ಯೆಹೋಶುವ 14:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಯೆಹೋಶುವನು ಗಿಲ್ಗಾಲಿನಲ್ಲಿದ್ದಾಗ ಯೆಹೂದ ಕುಲದವರು ಅವನ ಬಳಿಗೆ ಬಂದರು. ಅವರಲ್ಲಿ ಕೆನಿಜ್ಜೀಯನೂ ಯೆಫುನ್ನೆಯ ಮಗನೂ ಆದ ಕಾಲೇಬನು ಯೆಹೋಶುವನಿಗೆ “ಯೆಹೋವನು ಕಾದೇಶ್ ಬರ್ನೇಯದಲ್ಲಿ ನಮ್ಮಿಬ್ಬರ ವಿಷಯವಾಗಿ ದೇವರ ಮನುಷ್ಯನಾದ ಮೋಶೆಗೆ ಹೇಳಿದ್ದು ನಿನಗೆ ಚೆನ್ನಾಗಿ ಗೊತ್ತಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಯೆಹೋಶುವನು ಗಿಲ್ಗಾಲಿನಲ್ಲಿದ್ದಾಗ ಯೆಹೂದ ಕುಲದವರು ಅವನ ಬಳಿಗೆ ಬಂದರು. ಅವರಲ್ಲಿ ಕೆನೆಜ್ಜೀಯನೂ ಯೆಫುನ್ನೆಯ ಮಗನೂ ಆದ ಕಾಲೇಬನು ಯೆಹೋಶುವನಿಗೆ, “ಸರ್ವೇಶ್ವರ ಕಾದೇಶ್ ಬರ್ನೇಯದಲ್ಲಿ ನಮ್ಮಿಬ್ಬರ ವಿಷಯವಾಗಿ ದೇವರ ಭಕ್ತನಾದ ಮೋಶೆಗೆ ಹೇಳಿದ್ದು ನಿಮಗೆ ಚೆನ್ನಾಗಿ ಗೊತ್ತಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಯೆಹೋಶುವನು ಗಿಲ್ಗಾಲಿನಲ್ಲಿದ್ದಾಗ ಯೆಹೂದ ಕುಲದವರು ಅವನ ಬಳಿಗೆ ಬಂದರು. ಅವರಲ್ಲಿ ಕೆನಿಜ್ಜೀಯನೂ ಯೆಫುನ್ನೆಯ ಮಗನೂ ಆದ ಕಾಲೇಬನು ಅವನಿಗೆ - ಯೆಹೋವನು ಕಾದೇಶ್ ಬರ್ನೇಯದಲ್ಲಿ ನಮ್ಮಿಬ್ಬರ ವಿಷಯವಾಗಿ ದೇವರ ಮನುಷ್ಯನಾದ ಮೋಶೆಗೆ ಹೇಳಿದ್ದು ನಿನಗೆ ಗೊತ್ತಿರುವದಷ್ಟೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಒಂದು ದಿವಸ ಯೆಹೂದ ಕುಲದ ಕೆಲವರು ಗಿಲ್ಗಾಲಿನಲ್ಲಿದ್ದ ಯೆಹೋಶುವನ ಬಳಿಗೆ ಬಂದರು. ಅವರಲ್ಲಿ ಕನಿಜ್ಜೀಯನೂ ಯೆಫುನ್ನೆಯ ಮಗನೂ ಆದ ಕಾಲೇಬನು ಒಬ್ಬನಾಗಿದ್ದನು. ಕಾಲೇಬನು ಯೆಹೋಶುವನಿಗೆ, “ಕಾದೇಶ್‌ಬರ್ನೇಯದಲ್ಲಿ ಯೆಹೋವನು ತನ್ನ ಸೇವಕನಾದ ಮೋಶೆಯೊಂದಿಗೆ ನಮ್ಮಿಬ್ಬರ ವಿಷಯವಾಗಿ ಮಾತಾಡಿದ್ದು ನಿನಗೆ ನೆನಪಿದೆಯಷ್ಟೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಯೆಹೂದದ ಗೋತ್ರದವರು ಗಿಲ್ಗಾಲಿನಲ್ಲಿ ಯೆಹೋಶುವನ ಬಳಿಗೆ ಬಂದರು. ಆಗ ಕೆನಿಜ್ಜೀಯನಾದ ಯೆಫುನ್ನೆಯ ಮಗ ಕಾಲೇಬನು ಅವನಿಗೆ, “ಕಾದೇಶ್ ಬರ್ನೇಯದಲ್ಲಿ ಯೆಹೋವ ದೇವರು ನನ್ನನ್ನೂ, ನಿನ್ನನ್ನೂ ಕುರಿತು ದೇವರ ಮನುಷ್ಯನಾದ ಮೋಶೆಗೆ ಹೇಳಿದ ಮಾತನ್ನು ನೀನು ಬಲ್ಲೆ. ಅಧ್ಯಾಯವನ್ನು ನೋಡಿ |