Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 13:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಹೆಷ್ಬೋನಿನ ಅರಸನಾದ ಸೀಹೋನಿನ ರಾಜ್ಯದ ಉಳಿದ ಭಾಗವಾಗಿರುವ ಯಗ್ಜೇರ್, ಮೊದಲಾದ ಗಿಲ್ಯಾದಿನ ಎಲ್ಲಾ ಪಟ್ಟಣಗಳು, ರಬ್ಬಾ ಊರಿನ ಪೂರ್ವದಲ್ಲಿರುವ ಅರೋಯೇರ್ ಪಟ್ಟಣದ ವರೆಗೆ ವಿಸ್ತರಿಸಿಕೊಂಡಿರುವ ಅಮ್ಮೋನಿಯರ ಅರ್ಧ ರಾಜ್ಯ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಹೆಷ್ಬೋನಿನ ಅರಸ ಸೀಹೋನನ ರಾಜ್ಯದ ಉಳಿದ ಭಾಗವಾಗಿರುವ ಯಗ್ಜೇರ್, ಗಿಲ್ಯಾದಿನ ಎಲ್ಲ ನಗರಗಳು, ರಬ್ಬಾ ಊರಿನ ಪೂರ್ವದಲ್ಲಿ ಇರುವ ಅರೋಯೇರ್ ನಗರದವರೆಗೆ ವಿಸ್ತರಿಸಿಕೊಂಡಿರುವ ಅಮ್ಮೋನಿಯರ ಅರ್ಧರಾಜ್ಯ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಹೆಷ್ಬೋನಿನ ಅರಸನಾದ ಸೀಹೋನನ ರಾಜ್ಯದ ಉಳಿದ ಭಾಗವಾಗಿರುವ ಯಗ್ಜೇರ್ ಮೊದಲಾದ ಗಿಲ್ಯಾದಿನ ಎಲ್ಲಾ ಪಟ್ಟಣಗಳು, ರಬ್ಬಾ ಊರಿನ ಪೂರ್ವದಲ್ಲಿರುವ ಅರೋಯೇರ್ ಪಟ್ಟಣದವರೆಗೆ ವಿಸ್ತರಿಸಿಕೊಂಡಿರುವ ಅಮ್ಮೋನಿಯರ ಅರ್ಧರಾಜ್ಯ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಮೋಶೆ ಅವರಿಗೆ ಯಗ್ಜೇರಿನ ಪ್ರದೇಶ ಮತ್ತು ಗಿಲ್ಯಾದಿನ ಎಲ್ಲ ಪಟ್ಟಣಗಳನ್ನೂ ರಬ್ಬಾದ ಹತ್ತಿರವಿದ್ದ ಅರೋಯೇರ್‌ವರೆಗಿನ ಅಮ್ಮೋನಿಯರ ಅರ್ಧಪ್ರದೇಶವನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಯಜ್ಜೇರ್ ಪ್ರದೇಶ, ಗಿಲ್ಯಾದಿನ ಸಮಸ್ತ ಪಟ್ಟಣಗಳೂ ರಬ್ಬಾ ಊರಿನ ಎದುರಾಗಿರುವ ಅರೋಯೇರ್ ಪಟ್ಟಣವರೆಗೂ ಇರುವ ಅಮ್ಮೋನಿಯರ ಅರ್ಧ ದೇಶವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 13:25
21 ತಿಳಿವುಗಳ ಹೋಲಿಕೆ  

ಯೋವಾಬನು ಅಮ್ಮೋನಿಯರ ಪಟ್ಟಣವಾದ ರಬ್ಬಕ್ಕೆ ಮುತ್ತಿಗೆ ಹಾಕಿ ಅರಮನೆಯಿದ್ದ ಭಾಗವನ್ನು ಸ್ವಾಧೀನಮಾಡಿಕೊಂಡನು.


ರಾಜರೆಲ್ಲರು ಸಾಮಾನ್ಯವಾಗಿ ವಸಂತಕಾಲದ ಪ್ರಾರಂಭದಲ್ಲಿ ಯುದ್ಧಕ್ಕೆ ಹೊರಡುವ ಸಮಯವನ್ನು ಗೊತ್ತುಮಾಡುತ್ತಿದ್ದರು. ದಾವೀದನು ಯೋವಾಬನನ್ನೂ, ತನ್ನ ಸೇವಕರನ್ನೂ ಎಲ್ಲಾ ಇಸ್ರಾಯೇಲ್ಯರನ್ನೂ ಯುದ್ಧಕ್ಕೆ ಕಳುಹಿಸಿದನು. ಇವರು ಹೋಗಿ ಅಮ್ಮೋನಿಯರ ಪ್ರಾಂತ್ಯಗಳನ್ನು ನಾಶ ಮಾಡಿ ರಬ್ಬಕ್ಕೆ ಮುತ್ತಿಗೆ ಹಾಕಿದರು. ಆದರೆ ದಾವೀದನು ಯೆರೂಸಲೇಮಿನಲ್ಲಿಯೇ ಇದ್ದನು.


(ರೆಫಾಯರೊಳಗೆ ಬಾಷಾನಿನ ಅರಸನಾದ ಓಗನೊಬ್ಬನೇ ಉಳಿದಿದ್ದನು. ಅವನ ಮಂಚ ಕಬ್ಬಿಣದ್ದು; ಅಮ್ಮೋನಿಯರ ರಬ್ಬಾ ಎಂಬ ಪಟ್ಟಣದಲ್ಲಿ ಅದನ್ನು ಈಗಲೂ ನೋಡಬಹುದು. ಪುರುಷನ ಕೈ ಅಳತೆಯ ಪ್ರಕಾರ ಅದರ ಉದ್ದ ಒಂಭತ್ತು ಮೊಳ, ಅಗಲ ನಾಲ್ಕು ಮೊಳ.)


ಆಟ್ರೋತ್ಷೋಫಾನ್, ಯಗ್ಜೇರ್, ಯೊಗ್ಬೆಹಾ,


ನಾನು ರಬ್ಬದ ಕೋಟೆಯನ್ನು ಬೆಂಕಿಯಿಂದ ಉರಿಸುವೆನು, ಅದು ಅದರ ಅರಮನೆಗಳನ್ನು ನುಂಗಿಬಿಡುವುದು; ಆ ಯುದ್ಧದ ದಿನದಲ್ಲಿ ಆರ್ಭಟವಾಗುವುದು, ಆ ಸುಂಟರಗಾಳಿಯಂತ ದಿನದಲ್ಲಿ ಪ್ರಚಂಡ ಕಾದಾಟವೂ ಉಂಟಾಗುವುದು.


ಅಮ್ಮೋನ್ಯರ ರಬ್ಬಾ ಎಂಬ ಪಟ್ಟಣಕ್ಕೂ, ಯೆಹೂದದೊಳಗೆ ಕೋಟೆ ಕೊತ್ತಲಗಳಿಂದ ಕೂಡಿದ ಯೆರೂಸಲೇಮಿಗೂ ಖಡ್ಗವು ಬರುವುದಕ್ಕೆ ದಾರಿಗಳನ್ನು ಮಾಡು.


ಹೆಷ್ಬೋನ್, ಯಗ್ಜೇರ್ ಎಂಬ ಗೋಮಾಳ ಸಹಿತವಾದ ನಾಲ್ಕುಪಟ್ಟಣಗಳು ದೊರಕಿದವು.


ಮುಂದೆ ನೀವು ಅಮೋನಿಯರ ಹತ್ತಿರಕ್ಕೆ ಬರುವಾಗ ಅವರಿಗೆ ತೊಂದರೆಪಡಿಸಲೂ ಬೇಡಿರಿ, ಅವರಿಗೆ ವೈರಿಗಳಾಗಿ ನಡೆದು ಯುದ್ಧಮಾಡಲೂಬೇಡಿರಿ. ನಾನು ಆ ದೇಶವನ್ನು ಲೋಟನ ವಂಶದವರಾದ ಅಮ್ಮೋನಿಯರಿಗೆ ಸ್ವತ್ತಾಗಿ ಕೊಟ್ಟಿರುವುದರಿಂದ ನಿಮಗೆ ಅದರಲ್ಲಿ ಯಾವ ಭಾಗವನ್ನಾದರೂ ಕೊಡುವುದಿಲ್ಲ.”


ಅದಲ್ಲದೆ ಮೋಶೆ ಗೂಢಚಾರರ ಮೂಲಕ ಯಗ್ಜೇರನ್ನು ಪರೀಕ್ಷಿಸಿದ ಮೇಲೆ ಇಸ್ರಾಯೇಲರು ಅದರ ಗ್ರಾಮಗಳನ್ನು ವಶಪಡಿಸಿಕೊಂಡು, ಅಲ್ಲಿದ್ದ ಅಮೋರಿಯರನ್ನು ಹೊರಡಿಸಿಬಿಟ್ಟರು.


ಗೆಷೂರ‍್ಯರ ಮತ್ತು ಮಾಕತೀಯರ ಪ್ರಾಂತ್ಯಗಳು ಹೆರ್ಮೋನ್ ಬೆಟ್ಟದ ಮೇಲಿನ ಎಲ್ಲಾ ಪ್ರದೇಶ,


ಮೋಶೆಯು ಗಾದ್ ಕುಲದ ಗೋತ್ರಗಳಿಗೆ ಸ್ವತ್ತಾಗಿ ಕೊಟ್ಟ ಪ್ರದೇಶಗಳು ಯಾವುವೆಂದರೆ:


ಹೆಷ್ಬೋನಿನಿಂದ ರಾಮತ್ ಮಿಚ್ಪೆ, ಬೆಟೋನೀಮ್ ಎಂಬ ಊರುಗಳ ವರೆಗೆ ಇರುವ ಪ್ರದೇಶ, ಮಹನಯಿಮಿನಿಂದ ದೆಬೀರ್ ಪ್ರಾಂತ್ಯದವರೆಗೂ ಇರುವ ಸೀಮೆ,


ಅವರು ಯೊರ್ದನ್ ನದಿಯನ್ನು ದಾಟಿ ಗಾದ್ ತಗ್ಗಿನಲ್ಲಿರುವ ಪಟ್ಟಣದ ಬಲಪಾರ್ಶ್ವದಲ್ಲಿರುವ ಅರೋಯೇರಿನಿಂದ ಯಗ್ಜೇರಿಗೂ,


ಹೆಷ್ಬೋನ್ ಮತ್ತು ಅದರ ಗೋಮಾಳಗಳು, ಯಗ್ಜೇರ್ ಮತ್ತು ಅದರ ಗೋಮಾಳಗಳು ಸಹಿತವಾದ ಪಟ್ಟಣಗಳು ದೊರಕಿದವು.


ದಾವೀದನ ಆಳ್ವಿಕೆಯ ನಲವತ್ತನೆಯ ವರ್ಷದಲ್ಲಿ ಹೆಬ್ರೋನ್ಯರಿಗೆ ಸೇರಿದವರು ಯಾರಾರೆಂದು ವಿಚಾರಣೆ ನಡೆಸಿದಾಗ ಗಿಲ್ಯಾದಿನ ಯಾಜೇರಿನ ಶ್ರೀಮಂತರಿಗೆ ಅನೇಕರು ಅವರ ಗೋತ್ರದವರಾಗಿರುತ್ತಾರೆಂದು ಗೊತ್ತಾಯಿತು. ಈ ಹೆಬ್ರೋನ್ಯರಲ್ಲಿ ಯೆರೀಯನು ಪ್ರಧಾನನು.


ಹೆಷ್ಬೋನಿನ ಭೂಮಿಯು, ಸಿಬ್ಮದ ದ್ರಾಕ್ಷಾಲತೆಯು ಒಣಗಿ ಹೋಗಿದೆ. ಯಜ್ಜೇರಿನವರೆಗೆ ವ್ಯಾಪಿಸಿ ಅರಣ್ಯದಲ್ಲಿ ಹಬ್ಬಿ, ಸಮುದ್ರದಾಚೆಗೆ ಸೇರುವಷ್ಟು ವಿಶಾಲವಾಗಿ ತನ್ನ ಶಾಖೆಗಳನ್ನು ಹರಡಿಕೊಂಡಿದ್ದ ಮೋವಾಬಿನ ರಾಜ ದ್ರಾಕ್ಷಿಗಳನ್ನು, ಜನಾಂಗಗಳ ಒಡೆಯರನ್ನು ತುಳಿದುಬಿಟ್ಟಿದ್ದಾನೆ.


ಸಿಬ್ಮದ ದ್ರಾಕ್ಷಾಲತೆಯೇ, ಯಜ್ಜೇರಿನ ನಿಮಿತ್ತ ಅಳುವುದಕ್ಕಿಂತಲೂ ನಿನ್ನನ್ನು ಕಂಡು ಹೆಚ್ಚಾಗಿ ಅಳುವೆನು; ನಿನ್ನ ಶಾಖೆಗಳು ಸಮುದ್ರದಾಚೆಗೂ ಯಜ್ಜೇರಿನ ಸರೋವರದವರೆಗೂ ವ್ಯಾಪಿಸಿದ್ದವಲ್ಲಾ; ಈಗ ನಿನ್ನ ಹಣ್ಣುಹಂಪಲುಗಳ ಮೇಲೆಯೂ ಮತ್ತು ದ್ರಾಕ್ಷಿಯ ಸುಗ್ಗಿಯ ಮೇಲೆಯೂ ಸೂರೆಗಾರನು ಬಿದ್ದಿದ್ದಾನೆ.


ಗಿಲ್ಯಾದ್ಯರು ಯೊರ್ದನಿನ ಆಚೆಯಲ್ಲೇ ಉಳಿದರು. ದಾನ್ ಕುಲದವರು ಹಡಗುಗಳಲ್ಲಿಯೇ ಉಳಿದದ್ದೇಕೆ? ಆಶೇರ್ ಕುಲದವರು ತಮ್ಮ ರೇವುಗಳನ್ನು ಬಿಡದೆ ಸಮುದ್ರ ತೀರದಲ್ಲಿ ಸುಮ್ಮನೆ ಕುಳಿತುಬಿಟ್ಟರು.


ಆರೋಯೇರಿನ ಪಟ್ಟಣಗಳು ನಿರ್ಜನವಾಗಿ, ಮಂದೆಗಳಿಗೆ ಆಸರೆಯಾಗುವವು. ಅವು ಯಾರ ಹೆದರಿಕೆಯೂ ಇಲ್ಲದೆ ಅಲ್ಲಿ ತಂಗುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು