Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 12:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಇಸ್ರಾಯೇಲ್ಯರು ಯೊರ್ದನ್ ನದಿಯ ಪೂರ್ವ ದಿಕ್ಕಿನಲ್ಲಿ ಅರ್ನೋನ್ ಕಣಿವೆ ಮೊದಲುಗೊಂಡು ಹೆರ್ಮೋನ್ ಪರ್ವತದವರೆಗಿದ್ದ ಪ್ರದೇಶವನ್ನೂ ಕಣಿವೆ ಪ್ರದೇಶದ ಪೂರ್ವಭಾಗವನ್ನೂ ಸ್ವಾಧೀನ ಮಾಡಿಕೊಂಡು ಅವುಗಳಲ್ಲಿದ್ದ ಅರಸರನ್ನು ಸಂಹರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಇಸ್ರಯೇಲರು ಜೋರ್ಡನ್ ನದಿಯ ಪೂರ್ವದಿಕ್ಕಿನಲ್ಲಿ ಅರ್ನೋನ್ ಕಣಿವೆ ಮೊದಲುಗೊಂಡು ಹೆರ್ಮೋನ್ ಪರ್ವತದವರೆಗಿದ್ದ ಪ್ರದೇಶವನ್ನು ಮತ್ತು ಕಣಿವೆ ಪ್ರದೇಶದ ಪೂರ್ವಭಾಗವನ್ನು ಸ್ವಾಧೀನಮಾಡಿಕೊಂಡರು. ಅವುಗಳಲ್ಲಿದ್ದ ಅರಸರನ್ನು ಸಂಹರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಇಸ್ರಾಯೇಲ್ಯರು ಯೊರ್ದನ್ ಹೊಳೆಯ ಪೂರ್ವದಿಕ್ಕಿನಲ್ಲಿ ಅರ್ನೋನ್ ತಗ್ಗು ಮೊದಲುಗೊಂಡು ಹೆರ್ಮೋನ್ ಪರ್ವತದವರೆಗಿದ್ದ ಪ್ರದೇಶವನ್ನೂ ತಗ್ಗಾದ ಪ್ರದೇಶದ ಪೂರ್ವಭಾಗವನ್ನೂ ಸ್ವಾಧೀನ ಮಾಡಿಕೊಂಡು ಅವುಗಳಲ್ಲಿದ್ದ ಅರಸರನ್ನು ಸಂಹರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಇಸ್ರೇಲರು ಜೋರ್ಡನ್ ನದಿಯ ಪೂರ್ವದಿಕ್ಕಿನ ಭೂಮಿಯನ್ನು ಸ್ವಾಧೀನಪಡಿಸಿಕೊಂಡರು. ಅರ್ನೋನ್ ನದಿಯಿಂದ ಹೆರ್ಮೋನ್ ಪರ್ವತದವರೆಗಿನ ಪ್ರದೇಶ ಮತ್ತು ಜೋರ್ಡನ್ ಕಣಿವೆಯ ಪೂರ್ವದಿಕ್ಕಿಗೆ ಉದ್ದಕ್ಕೂ ಹಬ್ಬಿರುವ ಪ್ರದೇಶ ಅವರ ವಶಕ್ಕೆ ಬಂತು. ಈ ದೇಶವನ್ನು ತೆಗೆದುಕೊಳ್ಳುವುದಕ್ಕಾಗಿ ಇಸ್ರೇಲರು ಸೋಲಿಸಿದ ಅರಸರ ವಿವರ ಹೀಗಿದೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಇಸ್ರಾಯೇಲರು ಯೊರ್ದನ್ ನದಿಯ ಆಚೆ ಸೂರ್ಯನು ಉದಯಿಸುವ ದಿಕ್ಕಿನಲ್ಲಿ ಅರ್ನೋನ್ ಕಣಿವೆಯಿಂದ ಹೆರ್ಮೋನ್ ಬೆಟ್ಟದವರೆಗೂ ಅರಾಬಾ ಎಲ್ಲಾ ಪೂರ್ವ ಭಾಗಗಳನ್ನು ಒಳಗೊಂಡಂತೆ ಭೂಪ್ರದೇಶವನ್ನು ಸ್ವಾಧೀನ ಮಾಡಿಸಿಕೊಂಡ ದೇಶಗಳ ಅರಸರು ಯಾರಾರೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 12:1
24 ತಿಳಿವುಗಳ ಹೋಲಿಕೆ  

ಅನಂತರ ಅವರು ಅರಣ್ಯದಲ್ಲಿ ಪ್ರಯಾಣಮಾಡಿ ಎದೋಮ್, ಮೋವಾಬ್ ದೇಶಗಳನ್ನು ಸುತ್ತಿಕೊಂಡು ಮೋವಾಬ್‍ ದೇಶದ ಪೂರ್ವದಿಕ್ಕಿಗೆ ಬಂದು, ಅದರ ಮೇರೆಯಾಗಿರುವ ಅರ್ನೋನ್ ಹೊಳೆಯ ಆಚೆಯಲ್ಲಿ ಇಳಿದುಕೊಂಡರು. ಮೋವಾಬ್ಯರ ಮೇರೆಯೊಳಗೆ ಕಾಲಿಡಲಿಲ್ಲ.


ನಿಮ್ಮ ದೇವರಾದ ಯೆಹೋವನು ಕೊಡುವ ದೇಶವನ್ನು ನಿಮ್ಮ ಸಹೋದರರು ಸ್ವಾಧೀನಮಾಡಿಕೊಂಡು ಅವರೂ ನಿಮ್ಮಂತೆ ವಿಶ್ರಾಂತಿ ಹೊಂದಿದ ನಂತರ ನಿಮ್ಮ ಸ್ವಂತ ದೇಶಕ್ಕೆ ಹಿಂತಿರುಗಿ, ಮೋಶೆಯು ನಿಮಗೆ ಯೊರ್ದನ್ ನದಿಯ ಪೂರ್ವದಿಕ್ಕಿನಲ್ಲಿ ಸ್ವತ್ತಾಗಿ ಕೊಟ್ಟ ದೇಶವನ್ನು ಸ್ವಾಧೀನಪಡಿಸಿಕೊಂಡು ಅದನ್ನು ಅನುಭವಿಸುವಿರಿ” ಎಂದನು.


ಇಸ್ರಾಯೇಲರು ಅವನ ಜನರನ್ನು ಸೋಲಿಸಿ, ಕತ್ತಿಯಿಂದ ಸಂಹರಿಸಿ ಅರ್ನೋನ್ ನದಿ ಮೊದಲುಗೊಂಡು ಯಬ್ಬೋಕ್ ನದಿಯವರೆಗೂ, ಅಮ್ಮೋನಿಯರ ಗಡಿಯವರೆಗೂ ಸೀಹೋನನ ದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡರು. ಏಕೆಂದರೆ ಅಮ್ಮೋನಿಯರ ಮಕ್ಕಳ ಗಡಿಯು ಬಲವುಳ್ಳದ್ದಾಗಿತ್ತು.


ಅಲ್ಲಿಂದ ಹೊರಟು ಅರ್ನೋನ್ ನದಿಯ ಆಚೆ ಕಡೆಯಲ್ಲಿ ಇಳಿದುಕೊಂಡರು. ಅರ್ನೋನ್ ನದಿಯು ಅಮೋರಿಯರ ಪ್ರದೇಶದಿಂದಾಚೆ ಇರುವ ಅರಣ್ಯದಲ್ಲಿ ಮೋವಾಬ್ಯರಿಗೂ, ಅಮೋರಿಯರಿಗೂ ನಡುವೆ ಇದ್ದು ಮೋವಾಬ್ಯರ ಗಡಿಯಾಗಿದೆ.


ಅರ್ನೋನ್ ನದಿಯ ಹಾಯ್ಗಡಗಳಲ್ಲಿ ಮೋವಾಬಿನ ಜನರು ಅಲೆಯುವ ಪಕ್ಷಿಗಳಂತೆಯೂ, ಗೂಡಿನಿಂದ ಚದುರಿರುವ ಮರಿಗಳಂತೆಯೂ ಆಗುವರು.


ಹೆರ್ಮೋನ್ ಪರ್ವತದಲ್ಲಿ ಹುಟ್ಟಿ, ಚೀಯೋನ್ ಪರ್ವತದ ಮೇಲೆ ಬೀಳುವ ಮಂಜಿನಂತೆಯೂ ಇದೆ. ಅಲ್ಲಿ ಆಶೀರ್ವಾದವೂ, ಜೀವವೂ ಸದಾಕಾಲ ಇರಬೇಕೆಂದು, ಯೆಹೋವನು ಆಜ್ಞಾಪಿಸಿದ್ದಾನೆ.


ಈಗ ನಿಮ್ಮ ದೇವರಾದ ಯೆಹೋವನು ತನ್ನ ವಾಗ್ದಾನಕ್ಕನುಸಾರವಾಗಿ ನಿಮ್ಮ ಸಹೋದರರಿಗೆ ವಿಶ್ರಾಂತಿಯನ್ನು ದಯಪಾಲಿಸಿರುವುದರಿಂದ, ಆತನ ಸೇವಕನಾದ ಮೋಶೆಯು ಯೊರ್ದನಿನ ಆಚೆಯಲ್ಲಿ ನಿಮಗೆ ಕೊಟ್ಟಿರುವ ಸ್ವತ್ತಿನಲ್ಲಿರುವ ನಿಮ್ಮ ನಿಮ್ಮ ನಿವಾಸಗಳಿಗೆ ಹೋಗಬಹುದು.


ಅವನು ಸೇಯೀರಿನ ದಾರಿಯಲ್ಲಿದ್ದ ಹಾಲಾಕ್ ಬೆಟ್ಟದಿಂದ ಹೆರ್ಮೋನಿನ ಬುಡದಲ್ಲಿ ಲೆಬನೋನಿನ ಕಣಿವೆಯಲ್ಲಿರುವ ಬಾಲ್ಗಾದ್ ಪಟ್ಟಣದವರೆಗೂ ಇರುವ ದೇಶವನ್ನೆಲ್ಲಾ ಸೆರೆಹಿಡಿದು ಅದರ ಎಲ್ಲಾ ಅರಸರನ್ನು ಹಿಡಿದು ಸಂಹರಿಸಿಬಿಟ್ಟನು.


ಕಾನಾನ್ಯರು, ಅಮೋರಿಯರು, ಹಿತ್ತಿಯರು, ಪೆರಿಜ್ಜೀಯರು, ಬೆಟ್ಟದ ಮೇಲಿನ ಪ್ರದೇಶದಲ್ಲಿದ್ದ ಯೆಬೂಸಿಯರು, ಹೆರ್ಮೋನಿನ ತಗ್ಗಿನಲ್ಲಿದ್ದ ಮಿಚ್ಪಾ ದೇಶದಲ್ಲಿದ್ದ ಹಿವ್ವಿಯರು ಇವರನ್ನೂ ಕರೆಕಳುಹಿಸಿದನು.


ಅಂತು ಅರ್ನೋನ್ ತಗ್ಗಿನ ಅಂಚಿನಲ್ಲಿರುವ ಅರೋಯೇರ್ ಪಟ್ಟಣ ಮೊದಲುಗೊಂಡು ಹೆರ್ಮೋನ್ ಎಂಬ ಸೀಯೋನ್ ಪರ್ವತದವರೆಗೂ ಮತ್ತು


“ಈಗ ನೀವು ಹೊರಟು ಅರ್ನೋನ್ ಹಳ್ಳವನ್ನು ದಾಟಿರಿ. ಅಮೋರಿಯನಾಗಿರುವ ಹೆಷ್ಬೋನಿನ ಅರಸನಾದ ಸೀಹೋನನು ನಿಮ್ಮಿಂದ ಸೋತುಹೋಗುವನು, ಅವನ ರಾಜ್ಯವು ನಿಮಗೇ ವಶವಾಗಬೇಕೆಂದು ನಾನು ಅನುಗ್ರಹಿಸಿದ್ದೇನೆ. ಅವನೊಡನೆ ಯುದ್ಧಮಾಡಿ, ಆ ದೇಶವನ್ನು ಸ್ವಾಧೀನಮಾಡಿಕೊಳ್ಳುವುದಕ್ಕೆ ಪ್ರಾರಂಭಿಸಿರಿ.


ನಮಗೆ ಯೊರ್ದನ್ ನದಿಯ ಆಚೆ ಪೂರ್ವ ದಿಕ್ಕಿನಲ್ಲಿ ಸ್ವತ್ತನ್ನು ಅಪೇಕ್ಷಿಸುವುದಿಲ್ಲ” ಎಂದರು.


ಹೀಗೆ ಮೋಶೆಯು ಗಾದ್ಯರಿಗೂ, ರೂಬೇನ್ಯರಿಗೂ, ಯೋಸೇಫನ ಮಗನಾದ ಮನಸ್ಸೆಯ ಕುಲದವರಲ್ಲಿ ಅರ್ಧಜನರಿಗೂ, ಅಮೋರಿಯರ ಅರಸನಾದ ಸೀಹೋನನ ರಾಜ್ಯವನ್ನೂ, ಬಾಷಾನಿನ ಅರಸನಾದ ಓಗನ ರಾಜ್ಯವನ್ನೂ, ಅವುಗಳ ಎಲ್ಲಾ ಊರುಗಳನ್ನೂ ಮತ್ತು ಆ ಊರುಗಳಿಗೆ ಸೇರಿದ ಭೂಮಿಗಳನ್ನೂ ಕೊಟ್ಟನು.


ಮನಸ್ಸೆ ಕುಲದ ಉಳಿದ ಅರ್ಧಜನರಿಗೆ, ರೂಬೇನ್ಯರಿಗೆ ಹಾಗೂ ಗಾದ್ಯರಿಗೆ ಮೋಶೆಯಿಂದ ಯೊರ್ದನಿನ ಆಚೆಕಡೆಯಲ್ಲಿರುವ ಸ್ವತ್ತು ದೊರಕಿತು. ಯೆಹೋವನ ಸೇವಕನಾದ ಮೋಶೆಯು ಅವರಿಗೆ ಕೊಟ್ಟ ಪ್ರಾಂತ್ಯಗಳು ಯಾವುವೆಂದರೆ:


ದಕ್ಷಿಣೋತ್ತರ ದಿಕ್ಕುಗಳನ್ನು ಉಂಟುಮಾಡಿದವನು ನೀನು. ತಾಬೋರ್, ಹೆರ್ಮೋನ್ ಪರ್ವತಗಳು ನಿನ್ನ ನಾಮದಲ್ಲಿ ಆನಂದಧ್ವನಿ ಮಾಡುತ್ತವೆ.


ಅವರ ದೇಶವನ್ನು ಇಸ್ರಾಯೇಲರಿಗೆ ಸ್ವತ್ತಾಗಿ ಕೊಟ್ಟನು, ಆತನ ಪ್ರೀತಿಯು ಶಾಶ್ವತವಾದದ್ದು.


ಇಸ್ರಾಯೇಲರು ಅಮೋರಿಯರ ಅರಸನಾದ ಸೀಹೋನನ ಬಳಿಗೆ ದೂತರನ್ನು ಕಳುಹಿಸಿ,


ನಾವು ಯೆಹೋವನ ಮುಂದೆ ಯುದ್ಧಸನ್ನದ್ಧರಾಗಿ ಕಾನಾನ್ ದೇಶಕ್ಕೆ ಹೊರಡುವೆವು, ಆಗ ಯೊರ್ದನ್ ನದಿಯ ಆಚೆಯೇ ನಮಗೆ ಸ್ವತ್ತು ದೊರಕಬೇಕು” ಎಂದರು.


ಸೀಹೋನನು ತನ್ನ ಜನರೆಲ್ಲರ ಸಮೇತ ನಮ್ಮೊಡನೆ ಯುದ್ಧಮಾಡುವುದಕ್ಕೆ ಯಹಜಿಗೆ ಹೊರಟುಬಂದನು.


ತರುವಾಯ ನಾವು ಹಿಂದಿರುಗಿ ಬಾಷಾನಿನ ಮಾರ್ಗವನ್ನು ಹಿಡಿದು ಮೇಲಕ್ಕೆ ಹೋದಾಗ ಬಾಷಾನಿನ ಅರಸನಾದ ಓಗನು ತನ್ನ ಜನರೆಲ್ಲರ ಸಮೇತ ನಮಗೆ ವಿರುದ್ಧವಾಗಿ ಯುದ್ಧಮಾಡುವುದಕ್ಕೆ ಎದ್ರೈ ಊರಿಗೆ ಹೊರಟುಬಂದನು.


ಮೋಶೆ ಇಸ್ರಾಯೇಲರಿಗೆ ಕೊಟ್ಟ ಧರ್ಮಶಾಸ್ತ್ರವು ಇದೇ.


ಅವರು ಯೊರ್ದನ್ ನದಿಯ ಆಚೆ ಬೇತ್‍ಪೆಗೋರಿಗೆ ಎದುರಾಗಿರುವ ಕಣಿವೆಯಲ್ಲಿ ಹೆಷ್ಬೋನಿನಲ್ಲಿ ವಾಸಿಸಿದರು. ಅಮೋರಿಯರ ಅರಸನಾದ ಸೀಹೋನನ ದೇಶದಲ್ಲಿ ಮೋಶೆಯೂ ಮತ್ತು ಇಸ್ರಾಯೇಲರೂ ಐಗುಪ್ತದೇಶದಿಂದ ಬಂದಾಗ ಆ ಸೀಹೋನನನ್ನು ಜಯಿಸಿದ್ದರು.


ಅಮೋರಿಯರ ಅರಸನಾದ ಸೀಹೋನ್, ಬಾಷಾನಿನ ಅರಸನಾದ ಓಗ್ ಇವರ ರಾಜ್ಯವಾಗಿದ್ದ ಗಿಲ್ಯಾದ್ ಪ್ರದೇಶಕ್ಕೆಲ್ಲಾ ಒಬ್ಬನೇ ಅಧಿಪತಿಯಾಗಿದ್ದನು ಅವನು ಊರಿಯನ ಮಗನಾದ ಗೆಬೆರ್ ಎಂಬುವವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು