Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 9:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಇಷ್ಟರಲ್ಲಿ ಇಸ್ರಾಯೇಲಿನ ದೇವರ ತೇಜಸ್ಸು ತನ್ನ ವಾಹನವಾದ ಕೆರೂಬಿಯನ್ನು ಬಿಟ್ಟು ಮೇಲಕ್ಕೇರಿ ಆಲಯದ ಹೊಸ್ತಿಲಿನ ಮೇಲ್ಗಡೆ ನಿಂತಿತ್ತು; ಆಗ ನಾರಿನ ಬಟ್ಟೆಯನ್ನು ಹೊದ್ದುಕೊಂಡು, ಲೇಖಕನ ಮಸಿಕೊಂಬನ್ನು ನಡುವಿಗೆ ಕಟ್ಟಿಕೊಂಡಿರುವ ಪುರುಷನನ್ನು ಕಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಇಷ್ಟರಲ್ಲಿ ಇಸ್ರಯೇಲಿನ ದೇವರ ತೇಜಸ್ಸು ತನ್ನ ವಾಹನವಾದ ಕೆರೂಬಿಯನ್ನು ಬಿಟ್ಟು ಮೇಲಕ್ಕೇರಿ ಆಲಯದ ಹೊಸ್ತಿಲಿನ ಮೇಲ್ಗಡೆ ನಿಂತಿತ್ತು; ಆಗ ನಾರಿನ ಬಟ್ಟೆಯನ್ನು ಹೊದ್ದುಕೊಂಡು, ಲೇಖಕನ ಮಸಿಕೊಂಬನ್ನು ನಡುವಿಗೆ ಕಟ್ಟಿಕೊಂಡಿದ್ದ ಪುರುಷನನ್ನು ಸರ್ವೇಶ್ವರ ಕೂಗಿ ಅವನಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಇಷ್ಟರಲ್ಲಿ ಇಸ್ರಾಯೇಲಿನ ದೇವರ ತೇಜಸ್ಸು ತನ್ನ ವಾಹನವಾದ ಕೆರೂಬಿಯನ್ನು ಬಿಟ್ಟು ಮೇಲಕ್ಕೇರಿ ಆಲಯದ ಹೊಸ್ತಲಿನ ಮೇಲ್ಗಡೆ ನಿಂತಿತ್ತು; ಆಗ ನಾರಿನ ಬಟ್ಟೆಯನ್ನು ಹೊದ್ದುಕೊಂಡು ಲೇಖಕನ ದೌತಿಯನ್ನು ನಡುವಿಗೆ ಕಟ್ಟಿಕೊಂಡಿರುವ ಪುರುಷನನ್ನು ಯೆಹೋವನು ಕೂಗಿ ಅವನಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆಗ ಇಸ್ರೇಲರ ದೇವರ ಮಹಿಮೆಯು ತಾನು ಆಸನಾರೂಢನಾಗಿದ್ದ ಕೆರೂಬಿದೂತರ ಮೇಲಿನಿಂದ ಏರಿ ದೇವಾಲಯದ ಪ್ರವೇಶ ಸ್ಥಳಕ್ಕೆ ಹೋಯಿತು. ಆ ಮಹಿಮೆಯು ನಾರುಮಡಿಯನ್ನು ಧರಿಸಿದ್ದ, ಲೇಖಕನ ಸಾಮಾಗ್ರಿಯ ಚಿಕ್ಕ ಚೀಲವನ್ನು ಹೊಂದಿದ್ದ ಪುರುಷನನ್ನು ಕರೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಇಷ್ಟರಲ್ಲಿ ಇಸ್ರಾಯೇಲಿನ ದೇವರ ತೇಜಸ್ಸು ತನ್ನ ವಾಹನವಾದ ಕೆರೂಬಿಯನ್ನು ಬಿಟ್ಟು ಮೇಲಕ್ಕೇರಿ, ಆಲಯದ ಹೊಸ್ತಿಲಿನ ಮೇಲ್ಗಡೆ ನಿಂತಿತ್ತು. ಆಗ ನಾರಿನ ಬಟ್ಟೆಯನ್ನು ಹೊದ್ದುಕೊಂಡು, ಲೇಖಕನ ಮಸಿಕೊಂಬನ್ನು ನಡುವಿಗೆ ಕಟ್ಟಿಕೊಂಡಿದ್ದ ಪುರುಷನನ್ನು ಯೆಹೋವ ದೇವರು ಕೂಗಿ ಅವನಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 9:3
6 ತಿಳಿವುಗಳ ಹೋಲಿಕೆ  

ಇದಲ್ಲದೆ ಯೆಹೋವನ ತೇಜಸ್ಸು ಕೆರೂಬಿಗಳನ್ನು ಬಿಟ್ಟು ಮೇಲಕ್ಕೇರಿ ದೇವಾಲಯದ ಹೊಸ್ತಿಲಿನ ಮೇಲ್ಗಡೆ ನಿಂತಿತು; ದೇವಾಲಯದಲ್ಲಿಯೂ ಮೇಘವು ತುಂಬಿತ್ತು; ಯೆಹೋವನ ತೇಜಸ್ಸಿನ ಅದ್ಭುತಕಾಂತಿಯು ಅಂಗಳದಲ್ಲೆಲ್ಲಾ ವ್ಯಾಪಿಸಿತ್ತು.


ಆಹಾ, ಇಸ್ರಾಯೇಲಿನ ದೇವರ ಮಹಿಮೆಯ ದರ್ಶನವು ಬಯಲು ಸೀಮೆಯಲ್ಲಿ ಆದಂತೆ ಇಲ್ಲಿಯೂ ನನಗಾಯಿತು.


ನಾನು ಎದ್ದು ಬಯಲು ಸೀಮೆಗೆ ಹೊರಟುಹೋದೆನು. ಯೆಹೋವನ ಮಹಿಮೆಯು ಅಲ್ಲಿ ನಿಂತಿತ್ತು. ಅದು ಕೆಬಾರ್ ನದಿಯ ಹತ್ತಿರ ನಾನು ನೋಡಿದ ಮಹಿಮೆಯ ಪ್ರಕಾರವಾಗಿತ್ತು. ಅದನ್ನು ಕಂಡು ಅಡ್ಡಬಿದ್ದೆನು.


ಕೂಡಲೆ ಗದೆಗಳನ್ನು ಹಿಡಿದುಕೊಂಡ ಆರು ಮಂದಿ ಪುರುಷರು ಉತ್ತರ ಮುಖವಾಗಿರುವ ಮೇಲಣ ಹೆಬ್ಬಾಗಿಲಿನ ಮಾರ್ಗವಾಗಿ ಬಂದರು; ನಾರಿನ ಬಟ್ಟೆಯನ್ನು ಹೊದ್ದುಕೊಂಡು ಲೇಖಕನ ಮಸಿಕುಡಿಕೆಯನ್ನು ನಡುವಿಗೆ ಕಟ್ಟಿಕೊಂಡಿರುವ ಮತ್ತೊಬ್ಬ ಪುರುಷನು ಅವರ ಮಧ್ಯದಲ್ಲಿದ್ದನು. ಇವರೆಲ್ಲರೂ ಒಳಕ್ಕೆ ಸೇರಿ ತಾಮ್ರದ ಯಜ್ಞವೇದಿಯ ಪಕ್ಕದಲ್ಲಿ ನಿಂತುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು