Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 1:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಈ ಧರ್ಮಶಾಸ್ತ್ರವು ಯಾವಾಗಲೂ ನಿನ್ನ ಬಾಯಲ್ಲಿರಲಿ; ಹಗಲಿರುಳು ಅದನ್ನು ಧ್ಯಾನಿಸುತ್ತಾ ಅದರಲ್ಲಿ ಬರೆದಿರುವುದನ್ನೆಲ್ಲಾ ಕೈಕೊಂಡು ನಡೆ. ಆಗ ನಿನ್ನ ಕಾರ್ಯವೆಲ್ಲವೂ, ನೀನು ಹೋಗುವ ಮಾರ್ಗಗಳು ಸಫಲವಾಗುವುದು. ನೀನು ಚುರುಕು ಬುದ್ಧಿಯ ವ್ಯಕ್ತಿಯಾಗಿ ರೂಪಾಂತರ ಹೊಂದುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಈ ಧರ್ಮಶಾಸ್ತ್ರ ಸದಾ ನಿನ್ನ ಬಾಯಲ್ಲಿರಲಿ. ಹಗಲಿರುಳು ಅದನ್ನು ಧ್ಯಾನಿಸು. ಅದರಲ್ಲಿ ಬರೆದಿರುವುದನ್ನೆಲ್ಲಾ ಕೈಗೊಂಡು ನಡೆ. ಆಗ ನಿನ್ನ ಕಾರ್ಯವೆಲ್ಲಾ ಕೈಗೂಡುವುದು. ನೀನು ಕೃತಾರ್ಥನಾಗುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಈ ಧರ್ಮಶಾಸ್ತ್ರವು ಯಾವಾಗಲೂ ನಿನ್ನ ಬಾಯಲ್ಲಿರಲಿ; ಹಗಲಿರುಳು ಅದನ್ನು ಧ್ಯಾನಿಸುತ್ತಾ ಅದರಲ್ಲಿ ಬರೆದಿರುವದನ್ನೆಲ್ಲಾ ಕೈಕೊಂಡು ನಡಿ. ಆಗ ನಿನ್ನ ಮಾರ್ಗದಲ್ಲೆಲ್ಲಾ ಸಫಲನಾಗುವಿ, ಕೃತಾರ್ಥನಾಗುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆ ಧರ್ಮಶಾಸ್ತ್ರದಲ್ಲಿ ಬರೆದ ವಿಷಯಗಳನ್ನು ಸದಾ ನೆನಪಿಡು. ಹಗಲೂ ರಾತ್ರಿ ಆ ಧರ್ಮಶಾಸ್ತ್ರವನ್ನು ಧ್ಯಾನಿಸು. ಆಗ ಅದರಲ್ಲಿ ಬರೆದ ವಿಷಯಗಳಿಗೆ ನೀನು ನಿಶ್ಚಿತವಾಗಿ ವಿಧೇಯನಾಗಿರುವೆ. ನೀನು ಹೀಗೆ ಮಾಡಿದರೆ ನೀನು ಮಾಡುವ ಪ್ರತಿಯೊಂದು ಕಾರ್ಯದಲ್ಲಿ ನೀನು ವಿವೇಕಶಾಲಿಯಾಗುವೆ ಮತ್ತು ಜಯಶಾಲಿಯಾಗುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಈ ದೇವರ ನಿಯಮವು ನಿನ್ನ ಬಾಯಿಂದ ತೊಲಗಬಾರದು, ಅದರಲ್ಲಿ ಬರೆದಿರುವ ಪ್ರಕಾರವೇ ಕೈಗೊಂಡು ನಡೆಯುವ ಹಾಗೆ ಹಗಲುರಾತ್ರಿ ಅದನ್ನು ಧ್ಯಾನಿಸಬೇಕು. ಆಗ ನಿನ್ನ ಮಾರ್ಗವು ಸಮೃದ್ಧಿಯಾಗಿ ನೀನು ಜಯಶಾಲಿಯಾಗುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 1:8
40 ತಿಳಿವುಗಳ ಹೋಲಿಕೆ  

ನಿನ್ನ ನಿಯಮಗಳನ್ನು ಧ್ಯಾನಿಸುತ್ತಾ, ನಿನ್ನ ದಾರಿಯನ್ನು ಲಕ್ಷಿಸುವೆನು.


ಯೆಹೋವನೇ ನನ್ನ ಶರಣನೇ, ನನ್ನ ವಿಮೋಚಕನೇ, ನನ್ನ ಮಾತುಗಳೂ ಮತ್ತು ನನ್ನ ಹೃದಯದ ಧ್ಯಾನವೂ ನಿನಗೆ ಸಮರ್ಪಕವಾಗಿರಲಿ.


ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ. ಸಕಲಜ್ಞಾನದಿಂದ ಒಬ್ಬರಿಗೊಬ್ಬರು ಉಪದೇಶಮಾಡಿಕೊಂಡು ಬುದ್ಧಿಹೇಳಿಕೊಳ್ಳಿರಿ. ಕೀರ್ತನೆಗಳಿಂದಲೂ, ಸ್ತುತಿಪದಗಳಿಂದಲೂ ಮತ್ತು ಆತ್ಮೀಕವಾದ ಗೀತೆಗಳಿಂದಲೂ ಹಾಗೂ ನಿಮ್ಮ ಹೃದಯಗಳಲ್ಲಿ ದೇವರಿಗೆ ಕೃತಜ್ಞತೆಯಿಂದಲೂ ಹಾಡಿರಿ.


ಕಂದಾ, ನನ್ನ ಉಪದೇಶವನ್ನು ಮರೆಯಬೇಡ, ನನ್ನ ಆಜ್ಞೆಗಳನ್ನು ಮನಃಪೂರ್ವಕವಾಗಿ ಕೈಗೊಳ್ಳು.


ಈ ಸಂಗತಿಗಳನ್ನೆಲ್ಲಾ ನೀವು ಜ್ಞಾಪಕಮಾಡಿಕೊಂಡು ಈ ಒಡಂಬಡಿಕೆಯ ವಾಕ್ಯಗಳನ್ನು ಅನುಸರಿಸಿ ನಡೆಯಬೇಕು; ಆಗ ನೀವು ನಡಿಸುವ ಎಲ್ಲಾ ಕೆಲಸಗಳಲ್ಲಿಯೂ ಜಾಣರಾಗಿ ಅಭಿವೃದ್ಧಿಹೊಂದುವಿರಿ.


ನನ್ನ ಆಜ್ಞೆಗಳನ್ನು ಹೊಂದಿ ಅವುಗಳನ್ನು ಕೈಕೊಂಡು ನಡೆಯುವವನೇ ನನ್ನನ್ನು ಪ್ರೀತಿಸುವವನು. ನನ್ನನ್ನು ಪ್ರೀತಿಸುವವನು ನನ್ನ ತಂದೆಗೆ ಪ್ರಿಯನಾಗಿರುವನು. ನಾನೂ ಅವನನ್ನು ಪ್ರೀತಿಸಿ ಅವನಿಗೆ ನನ್ನನ್ನು ಪ್ರಕಟಪಡಿಸಿ ತೋರಿಸುವೆನು” ಎಂದು ಹೇಳಿದನು.


ಅದಕ್ಕೆ ಯೇಸು, “ಹಾಗನ್ನ ಬೇಡ, ದೇವರ ವಾಕ್ಯವನ್ನು ಕೇಳಿ ಅದನ್ನು ಅನುಸರಿಸುವವನು ಹೆಚ್ಚು ಧನ್ಯನು” ಅಂದನು.


“ಆದುದರಿಂದ, ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ನಡೆಯುವವನು ಬಂಡೆಯ ಮೇಲೆ ಮನೆಯನ್ನು ಕಟ್ಟಿಕೊಂಡ ಬುದ್ಧಿವಂತನಿಗೆ ಹೋಲುವನು.


ನಿನಗೆ ವಿರುದ್ಧವಾಗಿ ಪಾಪಮಾಡದಂತೆ, ನಿನ್ನ ನುಡಿಗಳನ್ನು ನನ್ನ ಹೃದಯದಲ್ಲಿ ಇಟ್ಟುಕೊಂಡಿದ್ದೇನೆ.


ನಿನ್ನ ಧರ್ಮಶಾಸ್ತ್ರವು ನನಗೆ ಎಷ್ಟೋ ಪ್ರಿಯವಾಗಿದೆ, ದಿನವೆಲ್ಲಾ ಅದೇ ನನ್ನ ಧ್ಯಾನ.


“ನನ್ನನ್ನು ಕರ್ತನೇ, ಕರ್ತನೇ ಅನ್ನುವವರೆಲ್ಲರು ಪರಲೋಕ ರಾಜ್ಯವನ್ನು ಪ್ರವೇಶಿಸುವುದಿಲ್ಲ; ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ನಡೆಯುವವನು ಮಾತ್ರ ಪರಲೋಕ ರಾಜ್ಯಕ್ಕೆ ಪ್ರವೇಶಿಸುವನು.


ನೀವು ಇವುಗಳನ್ನು ತಿಳಿದುಕೊಂಡು ಇದರಂತೆ ಮಾಡಿದರೆ ನೀವು ಧನ್ಯರು.


ನನ್ನ ಸೇವಕನಾದ ಮೋಶೆಯು ನಿನಗೆ ಬೋಧಿಸಿ ಆಜ್ಞಾಪಿಸಿದ ಧರ್ಮೋಪದೇಶವನ್ನೆಲ್ಲಾ ಕೈಕೊಂಡು ನಡೆಯುವುದರಲ್ಲಿ ಸ್ಥಿರಚಿತ್ತನಾಗಿರು, ಪೂರ್ಣಧೈರ್ಯದಿಂದಿರು. ಅದನ್ನು ಬಿಟ್ಟು ಎಡಕ್ಕಾಗಲಿ ಬಲಕ್ಕಾಗಲಿ ತಿರುಗಬೇಡ, ಆಗ ನೀನು ಸಫಲನಾಗುವಿ.


ಈ ವಾಕ್ಯವು ನಿಮ್ಮ ಸಮೀಪದಲ್ಲಿಯೇ ಇದೆ; ಇದು ನಿಮ್ಮ ಬಾಯಲ್ಲಿಯೂ ಮತ್ತು ಹೃದಯದಲ್ಲಿಯೂ ಇದೆ; ಇದನ್ನು ಅನುಸರಿಸುವುದಕ್ಕೆ ಅವಕಾಶವುಂಟಷ್ಟೆ.


ನನ್ನಲ್ಲಿ ಭಯಭಕ್ತಿಯುಳ್ಳವರಾಗಿ, ನನ್ನ ಆಜ್ಞೆಗಳನ್ನು ಅನುಸರಿಸುವ ಮನಸ್ಸು ಯಾವಾಗಲೂ ಅವರಲ್ಲಿ ಇದ್ದರೆ ಒಳ್ಳೇಯದು. ಆಗ ಅವರಿಗೂ ಅವರ ಸಂತತಿಯವರಿಗೂ ಯಾವಾಗಲೂ ಶುಭವುಂಟಾಗುವುದು”


ನಿನ್ನ ಕಟ್ಟಳೆಗಳು ನನ್ನ ಧ್ಯಾನವಾಗಿರುವುದರಿಂದ, ನನ್ನ ಉಪಾಧ್ಯಾಯರಿಗಿಂತ ಜ್ಞಾನಿಯಾಗಿದ್ದೇನೆ.


ನಾನಂತೂ ಅವರೊಂದಿಗೆ ಈ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು, ನೋಡಿರಿ; “ನಿಮ್ಮಲ್ಲಿ ಪ್ರವೇಶಿಸಿರುವ ನನ್ನ ಆತ್ಮವೂ, ನಿಮ್ಮ ಬಾಯಿಗೆ ನಾನು ಕೊಟ್ಟಿರುವ ಮಾತುಗಳೂ, ನಿಮ್ಮ ಬಾಯಿಂದಾಗಲಿ, ನಿಮ್ಮ ಸಂತತಿಯ ಬಾಯಿಂದಾಗಲಿ ಅಥವಾ ನಿಮ್ಮ ಸಂತತಿಯ ಸಂತಾನದ ಬಾಯಿಂದಾಗಲಿ ಇಂದಿನಿಂದ ಎಂದಿಗೂ ತೊಲಗುವುದಿಲ್ಲ” ಎಂದು ಯೆಹೋವನು ಹೇಳುತ್ತಾನೆ.


ಆದುದರಿಂದ ನೀವು ಬಲಕ್ಕಾಗಲಿ ಎಡಕ್ಕಾಗಲಿ ತಿರುಗಿಕೊಳ್ಳದೆ ತಪ್ಪಿ ನಡೆಯದೆ ನಿಮ್ಮ ದೇವರಾದ ಯೆಹೋವನು ಆಜ್ಞಾಪಿಸಿದಂತೆಯೇ ನಡೆದುಕೊಳ್ಳಬೇಕು.


ನಿಮ್ಮ ದೇವರಾದ ಯೆಹೋವನು ಆದುಕೊಂಡ ಸ್ಥಳದಲ್ಲಿ ಇಸ್ರಾಯೇಲರೆಲ್ಲರು ಆತನ ಸನ್ನಿಧಿಗೆ ಕೂಡಿಬಂದಾಗ ನೀವು ಅವರೆಲ್ಲರಿಗೆ ಕೇಳಿಸುವಂತೆ ಈ ಧರ್ಮಶಾಸ್ತ್ರವನ್ನು ಅವರ ಮುಂದೆ ಓದಬೇಕು.


ನಿಮ್ಮ ಬಾಯೊಳಗಿಂದ ಯಾವ ಕೆಟ್ಟ ಮಾತು ಹೊರಡಬಾರದು. ಭಕ್ತಿಯನ್ನು ವೃದ್ಧಿ ಮಾಡುವಂತಹ ಸಮಯೋಚಿತವಾದ ಮಾತನ್ನು ಆಡಿದರೆ ಕೇಳುವವರಿಗೆ ಹಿತವಾಗಿ ತೋರುವುದು.


ಒಳ್ಳೆಯವನು ತನ್ನ ಹೃದಯವೆಂಬ ಒಳ್ಳೆಯ ಬೊಕ್ಕಸದೊಳಗಿನಿಂದ ಒಳ್ಳೆಯದನ್ನೇ ಹೊರಗೆ ತೆಗೆಯುತ್ತಾನೆ. ಕೆಟ್ಟವನು ತನ್ನ ಹೃದಯವೆಂಬ ಕೆಟ್ಟ ಬೊಕ್ಕಸದೊಳಗಿನಿಂದ ಕೆಟ್ಟವುಗಳನ್ನು ಹೊರಗೆ ತೆಗೆಯುತ್ತಾನೆ.


ನಿನ್ನ ನೀತಿಸಾಧನೆಯನ್ನು ಮರೆಮಾಡಲಿಲ್ಲ; ನಿನ್ನ ನಂಬಿಕೆಯನ್ನೂ, ರಕ್ಷಣೆಯನ್ನೂ ಪ್ರಸಿದ್ಧಪಡಿಸಿದೆನು; ನಿನ್ನ ಕೃಪಾಸತ್ಯತೆಗಳನ್ನು ಮಹಾಸಮುದಾಯದಲ್ಲಿ ತಿಳಿಸದೆ ಇರಲಿಲ್ಲ.


ನಾನು ನಿಮಗೆ ಆಜ್ಞಾಪಿಸಿದ ಎಲ್ಲವನ್ನು ಅನುಸರಿಸುವುದಕ್ಕೆ ಅವರಿಗೆ ಉಪದೇಶ ಮಾಡಿರಿ. ಹಾಗು ಇಗೋ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿನವೂ ನಿಮ್ಮ ಸಂಗಡ ಇರುತ್ತೇನೆ” ಎಂದು ಹೇಳಿದನು.


“ತಮ್ಮ ನಿಲುವಂಗಿಗಳನ್ನು ತೊಳೆದುಕೊಂಡು ಶುದ್ಧರಾಗಿರುವವರು ಧನ್ಯರು. ಅವರಿಗೆ ಜೀವವೃಕ್ಷದ ಹಕ್ಕು ಇರುವುದು. ಅವರು ಬಾಗಿಲುಗಳ ಮೂಲಕ ಆ ಪಟ್ಟಣದೊಳಗೆ ಬಂದು ಸೇರುವರು.


ಇಸಾಕನು ಸಂಜೆ ವೇಳೆಯಲ್ಲಿ ಧ್ಯಾನ ಮಾಡುವುದಕ್ಕಾಗಿ ಬಯಲು ಪ್ರದೇಶಕ್ಕೆ ಹೋಗಿದ್ದನು. ಅಲ್ಲಿ ಕಣ್ಣೆತ್ತಿ ನೋಡಲಾಗಿ ಒಂಟೆಗಳು ಬರುವುದನ್ನು ಕಂಡನು.


ಮೋಶೆ ಈ ಧರ್ಮಶಾಸ್ತ್ರವನ್ನು ಗ್ರಂಥರೂಪವಾಗಿ ಬರೆದು ಪೂರೈಸಿದಾಗ,


ಅನಂತರ ಯೆಹೋಶುವನು ಧರ್ಮಶಾಸ್ತ್ರದ ಎಲ್ಲಾ ಅಶೀರ್ವಾದದ ವಾಕ್ಯಗಳನ್ನು ಹಾಗೂ ಶಾಪವಾಕ್ಯಗಳನ್ನು ಆ ಗ್ರಂಥದಲ್ಲಿ ಇದ್ದ ಹಾಗೆಯೇ ಓದಿದನು.


ಮೋಶೆ ಎಲ್ಲಾ ಇಸ್ರಾಯೇಲರನ್ನು ಕರೆದು, “ಇಸ್ರಾಯೇಲರೇ, ನಾನು ಈಗ ನಿಮಗೆ ತಿಳಿಸುವ ಆಜ್ಞಾವಿಧಿಗಳನ್ನು ಕೇಳಿರಿ; ಇವುಗಳನ್ನು ಗ್ರಹಿಸಿಕೊಂಡು ಅನುಸರಿಸಿ ನಡೆಯಬೇಕು.


ಅವರ ರಾಜ್ಯಗಳನ್ನು ಸ್ವಾಧೀನಮಾಡಿಕೊಂಡು ರೂಬೇನ್ಯರಿಗೂ, ಗಾದ್ಯರಿಗೂ ಹಾಗು ಮನಸ್ಸೆ ಕುಲದವರಲ್ಲಿ ಅರ್ಧಜನರಿಗೂ ಸ್ವತ್ತಾಗಿ ಕೊಟ್ಟೆವಷ್ಟೆ.


ದೈವಭಕ್ತಿಯನ್ನು ಬೋಧಿಸುತ್ತಿದ್ದ ಜೆಕರ್ಯನ ಜೀವಮಾನಕಾಲದಲ್ಲಿ ಅವನು ದೇವರನ್ನು ಅವಲಂಬಿಸಿಕೊಂಡಿದ್ದನು; ಹೀಗೆ ಅವನು ಯೆಹೋವನನ್ನು ಅವಲಂಬಿಸಿದ್ದ ಕಾಲದಲ್ಲೆಲ್ಲಾ ದೇವರಾದ ಯೆಹೋವನು ಅವನನ್ನು ಅಭಿವೃದ್ಧಿಗೆ ತಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು