ಯೆಹೋಶುವ 10:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅವರು ಇಸ್ರಾಯೇಲ್ಯರಿಗೆ ಬೆಂಗೊಟ್ಟು ಬೇತ್‍ಹೋರೋನಿನ ಇಳಿಜಾರಿನಲ್ಲಿ ಓಡುತ್ತಾ ಅಜೇಕವನ್ನು ತಲುಪುವವರೆಗೂ ಯೆಹೋವನು ಅವರ ಮೇಲೆ ಆಕಾಶದಿಂದ ದೊಡ್ಡ ಆಲಿಕಲ್ಲಿನ ಮಳೆಯನ್ನು ಸುರಿಸಿದನು. ಈ ಕಾರಣದಿಂದ ಅನೇಕರು ಸತ್ತರು ಇಸ್ರಾಯೇಲ್ಯರ ಕತ್ತಿಯಿಂದ ಸಂಹಾರವಾದವರಿಗಿಂತ ಆಲಿಕಲ್ಲಿನ ಮಳೆಯಿಂದ ನಾಶವಾದವರೇ ಹೆಚ್ಚು ಮಂದಿಯಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಅವರು ಇಸ್ರಯೇಲರಿಗೆ ಬೆಂಗೊಟ್ಟು ಬೇತ್ ಹೋರೋನಿನ ಇಳಿಜಾರಿನಲ್ಲಿ ಓಡುತ್ತಾ ಅಜೇಕವನ್ನು ಮುಟ್ಟುವವರೆಗೂ ಸರ್ವೇಶ್ವರ ಆಕಾಶದಿಂದ ದೊಡ್ಡ ಕಲ್ಮಳೆಯನ್ನು ಸುರಿಸಿದರು. ಈ ಕಾರಣ ಅನೇಕರು ಸತ್ತರು. ಇಸ್ರಯೇಲರ ಕತ್ತಿಗೆ ಈಡಾದವರಿಗಿಂತ ಕಲ್ಮಳೆಯಿಂದ ನಾಶವಾದವರೇ ಹೆಚ್ಚುಮಂದಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಅವರು ಇಸ್ರಾಯೇಲ್ಯರಿಗೆ ಬೆಂಗೊಟ್ಟು ಬೇತ್‍ಹೋರೋನಿನ ಇಳಿಜಾರಿನಲ್ಲಿ ಓಡುತ್ತಾ ಅಜೇಕವನ್ನು ಮುಟ್ಟುವವರೆಗೂ ಯೆಹೋವನು ಆಕಾಶದಿಂದ ದೊಡ್ಡ ಕಲ್ಮಳೆಯನ್ನು ಸುರಿಸಿ ಅನೇಕರನ್ನು ಸಾಯಿಸಿದನು. ಇಸ್ರಾಯೇಲ್ಯರ ಕತ್ತಿಯಿಂದ ಸಂಹೃತರಾದವರಿಗಿಂತ ಕಲ್ಮಳೆಯಿಂದ ನಾಶವಾದವರೇ ಹೆಚ್ಚು ಮಂದಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಬೇತ್‌ಹೋರೋನ್ ಇಳಿಜಾರಿನಿಂದ ಅಜೇಕದವರೆಗೆ ಅವರನ್ನು ಕೊಂದರು. ಅವರು ಶತ್ರುಗಳನ್ನು ಬೆನ್ನಟ್ಟುತ್ತಿದ್ದಾಗ ಯೆಹೋವನು ಆಕಾಶದಿಂದ ಆಲಿಕಲ್ಲು ಮಳೆ ಸುರಿಯುವಂತೆ ಮಾಡಿದನು. ಬಹಳಷ್ಟು ಮಂದಿ ಶತ್ರುಗಳು ಈ ದೊಡ್ಡ ಆಲಿಕಲ್ಲುಗಳಿಂದಲೇ ಮೃತಪಟ್ಟರು. ಇಸ್ರೇಲರು ತಮ್ಮ ಖಡ್ಗಗಳಿಂದ ಕೊಂದ ಜನರಿಗಿಂತ ಹೆಚ್ಚು ಜನರು ಈ ಆಲಿಕಲ್ಲಿನ ಮಳೆಯಿಂದ ಸತ್ತರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಅವರು ಬೇತ್ ಹೋರೋನಿನಿಂದ ಇಳಿದು ಅಜೇಕದವರೆಗೆ ಇಸ್ರಾಯೇಲಿನ ಮುಂದೆ ಓಡಿ ಹೋಗುವಾಗ, ಅವರ ಮೇಲೆ ಯೆಹೋವ ದೇವರು ಆಕಾಶದಿಂದ ದೊಡ್ಡ ಕಲ್ಮಳೆಯನ್ನು ಸುರಿಸಿದರು. ಇಸ್ರಾಯೇಲರ ಖಡ್ಗದ ದಾಳಿಗಿಂತ ಕಲ್ಮಳೆಯಿಂದ ನಾಶವಾದವರೇ ಹೆಚ್ಚು ಮಂದಿಯಾಗಿದ್ದರು. ಅಧ್ಯಾಯವನ್ನು ನೋಡಿ |