ಯೆಹೋಶುವ 10:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆ ಅಮೋರಿಯರಲ್ಲಿ ಯೆಹೋವನು ಇಸ್ರಾಯೇಲರ ಕುರಿತಾಗಿ ಅವರನ್ನು ಕಳವಳಗೊಳಿಸಿದ್ದರಿಂದ ಯೆಹೋಶುವನು ಅವರನ್ನು ಗಿಬ್ಯೋನಿನ ಹತ್ತಿರ ಸಂಪೂರ್ಣವಾಗಿ ಸೋಲಿಸಿ ಬೇತ್ಹೋರೋನ್ ಎಂಬ ಬೆಟ್ಟದ ದಾರಿಯಲ್ಲಿ ಅಜೇಕ, ಮಕ್ಕೇದ ಎಂಬ ಊರುಗಳವರೆಗೂ ಅವರನ್ನು ಹಿಂದಟ್ಟಿ ಸಂಹರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಆ ಅಮೋರಿಯರಲ್ಲಿ ಇಸ್ರಯೇಲರ ಬಗ್ಗೆ ಸರ್ವೇಶ್ವರ ಭಯ ಹುಟ್ಟಿಸಿದರು. ಆದುದರಿಂದ ಯೆಹೋಶುವನು ಅವರನ್ನು ಗಿಬ್ಯೋನಿನ ಹತ್ತಿರ ಸಂಪೂರ್ಣವಾಗಿ ಸೋಲಿಸಿ ಬೇತ್ ಹೋರೋನ್ ಎಂಬ ಮೇಡು ದಾರಿಯಲ್ಲಿ ಅಜೇಕ, ಮಕ್ಕೇದ ಎಂಬ ಊರುಗಳವರೆಗೆ ಅವರನ್ನು ಹಿಂದಟ್ಟಿ ಸಂಹರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಯೆಹೋವನು ಇಸ್ರಾಯೇಲ್ಯರ ಮುಂದೆ ಅವರನ್ನು ಕಳವಳಗೊಳಿಸಿದ್ದರಿಂದ ಯೆಹೋಶುವನು ಅವರನ್ನು ಗಿಬ್ಯೋನಿನ ಹತ್ತಿರ ಪೂರ್ಣವಾಗಿ ಸೋಲಿಸಿ ಬೇತ್ಹೋರೋನ್ ಎಂಬ ಗಟ್ಟದ ದಾರಿಯಲ್ಲಿ ಅಜೇಕ, ಮಕ್ಕೇದ ಎಂಬ ಊರುಗಳವರೆಗೂ ಅವರನ್ನು ಹಿಂದಟ್ಟಿ ಸಂಹರಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಇಸ್ರೇಲರು ಧಾಳಿಮಾಡಿದಾಗ ಯೆಹೋವನು ಆ ಶತ್ರು ಸೈನ್ಯವನ್ನು ಗಾಬರಿಗೊಳಿಸಿದನು. ಆದ್ದರಿಂದ ಇಸ್ರೇಲಿನ ಸೈನಿಕರು ಅವರನ್ನು ಸೋಲಿಸಿ ಮಹಾವಿಜಯವನ್ನು ಸಾಧಿಸಿದರು. ಇಸ್ರೇಲರು ಶತ್ರುಗಳನ್ನು ಗಿಬ್ಯೋನಿನಿಂದ ಬೇತ್‌ಹೋರೋನಿಗೆ ಹೋಗುವ ದಾರಿಯವರೆಗೂ ಬೆನ್ನಟ್ಟಿದರು. ಇಸ್ರೇಲರು ಅಜೇಕ ಮತ್ತು ಮಕ್ಕೇದದವರೆಗೆ ಅವರನ್ನು ಕೊಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆಗ ಯೆಹೋವ ದೇವರು ಅವರನ್ನು ಇಸ್ರಾಯೇಲಿನ ಮುಂದೆ ಕಳವಳಗೊಳಿಸಿದರು. ಯೆಹೋಶುವನು ಮತ್ತು ಇಸ್ರಾಯೇಲರು ಗಿಬ್ಯೋನಿನಲ್ಲಿ ಸಂಪೂರ್ಣವಾಗಿ ಸಂಹರಿಸಿ, ಬೇತ್ ಹೋರೋನಿಗೆ ಹೋಗುವ ಮಾರ್ಗದಲ್ಲಿ ಅವರನ್ನು ಹಿಂದಟ್ಟಿ, ಅಜೇಕ, ಮಕ್ಕೇದದ ಎಂಬ ಊರುಗಳವರೆಗೆ ಹೊಡೆದರು. ಅಧ್ಯಾಯವನ್ನು ನೋಡಿ |