Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 11:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಇಸ್ರಾಯೇಲರು ಅವುಗಳಲ್ಲಿದ್ದ ಪಶುಪ್ರಾಣಿಗಳನ್ನೂ ವಸ್ತುಗಳನ್ನೂ ಕೊಳ್ಳೆ ಹೊಡೆದರು. ಆದರೆ ಜನರೆಲ್ಲರನ್ನೂ ಕತ್ತಿಯಿಂದ ಹೊಡೆದು ನಿರ್ಮೂಲ ಮಾಡಿದರು. ಉಸಿರಿರುವ ಒಂದನ್ನೂ ಅವರು ಉಳಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅವುಗಳಲ್ಲಿದ್ದ ಪಶುಪ್ರಾಣಿಗಳನ್ನೂ ಸಾಮಾನು ಸರಂಜಾಮುಗಳನ್ನೂ ಇಸ್ರಯೇಲರು ಕೊಳ್ಳೆಹೊಡೆದರು. ಜನರನ್ನಾದರೋ ಒಬ್ಬರನ್ನೂ ಬಿಡದೆ ಕತ್ತಿಯಿಂದ ನಿರ್ಮೂಲಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಇಸ್ರಾಯೇಲ್ಯರು ಅವುಗಳಲ್ಲಿದ್ದ ಪಶುಗಳನ್ನೂ ವಸ್ತುಗಳನ್ನೂ ಕೊಳ್ಳೆ ಹಿಡಿದರು. ಆದರೆ ಜನರೆಲ್ಲರನ್ನೂ ಕತ್ತಿಯಿಂದ ಹೊಡೆದು ನಿರ್ಮೂಲಮಾಡಿದರು. ಒಂದು ಪ್ರಾಣಿಯನ್ನೂ ಉಳಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆ ಪಟ್ಟಣಗಳಲ್ಲಿ ಸಿಕ್ಕಿದ ಎಲ್ಲ ಪದಾರ್ಥಗಳನ್ನು ಮತ್ತು ಎಲ್ಲ ಪಶುಗಳನ್ನು ಇಸ್ರೇಲರು ತಮಗಾಗಿ ಇಟ್ಟುಕೊಂಡರು. ಆದರೆ ಅಲ್ಲಿದ್ದ ಜನರನ್ನೆಲ್ಲ ಕೊಂದರು. ಅವರಲ್ಲಿ ಯಾರನ್ನೂ ಸಜೀವವಾಗಿ ಉಳಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆ ಪಟ್ಟಣಗಳ ಎಲ್ಲಾ ಕೊಳ್ಳೆಯನ್ನೂ, ಪಶುಪ್ರಾಣಿಗಳನ್ನೆಲ್ಲಾ ಇಸ್ರಾಯೇಲರು ತಮಗೋಸ್ಕರ ಸುಲಿಗೆ ಮಾಡಿಕೊಂಡರು. ಖಡ್ಗದಿಂದ ಜನರನ್ನು ನಾಶಮಾಡಿದರು. ಒಬ್ಬರನ್ನೂ ಅವರು ಉಳಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 11:14
12 ತಿಳಿವುಗಳ ಹೋಲಿಕೆ  

ಇಸ್ರಾಯೇಲ್ಯರು ಅದರಲ್ಲಿದ್ದ ಎಲ್ಲರನ್ನು ಕತ್ತಿಯಿಂದ ಸಂಹರಿಸಿ ಹಾಚೋರ್ ಪಟ್ಟಣವನ್ನು ಸುಟ್ಟುಬಿಟ್ಟರು. ಒಂದು ಜೀವಿಯಾದರೂ ಉಳಿಯಲಿಲ್ಲ.


ಹೀಗೆ ಯೆಹೋಶುವನು ಬೆಟ್ಟದ ಮೇಲಣ ಪ್ರದೇಶ, ದಕ್ಷಿಣಪ್ರಾಂತ್ಯ, ಇಳುಕಲ್ಲಿನ ಪ್ರದೇಶ, ಬೆಟ್ಟಗಳ ತಗ್ಗು ಪ್ರದೇಶ ಇವುಗಳನ್ನು ಸ್ವಾಧೀನಪಡಿಸಿಕೊಂಡು ಇವುಗಳ ರಾಜಪ್ರಜೆಗಳನ್ನು ಸಂಹರಿಸಿಬಿಟ್ಟನು. ಒಬ್ಬನನ್ನೂ ಉಳಿಸಲಿಲ್ಲ. ಇಸ್ರಾಯೇಲ್‍ ದೇವರಾದ ಯೆಹೋವನ ಆಜ್ಞೆಯಂತೆ ಜೀವವಿರುವುದೆಲ್ಲವನ್ನು ಸಂಹರಿಸಿದನು.


ಯೆಹೋವನು ಯೆಹೋಶುವನಿಗೆ ಆಜ್ಞಾಪಿಸಿದಂತೆ ಇಸ್ರಾಯೇಲ್ಯರು ಆ ಪಟ್ಟಣದೊಳಗಿಂದ ಪಶು ಪ್ರಾಣಿ ಮೊದಲಾದವುಗಳನ್ನು ಮಾತ್ರ ಕೊಳ್ಳೆಯಾಗಿ ತೆಗೆದುಕೊಂಡರು.


ಹೆಂಗಸರನ್ನೂ, ಮಕ್ಕಳನ್ನೂ, ದನಗಳನ್ನೂ ಮತ್ತು ಊರಿನಲ್ಲಿರುವ ಆಸ್ತಿಯನ್ನೂ ನೀವು ಸ್ವಂತಕ್ಕೆ ತೆಗೆದುಕೊಳ್ಳಬಹುದು. ನಿಮ್ಮ ದೇವರಾದ ಯೆಹೋವನು ನಿಮಗೆ ವಶಪಡಿಸಿದ ಶತ್ರುಗಳ ಆಸ್ತಿಯನ್ನು ನೀವೇ ಅನುಭೋಗಿಸಬಹುದು.


ಇಸ್ರಾಯೇಲರು ಮಿದ್ಯಾನ್ಯರ ಎಲ್ಲಾ ಹೆಂಗಸರನ್ನೂ, ಮಕ್ಕಳನ್ನೂ ಸೆರೆಹಿಡಿದು ಎಲ್ಲಾ ದನಕುರಿಗಳನ್ನೂ, ಆಸ್ತಿಯನ್ನೂ ಸೂರೆಮಾಡಿದರು.


ಆದರೆ ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವಂತಕ್ಕಾಗಿ ಕೊಡುವ ಈ ಜನಾಂಗಗಳ ಪಟ್ಟಣಗಳ ವಿಷಯದಲ್ಲಿ ಹಾಗೆ ಮಾಡದೆ ಉಸಿರಾಡುವ ಒಬ್ಬರನ್ನಾದರೂ ಉಳಿಸಬಾರದು.


ಯೆಹೋಶುವನು ಸುಟ್ಟ ಹಾಚೋರ್ ಒಂದನ್ನು ಬಿಟ್ಟರೆ ಇಸ್ರಾಯೇಲರು ದಿನ್ನೆಯ ಮೇಲಿನ ಬೇರೆ ಯಾವ ಪಟ್ಟಣವನ್ನೂ ಸುಟ್ಟುಹಾಕಲಿಲ್ಲ.


ಯೆಹೋವನ ಸೇವಕನಾದ ಮೋಶೆಯು ದೇವರು ತನಗೆ ಹೇಳಿದ್ದನ್ನೆಲ್ಲಾ ಯೆಹೋಶುವನಿಗೆ ಹೇಳಿದ್ದನು. ಯೆಹೋಶುವನು ಅದರಂತೆಯೇ ಮಾಡಿದನು, ಯೆಹೋವನು ಮೋಶೆಯ ಮೂಲಕ ಆಜ್ಞಾಪಿಸಿದ್ದರಲ್ಲಿ ಒಂದನ್ನೂ ಮೀರಲಿಲ್ಲ.


ಯೆರಿಕೋವಿಗೂ ಅದರ ಅರಸನಿಗೂ ಮಾಡಿದಂತೆಯೇ ಆಯಿಗೂ ಅದರ ಅರಸನಿಗೂ ಮಾಡು. ಆದರೆ ಕೊಳ್ಳೆಯನ್ನೂ ಪಶುಪ್ರಾಣಿಗಳನ್ನೂ ನಿಮಗೋಸ್ಕರ ತೆಗೆದುಕೊಳ್ಳಬಹುದು. ನಿಮ್ಮಲ್ಲಿ ಕೆಲವರು ಆ ಊರಿನ ಹಿಂಬದಿಯಲ್ಲಿ ಹೊಂಚುಹಾಕಿಕೊಂಡಿರಲಿ” ಎಂದು ಆಜ್ಞಾಪಿಸಿದನು.


ಯೆಹೋಷಾಫಾಟನೂ ಅವನ ಜನರೂ ಸುಲಿಗೆ ಮಾಡುವುದಕ್ಕೋಸ್ಕರ ಅಲ್ಲಿಗೆ ಹೋದರು. ಅವರಿಗೆ ದ್ರವ್ಯ, ವಸ್ತ್ರ, ಶ್ರೇಷ್ಠಾಯುಧಗಳು ರಾಶಿರಾಶಿಯಾಗಿ ಸಿಕ್ಕಿದವು. ಅವರು ಹೊರಲಾರದಷ್ಟು ಸುಲಿಗೆಮಾಡಿದರು, ಕೊಳ್ಳೆಯು ಬಲು ಹೆಚ್ಚಾಗಿದ್ದುದರಿಂದ ಅವರು ಮೂರು ದಿನಗಳ ವರೆಗೂ ಕೂಡಿಸುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು