ಯೆಹೆಜ್ಕೇಲನು 8:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆಗ ಆತನು ನನಗೆ, “ನರಪುತ್ರನೇ, ಉತ್ತರ ದಿಕ್ಕಿಗೆ ಕಣ್ಣೆತ್ತಿ ನೋಡು” ಎಂದು ಹೇಳಿದನು; ಹಾಗೆ ನಾನು ಉತ್ತರ ದಿಕ್ಕಿಗೆ ಕಣ್ಣೆತ್ತಿ ನೋಡಲು, ಇಗೋ, ದೇವರನ್ನು ರೋಷಗೊಳಿಸುವ ಆ ವಿಗ್ರಹವು ಯಜ್ಞವೇದಿಯ ಉತ್ತರದಿಕ್ಕಿನ ಬಾಗಿಲಿನ ಪ್ರವೇಶದ್ವಾರದ ಮುಂದೆ ನಿಂತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಆಗ ಅವರು ನನಗೆ, “ನರಪುತ್ರನೇ, ಉತ್ತರಕ್ಕೆ ಕಣ್ಣೆತ್ತಿ ನೋಡು,” ಎಂದು ಹೇಳಿದರು; ಅಂತೆಯೇ ನಾನು ಉತ್ತರಕ್ಕೆ ಕಣ್ಣೆತ್ತಿ ನೋಡಿದೆ. ಇಗೋ ದೇವರನ್ನು ರೋಷಗೊಳಿಸುವ ಅದೇ ವಿಗ್ರಹವು ಬಲಿಪೀಠದ ಬಾಗಿಲ ಉತ್ತರದಲ್ಲಿ ಪ್ರವೇಶದ್ವಾರದ ಮುಂದೆ ನಿಂತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಆಗ ಆತನು ನನಗೆ - ನರಪುತ್ರನೇ, ಬಡಗಲಿಗೆ ಕಣ್ಣೆತ್ತಿ ನೋಡು ಎಂದು ಹೇಳಿದನು; ಹಾಗೆ ನಾನು ಬಡಗಲಿಗೆ ಕಣ್ಣೆತ್ತಿ ನೋಡಲು ಇಗೋ, ದೇವರನ್ನು ರೋಷಗೊಳಿಸುವ ಆ ವಿಗ್ರಹವೇ ಯಜ್ಞವೇದಿಯ ಬಾಗಿಲ ಬಡಗಲಲ್ಲಿ ಬಾಗಿಲ ಮುಂದೆ ನಿಂತಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ದೇವರು ನನ್ನೊಂದಿಗೆ ಮಾತನಾಡುತ್ತಾ, “ನರಪುತ್ರನೇ, ಉತ್ತರ ದಿಕ್ಕಿಗೆ ನೋಡು” ಎಂದು ಹೇಳಿದನು. ನಾನು ಉತ್ತರ ದಿಕ್ಕಿಗೆ ನೋಡಿದಾಗ, ದೇವರನ್ನು ರೋಷಗೊಳಿಸುವ ವಿಗ್ರಹವು ಯಜ್ಞವೇದಿಕೆಯ ದ್ವಾರದ ಉತ್ತರ ದಿಕ್ಕಿನಲ್ಲಿರುವ ಪ್ರವೇಶದ ಸ್ಥಳದಲ್ಲಿ ಇತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಆಗ ಅವರು ನನಗೆ, “ಮನುಷ್ಯಪುತ್ರನೇ, ಉತ್ತರಕ್ಕೆ ಕಣ್ಣೆತ್ತಿ ನೋಡು,” ಎಂದು ಹೇಳಿದರು; ಅಂತೆಯೇ ನಾನು ಉತ್ತರಕ್ಕೆ ಕಣ್ಣೆತ್ತಿ ನೋಡಿದೆ. ಇಗೋ ದೇವರನ್ನು ರೋಷಗೊಳಿಸುವ ಅದೇ ವಿಗ್ರಹವು ಬಲಿಪೀಠದ ಬಾಗಿಲ ಉತ್ತರದ ಪ್ರವೇಶದ್ವಾರದ ಮುಂದೆ ನಿಂತಿತ್ತು. ಅಧ್ಯಾಯವನ್ನು ನೋಡಿ |