Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 13:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಒಟ್ಟಾರೆ ಲೆಬನೋನಿನಿಂದ ಮಿಸ್ರೆಫೋತ್ಮಯಿಮಿನವರೆಗೂ, ಚೀದೋನ್ಯರ ಎಲ್ಲಾ ಪರ್ವತ ಪ್ರಾಂತ್ಯಗಳು. ನಾನೇ ಈ ಎಲ್ಲಾ ಜನಾಂಗಗಳನ್ನು ಇಸ್ರಾಯೇಲ್ಯರ ಸಮ್ಮುಖದಿಂದ ಹೊರಡಿಸಿಬಿಡುವೆನು. ನೀನಾದರೂ ನಾನು ಮೊದಲೇ ಆಜ್ಞಾಪಿಸಿದಂತೆ ಇಸ್ರಾಯೇಲ್ಯರಿಗೆ ದೇಶವನ್ನು ಹಂಚಿಕೊಡುವಾಗ ಇವುಗಳನ್ನು ಸೇರಿಸಿ ದೇಶವನ್ನೆಲ್ಲಾ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಒಟ್ಟಾರೆ ಲೆಬನೋನಿನಿಂದ ಮಿಸ್ರೆಫೋತ್ಮಯಿಮಿನವರೆಗಿರುವ ಸಿದೋನ್ಯರ ಎಲ್ಲ ಪರ್ವತ ಪ್ರಾಂತ್ಯಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಒಟ್ಟಾರೆ ಲೆಬನೋನಿನಿಂದ ವಿುಸ್ರೆಫೋತ್ಮಯಿವಿುನವರೆಗಿರುವ ಚೀದೋನ್ಯರ ಎಲ್ಲಾ ಪರ್ವತ ಪ್ರಾಂತ್ಯಗಳೂ ಇವೇ. ನಾನೇ ಈ ಎಲ್ಲಾ ಜನಾಂಗಗಳನ್ನು ಇಸ್ರಾಯೇಲ್ಯರ ಎದುರಿನಿಂದ ಹೊರಡಿಸಿಬಿಡುವೆನು. ನೀನಾದರೋ ನಾನು ಮೊದಲೇ ಆಜ್ಞಾಪಿಸಿದಂತೆ ಇಸ್ರಾಯೇಲ್ಯರಿಗೆ ದೇಶವನ್ನು ಹಂಚಿಕೊಡುವಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 “ಲೆಬನೋನಿನಿಂದ ಮಿಸ್ರೆಪೋತ್ಮಯಿಮಿನವರೆಗಿರುವ ಪರ್ವತ ಪ್ರದೇಶದಲ್ಲಿ ಚೀದೋನ್ಯರು ವಾಸವಾಗಿದ್ದಾರೆ. ಆದರೆ ಇಸ್ರೇಲರಿಗಾಗಿ ನಾನು ಅವರನ್ನೆಲ್ಲಾ ಹೊರ ತಳ್ಳುತ್ತೇನೆ. ಇಸ್ರೇಲರಿಗೆ ದೇಶವನ್ನು ಹಂಚುವಾಗ ಈ ಪ್ರದೇಶವನ್ನು ಸೇರಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 “ಒಟ್ಟಾರೆ ಲೆಬನೋನಿನಿಂದ ಮಿಸ್ರೆಫೋತ್ಮಯಿಮಿನವರೆಗೂ ಬೆಟ್ಟದ ದೇಶದ ಎಲ್ಲಾ ನಿವಾಸಿಗಳನ್ನೂ ಎಲ್ಲಾ ಸೀದೋನ್ಯರನ್ನೂ ನಾನು ಇಸ್ರಾಯೇಲರ ಎದುರಿನಿಂದ ಹೊರಡಿಸಿಬಿಡುವೆನು. ಆದರೆ ನಾನು ನಿನಗೆ ಹೇಳಿದ ಹಾಗೆಯೇ ನೀನು ಚೀಟುಗಳನ್ನು ಹಾಕಿ, ಇಸ್ರಾಯೇಲರಿಗೆ ಸೊತ್ತಾಗಿ ಪಾಲು ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 13:6
13 ತಿಳಿವುಗಳ ಹೋಲಿಕೆ  

ಯೆಹೋವನು ಅವರನ್ನು ಇಸ್ರಾಯೇಲರ ಕೈಗೆ ಒಪ್ಪಿಸಿದನು. ಇವರು ಅವರನ್ನು ದೊಡ್ಡ ಚೀದೋನ್ ಹಾಗೂ ಮಿಸ್ರೆಫೋತ್ಮಯಿಮ್ ಎಂಬ ಊರುಗಳವರೆಗೂ ಪೂರ್ವದಿಕ್ಕಿನಲ್ಲಿರುವ ಮಿಚ್ಪೆಯ ಬೈಲಿನವರೆಗೂ ಅವರನ್ನು ಹಿಂದಟ್ಟಿ ಹೊಡೆದರು. ಒಬ್ಬನಾದರೂ ಉಳಿಯದಂತೆ ಎಲ್ಲರನ್ನೂ ಸಂಹರಿಸಿದರು.


ನಿಮ್ಮ ದೇವರಾದ ಯೆಹೋವನು ಅವರನ್ನು ನಿಮ್ಮ ಎದುರಿನಿಂದ ಹೊರಡಿಸುವುದೇ ಇಲ್ಲವೆಂದು ತಿಳಿದುಕೊಳ್ಳಿರಿ. ಅವರೇ ನಿಮಗೆ ಉರುಲೂ ಬೋನೂ ಆಗಿರುವರು. ಅವರು ಪಕ್ಕೆಗೆ ಹೊಡೆಯುವ ಕೊರಡೆಯಂತೆಯೂ ಕಣ್ಣಿಗೆ ಚುಚ್ಚುವ ಮುಳ್ಳಿನಂತೆಯೂ ಇರುವರು. ಕಡೆಯಲ್ಲಿ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಟ್ಟ ಈ ಉತ್ತಮ ದೇಶದಲ್ಲಿ ನೀವು ಇಲ್ಲದಂತಾಗುವಿರಿ.


ನಾನು ಯೊರ್ದನಿನಿಂದ ಪಶ್ಚಿಮದ ಸಮುದ್ರದವರೆಗೂ ಇರುವ ಜನಾಂಗಗಳಲ್ಲಿ ಸತ್ತವರ ಮತ್ತು ಉಳಿದಿರುವವರ ದೇಶವನ್ನು ನಿಮಗೆ ಸ್ವತ್ತಾಗಿ ಕೊಟ್ಟಿದ್ದೇನೆ.


ನೀವು ಚೀಟುಹಾಕಿ ಆ ದೇಶವನ್ನು ನಿಮ್ಮನಿಮ್ಮ ಕುಟುಂಬಗಳಿಗೆ ಹಂಚಿಕೊಳ್ಳಬೇಕು. ಹೆಚ್ಚು ಮಂದಿಯುಳ್ಳ ಕುಟುಂಬಕ್ಕೆ ಹೆಚ್ಚಾಗಿಯೂ, ಕಡಿಮೆಯಾದ ಕುಟುಂಬಕ್ಕೆ ಕಡಿಮೆಯಾಗಿಯೂ ಸ್ವತ್ತು ದೊರಕಬೇಕು. ಒಂದೊಂದು ಕುಟುಂಬದ ಚೀಟು ಯಾವ ಯಾವ ಸ್ಥಳವನ್ನು ಸೂಚಿಸುವುದೋ ಆ ಸ್ಥಳದಲ್ಲಿಯೇ ಆ ಕುಟುಂಬದ ಸ್ವಾಸ್ತ್ಯವಿರಬೇಕು. ಒಂದೊಂದು ಕುಲದ ಕುಟುಂಬಗಳು ಒಂದೇ ಪ್ರದೇಶದಲ್ಲಿರಬೇಕು.


ಒಂಭತ್ತು ಕುಲಗಳಿಗೂ, ಮನಸ್ಸೆ ಕುಲದ ಅರ್ಧ ಜನರಿಗೂ ಪಾಲು ಮಾಡಿ ಕೊಡು” ಎಂದನು.


ನೀನು ಐಗುಪ್ತ ದೇಶದಿಂದ ಒಂದು ದ್ರಾಕ್ಷಾಲತೆಯನ್ನು ತಂದು, ಜನಾಂಗಗಳನ್ನು ಹೊರಗೆ ಹಾಕಿ, ಅದನ್ನು ನೆಟ್ಟಿದ್ದಿ.


ನಿನ್ನನ್ನು ಕೈಬಿಡುವುದಿಲ್ಲ, ತೊರೆಯುವುದಿಲ್ಲ, ಸ್ಥಿರಚಿತ್ತನಾಗಿರು, ಧೈರ್ಯದಿಂದಿರು. ಏಕೆಂದರೆ ನಾನು ಈ ಜನರ ಪೂರ್ವಿಕರಿಗೆ ವಾಗ್ದಾನಮಾಡಿದ ದೇಶವನ್ನು ಇವರಿಗಾಗಿ ನೀನೇ ಸ್ವಾಧೀನಮಾಡಿಕೊಡಬೇಕು.


ನಂತರ ಯೆಹೋಶುವನು ಉಳಿದ ಅರಸರನ್ನೂ ಅವರ ಎಲ್ಲಾ ಪಟ್ಟಣಗಳನ್ನು ಹಿಡಿದು ಯೆಹೋವನ ಸೇವಕನಾದ ಮೋಶೆಯ ಆಜ್ಞೆಯಂತೆ ಅವರನ್ನು ಕತ್ತಿಯಿಂದ ಸಂಹರಿಸಿದನು.


ನಿಮ್ಮ ದೇವರಾದ ಯೆಹೋವನು ತಾನೇ ಅವರನ್ನು ನಿಮ್ಮ ಕಣ್ಣೆದುರಿನಲ್ಲಿ ಹೊರಡಿಸಿಬಿಡುವನು. ಆತನ ವಾಗ್ದಾನದಂತೆ ಅವರ ದೇಶವನ್ನು ನೀವು ಸ್ವಂತ ಮಾಡಿಕೊಳ್ಳುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು