Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 1:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಾನು ನಿನಗೆ ಆಜ್ಞಾಪಿಸಿದಂತೆ ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಅಂಜಬೇಡ, ಕಳವಳಗೊಳ್ಳಬೇಡ. ನೀನು ಹೋಗುವಲ್ಲೆಲ್ಲಾ ನಿನ್ನ ದೇವರಾದ ಯೆಹೋವನು ನಿನ್ನ ಸಂಗಡ ಇರುವನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನಾನು ನಿನಗೆ ಆಜ್ಞಾಪಿಸಿದಂತೆ ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಅಂಜಬೇಡ, ಕಳವಳಗೊಳ್ಳಬೇಡ. ನೀನು ಹೋಗುವ ಎಡೆಗಳಲ್ಲೆಲ್ಲ ನಿನ್ನ ದೇವರೂ ಸರ್ವೇಶ್ವರನೂ ಆದ ನಾನು ನಿನ್ನ ಸಂಗಡ ಇರುತ್ತೇನೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನಾನು ನಿನಗೆ ಆಜ್ಞಾಪಿಸಿದ್ದೇನಲ್ಲಾ; ಸ್ಥಿರಚಿತ್ತನಾಗಿರು, ಧೈರ್ಯದಿಂದಿರು. ಅಂಜಬೇಡ, ಕಳವಳಗೊಳ್ಳಬೇಡ. ನೀನು ಹೋಗುವಲ್ಲೆಲ್ಲಾ ನಿನ್ನ ದೇವರಾದ ಯೆಹೋವನು ನಿನ್ನ ಸಂಗಡ ಇರುತ್ತಾನೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನೆನಪಿಡು, ನೀನು ಸ್ಥಿರಚಿತ್ತನಾಗಿರಬೇಕೆಂತಲೂ ಧೈರ್ಯಶಾಲಿಯಾಗಿರಬೇಕೆಂತಲೂ ನಾನು ನಿನಗೆ ಆಜ್ಞಾಪಿಸುತ್ತೇನೆ. ಆದ್ದರಿಂದ ಹೆದರಬೇಡ, ಯಾಕೆಂದರೆ ನೀನು ಹೋಗುವಲ್ಲೆಲ್ಲಾ ನಿನ್ನ ದೇವರಾದ ಯೆಹೋವನೇ ನಿನ್ನ ಸಂಗಡ ಇರುವನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನಾನು ನಿನಗೆ ಆಜ್ಞಾಪಿಸಿದ್ದೇನಲ್ಲಾ, ಬಲಿಷ್ಠನಾಗಿರು. ಧೈರ್ಯದಿಂದಿರು, ಭಯಪಡಬೇಡ, ನಿರುತ್ಸಾಹಗೊಳ್ಳಬೇಡ. ಏಕೆಂದರೆ ನೀನು ಹೋಗುವ ಕಡೆಯೆಲ್ಲಾ ನಿನ್ನ ದೇವರಾದ ಯೆಹೋವ ದೇವರು ನಿನ್ನ ಸಂಗಡ ಇದ್ದಾರೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 1:9
33 ತಿಳಿವುಗಳ ಹೋಲಿಕೆ  

ಇಗೋ, ನಾನು ನಿನ್ನ ಸಂಗಡ ಇದ್ದು ನೀನು ಹೋಗುವಲ್ಲೆಲ್ಲಾ ನಿನ್ನನ್ನು ಕಾಪಾಡಿ, ಪುನಃ ಈ ದೇಶಕ್ಕೆ ಬರಮಾಡುವೆನು. ಏಕೆಂದರೆ ನಾನು ನಿನಗೆ ಹೇಳಿದ್ದನ್ನೆಲ್ಲಾ ನೆರವೇರಿಸದ ಹೊರತು ಬಿಡುವುದಿಲ್ಲ” ಎಂದನು.


ನೀವು ನಿಮ್ಮ ಶತ್ರುಗಳಿಗೆ ವಿರುದ್ಧವಾಗಿ ಯುದ್ಧಕ್ಕೆ ಹೊರಟಾಗ ಅವರ ಹತ್ತಿರ ಕುದುರೆಗಳೂ, ರಥಗಳೂ ಮತ್ತು ನಿಮಗಿಂತ ಹೆಚ್ಚಾದ ಕಾಲ್ಬಲವೂ ಇರುವುದನ್ನು ಕಂಡರೆ ಹೆದರಬಾರದು. ಏಕೆಂದರೆ ಐಗುಪ್ತದೇಶದಿಂದ ನಿಮ್ಮನ್ನು ಬಿಡಿಸಿದ ನಿಮ್ಮ ದೇವರಾದ ಯೆಹೋವನು ನಿಮ್ಮ ಕಡೆ ಇದ್ದಾನಲ್ಲಾ.


ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ; ಯಾಕೋಬ ವಂಶದವರ ದೇವರು ನಮಗೆ ಆಶ್ರಯ ದುರ್ಗವಾಗಿದ್ದಾನೆ. ಸೆಲಾ


ಈಗಲಾದರೋ, ಯಾಕೋಬನ ವಂಶವೇ, ಇಸ್ರಾಯೇಲ್ ಸಂತಾನವೇ, ನಿನ್ನನ್ನು ಸೃಷ್ಟಿಸಿ ರೂಪಿಸಿದವನಾದ ಯೆಹೋವನು ಹೀಗೆನ್ನುತ್ತಾನೆ, “ಭಯಪಡಬೇಡ, ನಾನು ನಿನ್ನನ್ನು ವಿಮೋಚಿಸಿದೆನಲ್ಲಾ, ನಿನ್ನ ಹೆಸರು ಹಿಡಿದು ಕರೆದೆನಲ್ಲಾ, ನೀನು ನನ್ನವನೇ.


ಭಯಪಡಬೇಡ, ನಾನು ನಿನ್ನ ಸಂಗಡ ಇದ್ದೇನೆ; ನಿನ್ನ ಸಂತತಿಯವರನ್ನು ಪೂರ್ವದಿಂದ ತರುವೆನು, ನಿನ್ನವರನ್ನು ಪಶ್ಚಿಮದಿಂದ ಕೂಡಿಸುವೆನು.


ಆಗ ಯೆಹೋವನು ಅವನನ್ನು ಚೆನ್ನಾಗಿ ನೋಡಿ, “ನಾನು ನಿನ್ನನ್ನು ಕಳುಹಿಸುತ್ತೇನೆ, ಹೋಗು; ನಿನ್ನ ಈ ಬಲದಿಂದ ಇಸ್ರಾಯೇಲ್ಯರನ್ನು ಮಿದ್ಯಾನ್ಯರಿಂದ ಬಿಡಿಸು” ಎಂದು ಹೇಳಿದನು.


ಇದಕ್ಕೆ ಮೊದಲೇ ಅಬ್ಷಾಲೋಮನು ತನ್ನ ಆಳುಗಳಿಗೆ, “ಕೇಳಿರಿ, ಅಮ್ನೋನನು ದ್ರಾಕ್ಷಾರಸ ಕುಡಿದು ಮತ್ತನಾಗಿರುವಾಗ ನಾನು ಹೊಡೆಯಬೇಕೆಂದು ಹೇಳಿದ ಕೂಡಲೆ ಅವನನ್ನು ಹೊಡೆದು ಕೊಂದುಹಾಕಿರಿ. ಹೆದರಬೇಡಿರಿ, ನಿಮಗೆ ಆಜ್ಞಾಪಿಸಿದವನು ನಾನಲ್ಲವೇ? ಧೈರ್ಯದಿಂದಿರಿ ಮತ್ತು ಶೂರರಾಗಿರಿ” ಎಂದು ಹೇಳಿದನು.


ಅದಕ್ಕೆ ಪೇತ್ರ ಮತ್ತು ಯೋಹಾನನ್ನು; ಅವರಿಗೆ “ದೇವರ ಮಾತನ್ನು ಕೇಳುವುದಕ್ಕಿಂತ ನಿಮ್ಮ ಮಾತನ್ನು ಕೇಳುವುದು ಸರಿಯೇ? ಅದು ದೇವರ ಮುಂದೆ ನ್ಯಾಯವೋ? ನೀವೇ ತೀರ್ಪು ಮಾಡಿಕೊಳ್ಳಿರಿ;


ನಿಮ್ಮ ಕುಲಗಳ ಹಿರಿಯರನ್ನೂ, ಅಧಿಪತಿಗಳನ್ನೂ ನನ್ನ ಬಳಿಗೆ ಕೂಡಿಸಿರಿ; ನಾನು ಈ ಮಾತುಗಳನ್ನು ಅವರಿಗೆ ತಿಳಿಸಿ ಅವರಿಗೆ ವಿರುದ್ಧವಾಗಿ ಸಾಕ್ಷಿಗಳಾಗುವುದಕ್ಕೆ ಭೂಮಿ ಮತ್ತು ಆಕಾಶಗಳನ್ನು ಕರೆಯುವೆನು.


ನಿಮ್ಮ ದೇವರಾದ ಯೆಹೋವನು ಆ ದೇಶವನ್ನು ನಿಮಗೇ ಕೊಟ್ಟಿದ್ದಾನೆ; ನಿಮ್ಮ ಪೂರ್ವಿಕರ ದೇವರಾದ ಯೆಹೋವನು ಹೇಳಿದಂತೆ ಆ ಬೆಟ್ಟವನ್ನು ಹತ್ತಿ ಸ್ವಾಧೀನಮಾಡಿಕೊಳ್ಳಿರಿ; ನೀವು ಭಯಪಡದೆ ಧೈರ್ಯವಾಗಿಯೇ ಇರಬೇಕು” ಎಂದು ಹೇಳಿದೆನು.


ಆಗ ಯೆಹೋಶುವನು ಜನರ ಅಧಿಕಾರಿಗಳಿಗೆ


ನಾವು ಮೋಶೆಯ ಎಲ್ಲಾ ಮಾತುಗಳಿಗೆ ವಿಧೇಯರಾದ ಹಾಗೆ ನಿನ್ನ ಮಾತುಗಳಿಗೂ ವಿಧೇಯರಾಗುವೆವು. ನಿನ್ನ ದೇವರಾದ ಯೆಹೋವನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡವೂ ಇರಲಿ.


ಅನಂತರ ಯೆಹೋವನು ಯೆಹೋಶುವನಿಗೆ “ಅಂಜಬೇಡ, ಕಳವಳಗೊಳ್ಳಬೇಡ; ಎದ್ದು ಭಟರೆಲ್ಲರನ್ನೂ ಕರೆದುಕೊಂಡು ಆಯಿ ಪಟ್ಟಣಕ್ಕೆ ಹೋಗು. ನೋಡು, ಆಯಿ ಎಂಬ ಊರಿನ ಅರಸ, ಪ್ರಜೆ, ನಗರ, ಸೀಮೆ ಇವುಗಳನ್ನೆಲ್ಲಾ ನಿನಗೆ ಕೊಟ್ಟಿದ್ದೇನೆ.


ಯೆಹೋವನು ಯೆಹೋಶುವನಿಗೆ, ಅವರಿಗೆ “ಹೆದರಬೇಡ, ಅವರನ್ನು ನಿನ್ನ ಕೈಗೆ ಒಪ್ಪಿಸಿದ್ದೇನೆ. ಅವರಲ್ಲಿ ಒಬ್ಬನೂ ನಿನ್ನ ಮುಂದೆ ನಿಲ್ಲುವುದಿಲ್ಲ” ಎಂದನು


ನೀವಾದರೋ ಸ್ಥಿರಚಿತ್ತರಾಗಿರಿ; ನಿಮ್ಮ ಕೈಗಳು ಜೋಲು ಬೀಳದಿರಲಿ. ನಿಮ್ಮ ಪ್ರಯತ್ನಕ್ಕೆ ತಕ್ಕ ಫಲ ಸಿಕ್ಕುವುದು” ಎಂದು ಹೇಳಿದನು.


ನೀನಂತು ಹೆದರಬೇಡ, ನಾನೇ ನಿನ್ನೊಂದಿಗಿದ್ದೇನೆ, ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು. ನಾನು ನಿನ್ನನ್ನು ಬಲಪಡಿಸುತ್ತೇನೆ. ಹೌದು, ನಿನಗೆ ಸಹಾಯಮಾಡುತ್ತೇನೆ. ನನ್ನ ಧರ್ಮದ ಬಲಗೈಯನ್ನು ನಿನಗೆ ಆಧಾರಮಾಡುತ್ತೇನೆ.


ಯೆಹೋವನು ಯೋಸೇಫನ ಸಂಗಡ ಇದ್ದುದರಿಂದ ಅವನು ಕೃತಾರ್ಥನಾದನು. ಐಗುಪ್ತನಾದ ತನ್ನ ದಣಿಯ ಮನೆಯೊಳಗೆ ಯೋಸೇಫನು ಸೇವಕನಾದನು.


ಯೆಹೋವನು ಯೋಸೇಫನ ಸಂಡಗವಿದ್ದು ಅವನು ಮಾಡುವ ಕೆಲಸವನ್ನೆಲ್ಲಾ ಸಫಲವಾಗುವಂತೆ ಮಾಡುತ್ತಾನೆಂದು ಅವನ ದಣಿಯು ತಿಳಿದನು.


ಆಗ ಯೆಹೋವನು ನೂನನ ಮಗನಾದ ಯೆಹೋಶುವನಿಗೆ, “ನಾನು ಇಸ್ರಾಯೇಲರಿಗೆ ಪ್ರಮಾಣಮಾಡಿಕೊಟ್ಟ ದೇಶದಲ್ಲಿ ನೀನೇ ಅವರನ್ನು ಸೇರಿಸಬೇಕು; ಆದುದರಿಂದ ಶೂರನಾಗಿ ಧೈರ್ಯದಿಂದಿರು; ನಾನೇ ನಿನ್ನ ಸಂಗಡ ಇರುವೆನು” ಎಂದು ಆಜ್ಞಾಪಿಸಿದನು.


ನಿನ್ನ ಆಜ್ಞೆಗಳಲ್ಲಿ ಒಂದನ್ನಾದರೂ ಅಲಕ್ಷ್ಯ ಮಾಡಿದರೆ ನಿನ್ನ ವಿಧಿಗಳಿಗೆ ವಿರುದ್ಧವಾಗಿ ನಡೆದರೆ ಮರಣದಂಡನೆಗೆ ಗುರಿಯಾಗತಕ್ಕವನು; ಆದುದರಿಂದ ಸ್ಥಿರಚಿತ್ತನಾಗಿರು, ಧೈರ್ಯದಿಂದಿರು” ಎಂದು ಹೇಳಿದರು.


ಆಗ ಯೆಹೋವನು ಯೆಹೋಶುವನಿಗೆ “ನಾನು ಈ ದಿನ ನಿನ್ನನ್ನು ಇಸ್ರಾಯೇಲ್ಯರೆಲ್ಲರ ಮುಂದೆ ಘನಪಡಿಸುವೆನು; ನಾನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡಲೂ ಇರುವೆನೆಂದು ಅವರಿಗೆ ಗೊತ್ತಾಗುವುದು.


ಯೆಹೋವನು ಯೆಹೋಶುವನ ಸಂಗಡ ಇದ್ದುದರಿಂದ ಅವನ ಕೀರ್ತಿ ದೇಶದಲ್ಲೆಲ್ಲಾ ಹಬ್ಬಿತು.


ಆಗ ಅವನು ಅವರಿಗೆ “ಅಂಜಬೇಡಿರಿ, ಕಳವಳಗೊಳ್ಳಬೇಡಿರಿ; ಸ್ಥಿರಚಿತ್ತರಾಗಿ, ಧೈರ್ಯದಿಂದಿರಿ. ನಿಮ್ಮೊಡನೆ ಯುದ್ಧಕ್ಕೆ ಬರುವ ಎಲ್ಲಾ ವೈರಿಗಳಿಗೂ ಯೆಹೋವನು ಹೀಗೆಯೇ ಮಾಡುವನು” ಎಂದು ಹೇಳಿದನು.


ಈ ಗುರುತುಗಳೆಲ್ಲಾ ಸಂಭವಿಸಿದಾಗ ನಿನಗೆ ಅನುಕೂಲವಿದ್ದ ಹಾಗೆ ಮಾಡು; ದೇವರು ನಿನ್ನ ಸಂಗಡ ಇದ್ದಾನೆ.


ಆ ಮೇಲೆ ದಾವೀದನು ತನ್ನ ಮಗನಾದ ಸೊಲೊಮೋನನಿಗೆ, “ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಕೆಲಸಕ್ಕೆ ಕೈಹಾಕು, ಅಂಜಬೇಡ, ಕಳವಳಗೊಳ್ಳಬೇಡ, ನನ್ನ ದೇವರಾದ ಯೆಹೋವ ದೇವರು ನಿನ್ನ ಸಂಗಡ ಇರುತ್ತಾನೆ. ಆತನು ತನ್ನ ಆಲಯದ ಎಲ್ಲಾ ಕೆಲಸಗಳು ತೀರುವವರೆಗೂ ನಿನ್ನನ್ನು ಕೈಬಿಡುವುದಿಲ್ಲ ತೊರೆಯುವುದಿಲ್ಲ.


“ಇವರು ಯಾವುದನ್ನು ಒಪ್ಪಂದವೆನ್ನುತ್ತಾರೋ ನೀವು ಅದನ್ನು ಒಪ್ಪಂದವೆನ್ನಬೇಡಿರಿ; ಇವರು ಯಾವುದಕ್ಕೆ ಹೆದರುತ್ತಾರೋ ನೀವು ಅದಕ್ಕೆ ಹೆದರಬೇಡಿರಿ, ನಡುಗಬೇಡಿರಿ.


ಆ ಮೇಲೆ ಆ ಪುರುಷನು ನನಗೆ, “ಅತಿಪ್ರಿಯನೇ, ಭಯಪಡಬೇಡ; ನಿನಗೆ ಸಮಾಧಾನವಿರಲಿ, ಬಲಗೊಳ್ಳು, ಬಲಗೊಳ್ಳು” ಎಂದು ಹೇಳಿದನು. ಅವನು ಈ ಮಾತನ್ನು ಹೇಳಿದ ಕೂಡಲೆ ನಾನು ಬಲಗೊಂಡು, “ಎನ್ನೊಡೆಯನೇ, ಮಾತನಾಡು; ನನ್ನನ್ನು ಬಲಗೊಳಿಸಿದ್ದೀ”


ಯೆಹೋವನು ಇಂತೆನ್ನುತ್ತಾನೆ, ‘ಜೆರುಬ್ಬಾಬೆಲನೇ ಈಗ ಧೈರ್ಯವಾಗಿರು; ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವನೇ, ಧೈರ್ಯವಾಗಿರು; ದೇಶೀಯರೇ, ನೀವೆಲ್ಲರೂ ಧೈರ್ಯಗೊಂಡು ಕೆಲಸ ನಡಿಸಿರಿ’ ಇದು ಯೆಹೋವನ ನುಡಿ; ‘ನಾನು ನಿಮ್ಮೊಂದಿಗೆ ಇದ್ದೇನೆ’ ಎಂದು ಸೇನಾಧೀಶ್ವರ ಯೆಹೋವನು ನುಡಿಯುತ್ತಾನೆ.


‘ನೀವು ಐಗುಪ್ತದಿಂದ ಪಾರಾಗಿ ಬಂದಾಗ, ನಾನು ನಿಮಗೆ ವಾಗ್ದಾನವಾಗಿ ಕೊಟ್ಟ ಮಾತನ್ನು ನೆರವೇರಿಸುವೆನು; ನನ್ನ ಆತ್ಮನು ನಿಮ್ಮ ಮಧ್ಯದಲ್ಲಿ ನೆಲೆಗೊಂಡಿರುವನು; ಹೆದರಬೇಡಿರಿ.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು