Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 10:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆಗ ಯೆಹೋಶುವನು ಅವರಿಗೆ “ಆ ಗವಿಯ ಬಾಯಿಗೆ ದೊಡ್ಡ ಕಲ್ಲುಗಳನ್ನು ಹೊರಳಿಸಿ ಕಾಯುವುದಕ್ಕೆ ಕಾವಲುಗಾರರನ್ನು ಇಡಿರಿ. ನೀವಾದರೂ ಅಲ್ಲೇ ನಿಂತುಕೊಳ್ಳಬೇಡಿ. ಬೇಗನೆ ಹಿಂದಟ್ಟಿ ಹಿಂದೆ ಬರುವ ಶತ್ರುಗಳನ್ನು ಹತಮಾಡುತ್ತಾ ಹೋಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಆಗ ಯೆಹೋಶುವನು ಅವರಿಗೆ, “ಆ ಗವಿಯ ಬಾಯಿಗೆ ದೊಡ್ಡ ಕಲ್ಲುಗಳನ್ನು ಹೊರಳಿಸಿ ಕಾಯುವುದಕ್ಕೆ ಕೆಲವರನ್ನಿಡಿ. ನೀವಾದರೋ ಅಲ್ಲೇ ನಿಂತುಕೊಳ್ಳಬೇಡಿ. ಬೇಗನೆ ಹಿಂದಟ್ಟಿ ಹಿಂದಾದ ವ್ಯಕ್ತಿಗಳನ್ನು ಹತಮಾಡುತ್ತಾ ಹೋಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅವನು ಅವರಿಗೆ - ಗವಿಯ ಬಾಯಿಗೆ ದೊಡ್ಡ ಕಲ್ಲುಗಳನ್ನು ಹೊರಳಿಸಿ ಕಾಯುವದಕ್ಕೆ ಕೆಲವರನ್ನಿಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಯೆಹೋಶುವನು ತನ್ನ ಜನರಿಗೆ, “ಗುಹೆಯ ದ್ವಾರವನ್ನು ದೊಡ್ಡ ಕಲ್ಲುಬಂಡೆಗಳಿಂದ ಮುಚ್ಚಿರಿ. ಗುಹೆಯನ್ನು ಕಾಯುವುದಕ್ಕೆ ಕೆಲವು ಜನರು ಇಲ್ಲಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆಗ ಯೆಹೋಶುವನು, “ದೊಡ್ಡ ಕಲ್ಲುಗಳನ್ನು ಗವಿಯ ಬಾಯಿಗೆ ಹೊರಳಿಸಿರಿ. ಆ ಸ್ಥಳದಲ್ಲಿ ಅವರನ್ನು ಕಾಯುವಂತೆ ಕೆಲವರನ್ನು ನೇಮಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 10:18
8 ತಿಳಿವುಗಳ ಹೋಲಿಕೆ  

ಅವರು ಹೊರಟು ಕಾವಲುಗಾರರನ್ನು ಇರಿಸಿ ಆ ಕಲ್ಲಿಗೆ ಮುದ್ರೆಹಾಕಿ ಸಮಾಧಿಯನ್ನು ಸುಭದ್ರಮಾಡಿದರು.


ಕರ್ತನು ಯಜ್ಞವೇದಿಯ ಪಕ್ಕದಲ್ಲಿ ನಿಂತಿರುವುದನ್ನು ಕಂಡೆನು. ಆತನು ಹೀಗೆ ಅಪ್ಪಣೆ ಕೊಟ್ಟನು, “ಹೊಸ್ತಿಲುಗಳು ಕದಲುವಂತೆ ಕಂಬಗಳ ಬೋದಿಗೆಗಳನ್ನು ಬಲವಾಗಿ ಹೊಡೆ. ಅವುಗಳನ್ನು ಒಡೆದುಬಿಟ್ಟು ಎಲ್ಲರ ತಲೆಯ ಮೇಲೆ ಬೀಳುವ ಹಾಗೆ ಮಾಡಿ, ಉಳಿದವರನ್ನು ಖಡ್ಗದಿಂದ ಸಂಹರಿಸುವೆನು. ಅವರಲ್ಲಿ ಯಾರೂ ಓಡಿಹೋಗರು, ಯಾರೂ ತಪ್ಪಿಸಿಕೊಳ್ಳರು.


ಸಿಂಹದ ಕಡೆಯಿಂದ ಓಡಿದವನಿಗೆ, ಕರಡಿಯು ಎದುರುಬಿದ್ದಂತಾಗುವುದು, ಅವನು ಮನೆಗೆ ಓಡಿಬಂದು, ಕೈಯನ್ನು ಗೋಡೆಯ ಮೇಲೆ ಇಡಲು, ಹಾವು ಕಚ್ಚಿದ ಹಾಗಾಗುವುದು.


ಆಪತ್ತಿನ ದಿನದಲ್ಲಿ ದುಷ್ಟನು ಉಳಿದು, ಕೋಪವು ತುಂಬಿ ತುಳುಕುವ ದಿನದಲ್ಲಿ ತಪ್ಪಿಸಲ್ಪಡುವನು ಎಂಬುದು ನಿಮಗೆ ಗೊತ್ತಾಗಲಿಲ್ಲವೋ?


ಅನಂತರ ಯೆಹೋಶುವನು ಜನರಿಗೆ “ಗವಿಯ ಬಾಯನ್ನು ತೆರೆದು ಆ ಐದು ಮಂದಿ ಅರಸರನ್ನು ನನ್ನ ಬಳಿಗೆ ತನ್ನಿರಿ” ಎಂದನು.


ಜನರು ಯೆಹೋಶುವನಿಗೆ “ಆ ಐದು ಮಂದಿ ನಮಗೆ ಸಿಕ್ಕಿದ್ದಾರೆ. ಅವರು ಮಕ್ಕೇದದ ಗವಿಯಲ್ಲಿ ಅಡಗಿಕೊಂಡಿದ್ದಾರೆ” ಎಂದು ತಿಳಿಸಿದರು.


ಅವರನ್ನು ಅವರ ಪಟ್ಟಣಗಳಲ್ಲಿ ಸೇರುವುದಕ್ಕೆ ಬಿಡಬೇಡಿರಿ. ನಿಮ್ಮ ದೇವರಾದ ಯೆಹೋವನು ಅವರನ್ನು ನಿಮ್ಮ ಕೈಗೆ ಒಪ್ಪಿಸಿದ್ದಾನಲ್ಲಾ?” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು