ಯೆಹೋಶುವ 14:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಹೀಗಿರಲು ಯೆಹೋವನು ಆ ದಿನದಂದು ಸೂಚಿಸಿದಂತೆ ಈ ಪರ್ವತ ಪ್ರದೇಶವನ್ನು ನನಗೆ ಕೊಡು ಇದರಲ್ಲಿ ಉನ್ನತ ಪುರುಷರು (ಅನಾಕ್ಯರು) ಇರುತ್ತಾರೆ ಎಂದು ಈ ಪಟ್ಟಣಗಳು ದೊಡ್ಡದೂ, ಕೋಟೆಕೊತ್ತಲುಳ್ಳವುಗಳೂ ಆಗಿವೆ ಎಂದೂ ಆ ಕಾಲದಲ್ಲಿ ನೀನೇ ಕೇಳಿದ್ದೀಯಲ್ಲಾ. ಅವರೆಲ್ಲರನ್ನು ಓಡಿಸಿಬಿಡುವುದಕ್ಕೋಸ್ಕರ ಯೆಹೋವನು ತನ್ನ ಮಾತಿಗನುಸಾರವಾಗಿ ನನಗೆ ಸಹಾಯ ಮಾಡುವನೆಂದು ನಂಬಿಕೊಂಡಿದ್ದೇನೆ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಹೀಗಿರಲು ಸರ್ವೇಶ್ವರ ಆ ದಿನದಂದು ಸೂಚಿಸಿದಂತೆ ಈ ಮಲೆನಾಡನ್ನು ನನಗೆ ಕೊಡು. ‘ಇದರಲ್ಲಿ ಎತ್ತರದ ವ್ಯಕ್ತಿಗಳಿದ್ದಾರೆ, ದೊಡ್ಡ ದೊಡ್ಡ ನಗರಗಳಿವೆ, ಕೋಟೆಕೊತ್ತಲಗಳಿವೆ’ ಎಂದು ಆ ಕಾಲದಲ್ಲಿ ನೀನು ಕೇಳಿದ್ದುಂಟು. ಅವರೆಲ್ಲರನ್ನು ಓಡಿಸಿಬಿಡಲು ಸರ್ವೇಶ್ವರ ತಮ್ಮ ಮಾತಿಗನುಸಾರ ನನಗೆ ಸಹಾಯಮಾಡುವರೆಂಬ ನಂಬಿಕೆ ನನಗಿದೆ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಹೀಗಿರಲಾಗಿ ಯೆಹೋವನು ಆ ದಿನದಲ್ಲಿ ಸೂಚಿಸಿದಂಥ ಈ ಪರ್ವತಪ್ರದೇಶವನ್ನು ನನಗೆ ಕೊಡು. ಇದರಲ್ಲಿ ಉನ್ನತ ಪುರುಷರಿರುತ್ತಾರೆಂದೂ ಇದರ ಪಟ್ಟಣಗಳು ದೊಡ್ಡವೂ ಕೋಟೆಕೊತ್ತಲುಳ್ಳವುಗಳೂ ಆಗಿವೆ ಎಂದೂ ಆ ಕಾಲದಲ್ಲಿ ನೀನು ಕೇಳಿದಿಯಲ್ಲಾ. ಅವರೆಲ್ಲರನ್ನೂ ಓಡಿಸಿ ಬಿಡುವದಕ್ಕೋಸ್ಕರ ಯೆಹೋವನು ತನ್ನ ಮಾತಿಗನುಸಾರವಾಗಿ ನನಗೆ ಸಹಾಯ ಮಾಡುವನೆಂದು ನಿರೀಕ್ಷಿಸಿಕೊಂಡಿದ್ದೇನೆ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಆದ್ದರಿಂದ ಯೆಹೋವನು ನನಗೆ ಬಹಳ ಹಿಂದೆಯೇ ವಾಗ್ದಾನ ಮಾಡಿದ್ದ ಬೆಟ್ಟಪ್ರದೇಶವನ್ನು ಈಗ ನನಗೆ ಕೊಡು. ಬಲಿಷ್ಠರಾದ ಅನಾಕವಂಶಸ್ಥರು ವಾಸವಾಗಿರುವ ಆ ಪಟ್ಟಣಗಳು ಬಹಳ ದೊಡ್ಡದಾಗಿವೆಯೆಂದೂ ಸುಭದ್ರವಾದವುಗಳೆಂದೂ ನೀನು ಕೇಳಿರುವೆ. ಆದರೆ ಯೆಹೋವನು ನನ್ನೊಂದಿಗಿರುವುದರಿಂದ ಆತನು ಹೇಳಿದಂತೆಯೇ ಆ ಪ್ರದೇಶವನ್ನು ನಾನು ತೆಗೆದುಕೊಳ್ಳುತ್ತೇನೆ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಆದ್ದರಿಂದ ಯೆಹೋವ ದೇವರು ಆ ದಿವಸದಲ್ಲಿ ಹೇಳಿದ ಈ ಬೆಟ್ಟವನ್ನು ಈಗ ನನಗೆ ಕೊಡು; ಏಕೆಂದರೆ ಅಲ್ಲಿ ಅನಾಕ್ಯರು ಇದ್ದಾರೆಂದೂ, ಗೋಡೆಗಳುಳ್ಳ ದೊಡ್ಡ ಪಟ್ಟಣಗಳುಂಟೆಂದೂ ನೀನು ಆ ದಿವಸದಲ್ಲಿ ಕೇಳಿದ್ದಿ. ಯೆಹೋವ ದೇವರು ಹೇಳಿದ ಪ್ರಕಾರವೇ ನಾನು ಅವರನ್ನು ಹೊರಡಿಸಲು ಯೆಹೋವ ದೇವರು ನನಗೆ ಸಹಾಯ ಮಾಡುವರೆಂದು ನಂಬಿಕೊಂಡಿದ್ದೇನೆ,” ಎಂದನು. ಅಧ್ಯಾಯವನ್ನು ನೋಡಿ |
ಆಸನು ತನ್ನ ದೇವರಾದ ಯೆಹೋವನಿಗೆ, “ಯೆಹೋವನೇ, ಬಲಿಷ್ಠನು ಬಲಹೀನನ ಮೇಲೆ ಬೀಳುವಲ್ಲಿ, ರಕ್ಷಿಸಲು ನಿನ್ನ ಹೊರತು ಬೇರಾರೂ ರಕ್ಷಿಸುವುದಿಲ್ಲ. ನಮ್ಮ ದೇವರಾದ ಯೆಹೋವನೇ, ನಮ್ಮನ್ನು ರಕ್ಷಿಸು. ನಿನ್ನಲ್ಲಿ ಭರವಸವಿಟ್ಟು ನಿನ್ನ ಹೆಸರಿನಲ್ಲಿ ಈ ಮಹಾಸಮೂಹಕ್ಕೆ ವಿರೋಧವಾಗಿ ಯುದ್ಧಕ್ಕೆ ಬಂದೆವಲ್ಲಾ. ಯೆಹೋವನೇ, ನಮ್ಮ ದೇವರು ನೀನು. ನರರು ನಿನ್ನೆದುರು ಗೆಲ್ಲಬಾರದು” ಎಂದು ಮೊರೆಯಿಡಲು.
ನಾವು ಹೋಗಬೇಕಾದ ಆ ಸೀಮೆ ಎಂಥದೆಂದು ಆಲೋಚಿಸಿರಿ; ಅಲ್ಲಿ ಹೋಗಿದ್ದ ನಮ್ಮ ಸಹೋದರರು ನಮಗೆ, ‘ಆ ದೇಶದ ಜನರು ನಮಗಿಂತ ಬಲಿಷ್ಠರಾಗಿಯೂ ಮತ್ತು ಎತ್ತರವಾಗಿಯೂ ಇದ್ದಾರೆ. ಅವರಿರುವ ಪಟ್ಟಣಗಳು ದೊಡ್ಡದಾಗಿಯೂ ಮತ್ತು ಆಕಾಶವನ್ನು ಮುಟ್ಟುವ ಕೋಟೆಕೊತ್ತಲುಗಳಿಂದ ಇವೆ. ಅಲ್ಲಿ ನಾವು ಎತ್ತರವಾದ ಪುರುಷರನ್ನು ಅಂದರೆ ಅನಾಕೀಮ್ ವಂಶಸ್ಥರ ಮಕ್ಕಳನ್ನು ನೋಡಿದ್ದೇವೆ’ ಎಂದು ಹೇಳಿ ನಮ್ಮ ಧೈರ್ಯವನ್ನು ಕೆಡಿಸಿದ್ದಾರೆ” ಅಂದುಕೊಳ್ಳುತ್ತಿದ್ದಿರಿ.
ಜೀವಸ್ವರೂಪನಾದ ದೇವರನ್ನು ದೂಷಿಸುವುದಕ್ಕಾಗಿ ತನ್ನ ಯಜಮಾನನಾದ ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ನಿಂದನೆಯ ಮಾತುಗಳನ್ನು, ನಿನ್ನ ದೇವರಾದ ಯೆಹೋವನು ಕೇಳಿರುವನು. ನಿನ್ನ ದೇವರಾದ ಯೆಹೋವನು ತಾನು ಹೇಳಿದ ಮಾತುಗಳ ನಿಮಿತ್ತ ಮುಯ್ಯಿತೀರಿಸುವನು. ಆದುದರಿಂದ ಉಳಿದಿರುವ ಸ್ವಲ್ಪ ಜನರಿಗಾಗಿಯಾದರೂ ಆತನನ್ನು ಪ್ರಾರ್ಥಿಸು ಎಂಬುದಾಗಿ ಹಿಜ್ಕೀಯನು ಹೇಳುತ್ತಾನೆ” ಎಂದು ಹೇಳಿರಿ ಅಂದನು.