Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 8:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆತನು ಯೆಹೋವನ ಆಲಯದ ಒಳಗಣ ಪ್ರಾಕಾರದೊಳಕ್ಕೆ ನನ್ನನ್ನು ಕರೆತಂದನು; ಇಗೋ, ಯೆಹೋವನ ಆಲಯದ ಬಾಗಿಲ ಮುಂದೆ ಮಂಟಪಕ್ಕೂ ಮತ್ತು ಯಜ್ಞವೇದಿಗೂ ನಡುವೆ ಸುಮಾರು ಇಪ್ಪತ್ತೈದು ಜನರು ಯೆಹೋವನ ಆಲಯಕ್ಕೆ ಬೆನ್ನು ಮಾಡಿ ಪೂರ್ವದ ಕಡೆಗೆ ಮುಖ ಮಾಡಿ ಉದಯಕಾಲದ ಸೂರ್ಯನನ್ನು ಪೂಜಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಸರ್ವೇಶ್ವರನ ಆಲಯದ ಒಳಗಣ ಪ್ರಾಕಾರದೊಳಕ್ಕೆ ನನ್ನನ್ನು ಕರೆದುತಂದರು; ಇಗೋ, ಆ ಆಲಯದ ಬಾಗಿಲ ಮುಂದೆ, ಮಂಟಪಕ್ಕೂ ಬಲಿಪೀಠಕ್ಕೂ ನಡುವೆ ಸುಮಾರು ಇಪ್ಪತ್ತೈದು ಜನರು ಸರ್ವೇಶ್ವರನ ಆಲಯಕ್ಕೆ ಬೆನ್ನುಮಾಡಿ ಪೂರ್ವದ ಕಡೆಗೆ ಮುಖಮಾಡಿ ಉದಯಕಾಲದ ಸೂರ್ಯನನ್ನು ಪೂಜಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಯೆಹೋವನ ಆಲಯದ ಒಳಗಣ ಪ್ರಾಕಾರದೊಳಕ್ಕೆ ನನ್ನನ್ನು ಕರತಂದನು; ಆಹಾ, ಯೆಹೋವನ ಗುಡಿಯ ಬಾಗಿಲ ಮುಂದೆ ಮಂಟಪಕ್ಕೂ ಯಜ್ಞವೇದಿಗೂ ನಡುವೆ ಸುಮಾರು ಇಪ್ಪತ್ತೈದು ಜನರು ಯೆಹೋವನ ಗುಡಿಗೆ ಬೆನ್ನುಮಾಡಿ ಮೂಡಲಮುಖವಾಗಿ ಉದಯಕಾಲದ ಸೂರ್ಯನನ್ನು ಪೂಜಿಸುತ್ತಿದ್ದರು .

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ದೇವರು ನನ್ನನ್ನು ಯೆಹೋವನಾಲಯದ ಒಳಗಿನ ಅಂಗಳಕ್ಕೆ ಕರಕೊಂಡು ಹೋದನು. ಯೆಹೋವನಾಲಯದ ಪ್ರವೇಶ ಸ್ಥಳದಲ್ಲಿ ಮಂಟಪಕ್ಕೂ ಯಜ್ಞವೇದಿಕೆಗೂ ನಡುವೆ ಪವಿತ್ರ ಸ್ಥಳದ ಕಡೆಗೆ ಬೆನ್ನು ಮಾಡಿಕೊಂಡಿದ್ದ ಇಪ್ಪತ್ತೈದು ಮಂದಿ ಇದ್ದರು. ಪೂರ್ವಕ್ಕೆ ಮುಖಮಾಡಿಕೊಂಡಿದ್ದ ಅವರು ಸೂರ್ಯನನ್ನು ಪೂಜಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆಗ ಅವನು ನನ್ನನ್ನು ಯೆಹೋವ ದೇವರ ಆಲಯದ ಒಳಗಿನ ಅಂಗಳಕ್ಕೆ ಕರೆದುಕೊಂಡು ಬಂದನು. ಇಗೋ, ಯೆಹೋವ ದೇವರ ಮಂದಿರದ ಬಾಗಿಲಲ್ಲಿ ದ್ವಾರಾಂಗಳಕ್ಕೂ, ಬಲಿಪೀಠಕ್ಕೂ ಮಧ್ಯದಲ್ಲಿ ಸುಮಾರು ಇಪ್ಪತ್ತೈದು ಮಂದಿಯು ಯೆಹೋವ ದೇವರ ಮಂದಿರಕ್ಕೆ ಬೆನ್ನುಹಾಕಿ, ಪೂರ್ವದಿಕ್ಕಿನ ಕಡೆಗೆ ತಮ್ಮ ಮುಖಗಳನ್ನಿಟ್ಟು, ಸೂರ್ಯನಮಸ್ಕಾರ ಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 8:16
29 ತಿಳಿವುಗಳ ಹೋಲಿಕೆ  

ನಿಮ್ಮ ದೇವರಾದ ಯೆಹೋವನು ಭೂಲೋಕದಲ್ಲಿರುವ ಬೇರೆ ಎಲ್ಲಾ ಜನಾಂಗಗಳಿಗೋಸ್ಕರ ದಯಪಾಲಿಸಿದ ಸೂರ್ಯ, ಚಂದ್ರ ಅಥವಾ ನಕ್ಷತ್ರಗಳೆನಿಸಿಕೊಳ್ಳುವ ಆಕಾಶಸೈನ್ಯವನ್ನು ನೀವು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವಾಗ, ಮರುಳುಗೊಂಡು ಅವುಗಳನ್ನು ಪೂಜಿಸಲೂ ಬಾರದು ಮತ್ತು ನಮಸ್ಕರಿಸಲೂ ಬಾರದು.


ಅವರು ನನಗೆ ಮುಖಕೊಡದೆ ಬೆನ್ನುಮಾಡಿದ್ದಾರೆ; ನಾನು ಎಡೆಬಿಡದೆ ಅವರಿಗೆ ಬೋಧಿಸುತ್ತಾ ಬಂದರೂ ಅವರು ಉಪದೇಶವನ್ನು ಹೊಂದಲಿಲ್ಲ ಮತ್ತು ನನಗೆ ಕಿವಿಗೊಡಲೇ ಇಲ್ಲ.


ಆತನಿಂದ ದೂರಹೋಗಿ ಅನ್ಯದೇವರುಗಳನ್ನು ಪೂಜಿಸಬಾರದೆಂದು ಮತ್ತು ಆತನು ನಿಷೇಧಿಸಿರುವ ಸೂರ್ಯ, ಚಂದ್ರ ಅಥವಾ ನಕ್ಷತ್ರಮಂಡಲವನ್ನಾಗಲಿ ಸೇವಿಸಿ, ಪೂಜಿಸಿ ಯೆಹೋವನ ದೃಷ್ಟಿಯಲ್ಲಿ ಅಸಹ್ಯವಾದದ್ದನ್ನು ನಡಿಸಿದರೆ,


ಆ ಮೇಲೆ ದೇವರಾತ್ಮವು ನನ್ನನ್ನು ಎತ್ತಿ ಪೂರ್ವದಿಕ್ಕಿಗೆ ಅಭಿಮುಖವಾಗಿರುವ ಯೆಹೋವನ ಆಲಯದ ಮೂಡಣ ಬಾಗಿಲಿಗೆ ತಂದುಬಿಟ್ಟಿತು; ಇಗೋ, ಬಾಗಿಲ ಮುಂದೆ ಇಪ್ಪತ್ತೈದು ಜನರು ನಿಂತಿದ್ದರು; ಅವರ ಮಧ್ಯದಲ್ಲಿ ಅಜ್ಜೂರನ ಮಗನಾದ ಯಾಜನ್ಯ, ಬೆನಾಯನ ಮಗನಾದ ಪೆಲತ್ಯ ಎಂಬ ಜನನಾಯಕರನ್ನು ನಾನು ನೋಡಿದೆ.


ಅವರು ನನ್ನ ಕಡೆಗೆ ಮುಖತಿರುಗಿಸದೆ ಬೆನ್ನು ಮಾಡಿದ್ದಾರೆ, ಆದರೆ ಅವರಿಗೆ ಕೇಡು ಸಂಭವಿಸಿದಾಗ, “ಎದ್ದು ನಮ್ಮನ್ನು ಉದ್ಧರಿಸು” ಎಂದು ಮೊರೆಯಿಡುವರು.


ಯೆಹೋವನ ಸೇವಕರಾದ ಯಾಜಕರು, ದ್ವಾರಮಂಟಪಕ್ಕೂ, ಯಜ್ಞವೇದಿಯ ನಡುವೆ ಅಳುತ್ತಾ ಹೀಗೆ ಹೇಳಲಿ, “ಯೆಹೋವನೇ, ನಿನ್ನ ಜನರನ್ನು ಕರುಣಿಸು, ಅನ್ಯಜನಾಂಗಗಳು ನಿಂದಿಸುವುದಕ್ಕೆ ನಿನ್ನ ಬಾಧ್ಯತೆಯನ್ನು ದೂಷಣೆಗೆ ಗುರಿಮಾಡಬೇಡ. ‘ಅವರ ದೇವರು ಎಲ್ಲಿ?’ ಎಂದು ಅವರು ಏಕೆ ನಿಂದಿಸಬೇಕು.”


ದೇವರಾತ್ಮವು ನನ್ನನ್ನು ಎತ್ತಿಕೊಂಡು ಒಳಗಿನ ಅಂಗಳಕ್ಕೆ ಕರೆದು ತಂದಿತು. ಆಗ ಯೆಹೋವನ ಮಹಿಮೆಯು ಆಲಯವನ್ನು ತುಂಬಿಕೊಂಡಿತು.


ಆಗ ಯಾಜಕನು ಆ ದೋಷಪರಿಹಾರಕ ಯಜ್ಞಪಶುವಿನ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ದೇವಸ್ಥಾನದ ಬಾಗಿಲ ಚೌಕಟ್ಟಿಗೂ, ಯಜ್ಞವೇದಿಯ ದೊಡ್ಡ ಅಂತಸ್ತಿನ ನಾಲ್ಕು ಮೂಲೆಗಳಿಗೂ ಒಳಗಿನ ಅಂಗಳದ ಹೆಬ್ಬಾಗಿಲಿನ ಕಂಬಗಳಿಗೂ ಹಚ್ಚಬೇಕು.


ಆಮೇಲೆ ಅವನು ನನ್ನನ್ನು ದಕ್ಷಿಣ ಬಾಗಿಲಿನ ಮಾರ್ಗವಾಗಿ ಒಳಗಣ ಅಂಗಳಕ್ಕೆ ಕರೆದು ತಂದನು. ಅವನು ಆ ದಕ್ಷಿಣ ಹೆಬ್ಬಾಗಿಲನ್ನೂ, ಅಲ್ಲಿನ ಗೋಡೆಕೋಣೆ, ಕಂಬ, ಕೈಸಾಲೆ ಇವುಗಳನ್ನೂ ಅಳೆಯಲು, ಅದರ ಅಳತೆಗಳೆಲ್ಲ ಸಮನಾಗಿದ್ದವು.


ಅವನು ಒಳಗೆ ಸೇರಿದಾಗ ಕೆರೂಬಿಗಳು ದೇವಾಲಯದ ದಕ್ಷಿಣಭಾಗದಲ್ಲಿ ನಿಂತಿದ್ದವು, ಮೇಘವು ಒಳಗಣ ಪ್ರಾಕಾರವನ್ನು ತುಂಬಿತ್ತು.


ಗಗನದ ಒಡತಿಗೆ ಧೂಪಹಾಕಿ ಪಾನನೈವೇದ್ಯವನ್ನು ಸುರಿಯುವುದಿಲ್ಲ ಎಂದು ನಾವು ಬಾಯಿಬಿಟ್ಟು ಹೇಳಿದ ಮಾತುಗಳನ್ನೆಲ್ಲಾ ಖಂಡಿತವಾಗಿ ನೆರವೇರಿಸುವೆವು. ಮೊದಲು ಯೆಹೂದದ ಊರುಗಳಲ್ಲಿ ಮತ್ತು ಯೆರೂಸಲೇಮಿನ ಬೀದಿಗಳಲ್ಲಿ ನಾವೂ ಮತ್ತು ನಮ್ಮ ಪೂರ್ವಿಕರೂ ನಮ್ಮ ಅರಸರೂ, ನಮ್ಮ ಪ್ರಧಾನರೂ ಹೀಗೆ ಮಾಡುತ್ತಿದ್ದಾಗ ನಾವು ಯಾವ ಕೇಡನ್ನೂ ಕಾಣದೆ ಹೊಟ್ಟೆತುಂಬಾ ಉಂಡು ಸುಖಪಡುತ್ತಿದ್ದೆವು.


ನಮ್ಮ ಪೂರ್ವಿಕರು ನಮ್ಮ ದೇವರಾದ ಯೆಹೋವನಿಗೆ ದ್ರೋಹಮಾಡಿ, ಆತನ ಚಿತ್ತಕ್ಕೆ ವಿರುದ್ಧವಾಗಿ ನಡೆದು ಆತನನ್ನು ತೊರೆದುಬಿಟ್ಟರು. ಅವರು ಆತನ ನಿವಾಸ ಸ್ಥಳವನ್ನು ತೊರೆದು ವಿಮುಖರಾದರು.


ಯೆಹೂದ ರಾಜರು ಸೂರ್ಯದೇವತೆಗೋಸ್ಕರ ಪ್ರತಿಷ್ಠಿಸಿದ ಕುದುರೆಗಳನ್ನು ತೆಗೆದುಹಾಕಿ ರಥಗಳನ್ನು ಸುಟ್ಟುಬಿಟ್ಟನು. ಅವು ಯೆಹೋವನ ಆಲಯದ ಹೆಬ್ಬಾಗಿಲಿನ ಹೊರಗೆ “ಪರ್ವರೀಮ್” ಎಂಬ ಸ್ಥಳದಲ್ಲಿ ಕಂಚುಕಿಯಾದ ನಾತಾನ್ ಮೆಲೆಕನ ಕೋಣೆಯ ಹತ್ತಿರ ಇಡಲ್ಪಟ್ಟಿದ್ದವು.


ಇದಲ್ಲದೆ, ಯೆಹೂದ ಪ್ರಾಂತ್ಯದ ಪಟ್ಟಣಗಳಲ್ಲಿಯೂ, ಯೆರೂಸಲೇಮಿನ ಸುತ್ತಣ ಪ್ರದೇಶಗಳಲ್ಲಿಯೂ ಇದ್ದ ಪೂಜಾಸ್ಥಳಗಳ ವಿಗ್ರಹಗಳಿಗೂ, ಬಾಳನಿಗೂ, ಸೂರ್ಯ, ಚಂದ್ರ ಹಾಗೂ ನಕ್ಷತ್ರಗಳು ಎನಿಸಿಕೊಳ್ಳುವ ಆಕಾಶಸೈನ್ಯಕ್ಕೂ, ಧೂಪಹಾಕುವುದಕ್ಕಾಗಿ ಯೆಹೂದ ರಾಜರಿಂದ ನೇಮಿಸಲ್ಪಟ್ಟ ಎಲ್ಲಾ ಪೂಜಾರಿಗಳನ್ನು ತೆಗೆದುಹಾಕಿದನು.


ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನೀನು ನನ್ನನ್ನು ಬೆನ್ನಿನ ಹಿಂದೆ ಮರೆಮಾಡಿ, ಮರೆತುಬಿಟ್ಟಿದ್ದರಿಂದ ನಿನ್ನ ದುಷ್ಕರ್ಮದ ಮತ್ತು ವ್ಯಭಿಚಾರದ ಫಲವನ್ನು ನೀನೇ ಅನುಭವಿಸಬೇಕು.”


ಸೊಲೊಮೋನನು ಯೆಹೋವನ ಆಲಯದ ಮುಂದಿನ ಪ್ರಾಕಾರದ ಮಧ್ಯಸ್ಥಳವನ್ನು ಪ್ರತಿಷ್ಠೆ ಮಾಡಿದನು. ಸೊಲೊಮೋನನು ಮಾಡಿಸಿದ ತಾಮ್ರದ ಯಜ್ಞವೇದಿಯ ಮೇಲೆ ಸರ್ವಾಂಗಹೋಮವನ್ನೂ, ಸಮಾಧಾನ ಯಜ್ಞದ ಕೊಬ್ಬನ್ನೂ ಇಡುವುದಕ್ಕೆ ಸ್ಥಳ ಸಾಲದೆ ಇದ್ದುದರಿಂದ, ಅಲ್ಲಿ ಅವನು ಸರ್ವಾಂಗಹೋಮವನ್ನೂ, ಧಾನ್ಯನೈವೇದ್ಯಗಳನ್ನೂ, ಸಮಾಧಾನ ಯಜ್ಞದ ಕೊಬ್ಬಿನ ಕಾಣಿಕೆಯನ್ನು ಸಮರ್ಪಿಸಿದನು.


ಇದಲ್ಲದೆ, ಯೆಹೋವನ ಆಲಯಕ್ಕೂ, ತನ್ನ ವೇದಿಗೂ ಮಧ್ಯದಲ್ಲಿದ್ದು ಆ ವರೆಗೂ ಯೆಹೋವನ ಸೇವೆಗೆ ಉಪಯೋಗಿಸಲ್ಪಡುತ್ತಿದ್ದ ತಾಮ್ರ ಯಜ್ಞವೇದಿಯನ್ನೂ ಆಲಯದ ಎದುರಿನಿಂದ ತೆಗೆಯಿಸಿ, ತನ್ನ ಯಜ್ಞವೇದಿಯ ಉತ್ತರ ದಿಕ್ಕಿನಲ್ಲಿಡಿಸಿದನು.


ಈ ಸ್ಥಳವನ್ನು ಕುರಿತು, ‘ನನ್ನ ನಾಮಪ್ರಭಾವವು ಇಲ್ಲಿ ವಾಸಿಸುವುದು’ ಎಂದು ಹೇಳಿದವನೇ, ನಿನ್ನ ಕಟಾಕ್ಷವು ಹಗಲಿರುಳು ಈ ಮಂದಿರದ ಮೇಲಿರಲಿ. ಇಲ್ಲಿ ನಿನ್ನ ಸೇವಕರು ನಿನ್ನನ್ನು ಪ್ರಾರ್ಥಿಸುವಾಗೆಲ್ಲಾ ಅವರಿಗೆ ಸದುತ್ತರವನ್ನು ದಯಪಾಲಿಸು.


ಇದಾದ ಮೇಲೆ ಆತನು ನನಗೆ, “ನರಪುತ್ರನೇ, ಇದನ್ನು ನೋಡಿದೆಯಾ? ಇವುಗಳಿಗಿಂತ ಇನ್ನೂ ಹೆಚ್ಚಾದ ದುರಾಚಾರಗಳನ್ನು ನೋಡುವೆ” ಎಂದು ಹೇಳಿದನು.


ತಮ್ಮ ಮಕ್ಕಳನ್ನು ಕೊಂದು, ತಮ್ಮ ವಿಗ್ರಹಗಳಿಗೆ ಅರ್ಪಿಸಿದ ದಿನದಲ್ಲೇ ನನ್ನ ಪವಿತ್ರಾಲಯವನ್ನು ಸೇರಿ ಅಪವಿತ್ರ ಮಾಡಿದರು; ಇಗೋ, ನನ್ನ ಮಂದಿರದ ಒಳಗೆ ಇದನ್ನು ನಡೆಸಿದ್ದಾರೆ.


ಆಮೇಲೆ ಅವನು ಪೂರ್ವದಿಕ್ಕಿನ ಹೆಬ್ಬಾಗಿಲಿಗೆ ಬಂದು, ಮೆಟ್ಟಿಲುಗಳನ್ನು ಹತ್ತಿ, ಹೊಸ್ತಿಲಿನ ಅಗಲವನ್ನು ಅಳೆದನು. ಅದು ಒಂದೇ ಕೋಲು ಅಗಲವಾಗಿತ್ತು. ಅಗಲವಾದ ಹೊಸ್ತಿಲಿನ ಬಾಗಿಲೂ ಅಲ್ಲಿ ಇತ್ತು.


ನನ್ನ ಹೊಸ್ತಿಲುಗಳ ಪಕ್ಕದಲ್ಲಿ ತಮ್ಮ ಹೊಸ್ತಿಲುಗಳನ್ನು ಹಾಕಿಕೊಂಡು ನನ್ನ ಮನೆಗೂ, ತಮ್ಮ ಮನೆಗೂ ಒಂದೇ ಗೋಡೆಯಾಗುವಂತೆ ಮಾಡಿಕೊಳ್ಳುವುದರಿಂದ ಇನ್ನು ಮೇಲೆ ನನ್ನ ಪವಿತ್ರ ನಾಮವನ್ನು ಅಪವಿತ್ರ ಮಾಡುವುದಿಲ್ಲ. ತಾವು ನಡೆಸಿದ ದುರಾಚಾರಗಳಿಂದ ನನ್ನ ಪವಿತ್ರ ನಾಮವನ್ನು ಅಪವಿತ್ರ ಮಾಡಿದರು. ಆದಕಾರಣ ನಾನು ಕೋಪಗೊಂಡು ಅವರನ್ನು ನಾಶಮಾಡಿದೆನು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ವಾರದೊಳಗೆ ಕೆಲಸ ಮಾಡುವ ಆರು ದಿನಗಳಲ್ಲಿ ಒಳಗಿನ ಅಂಗಳದ ಪೂರ್ವದಿಕ್ಕಿನ ಹೆಬ್ಬಾಗಿಲನ್ನು ಮುಚ್ಚಿರಬೇಕು. ಅದನ್ನು ಸಬ್ಬತ್ ದಿನದಲ್ಲಿಯೂ, ಅಮಾವಾಸ್ಯೆಯಲ್ಲಿಯೂ ತೆರೆದಿರಬೇಕು.


ಯೆಹೋವನ ಆಲಯದ ಎರಡು ಪ್ರಾಕಾರಗಳಲ್ಲಿಯೂ ಸರ್ವ ನಕ್ಷತ್ರಮಂಡಲಗಳಿಗಾಗಿ ಯಜ್ಞವೇದಿಗಳನ್ನು ಕಟ್ಟಿಸಿದನು.


ಗಗನದ ಒಡತಿಗೆ ಹೋಳಿಗೆಗಳನ್ನು ಮಾಡುವುದಕ್ಕಾಗಿ ಮಕ್ಕಳು ಸೌದೆಯನ್ನು ಆರಿಸುತ್ತಾರೆ, ತಂದೆಗಳು ಬೆಂಕಿಯನ್ನು ಹೊತ್ತಿಸುತ್ತಾರೆ, ಹೆಂಗಸರು ಕಣಕವನ್ನು ನಾದುತ್ತಾರೆ; ಅನ್ಯದೇವತೆಗಳಿಗೆ ಪಾನನೈವೇದ್ಯವನ್ನು ಅರ್ಪಿಸುತ್ತಾರೆ; ನನ್ನನ್ನು ಕೆಣಕಬೇಕೆಂದೇ ಇದನ್ನೆಲ್ಲಾ ಮಾಡುತ್ತಾರೆ.


ಅನಂತರ ಅವರು ಅದನ್ನು ತಾವು ಪ್ರೀತಿಸಿ, ಸೇವಿಸಿ, ಹಿಂಬಾಲಿಸಿ, ಆಶ್ರಯಿಸಿ ಪೂಜಿಸಿದ ಸೂರ್ಯ, ಚಂದ್ರ ತಾರಾಗಣಗಳ ಎದುರಿಗೆ ಹರಡಿಬಿಡುವರು. ಅವುಗಳನ್ನು ಯಾರೂ ಕೂಡಿಸಿ ಹೂಣಿಡುವುದಿಲ್ಲ; ಅವು ಭೂಮಿಯ ಮೇಲೆ ಗೊಬ್ಬರವಾಗುವವು.


ಒಂದು ಸರಪಣಿಯನ್ನು ಮಾಡು; ಏಕೆಂದರೆ ದೇಶವು ನರಹತ್ಯಭರಿತವಾಗಿದೆ, ಪಟ್ಟಣವು ಹಿಂಸೆಯಿಂದ ತುಂಬಿಹೋಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು