ಯೆಹೆಜ್ಕೇಲನು 9:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಯೆಹೋವನು ಕೂಗಿ ಅವನಿಗೆ, “ನೀನು ಯೆರೂಸಲೇಮ್ ಪಟ್ಟಣದಲ್ಲೆಲ್ಲಾ ತಿರುಗಿ ಅದರೊಳಗೆ ನಡೆಯುವ ಸಮಸ್ತ ಅಸಹ್ಯ ಕಾರ್ಯಗಳಿಗಾಗಿ ನರಳಿ ಗೋಳಾಡುತ್ತಿರುವ ಜನರ ಹಣೆಯ ಮೇಲೆ ಗುರುತುಮಾಡು” ಎಂದು ಅಪ್ಪಣೆಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 “ನೀನು ಜೆರುಸಲೇಮ್ ಪಟ್ಟಣದಲ್ಲೆಲ್ಲಾ ತಿರುಗಾಡಿ, ಅದರೊಳಗೆ ನಡೆಯುವ ಸಮಸ್ತ ಅಸಹ್ಯಕಾರ್ಯಗಳಿಗೆ ನರಳಿ ಗೋಳಾಡುತ್ತಿರುವ ಜನರ ಹಣೆಯ ಮೇಲೆ ಗುರುತುಮಾಡು,” ಎಂದು ಅಪ್ಪಣೆಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನೀನು ಯೆರೂಸಲೇಮ್ ಪಟ್ಟಣದಲ್ಲೆಲ್ಲಾ ತಿರುಗಿ ಅದರೊಳಗೆ ನಡೆಯುವ ಸಮಸ್ತ ಅಸಹ್ಯಕಾರ್ಯಗಳಿಗಾಗಿ ನರಳಿ ಗೋಳಾಡುತ್ತಿರುವ ಜನರ ಹಣೆಯ ಮೇಲೆ ಗುರುತುಮಾಡು ಎಂದು ಅಪ್ಪಣೆಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಆಗ ಯೆಹೋವನು ಅವನಿಗೆ, “ಜೆರುಸಲೇಮ್ ನಗರದಲ್ಲೆಲ್ಲಾ ತಿರುಗಾಡು. ಜೆರುಸಲೇಮಿನಲ್ಲಿ ನಡೆಯುತ್ತಿರುವ ಅಸಹ್ಯವಾದ ದುಷ್ಕೃತ್ಯಗಳ ಬಗ್ಗೆ ನರಳಾಡುತ್ತಿರುವವರ ಮತ್ತು ನಿಟ್ಟುಸಿರುಬಿಡುತ್ತಿರುವವರ ಹಣೆಯ ಮೇಲ್ಗಡೆ ಒಂದು ಗುರುತನ್ನಿಡು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 “ಯೆರೂಸಲೇಮಿನ ಪಟ್ಟಣದ ಮಧ್ಯೆ ಹಾದು ಹೋಗಿ, ಅವರ ಮಧ್ಯೆ ನಡೆಯುವ ಎಲ್ಲಾ ಅಸಹ್ಯವಾದವುಗಳ ನಿಮಿತ್ತ ನಿಟ್ಟುಸಿರು ಬಿಡುತ್ತಾ ಅಳುತ್ತಿರುವವರೆಲ್ಲರ ಹಣೆಯ ಮೇಲೆ ಗುರುತು ಹಾಕು,” ಎಂದರು. ಅಧ್ಯಾಯವನ್ನು ನೋಡಿ |
ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಕುಳಿತಿದ್ದವರಿಗೆ ನ್ಯಾಯ ತೀರಿಸುವ ಅಧಿಕಾರವು ಕೊಡಲ್ಪಟ್ಟಿತು. ಇದಲ್ಲದೆ ಯೇಸುವಿನ ಸಾಕ್ಷಿಯ ನಿಮಿತ್ತವಾಗಿಯೂ, ದೇವರ ವಾಕ್ಯದ ನಿಮಿತ್ತವಾಗಿಯೂ ಶಿರಚ್ಛೇದನಗೊಂಡವರ ಆತ್ಮಗಳನ್ನೂ ಮೃಗಕ್ಕೂ ಅದರ ವಿಗ್ರಹಕ್ಕೂ ಆರಾಧನೆ ಮಾಡದೇ ತಮ್ಮ ಹಣೆಯ ಮೇಲೆ ಮತ್ತು ಕೈಗಳ ಮೇಲೆ ಅದರ ಗುರುತು ಹಾಕಿಸಿಕೊಳ್ಳದವರನ್ನೂ ಕಂಡೆನು. ಅವರು ಪುನಃ ಜೀವಿತರಾಗಿ ಎದ್ದು ಸಾವಿರ ವರ್ಷ ಕ್ರಿಸ್ತನೊಂದಿಗೆ ಆಳಿದರು.
“ನಮ್ಮ ಪೂರ್ವಿಕರು ನಮಗೆ ಸಿಕ್ಕಿರುವ ಈ ಗ್ರಂಥದಲ್ಲಿನ ಧರ್ಮೋಪದೇಶ ವಾಕ್ಯಗಳಿಗೆ ಕಿವಿಗೊಡದೆಯೂ, ಅವುಗಳನ್ನು ಕೈಕೊಳ್ಳದೆಯೂ ಹೋದುದರಿಂದ ನಾವು ಯೆಹೋವನ ಉಗ್ರಕೋಪಕ್ಕೆ ಪಾತ್ರರಾಗಿದ್ದೇವೆ. ಆದುದರಿಂದ ನೀವು ನನಗಾಗಿಯೂ, ಜನರಿಗಾಗಿಯೂ, ಮತ್ತು ಎಲ್ಲಾ ಯೆಹೂದ್ಯರಿಗಾಗಿಯೂ ಯೆಹೋವನ ಬಳಿಗೆ ಹೋಗಿ ಈ ಗ್ರಂಥದಲ್ಲಿನ ಧರ್ಮೋಪದೇಶ ವಾಕ್ಯಗಳ ಕುರಿತಾಗಿ ವಿಚಾರಿಸಿರಿ” ಎಂದು ಆಜ್ಞಾಪಿಸಿದನು.