ಯೆಹೆಜ್ಕೇಲನು 8:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆಗ ಆತನು ನನಗೆ, “ನರಪುತ್ರನೇ, ಇವರು ಮಾಡುವುದನ್ನು ನೋಡಿದೆಯಾ? ಇಸ್ರಾಯೇಲ್ ವಂಶದವರು ಇಲ್ಲಿ ನಡೆಸುವ ಅಧಿಕ ದುರಾಚಾರಗಳನ್ನು ಕಂಡೆಯಾ? ಇದರಿಂದ ನಾನು ನನ್ನ ಪವಿತ್ರಾಲಯವನ್ನು ಬಿಟ್ಟು ದೂರ ಹೋಗಬೇಕಾಯಿತು. ಬಾ, ಇವುಗಳಿಗಿಂತ ಇನ್ನು ಹೆಚ್ಚಾದ ದುರಾಚಾರಗಳನ್ನು ನೋಡುವೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಆಗ ಅವರು ನನಗೆ, “ನರಪುತ್ರನೇ, ಇವರು ಮಾಡುವುದನ್ನು ನೋಡಿದೆಯಾ? ಇಸ್ರಯೇಲ್ ವಂಶದವರು ಇಲ್ಲಿ ನಡೆಸುವ ಅಧಿಕ ದುರಾಚಾರಗಳನ್ನೆಲ್ಲ ಕಂಡೆಯಾ? ಇದರಿಂದ ನಾನು ನನ್ನ ಪವಿತ್ರಾಲಯವನ್ನು ಬಿಟ್ಟು ದೂರಹೋಗಬೇಕಾಯಿತು. ಬಾ, ಇವುಗಳಿಗಿಂತ ಇನ್ನು ಹೆಚ್ಚಾದ ದುರಾಚಾರಗಳನ್ನು ನೋಡುವೆ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಆಗ ಆತನು ನನಗೆ - ನರಪುತ್ರನೇ, ಇವರು ಮಾಡುವದನ್ನು ನೋಡಿದಿಯಾ? ಇಸ್ರಾಯೇಲ್ ವಂಶದವರು ಇಲ್ಲಿ ನಡಿಸುವ ಅಧಿಕದುರಾಚಾರಗಳನ್ನು ಕಂಡಿಯಾ? ಇದರಿಂದ ನಾನು ನನ್ನ ಪವಿತ್ರಾಲಯವನ್ನು ಬಿಟ್ಟು ದೂರ ಹೋಗಬೇಕಾಯಿತು. ಬಾ, ಇವುಗಳಿಗಿಂತ ಇನ್ನು ಹೆಚ್ಚಾದ ದುರಾಚಾರಗಳನ್ನು ನೋಡುವಿ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಆಗ ದೇವರು ನನಗೆ, “ನರಪುತ್ರನೇ, ನನ್ನನ್ನು ನನ್ನ ಆಲಯದಿಂದ ಓಡಿಸಲು ಇಲ್ಲಿ ಇಸ್ರೇಲರು ಮಾಡುತ್ತಿರುವ ಭಯಂಕರವಾದ ಕೃತ್ಯಗಳು ನಿನಗೆ ಕಾಣುತ್ತಿಲ್ಲವೇ? ಆದರೆ ಇದಕ್ಕಿಂತಲೂ ಹೆಚ್ಚಿನ ದುಷ್ಕೃತ್ಯಗಳನ್ನು ನೀನು ನೋಡುವೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಅವರು ನನಗೆ, “ಮನುಷ್ಯಪುತ್ರನೇ, ಅವರು ಮಾಡುತ್ತಿರುವುದನ್ನು ನೋಡುತ್ತಿರುವೆಯಾ? ನಾನು ನನ್ನ ಪರಿಶುದ್ಧ ಸ್ಥಳವನ್ನು ಬಿಟ್ಟು ದೂರ ಹೋಗುವಹಾಗೆ, ಇಸ್ರಾಯೇಲಿನ ಮನೆತನದವರು ಇಲ್ಲಿ ನಡೆಸುತ್ತಿರುವ ದೊಡ್ಡ ಅಸಹ್ಯಗಳನ್ನು ನೋಡುತ್ತಿರುವೆಯಾ? ಆದರೆ ನೀನು ಇನ್ನೂ ಹೆಚ್ಚಿನ ಅಸಹ್ಯಗಳನ್ನು ನೋಡುವೆ,” ಎಂದನು. ಅಧ್ಯಾಯವನ್ನು ನೋಡಿ |