನು ನೇಮಿಸಿದವನು ಯಾರೆಂದು ತಿಳಿದುಕೊಳ್ಳಿರಿ.


ಹೀಗಿದ್ದರೂ ಆ ಜನರು ತಮ್ಮನ್ನು ಹೊಡೆದಾತನ ಕಡೆಗೆ ತಿರುಗಿಕೊಳ್ಳಲೂ ಇಲ್ಲ, ಸೇನಾಧೀಶ್ವರನಾದ ಯೆಹೋವನನ್ನು ಸೇವಿಸಲೂ ಇಲ್ಲ.


ತರುವಾಯ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ ಮತ್ತು ಅವರ ಸೇವಕರನ್ನೂ ವ್ಯಾಧಿ, ಖಡ್ಗ ಮತ್ತು ಕ್ಷಾಮಗಳಿಂದ ಹತರಾಗದೆ ಉಳಿದ ಪ್ರಜೆಗಳನ್ನೂ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೂ, ಅವರ ಪ್ರಾಣವನ್ನು ಹುಡುಕುತ್ತಿರುವ ಅವರ ಶತ್ರುಗಳ ಕೈಗೂ ಕೊಟ್ಟುಬಿಡುವೆನು. ಅವನು ಅವರನ್ನು ಕರುಣಿಸದೆ, ಕನಿಕರದಿಂದ ಉಳಿಸದೆ ಕತ್ತಿಯಿಂದ ಸಂಹರಿಸುವನು.


ಯೆಹೋವನು ತನ್ನ ಸಂಕಲ್ಪವನ್ನು ಸಿದ್ಧಿಗೆ ತಂದು ತಾನು ಪುರಾತನಕಾಲದಲ್ಲಿ ನುಡಿದ ಮಾತನ್ನು ಈಡೇರಿಸಿದ್ದಾನೆ; ಆತನು ಕರುಣಿಸದೆ ನಿನ್ನನ್ನು ಕೆಡವಿ, ನಿನ್ನ ವೈರಿಗಳಿಗೆ ಆನಂದವಾಗುವಂತೆ ಮಾಡಿ ನಿನ್ನ ವಿರೋಧಿಗಳ ಕೊಂಬನ್ನು ಎತ್ತಿದ್ದಾನೆ.


ಇನ್ನು ಸ್ವಲ್ಪ ಕಾಲದೊಳಗೆ ನಾನು ನಿನ್ನ ಮೇಲೆ ನನ್ನ ರೋಷಾಗ್ನಿಯನ್ನು ಸುರಿದು, ನನ್ನ ಕೋಪವನ್ನು ತೀರಿಸಿಕೊಂಡು, ನಿನ್ನ ನಡತೆಗೆ ತಕ್ಕ ದಂಡನೆಯನ್ನು ವಿಧಿಸಿ, ನಿನ್ನ ಅಸಹ್ಯಕಾರ್ಯಗಳ ಫಲವನ್ನೆಲ್ಲಾ ನಿನಗೆ ತಿನ್ನಿಸುವೆನು.


“ಆಹಾ, ದಂಡನೆಯ ದಿನವು, ಇಗೋ ಬಂತು! ನಿನಗೆ ದುರ್ಗತಿಯು ಅಂಕುರಿಸಿದೆ, ಕೋಲು ಹೂಬಿಟ್ಟಿದೆ, ಹೆಮ್ಮೆಯು ಚಿಗುರಿದೆ.


ನಿಮ್ಮ ದುಷ್ಕರ್ಮದ ಫಲವನ್ನು ನಿಮಗೇ ತಿನ್ನಿಸುವರು; ನಿಮ್ಮ ವಿಗ್ರಹಗಳಿಂದಾದ ನಿಮ್ಮ ಪಾಪವನ್ನು ನೀವು ಅನುಭವಿಸುವಿರಿ. ನಾನೇ ಕರ್ತನಾದ ಯೆಹೋವನು” ಎಂದು ತಿಳಿದುಕೊಳ್ಳುವಿರಿ.


ನಾನು ಅಮಲಿನಿಂದ ತುಂಬಿಸಿ ಹಿರಿಕಿರಿಯರಾದ ಸಮಸ್ತರನ್ನು ಒಬ್ಬರಿಗೊಬ್ಬರು ಬಡಿದಾಡುವಂತೆ ಮಾಡುವೆನು. ನಾನು ಅವರನ್ನು ಉಳಿಸೆನು, ಕನಿಕರಿಸೆನು, ಕರುಣಿಸೆನು, ನಾಶಮಾಡದೆ ಬಿಡೆನು” ಇದು ಯೆಹೋವನ ನುಡಿ.


ಇವನೂ, ಇವನ ಸಂತತಿಯವರೂ ಮತ್ತು ಸೇವಕರೂ ನಡೆಸಿದ ಅಧರ್ಮಕ್ಕಾಗಿ ಇವರನ್ನು ದಂಡಿಸುವೆನು. ನಾನು ಇವರನ್ನೂ, ಯೆರೂಸಲೇಮಿನವರನ್ನೂ ಮತ್ತು ಯೆಹೂದ್ಯರನ್ನೂ ನಿಮಗೆ ಬಹು ಕೇಡಾಗುವುದೆಂದು ಎಚ್ಚರಿಸಿದರೂ ಇವರುಗಳು ಕೇಳಲಿಲ್ಲವಾದುದರಿಂದ ಆ ಕೇಡನ್ನೆಲ್ಲಾ ಇವರೆಲ್ಲರ ಮೇಲೆ ಬರಮಾಡುವೆನು’” ಎಂದು ಹೇಳಿದನು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ನೀನು ನಿನ್ನ ಹೇರಳವಾದ ಹೇಯ ವಿಗ್ರಹಗಳಿಂದಲೂ, ಅಸಹ್ಯ ವಸ್ತುಗಳಿಂದಲೂ ನನ್ನ ಪವಿತ್ರಾಲಯವನ್ನು ಹೊಲಸು ಮಾಡಿದ್ದರಿಂದ ಖಂಡಿತವಾಗಿ ನಾನು ನಿನ್ನನ್ನು ಕುಂದಿಸುವೆನು, ನಾನು ನಿನಗೆ ಕರುಣೆ ತೋರಿಸೆನು, ಕಟಾಕ್ಷಿಸೆನು.


ಬೆಳ್ಳಿಯು ಕುಲುಮೆಯೊಳಗೆ ಕರಗುವಂತೆ ನೀವು ನನ್ನ ರೋಷಾಗ್ನಿಯಲ್ಲಿ ಕರಗುವಿರಿ; ನಿಮ್ಮ ಮೇಲೆ ರೋಷಾಗ್ನಿಯನ್ನು ಸುರಿಸಿದಾತನು ಯೆಹೋವನಾದ ನಾನೇ ಎಂದು ನಿಮಗೆ ಗೊತ್ತಾಗುವುದು.’”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು