Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 14:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಮೋಶೆಯು ನನ್ನನ್ನು ಕಳುಹಿಸಿದಾಗ ನನಗೆಷ್ಟು ಬಲವಿತ್ತೋ ಈಗಲೂ ಅಷ್ಟೇ ಬಲವಿದೆ. ಯುದ್ಧಮಾಡುವುದಕ್ಕೂ ವಿಶೇಷ ಕಾರ್ಯಗಳನ್ನು ನಿರ್ವಹಿಸುವುದಕ್ಕೂ ನನಗೆ ಮೊದಲಿನಂತೆಯೇ ಈಗಲೂ ಬಲವಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಮೋಶೆ ನನ್ನನ್ನು ಕಳಿಸಿದಾಗ ನನಗೆಷ್ಟು ಬಲವಿತ್ತೋ ಈಗಲೂ ಅಷ್ಟೇ ಬಲವಿದೆ. ಯುದ್ಧಮಾಡುವುದಕ್ಕೂ ವಿಶೇಷ ಕಾರ್ಯಗಳನ್ನು ನಿರ್ವಹಿಸುವುದಕ್ಕೂ ನನಗೆ ಮುಂಚಿನಂತೆಯೇ ಶಕ್ತಿಯಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಮೋಶೆಯು ನನ್ನನ್ನು ಕಳುಹಿಸಿದಾಗ ನನಗೆಷ್ಟು ಬಲವಿತ್ತೋ ಈಗಲೂ ಅಷ್ಟಿದೆ. ಯುದ್ಧಮಾಡುವದಕ್ಕೂ ವಿಶೇಷ ಕಾರ್ಯಗಳನ್ನು ನಿರ್ವಹಿಸುವದಕ್ಕೂ ನನಗೆ ಮುಂಚಿನಂತೆಯೇ ಶಕ್ತಿಯಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಮೋಶೆಯು ನನ್ನನ್ನು ಕಳುಹಿಸಿ ಕೊಟ್ಟಾಗ ನಾನು ದೃಢಕಾಯನಾಗಿದ್ದಂತೆಯೇ ಈಗಲೂ ಸಹ ದೃಢಕಾಯನಾಗಿದ್ದೇನೆ. ಆಗ ನಾನು ಯುದ್ಧಮಾಡಲು ಹೇಗೆ ಸಿದ್ಧವಾಗಿರುತ್ತಿದ್ದೆನೋ ಅದೇ ರೀತಿ ಈಗಲೂ ಸಿದ್ಧನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಮೋಶೆ ನನ್ನನ್ನು ಕಳುಹಿಸಿದ ದಿವಸದಲ್ಲಿ ನಾನು ಹೇಗೆ ಬಲಿಷ್ಠನಾಗಿ ಇದ್ದೆನೋ, ಹಾಗೆಯೇ ಈಗಲೂ ಬಲಿಷ್ಠನಾಗಿದ್ದೇನೆ. ನಾನು ಯುದ್ಧ ಮಾಡುವದಕ್ಕೂ ವಿಶೇಷ ಕಾರ್ಯಗಳನ್ನು ನಿರ್ವಹಿಸುವದಕ್ಕೂ ನನಗೆ ಆಗ ಇದ್ದ ಶಕ್ತಿಯ ಹಾಗೆಯೇ ಈಗಲೂ ಶಕ್ತಿಯುಳ್ಳವನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 14:11
7 ತಿಳಿವುಗಳ ಹೋಲಿಕೆ  

ಮೋಶೆ ಸಾಯುವಾಗ ನೂರಿಪ್ಪತ್ತು ವರ್ಷದವನಾಗಿದ್ದನು. ಅವನ ಕಣ್ಣು ಮೊಬ್ಬಾಗಲಿಲ್ಲ, ಅವನ ಜೀವಕಳೆ ಕುಂದಿಹೋಗಿರಲಿಲ್ಲ.


ಶ್ರೇಷ್ಠ ವರಗಳಿಂದ ನಿನ್ನ ಆಶೆಯನ್ನು ಪೂರ್ಣಗೊಳಿಸುತ್ತಾನೆ; ಹದ್ದಿಗೆ ಬರುವಂತೆಯೇ ನಿನಗೆ ಯೌವನವನ್ನು ತಿರುಗಿ ಬರಮಾಡುತ್ತಾನೆ.


ಅವನು ಅವರಿಗೆ, “ನಾನು ಈಗ ನೂರಿಪ್ಪತ್ತು ವರ್ಷದವನಾಗಿದ್ದೇನೆ; ವಿಶೇಷವಾದ ಕಾರ್ಯಗಳನ್ನು ನಿರ್ವಹಿಸುವುದು ಇನ್ನು ನನ್ನಿಂದಾಗದು. ಯೆಹೋವನು ನನಗೆ, ‘ನೀನು ಈ ಯೊರ್ದನ್ ನದಿಯನ್ನು ದಾಟಬಾರದು’ ಎಂದು ಆಜ್ಞಾಪಿಸಿದ್ದಾನೆ.


ನಮ್ಮ ಆಯುಷ್ಕಾಲವು ಎಪ್ಪತ್ತು ವರ್ಷ, ಬಲ ಹೆಚ್ಚಿದರೆ ಎಂಭತ್ತು; ಕಷ್ಟಸಂಕಟಗಳೇ ಅದರ ಆಡಂಬರ. ಅದು ಬೇಗನೆ ಗತಿಸಿಹೋಗುತ್ತದೆ; ನಾವು ಹಾರಿ ಹೋಗುತ್ತೇವೆ.


ಯೆಹೋವನು ಈ ಮಾತುಗಳನ್ನು ಮೋಶೆಗೆ ಹೇಳಿದಂದಿನಿಂದ ಇಸ್ರಾಯೇಲ್ಯರು ಅರಣ್ಯದಲ್ಲಿ ಅಲೆಯುತ್ತಿದ್ದ ವರ್ಷಗಳು ಸೇರಿ ನಲ್ವತ್ತೈದು ವರ್ಷಗಳು ದಾಟಿದವು. ಯೆಹೋವನು ತಾನು ನುಡಿದಂತೆಯೇ ಈ ಕಾಲವೆಲ್ಲಾ ನನ್ನನ್ನು ಜೀವದಿಂದುಳಿಸಿದ್ದಾನೆ. ಈಗ ನಾನು ಎಂಭತ್ತೈದು ವರ್ಷದವನಾಗಿದ್ದೇನೆ.


ನಿಮ್ಮ ಕೋಟೆಯ ಬಾಗಿಲುಗಳಿಗೆ ಕಬ್ಬಿಣದ ಮತ್ತು ತಾಮ್ರದ ಅಗುಳಿಗಳು ಇರಲಿ; ನೀವು ಇರುವವರೆಗೂ ನಿಮಗೆ ಬಲವಿರಲಿ” ಎಂದು ಹೇಳಿದನು.


ಯೆಹೋವನನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು; ಅವರು ಹದ್ದುಗಳಂತೆ ರೆಕ್ಕೆಗಳನ್ನು ಚಾಚಿಕೊಂಡು ಏರುವರು; ಅವರು ಓಡಿ ದಣಿಯರು, ನಡೆದು ಬಳಲರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು