ಯೆಹೋಶುವ 10:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಅವರನ್ನು ತನ್ನ ಬಳಿಗೆ ತಂದನಂತರ ಯೆಹೋಶುವನು ಎಲ್ಲಾ ಇಸ್ರಾಯೇಲ್ಯರನ್ನು ಕರೆಸಿ ತನ್ನ ಜೊತೆಯಲ್ಲಿ ಬಂದಿದ್ದ ಸೈನ್ಯಾಧಿಪತಿಗಳಿಗೆ “ಹತ್ತಿರ ಬಂದು ಈ ಅರಸರ ಕೊರಳಿನ ಮೇಲೆ ಪಾದಗಳನ್ನಿಡಿರಿ” ಎಂದು ಹೇಳಿದನು. ಅವರು ಹತ್ತಿರ ಬಂದು ಅವರ ಕುತ್ತಿಗೆಯ ಮೇಲೆ ಕಾಲಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ತಂದ ಮೇಲೆ ಯೆಹೋಶುವನು ಎಲ್ಲಾ ಇಸ್ರಯೇಲರನ್ನು ಕರೆಸಿ ತನ್ನ ಜೊತೆಯಲ್ಲಿ ಬಂದಿದ್ದ ಸೇನಾಧಿಪತಿಗಳಿಗೆ, “ಹತ್ತಿರ ಬಂದು ಆ ಅರಸರ ಕೊರಳಿನ ಮೇಲೆ ನಿಮ್ಮ ಪಾದಗಳನ್ನಿಡಿ,” ಎಂದು ಹೇಳಿದನು. ಅಂತೆಯೇ ಅವರು ಹತ್ತಿರ ಬಂದು ಕುತ್ತಿಗೆಯ ಮೇಲೆ ಕಾಲಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಅವರನ್ನು ತನ್ನ ಬಳಿಗೆ ತಂದಮೇಲೆ ಯೆಹೋಶುವನು ಎಲ್ಲಾ ಇಸ್ರಾಯೇಲ್ಯರನ್ನು ಕರಿಸಿ ತನ್ನ ಜೊತೆಯಲ್ಲಿ ಬಂದಿದ್ದ ಸೈನ್ಯಾಧಿಪತಿಗಳಿಗೆ - ಹತ್ತಿರ ಬಂದು ಈ ಅರಸರ ಕೊರಳಿನ ಮೇಲೆ ಪಾದಗಳನ್ನಿಡಿರಿ ಎಂದು ಹೇಳಲು ಅವರು ಹತ್ತಿರ ಬಂದು ಅವರ ಕುತ್ತಿಗೆಯ ಮೇಲೆ ಕಾಲಿಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಅವರು ಆ ಐದು ಮಂದಿ ಅರಸರನ್ನು ಯೆಹೋಶುವನಲ್ಲಿಗೆ ತಂದರು. ಯೆಹೋಶುವನು ಇಸ್ರೇಲರನ್ನೆಲ್ಲ ಆ ಸ್ಥಳಕ್ಕೆ ಕರೆಸಿ ತನ್ನ ಸೈನ್ಯದ ಅಧಿಕಾರಿಗಳಿಗೆ “ಇಲ್ಲಿಗೆ ಬನ್ನಿ, ನಿಮ್ಮ ಪಾದಗಳನ್ನು ಈ ಅರಸರ ಕುತ್ತಿಗೆಗಳ ಮೇಲೆ ಇಡಿ” ಎಂದು ಹೇಳಿದನು. ಯೆಹೋಶುವನ ಸೈನ್ಯಾಧಿಕಾರಿಗಳು ಹತ್ತಿರಕ್ಕೆ ಬಂದು ತಮ್ಮ ಪಾದಗಳನ್ನು ಆ ಅರಸರ ಕುತ್ತಿಗೆಗಳ ಮೇಲೆ ಇಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಅವರನ್ನು ಯೆಹೋಶುವನ ಬಳಿ ತೆಗೆದುಕೊಂಡು ಬಂದಾಗ, ಯೆಹೋಶುವನು ಇಸ್ರಾಯೇಲರೆಲ್ಲರನ್ನು ಕರೆಸಿ ತನ್ನ ಸಂಗಡ ಬಂದ ಯುದ್ಧಭಟರಾದ ಅಧಿಕಾರಿಗಳಿಗೆ, “ನೀವು ಸಮೀಪಕ್ಕೆ ಬಂದು ನಿಮ್ಮ ಪಾದಗಳನ್ನು ಈ ಅರಸರ ಕೊರಳಿನ ಮೇಲೆ ಇಡಿರಿ,” ಎಂದನು. ಆಗ ಅವರು ಸಮೀಪಕ್ಕೆ ಬಂದು ತಮ್ಮ ಪಾದಗಳನ್ನು ಅವರ ಕೊರಳಿನ ಮೇಲೆ ಇಟ್ಟರು. ಅಧ್ಯಾಯವನ್ನು ನೋಡಿ |
“ಇಸ್ರಾಯೇಲರೇ, ನೀವು ಎಷ್ಟೋ ಧನ್ಯರು; ನಿಮ್ಮಷ್ಟು ಭಾಗ್ಯವಂತರು ಯಾರಿದ್ದಾರೆ? ನೀವು ಯೆಹೋವನ ಅನುಗ್ರಹದಿಂದ ಜಯವನ್ನು ಹೊಂದಿದವರು. ಆತನೇ ನಿಮ್ಮನ್ನು ಕಾಯುವ ಗುರಾಣಿಯು, ನಿಮ್ಮ ಗೌರವವನ್ನು ಕಾಪಾಡುವ ಕತ್ತಿಯೂ ಆಗಿದ್ದಾನೆ. ಆದ್ದರಿಂದ ನಿಮ್ಮ ಶತ್ರುಗಳು ನಿಮ್ಮ ಮುಂದೆ ಮುದುರಿಕೊಳ್ಳುತ್ತಾರೆ; ನೀವೋ ಅವರಿಗಿದ್ದ ಎತ್ತರವಾದ ಸೀಮೆಯಲ್ಲಿ ಜಯಶಾಲಿಗಳಾಗಿ ಸಂಚರಿಸುತ್ತೀರಿ” ಎಂಬುದೇ.