Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 13:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಯೊರ್ದನ್ ಕಣಿವೆಯಲ್ಲಿರುವ ಬೇತ್‌ಹಾರಾಮ್; ಬೇತ್‌ನಿಮ್ರಾ, ಸುಕ್ಕೋತ್, ಚಾಫೋನ ಎಂಬ ಪಟ್ಟಣಗಳು. ಕಿನ್ನೆರೆತ್ ಸಮುದ್ರದ ದಕ್ಷಿಣದಿಕ್ಕಿನ ಮೂಲೆಯ ವರೆಗೆ ವಿಸ್ತರಿಸಿಕೊಂಡಿರುವ ಯೊರ್ದನಿನ ಪೂರ್ವ ಪ್ರದೇಶಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಜೋರ್ಡನ್ ಕಣಿವೆಯಲ್ಲಿರುವ ಬೇತ್ ಹಾರಾಮ್, ಬೇತ್ ನಿಮ್ರಾ, ಸುಕ್ಕೋತ್, ಚಾಫೋನ್ ಎಂಬ ನಗರಗಳು, ಕಿನ್ನೆರೆತ್ ಸರೋವರ, (ದಕ್ಷಿಣ ದಿಕ್ಕಿನ) ಮೂಲೆಯವರೆಗೆ ವಿಸ್ತರಿಸಿಕೊಂಡಿರುವ ಜೋರ್ಡನ್ ಪೂರ್ವಪ್ರದೇಶ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಯೊರ್ದನ್ ತಗ್ಗಿನಲ್ಲಿರುವ ಬೇತ್‍ಹಾರಾಮ್, ಬೇತ್‍ನಿಮ್ರಾ, ಸುಕ್ಕೋತ್, ಚಾಫೋನ್ ಎಂಬ ಪಟ್ಟಣಗಳು, ಕಿನ್ನೆರೆತ್ ಸಮುದ್ರದ [ದಕ್ಷಿಣದಿಕ್ಕಿನ] ಮೂಲೆಯವರೆಗೆ ವಿಸ್ತರಿಸಿಕೊಂಡಿರುವ ಯೊರ್ದನ್ ಪೂರ್ವಪ್ರದೇಶ ಇವುಗಳೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಆ ಪ್ರದೇಶವು ಬೇತ್‌ಹಾರಾಮ್, ಬೇತ್‌ನಿಮ್ರಾ, ಸುಕ್ಕೋತ್ ಮತ್ತು ಚಾಫೋನ್ ಕಣಿವೆಗಳನ್ನು ಒಳಗೊಂಡಿತ್ತು. ಹೆಷ್ಬೋನಿನ ಅರಸನಾದ ಸೀಹೋನನ ರಾಜ್ಯಕ್ಕೆ ಸೇರಿದ ಉಳಿದೆಲ್ಲ ಪ್ರದೇಶವನ್ನು ಇದರಲ್ಲಿ ಸೇರಿಸಲಾಗಿತ್ತು. ಈ ಪ್ರದೇಶವು ಜೋರ್ಡನ್ ನದಿಯ ಪೂರ್ವ ಭಾಗದಲ್ಲಿತ್ತು. ಈ ಪ್ರದೇಶವು ಗಲಿಲೇಯ ಸರೋವರದ ಕೊನೆಯವರೆಗೆ ವಿಸ್ತರಿಸಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ತಗ್ಗಿನಲ್ಲಿರುವ ಬೇತ್‌ಹಾರಾಮ್, ಬೇತ್ ನಿಮ್ರಾ, ಸುಕ್ಕೋತ್, ಚಾಪೋನ್ ಎಂಬ ಪಟ್ಟಣಗಳು ಹೆಷ್ಬೋನಿನ ಅರಸನಾದ ಸೀಹೋನನ ಉಳಿದ ರಾಜ್ಯವೂ ಯೊರ್ದನ್ ನದಿ ತೀರವಾಗಿ ಕಿನ್ನೆರೆತ್ ಸಮುದ್ರದ ಪರ್ಯಂತರಕ್ಕೂ ಇರುವ ದೇಶವು ಅವರ ಮೇರೆಗೆ ಒಳಗಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 13:27
14 ತಿಳಿವುಗಳ ಹೋಲಿಕೆ  

ಶೆಫಾಮಿನಿಂದ ಅಯಿನಿನ ಪೂರ್ವದಲ್ಲಿರುವ ರಿಬ್ಲಕ್ಕೆ ಬರಬೇಕು. ತರುವಾಯ ಅದು ಗಟ್ಟಾ ಇಳಿದು ಕಿನ್ನೆರೆತ್ ಸಮುದ್ರದ ಪೂರ್ವದಲ್ಲಿರುವ ಬೆಟ್ಟಗಳಿಗೆ ಹೋಗಬೇಕು.


ಬೇತ್‌ನಿಮ್ರಾ ಮತ್ತು ಬೇತ್ ಹಾರಾನಿನ ಸುತ್ತ ಗೋಡೆಗಳುಳ್ಳ ಊರುಗಳನ್ನು ಹೊಸದಾಗಿ ಕಟ್ಟಿಕೊಂಡರು. ತಮ್ಮ ದನಕುರಿಗಳಿಗೋಸ್ಕರ ದೊಡ್ಡಿಗಳನ್ನು ಕಟ್ಟಿಕೊಂಡರು.


ಯಾಕೋಬನು ಪ್ರಯಾಣಮಾಡಿ ಸುಕ್ಕೋತಿಗೆ ಬಂದನು. ಅಲ್ಲಿ ತನಗೋಸ್ಕರ ಮನೆಯನ್ನೂ ದನಗಳಿಗೆ ಆಶ್ರಯವನ್ನೂ ಮಾಡಿಸಿದನು. ಆದುದರಿಂದ ಆ ಸ್ಥಳಕ್ಕೆ “ಸುಕ್ಕೋತ್” ಎಂದು ಹೆಸರಾಯಿತು.


ಕಿನ್ನೆರೋತ್ ಸಮುದ್ರದ ದಕ್ಷಿಣದಲ್ಲಿನ ತಗ್ಗಾದ ಪ್ರದೇಶ, ಇಳುಕಲ್ಲಿನ ಪ್ರದೇಶ, ದೋರ್ ಊರಿನ ಪಶ್ಚಿಮದಲ್ಲಿದ್ದ ಬೆಟ್ಟದ ಮೇಲಿನ ಪ್ರದೇಶ, ಇವುಗಳ ಅರಸರನ್ನೂ ಪೂರ್ವಪಶ್ಚಿಮಗಳಲ್ಲಿರುವ


ಅದಲ್ಲದೆ ಆರಾಬಾ ಎಂಬ ತಗ್ಗನ್ನೂ ಅವರಿಗೆ ಕೊಟ್ಟೆನು; ಅದರಲ್ಲಿ ಕಿನ್ನೆರೆತ್ ಸಮುದ್ರದಿಂದ ಪಿಸ್ಗಾ ಬೆಟ್ಟದ ಪಶ್ಚಿಮದಲ್ಲಿರುವ ಅರಾಬದ ಸಮುದ್ರವೆನಿಸಿಕೊಳ್ಳುವ ಲವಣಸಮುದ್ರದ ವರೆಗೆ ಯೊರ್ದನ್ ನದಿಯು ಅವರ (ಪಶ್ಚಿಮದ ವರೆಗೆ) ಮೇರೆ.


ಒಮ್ಮೆ ಯೇಸು ಗೆನೆಜರೇತ್ ಸರೋವರದ ದಡದಲ್ಲಿ ನಿಂತಿದ್ದಾಗ ಜನರು ಗುಂಪಾಗಿ ಬಂದು ದೇವರ ವಾಕ್ಯವನ್ನು ಕೇಳುವುದಕ್ಕಾಗಿ ಆತನನ್ನು ಸುತ್ತುವರೆದು ನೂಕಾಡುತ್ತಿದ್ದರು.


ಅರಸನು ಯೊರ್ದನಿನ ತಗ್ಗಿನಲ್ಲಿ ಸುಕ್ಕೋತಿಗೂ ಮತ್ತು ಚಾರೆತಾನಿಗೂ ಮಧ್ಯದಲ್ಲಿರುವ ಜೇಡಿ ಮಣ್ಣು ಇರುವ ನೆಲದಲ್ಲಿ ಎರಕ ಹೊಯ್ಯಿಸಿದನು.


ಹಾಗೂ ಯೊರ್ದನ್ ನದಿಯ ಪೂರ್ವದಲ್ಲಿ ಕಿನ್ನೆರೋತ್ ಸಮುದ್ರದಿಂದ ಲವಣಸಮುದ್ರವೆನಿಸಿಕೊಳ್ಳುವ ಅರಾಬ್ ಸಮುದ್ರದ ಹತ್ತಿರವಿರುವ ಬೇತಯೆಷಿಮೋತಿನವರೆಗೂ ದಕ್ಷಿಣದಲ್ಲಿರುವ ಪಿಸ್ಗಾ ಬೆಟ್ಟದ ಬುಡದವರೆಗೂ ಇರುವ ಕಣಿವೆ ಪ್ರದೇಶವು ಇವೇ ಅವನ ರಾಜ್ಯ:


“ಅಟಾರೋತ್, ದೀಬೋನ್, ಯಗ್ಜೇರ್, ನಿಮ್ರಾ, ಹೆಷ್ಬೋನ್, ಎಲೆಯಾಲೆ, ಸೆಬಾಮ್, ನೆಬೋ, ಬೆಯೋನ್,


ಹೆಷ್ಬೋನಿನಿಂದ ರಾಮತ್ ಮಿಚ್ಪೆ, ಬೆಟೋನೀಮ್ ಎಂಬ ಊರುಗಳ ವರೆಗೆ ಇರುವ ಪ್ರದೇಶ, ಮಹನಯಿಮಿನಿಂದ ದೆಬೀರ್ ಪ್ರಾಂತ್ಯದವರೆಗೂ ಇರುವ ಸೀಮೆ,


ಈ ಎಲ್ಲಾ ಗ್ರಾಮನಗರಗಳು ಗಾದ್ ಕುಲದ ಸ್ವತ್ತಾದವು.


ದೇವರು ತನ್ನ ಪವಿತ್ರಸ್ಥಳದಲ್ಲಿ ನುಡಿದಿದ್ದಾನೆ. ಜಯಘೋಷಮಾಡುವೆನು; ಶೆಖೆಮ್ ಪ್ರದೇಶವನ್ನು ಹಂಚುವೆನು. ಸುಖೋತ್ ಬಯಲನ್ನು ಅಳೆದುಕೊಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು