ಯೆಹೋಶುವ 10:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೆಹೋಶುವನು ಆಯಿ ನಗರವನ್ನು, ಅದರ ಅರಸನನ್ನು ಹಿಡಿದು ಯೆರಿಕೋವನ್ನೂ ಅದರ ಅರಸನನ್ನೂ ಹೇಗೆ ಸಂಹರಿಸಿದನೆಂದು ಯೆರೂಸಲೇಮಿನ ಅರಸ ಅದೋನೀಚೆದೆಕನು ತಿಳಿದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಯೆಹೋಶುವನು ಆಯಿ ನಗರವನ್ನು ಅದರ ಅರಸನನ್ನು ಹಿಡಿದು ಜೆರಿಕೋವನ್ನೂ ಅದರ ಅರಸನನ್ನೂ ಹೇಗೋ ಹಾಗೆ ಸಂಹರಿಸಿಬಿಟ್ಟನೆಂದು ಜೆರುಸಲೇಮಿನ ಅರಸ ಅದೋನೀಚೆದೆಕನು ತಿಳಿದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯೆಹೋಶುವನು ಯೆರಿಕೋವನ್ನೂ ಅದರ ಅರಸನನ್ನೂ ಹೇಗೋ ಹಾಗೆಯೇ ಆಯಿ ಎಂಬ ಪಟ್ಟಣವನ್ನೂ ಅದರ ಅರಸನನ್ನೂ ತೆಗೆದುಕೊಂಡು ಸಂಹರಿಸಿ ಬಿಟ್ಟನೆಂಬದನ್ನೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಈ ಸಮಯದಲ್ಲಿ ಅದೋನೀಚೆದೆಕನು ಜೆರುಸಲೇಮಿನ ಅರಸನಾಗಿದ್ದನು. ಯೆಹೋಶುವನು ಆಯಿ ಪಟ್ಟಣವನ್ನು ಸ್ವಾಧೀನಪಡಿಸಿಕೊಂಡ ಮತ್ತು ಅದನ್ನು ಸಂಪೂರ್ಣವಾಗಿ ನಾಶಮಾಡಿದ ಸಂಗತಿಯನ್ನು ಅವನು ಕೇಳಿದ್ದನು. ಜೆರಿಕೊ ಪಟ್ಟಣಕ್ಕೂ ಅದರ ರಾಜನಿಗೂ ಯೆಹೋಶುವನು ಹಾಗೆಯೇ ಮಾಡಿದ್ದನೆಂಬುದನ್ನೂ ಗಿಬ್ಯೋನಿನ ಜನರು ಇಸ್ರೇಲರೊಂದಿಗೆ ಶಾಂತಿ ಒಪ್ಪಂದ ಮಾಡಿಕೊಂಡಿದ್ದಾರೆಂಬುದನ್ನೂ ಅವನು ಕೇಳಿದ್ದನು. ಅವರು ಜೆರುಸಲೇಮಿಗೆ ಅತೀಸಮೀಪದಲ್ಲಿ ವಾಸವಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಈ ಸಮಯದಲ್ಲಿ ಯೆರೂಸಲೇಮಿನ ಅರಸನಾದ ಅದೋನೀಚೆದೆಕನು ಯೆಹೋಶುವನು ಯೆರಿಕೋವನ್ನೂ ಅದರ ಅರಸನನ್ನೂ ಹೇಗೋ ಹಾಗೆಯೇ ಆಯಿ ಎಂಬ ಪಟ್ಟಣವನ್ನು ಸ್ವಾಧೀನಪಡಿಸಿಕೊಂಡು, ಅದರ ಅರಸನನ್ನು ಸಂಹರಿಸಿಬಿಟ್ಟು ಸಂಪೂರ್ಣ ನಾಶಮಾಡಿದನೆಂಬ ಸಂಗತಿಯನ್ನು ಅವನು ಕೇಳಿದ್ದನು. ಹಾಗೆಯೇ ಗಿಬ್ಯೋನಿನ ನಿವಾಸಿಗಳು ಇಸ್ರಾಯೇಲಿನ ಸಂಗಡ ಸಮಾಧಾನ ಮಾಡಿಕೊಂಡು ಅವರಲ್ಲಿ ಇದ್ದರೆಂದೂ ಕೇಳಿದ್ದನು. ಅಧ್ಯಾಯವನ್ನು ನೋಡಿ |