Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 10:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಇಸ್ರಾಯೇಲ್ಯರಾದರೋ ಮಕ್ಕೇದದಲ್ಲಿ ಇಳುಕೊಂಡಿದ್ದ ಯೆಹೋಶುವನ ಬಳಿಗೆ ಸುರಕ್ಷಿತರಾಗಿ ಬಂದರು. ಇಸ್ರಾಯೇಲ್ಯರಿಗೆ ವಿರೋಧವಾಗಿ ಒಬ್ಬನೂ ಮಾತನಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಇಸ್ರಯೇಲರಾದರೋ ಮಕ್ಕೇದದಲ್ಲಿದ್ದ ಯೆಹೋಶುವನ ಬಳಿಗೆ ಸುರಕ್ಷಿತವಾಗಿ ಬಂದರು. ಇಸ್ರಯೇಲರ ವಿರುದ್ಧ ಯಾರೊಬ್ಬನೂ ನಾಲಿಗೆ ಮಸೆಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಇಸ್ರಾಯೇಲ್ಯರಾದರೋ ಮಕ್ಕೇದದಲ್ಲಿ ಇಳುಕೊಂಡಿದ್ದ ಯೆಹೋಶುವನ ಬಳಿಗೆ ಸುರಕ್ಷಿತವಾಗಿ ಬಂದರು. ಇಸ್ರಾಯೇಲ್ಯರಿಗೆ ವಿರೋಧವಾಗಿ ಒಬ್ಬನೂ ತನ್ನ ನಾಲಿಗೆಯನ್ನು ಎತ್ತಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಯುದ್ಧದ ತರುವಾಯ ಯೆಹೋಶುವನ ಜನರು ಅವನ ಹತ್ತಿರ ಮಕ್ಕೇದಕ್ಕೆ ಬಂದರು. ಆ ದೇಶದಲ್ಲಿ ಇಸ್ರೇಲರ ವಿರುದ್ಧ ಮಾತಾಡಲು ಯಾರಿಗೂ ಧೈರ್ಯವಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಇಸ್ರಾಯೇಲರು ಮಕ್ಕೇದದಲ್ಲಿರುವ ಪಾಳೆಯಕ್ಕೆ ಯೆಹೋಶುವನ ಬಳಿಗೆ ಸುರಕ್ಷಿತವಾಗಿ ಹಿಂದಿರುಗಿ ಬಂದರು. ಇಸ್ರಾಯೇಲರಿಗೆ ವಿರೋಧವಾಗಿ ಒಬ್ಬನೂ ಮಾತಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 10:21
5 ತಿಳಿವುಗಳ ಹೋಲಿಕೆ  

ಆದರೆ ಐಗುಪ್ತ್ಯರಿಗೂ, ಇಸ್ರಾಯೇಲರಿಗೂ ಯೆಹೋವನು ವ್ಯತ್ಯಾಸಮಾಡಿದ್ದಾನೆಂಬುದು ನಿಮಗೆ ತಿಳಿಯುವಂತೆ ಇಸ್ರಾಯೇಲರಲ್ಲಿರುವ ಮನುಷ್ಯರ ಎದುರಿಗಾಗಲಿ, ಪಶುಗಳ ಎದುರಿಗಾಗಲಿ ಒಂದು ನಾಯಿಯಾದರೂ ಬೊಗಳುವುದಿಲ್ಲ’


ಯಾರನ್ನು ಗೇಲಿಮಾಡಿ ವಿನೋದಪಡುತ್ತೀರಿ? ಯಾರನ್ನು ನೋಡಿ ಬಾಯಿದೆರೆದು ನಾಲಿಗೆಯನ್ನು ಚಾಚುತ್ತೀರಿ?


ನಿನ್ನನ್ನು ಎದುರಿಸಲು ಕಲ್ಪಿಸಿದ ಯಾವ ಆಯುಧವೂ ಜಯಿಸದು; ನ್ಯಾಯವಿಚಾರಣೆಯಲ್ಲಿ ನಿನಗೆ ವಿರುದ್ಧವಾಗಿ ಏಳುವ ಪ್ರತಿಯೊಂದು ನಾಲಿಗೆಯನ್ನು ದೋಷಿಯೆಂದು ನೀನು ಖಂಡಿಸುವಿ. ಈ ಸ್ಥಿತಿಯೇ ಯೆಹೋವನ ಸೇವಕರ ಸ್ವಾಸ್ತ್ಯವೂ, ನಾನು ದಯಪಾಲಿಸುವ ಸದ್ಧರ್ಮಫಲವೂ ಆಗಿದೆ” ಎಂದು ಯೆಹೋವನು ಅನ್ನುತ್ತಾನೆ.


ಈ ರೀತಿಯಾಗಿ ಯೆಹೋಶುವನೂ ಹಾಗೂ ಇಸ್ರಾಯೇಲ್ಯರೂ ಅವರನ್ನು ಸಂಪೂರ್ಣವಾಗಿ ಸೋಲಿಸಿ ಸಂಹರಿಸಿಬಿಟ್ಟರು. ಸ್ವಲ್ಪ ಜನರು ಮಾತ್ರ ತಪ್ಪಿಸಿಕೊಂಡು ಕೋಟೆ ಕೊತ್ತಲುಗಳಿದ್ದ ಪಟ್ಟಣಗಳನ್ನು ಸೇರಿಕೊಂಡರು.


ಅನಂತರ ಯೆಹೋಶುವನು ಜನರಿಗೆ “ಗವಿಯ ಬಾಯನ್ನು ತೆರೆದು ಆ ಐದು ಮಂದಿ ಅರಸರನ್ನು ನನ್ನ ಬಳಿಗೆ ತನ್ನಿರಿ” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು