Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 10:40 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಹೀಗೆ ಯೆಹೋಶುವನು ಬೆಟ್ಟದ ಮೇಲಣ ಪ್ರದೇಶ, ದಕ್ಷಿಣಪ್ರಾಂತ್ಯ, ಇಳುಕಲ್ಲಿನ ಪ್ರದೇಶ, ಬೆಟ್ಟಗಳ ತಗ್ಗು ಪ್ರದೇಶ ಇವುಗಳನ್ನು ಸ್ವಾಧೀನಪಡಿಸಿಕೊಂಡು ಇವುಗಳ ರಾಜಪ್ರಜೆಗಳನ್ನು ಸಂಹರಿಸಿಬಿಟ್ಟನು. ಒಬ್ಬನನ್ನೂ ಉಳಿಸಲಿಲ್ಲ. ಇಸ್ರಾಯೇಲ್‍ ದೇವರಾದ ಯೆಹೋವನ ಆಜ್ಞೆಯಂತೆ ಜೀವವಿರುವುದೆಲ್ಲವನ್ನು ಸಂಹರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 ಹೀಗೆ ಯೆಹೋಶುವನು ಮಲೆನಾಡಿನ ಪ್ರದೇಶ, ದಕ್ಷಿಣಪ್ರಾಂತ್ಯ, ಇಳಿಜಾರಿನ ಪ್ರದೇಶ, ಬೆಟ್ಟಗುಡ್ಡಗಳ ಬುಡ ಪ್ರದೇಶ ಇವುಗಳನ್ನು ಸ್ವತಂತ್ರಿಸಿಕೊಂಡು ಇವುಗಳ ರಾಜಪ್ರಜೆಗಳನ್ನು ಸಂಹರಿಸಿಬಿಟ್ಟನು. ಒಬ್ಬನನ್ನೂ ಉಳಿಸಲಿಲ್ಲ. ಇಸ್ರಯೇಲ್ ದೇವರಾದ ಸರ್ವೇಶ್ವರನ ಆಜ್ಞೆಯಂತೆ ಜೀವವಿರುವುದೆಲ್ಲವನ್ನು ಶಾಪನಾಶಕ್ಕೆ ಗುರಿಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ಹೀಗೆ ಯೆಹೋಶುವನು ಬೆಟ್ಟದ ಮೇಲಣ ಪ್ರದೇಶ, ದಕ್ಷಿಣಪ್ರಾಂತ್ಯ, ಇಳಕಲಿನ ಪ್ರದೇಶ, ಬೆಟ್ಟಗಳ ಬುಡದ ಪ್ರದೇಶ ಇವುಗಳನ್ನು ಸ್ವತಂತ್ರಿಸಿಕೊಂಡು ಇವುಗಳ ರಾಜಪ್ರಜೆಗಳನ್ನು ಸಂಹರಿಸಿಬಿಟ್ಟನು. ಒಬ್ಬನನ್ನೂ ಉಳಿಸಲಿಲ್ಲ. ಇಸ್ರಾಯೇಲ್ ದೇವರಾದ ಯೆಹೋವನ ಆಜ್ಞೆಯಂತೆ ಜೀವವಿರುವದೆಲ್ಲವನ್ನೂ ಸಂಹರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ಹೀಗೆ ಯೆಹೋಶುವನು ಬೆಟ್ಟದ ಮೇಲಿನ ಪ್ರದೇಶ, ನೆಗೆವ್ ಪ್ರದೇಶ, ಪಶ್ಚಿಮದ ಇಳಕಲಿನ ಪ್ರದೇಶ, ಪೂರ್ವದ ಇಳಕಲಿನ ಪ್ರದೇಶ, ಈ ಎಲ್ಲ ಪ್ರದೇಶಗಳ ಅರಸರನ್ನು ಸೋಲಿಸಿದನು. ಇಸ್ರೇಲಿನ ದೇವರಾದ ಯೆಹೋವನು ಎಲ್ಲಾ ಜನರನ್ನು ಕೊಲ್ಲು ಎಂದು ಯೆಹೋಶುವನಿಗೆ ಹೇಳಿದ್ದನು. ಅದಕ್ಕಾಗಿ ಯೆಹೋಶುವನು ಆ ಸ್ಥಳಗಳಲ್ಲಿ ಯಾರೊಬ್ಬರನ್ನೂ ಸಜೀವವಾಗಿ ಉಳಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ಹೀಗೆ ಯೆಹೋಶುವನು ಸಮಸ್ತ ಬೆಟ್ಟಗಳ ದೇಶವನ್ನೂ, ದಕ್ಷಿಣದ ಪ್ರದೇಶವನ್ನೂ, ತಗ್ಗಿನ ದೇಶವನ್ನೂ ನೀರು ಬುಗ್ಗೆಗಳ ದೇಶವನ್ನೂ ಅವುಗಳ ಅರಸರನ್ನೂ ಒಬ್ಬರನ್ನೂ ಉಳಿಸದೆ, ಇಸ್ರಾಯೇಲಿನ ದೇವರಾದ ಯೆಹೋವ ದೇವರು ಆಜ್ಞಾಪಿಸಿದ ಹಾಗೆಯೇ ಶ್ವಾಸವುಳ್ಳದ್ದನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 10:40
26 ತಿಳಿವುಗಳ ಹೋಲಿಕೆ  

ದುಷ್ಟರು ಅಂದರೆ ದೇವರನ್ನು ಅಲಕ್ಷ್ಯಮಾಡುವ ಜನಾಂಗಗಳವರೆಲ್ಲಾ ಪಾತಾಳಕ್ಕೆ ಇಳಿದುಹೋಗುವರು.


ಅರಸನಾದ ಕೂಡಲೆ ಯಾರೊಬ್ಬಾಮನ ಮನೆಯಲ್ಲಿ ಒಬ್ಬನನ್ನೂ ಜೀವದಿಂದುಳಿಸದೆ ಎಲ್ಲರನ್ನೂ ಸಂಹರಿಸಿದನು. ಹೀಗೆ ಯೆಹೋವನು ಶೀಲೋವಿನ ಪ್ರವಾದಿಯಾದ ಅಹೀಯನ ಮುಖಾಂತರವಾಗಿ ಹೇಳಿಸಿದ ಮಾತು ನೆರವೇರಿತು.


ಅದಕ್ಕೆ ಸೇರಿದ ಊರುಗಳನ್ನೂ ಅದರ ರಾಜಪ್ರಜೆಗಳೆಲ್ಲರನ್ನೂ ಕತ್ತಿಯಿಂದ ಸಂಹರಿಸಿದರು. ಎಗ್ಲೋನಿನಲ್ಲಿ ಹೇಗೋ ಹಾಗೆಯೇ ಇಲ್ಲಿಯೂ ಒಬ್ಬನನ್ನೂ ಉಳಿಸಲಿಲ್ಲ; ಪಟ್ಟಣವನ್ನೂ ಜನರನ್ನೂ ನಾಶಮಾಡಿದರು.


ಅವರು ಅದೇ ದಿನದಲ್ಲಿ ಅದನ್ನು ಹಿಡಿದು ಲಾಕೀಷಿನವರಿಗೆ ಮಾಡಿದಂತೆಯೇ ಅದನ್ನೂ ಅದರ ಜನರೆಲ್ಲರನ್ನೂ ಕತ್ತಿಯಿಂದ ಸಂಹರಿಸಿಬಿಟ್ಟರು.


ಅವರು ಯೆಹೋಶುವನಿಗೆ “ನಿನ್ನ ದೇವರಾದ ಯೆಹೋವನು ತನ್ನ ಸೇವಕನಾದ ಮೋಶೆಗೆ ‘ನಾನು ನಿಮಗೆ ಈ ದೇಶವನ್ನೆಲ್ಲಾ ಕೊಡುವಾಗ ನೀವು ಇದರ ಎಲ್ಲಾ ನಿವಾಸಿಗಳನ್ನು ಸಂಹರಿಸಿ ಬಿಡಬೇಕೆಂದು’ ಆಜ್ಞಾಪಿಸಿದ್ದನ್ನು ಕೇಳಿ ನಮ್ಮ ಪ್ರಾಣ ತೆಗೆಯುವಿರೆಂದು ಹೆದರಿ ಹೀಗೆ ಮಾಡಿದೆವು.


ಯೆಹೋವನು ಯೆಹೋಶುವನಿಗೆ ಆಜ್ಞಾಪಿಸಿದಂತೆ ಇಸ್ರಾಯೇಲ್ಯರು ಆ ಪಟ್ಟಣದೊಳಗಿಂದ ಪಶು ಪ್ರಾಣಿ ಮೊದಲಾದವುಗಳನ್ನು ಮಾತ್ರ ಕೊಳ್ಳೆಯಾಗಿ ತೆಗೆದುಕೊಂಡರು.


ಯೆರಿಕೋವಿಗೂ ಅದರ ಅರಸನಿಗೂ ಮಾಡಿದಂತೆಯೇ ಆಯಿಗೂ ಅದರ ಅರಸನಿಗೂ ಮಾಡು. ಆದರೆ ಕೊಳ್ಳೆಯನ್ನೂ ಪಶುಪ್ರಾಣಿಗಳನ್ನೂ ನಿಮಗೋಸ್ಕರ ತೆಗೆದುಕೊಳ್ಳಬಹುದು. ನಿಮ್ಮಲ್ಲಿ ಕೆಲವರು ಆ ಊರಿನ ಹಿಂಬದಿಯಲ್ಲಿ ಹೊಂಚುಹಾಕಿಕೊಂಡಿರಲಿ” ಎಂದು ಆಜ್ಞಾಪಿಸಿದನು.


ಇದೂ ಇದರಲ್ಲಿರುವುದೆಲ್ಲವೂ ಯೆಹೋವನಿಗೆ ಅರ್ಪಿತವಾದವುಗಳೇ ಎಂದು ತಿಳಿಯಿರಿ. ವೇಶ್ಯೆಯಾದ ರಾಹಾಬಳೂ ಅವಳ ಸಂಗಡ ಮನೆಯಲ್ಲಿರುವವರೆಲ್ಲರೂ ಉಳಿಯಲಿ. ಏಕೆಂದರೆ ನಾವು ಕಳುಹಿಸಿದ ಗೂಢಚಾರರನ್ನು ಅವಳು ಅಡಗಿಸಿಟ್ಟಿದ್ದಳಲ್ಲಾ.


ಆತನು ಅವರ ಅರಸರನ್ನು ನಿಮ್ಮ ಕೈಗೆ ಸಿಗುವಂತೆ ಮಾಡಿ, ನೀವು ಅವರ ಹೆಸರುಗಳೇ ಭೂಮಿಯ ಮೇಲೆ ಉಳಿಯದಂತೆ ಮಾಡಬೇಕು. ಯಾರೂ ನಿಮ್ಮ ಮುಂದೆ ನಿಲ್ಲುವುದಿಲ್ಲ; ನೀವು ಎಲ್ಲರನ್ನೂ ನಾಶಮಾಡುವಿರಿ.


ಬೆನ್ಯಾಮೀನ್ ಗೋತ್ರಗಳ ಸ್ವತ್ತಿನ ಸುತ್ತಣ ಮೇರೆಯು ಇದೇ ಬೆನ್ಯಾಮೀನನ ಗೋತ್ರಗಳಿಗೆ ದೊರಕಿದ ಪಟ್ಟಣಗಳು ಯಾವುವೆಂದರೆ: ಯೆರಿಕೋ, ಬೇತ್‌ಹೊಗ್ಲಾ, ಏಮೆಕ್ಕೆಚ್ಚೀಚ್,


ಇಳುಕಲ್ಲಿನ ಪ್ರದೇಶಗಳು, ಕಣಿವೆ ಪ್ರದೇಶಗಳು, ಬೆಟ್ಟಗಳ ಬುಡದಲ್ಲಿರುವ ಸೀಮೆಗಳು, ಅರಣ್ಯದ ದಕ್ಷಿಣ ಪ್ರಾಂತ್ಯ ಇವುಗಳನ್ನು ಆಳುತ್ತಿದ್ದ ಹಿತ್ತಿಯ, ಅಮೋರಿಯ, ಕಾನಾನ, ಪೆರಿಜ್ಜೀಯ, ಹಿವ್ವಿಯ, ಯೆಬೂಸಿಯ ಅರಸರನ್ನೂ ಸೋಲಿಸಿ, ಅವರ ದೇಶಗಳನ್ನು ಇಸ್ರಾಯೇಲರ ಕುಲದವರಿಗೆ ಶಾಶ್ವತ ಆಸ್ತಿಯಾಗಿ ಕೊಟ್ಟನು. ಆ ಅರಸರ ಪಟ್ಟಿಯು ಹೇಗೆಂದರೆ,


ಈಗ ಹಿಂದಿರುಗಿ ಅಮೋರಿಯರು ಇರುವ ಬೆಟ್ಟದ ಸೀಮೆಗೂ ಮತ್ತು ಅದಕ್ಕೆ ಸೇರಿದ ಪ್ರದೇಶದ ಕಡೆಗೆ ಪ್ರಯಾಣಮಾಡಿರಿ. ಅವು ಯಾವುವೆಂದರೆ: ತಗ್ಗಾದ ಪ್ರದೇಶ, ಬೆಟ್ಟದ ಮೇಲಿನ ಪ್ರದೇಶ, ಇಳಕಲಿನ ಪ್ರದೇಶ, ದಕ್ಷಿಣಸೀಮೆ ಮತ್ತು ಸಮುದ್ರತೀರ ಎಂಬ ನಾಡುಗಳನ್ನು ಒಳಗೊಂಡಿರುವ ಕಾನಾನ್ಯರ ದೇಶ, ಲೆಬನೋನ್ ಪರ್ವತ ಮತ್ತು ಯೂಫ್ರೆಟಿಸ್ ಎಂಬ ಮಹಾನದಿಯ ವರೆಗೆ ವಿಸ್ತರಿಸಿಕೊಂಡಿರುವ ಪ್ರದೇಶಗಳಿಗೆ ಹೋಗಿರಿ.


ನೀವು ಹೋಗಿ ಸೇರುವ ದೇಶದ ನಿವಾಸಿಗಳ ಸಂಗಡ ಯಾವ ಒಡಂಬಡಿಕೆಯನ್ನೂ ಮಾಡಿಕೊಳ್ಳದಂತೆ ಎಚ್ಚರಿಕೆಯಿಂದಿರಿ; ಹಾಗೆ ಮಾಡಿಕೊಂಡರೆ ಅದು ನಿಮ್ಮ ಮಧ್ಯದಲ್ಲಿ ಉರುಲಿನಂತಿರುವುದು.


ಅದನ್ನೂ ಅದಕ್ಕೆ ಸೇರಿದ ಊರುಗಳನ್ನೂ ಹಿಡಿದುಕೊಂಡು ಅದರ ರಾಜಪ್ರಜೆಗಳೆಲ್ಲರನ್ನೂ ಕತ್ತಿಯಿಂದ ಸಂಹರಿಸಿದರು. ಒಬ್ಬನನ್ನೂ ಉಳಿಸಲಿಲ್ಲ. ಹೆಬ್ರೋನಿಗೂ ಅದರ ಅರಸನಿಗೂ ಲಿಬ್ನಕ್ಕೂ ಅದರ ಅರಸನಿಗೂ ಆದ ಗತಿಯೇ ದೆಬೀರಿಗೂ ಅದರ ಅರಸನಿಗೂ ಆಯಿತು.


ಈ ಪ್ರಕಾರ ಬೆಟ್ಟದ ಮೇಲಿನ ಪ್ರದೇಶ, ದಕ್ಷಿಣ ಪ್ರಾಂತ್ಯ ಗೋಷೆನ್ ಸೀಮೆ, ಇಳಿಜಾರಿನ ಪ್ರದೇಶ, ತಗ್ಗಾದ ಪ್ರದೇಶ, ಇಸ್ರಾಯೇಲ್ ಸೀಮೆಯ ಪರ್ವತ ಪ್ರಾಂತ್ಯ, ಅದಕ್ಕೆ ಸೇರಿದ ಇಳಿಜಾರಿನ ಪ್ರದೇಶ ಇವುಗಳೆಲ್ಲವೂ ಯೆಹೋಶುವನಿಗೆ ಸ್ವಾಧೀನವಾದವು.


ಕಾನಾನ್ ದೇಶದಲ್ಲಿ ಸಂಚರಿಸಿ ನೋಡುವುದಕ್ಕೆ ಮೋಶೆ ಅವರನ್ನು ಕಳುಹಿಸುವಾಗ ಅವರಿಗೆ, “ನೀವು ಕಾನಾನ್ ದೇಶದ ದಕ್ಷಿಣ ಪ್ರಾಂತ್ಯದ ಮಾರ್ಗವಾಗಿ ಬೆಟ್ಟದ ಸೀಮೆಗೆ ಹತ್ತಿಹೋಗಿ ಆ ದೇಶದ ಸಂಗತಿಯನ್ನೆಲ್ಲಾ ನೋಡಿ ತಿಳಿದುಕೊಳ್ಳಬೇಕು.


ಆ ಕಾಲದಲ್ಲಿ ನಾವು ಅವನ ಎಲ್ಲಾ ಪಟ್ಟಣಗಳನ್ನು ಸ್ವಾಧೀನಮಾಡಿಕೊಂಡು ಅವುಗಳಲ್ಲಿದ್ದ ಗಂಡಸರನ್ನೂ, ಹೆಂಗಸರನ್ನು ಮತ್ತು ಮಕ್ಕಳನ್ನೂ ನಿಶ್ಶೇಷವಾಗಿ ಹತಮಾಡಿದೆವು; ಒಬ್ಬನನ್ನೂ ಉಳಿಸಲಿಲ್ಲ.


ಅವರು ಆ ದೇಶದಲ್ಲಿ ಹೋಗಿ ಸೇರಿಕೊಂಡು ಅದನ್ನು ಸ್ವಾಧೀನಮಾಡಿಕೊಂಡರು. ನೀನು ಅವರ ಮುಂದೆ ದೇಶನಿವಾಸಿಗಳಾಗಿದ್ದ ಕಾನಾನ್ಯರನ್ನು ಕುಗ್ಗಿಸಿ ಮನಸ್ಸಿಗೆ ಬಂದಂತೆ ನಡಿಸುವ ಹಾಗೆ ಆ ದೇಶದ ರಾಜರನ್ನೂ ಪ್ರಜೆಗಳನ್ನೂ ಅವರ ಕೈಗೆ ಒಪ್ಪಿಸಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು