Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 13:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋಶುವನು ದಿನತುಂಬಿದ ಮುದುಕನಾಗಲು ಯೆಹೋವನು ಅವನಿಗೆ, “ನೀನು ಈಗ ಮುದುಕನಾದಿ, ಸ್ವಾಧೀನಮಾಡಿಕೊಳ್ಳತಕ್ಕ ದೇಶಗಳು ಇನ್ನೂ ಬಹಳ ಇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಯೆಹೋಶುವ ಹಣ್ಣುಹಣ್ಣು ಮುದುಕನಾದ. ಆಗ ಸರ್ವೇಶ್ವರ ಆತನಿಗೆ, “ನೀನೀಗ ಮುದುಕ. ಸ್ವಾಧೀನ ಮಾಡಿಕೊಳ್ಳಬೇಕಾದ ನಾಡುಗಳು ಇನ್ನೂ ಬಹಳ ಇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋಶುವನು ದಿನತುಂಬಿದ ಮುದುಕನಾಗಲು ಯೆಹೋವನು ಅವನಿಗೆ - ನೀನು ಈಗ ಮುದುಕನಾದಿ; ಸ್ವಾಧೀನಮಾಡಿಕೊಳ್ಳತಕ್ಕ ದೇಶಗಳು ಇನ್ನೂ ಬಹಳ ಇರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋಶುವನು ತುಂಬಾ ಮುದುಕನಾದಾಗ ಯೆಹೋವನು ಅವನಿಗೆ, “ಯೆಹೋಶುವನೆ, ನೀನು ವೃದ್ಧನಾದೆ. ಆದರೆ ನೀನು ಇನ್ನೂ ಸ್ವಾಧೀನಪಡಿಸಿಕೊಳ್ಳಬೇಕಾದ ಪ್ರದೇಶ ಬಹಳಷ್ಟಿದೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋಶುವನು ದಿನತುಂಬಿದ ಮುದುಕನಾಗಲು ಯೆಹೋವ ದೇವರು ಅವನಿಗೆ, “ನೀನು ಈಗ ಮುದುಕನಾದಿ, ಸ್ವಾಧೀನ ಮಾಡಿಕೊಳ್ಳತಕ್ಕ ದೇಶಗಳು ಇನ್ನೂ ಬಹಳ ಇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 13:1
12 ತಿಳಿವುಗಳ ಹೋಲಿಕೆ  

ಯೆಹೋವನು ಈ ಮಾತುಗಳನ್ನು ಮೋಶೆಗೆ ಹೇಳಿದಂದಿನಿಂದ ಇಸ್ರಾಯೇಲ್ಯರು ಅರಣ್ಯದಲ್ಲಿ ಅಲೆಯುತ್ತಿದ್ದ ವರ್ಷಗಳು ಸೇರಿ ನಲ್ವತ್ತೈದು ವರ್ಷಗಳು ದಾಟಿದವು. ಯೆಹೋವನು ತಾನು ನುಡಿದಂತೆಯೇ ಈ ಕಾಲವೆಲ್ಲಾ ನನ್ನನ್ನು ಜೀವದಿಂದುಳಿಸಿದ್ದಾನೆ. ಈಗ ನಾನು ಎಂಭತ್ತೈದು ವರ್ಷದವನಾಗಿದ್ದೇನೆ.


ನಿಮ್ಮ ದೇವರಾದ ಯೆಹೋವನು ತಾನೇ ನಿಮ್ಮ ಮುಂದೆ ಹೋಗುವನು; ಆತನು ಆ ಜನಾಂಗಗಳನ್ನು ನಿಮ್ಮ ಎದುರಿನಲ್ಲಿ ನಿಲ್ಲದಂತೆ ನಾಶಮಾಡುವುದರಿಂದ ನೀವು ಅವರ ದೇಶವನ್ನು ಸ್ವಾಧೀನಮಾಡಿಕೊಳ್ಳುವಿರಿ. ಯೆಹೋವನು ಆಜ್ಞಾಪಿಸಿದಂತೆ ಯೆಹೋಶುವನು ನಿಮ್ಮ ನಾಯಕನಾಗಿ ನದಿಯನ್ನು ದಾಟಿಹೋಗುವನು.


ಇದಾದ ಮೇಲೆ ಯೆಹೋವನ ಸೇವಕನಾದ ನೂನನ ಮಗನಾದ ಯೆಹೋಶುವನು ನೂರಹತ್ತು ವರ್ಷದವನಾಗಿ ಮರಣಹೊಂದಿದನು.


ಆದರೆ ಎಲಿಸಬೇತಳು ಬಂಜೆಯಾದುದರಿಂದ ಅವರಿಗೆ ಮಕ್ಕಳಿರಲಿಲ್ಲ; ಇದಲ್ಲದೆ ಅವರಿಬ್ಬರೂ ವಯೋವೃದ್ಧರಾಗಿದ್ದರು.


ಅಬ್ರಹಾಮನೂ ಸಾರಳೂ ಬಹುವೃದ್ಧರಾಗಿದ್ದರು; ಸಾರಳಿಗೆ ಮುಟ್ಟು ನಿಂತು ಹೋಗಿತ್ತು.


ಅರಸನಾದ ದಾವೀದನು ವಯೋವೃದ್ಧನಾಗಿದ್ದನು. ಸೇವಕರು ಎಷ್ಟು ಕಂಬಳಿ ಹೊದಿಸಿದರೂ ಅವನಿಗೆ ಬೆಚ್ಚಗಾಗುತ್ತಿರಲಿಲ್ಲ.


ಅವುಗಳು ಯಾವುವೆಂದರೆ: ಐಗುಪ್ತದ ಈಚೆಯಲ್ಲಿರುವ ಶೀಹೋರ್ ಹಳ್ಳ ಮೊದಲುಗೊಂಡು ಕಾನಾನ್ಯರಿಗೆ ಸೇರಿರುವ ಉತ್ತರ ಮೇರೆಯಾದ ಎಕ್ರೋನಿನವರೆಗಿರುವ


“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ಸಮಸ್ತ ಕಾನಾನ್ ದೇಶವೇ ನಿಮಗೆ ಸ್ವದೇಶವಾಗಿ ದೊರಕುವುದು.


ಅಲ್ಲಿಂದ ಅದು ಯೊರ್ದನ್ ನದಿಗೆ ಇಳಿದು ಅದನ್ನು ಅನುಸರಿಸಿ ಲವಣಸಮುದ್ರದ ಬಳಿಯಲ್ಲಿ ಮುಗಿಯಬೇಕು. ಇವೇ ನಿಮ್ಮ ದೇಶದ ಮೇರೆಗಳು’” ಎಂದನು.


ಆಗ ಯೆಹೋಶುವನು ಇಸ್ರಾಯೇಲ್ಯರಿಗೆ “ನಿಮ್ಮ ಪೂರ್ವಿಕರ ದೇವರಾದ ಯೆಹೋವನು ನಿಮಗೆ ಕೊಟ್ಟ ದೇಶವನ್ನು ಸ್ವಾಧೀನಮಾಡಿಕೊಳ್ಳುವುದರಲ್ಲಿ ಇನ್ನೆಷ್ಟು ತಡಮಾಡುತ್ತೀರಿ?


ಯೆಹೋವನು ಯೆಹೋಶುವನನ್ನು ಕುರಿತು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು