ಯೆಹೋಶುವ 1:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ನಿನ್ನ ಆಜ್ಞೆಗಳಲ್ಲಿ ಒಂದನ್ನಾದರೂ ಅಲಕ್ಷ್ಯ ಮಾಡಿದರೆ ನಿನ್ನ ವಿಧಿಗಳಿಗೆ ವಿರುದ್ಧವಾಗಿ ನಡೆದರೆ ಮರಣದಂಡನೆಗೆ ಗುರಿಯಾಗತಕ್ಕವನು; ಆದುದರಿಂದ ಸ್ಥಿರಚಿತ್ತನಾಗಿರು, ಧೈರ್ಯದಿಂದಿರು” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ನಿಮ್ಮ ಆಜ್ಞೆಗಳಲ್ಲಿ ಒಂದನ್ನಾದರೂ ಅಲಕ್ಷ್ಯಮಾಡಿ ನಿಮ್ಮ ವಿಧಿಗಳನ್ನು ಎದುರಿಸುವವನು ಮರಣ ದಂಡನೆಗೆ ಗುರಿಯಾಗತಕ್ಕವನು. ಆದುದರಿಂದ ಧೈರ್ಯಸ್ಥೈರ್ಯದಿಂದಿರಿ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ನಿನ್ನ ಆಜ್ಞೆಗಳಲ್ಲಿ ಒಂದನ್ನಾದರೂ ಅಲಕ್ಷ್ಯಮಾಡಿ ನಿನ್ನ ವಿಧಿಗಳನ್ನು ಎದುರಿಸುವವನು ಸಾಯತಕ್ಕವನೇ; ಸ್ಥಿರಚಿತ್ತನಾಗಿರು, ಧೈರ್ಯದಿಂದಿರು ಎಂದು ಹೇಳಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಯಾರಾದರೂ ನಿನ್ನ ಆಜ್ಞೆಗಳನ್ನು ಉಲ್ಲಂಘಿಸಿದರೆ ಅಥವಾ ಯಾರಾದರೂ ನಿನ್ನನ್ನು ವಿರೋಧಿಸಿದರೆ ಅವನನ್ನು ಕೊಲ್ಲಲಾಗುವುದು. ನೀನು ಮಾತ್ರ ಸ್ಥಿರಚಿತ್ತನಾಗಿರು; ಧೈರ್ಯಶಾಲಿಯಾಗಿರು” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ನೀನು ಆಜ್ಞಾಪಿಸುವ ಎಲ್ಲದರಲ್ಲಿ ಯಾರು ನಿನ್ನ ಮಾತುಗಳನ್ನು ಕೇಳದೆ, ನಿನ್ನ ಬಾಯಿ ಮಾತಿಗೆ ಎದುರು ಬೀಳುವರೋ ಅವರು ಮರಣಕ್ಕೆ ಗುರಿಯಾಗಬೇಕು. ಬಲಿಷ್ಠನಾಗಿರು, ಧೈರ್ಯದಿಂದಿರು,” ಎಂದರು. ಅಧ್ಯಾಯವನ್ನು ನೋಡಿ |