Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 15:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅವನು “ಕಿರ್ಯತಸೇಫೆರನ್ನು ಹಿಡಿದುಕೊಳ್ಳವವನಿಗೆ ನನ್ನ ಮಗಳಾದ ಅಕ್ಷಾ ಎಂಬಾಕೆಯನ್ನು ಮದುವೆ ಮಾಡಿಕೊಡುತ್ತೇನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅವನು, “ಕಿರ್ಯತ್ ಸೇಫೆರದ ಮೇಲೆ ದಾಳಿಮಾಡಿ ಹಿಡಿದುಕೊಳ್ಳುವವನಿಗೆ ನನ್ನ ಮಗಳಾದ ಅಕ್ಷಾ ಎಂಬಾಕೆಯನ್ನು ಮದುವೆಮಾಡಿಕೊಡುತ್ತೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅವನು - ಕಿರ್ಯತ್‍ಸೇಫೆರನ್ನು ಹಿಡಿದುಕೊಳ್ಳುವವನಿಗೆ ನನ್ನ ಮಗಳಾದ ಅಕ್ಷಾ ಎಂಬಾಕೆಯನ್ನು ಮದುವೆಮಾಡಿ ಕೊಡುತ್ತೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಕಾಲೇಬನು, “ನಾನು ಕಿರ್ಯತ್ ಸೇಫೇರಿನ ಮೇಲೆ ಧಾಳಿ ಮಾಡಲಿಚ್ಛಿಸುತ್ತೇನೆ. ಆ ನಗರದ ಮೇಲೆ ಧಾಳಿಮಾಡಿ ಅದನ್ನು ಗೆದ್ದುಕೊಟ್ಟವರಿಗೆ ನನ್ನ ಮಗಳಾದ ಅಕ್ಷಾಳನ್ನು ಮದುವೆಮಾಡಿ ಕೊಡುತ್ತೇನೆ” ಎಂದು ಸಾರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಅಲ್ಲಿ ಕಾಲೇಬನು, “ಕಿರ್ಯತ್ ಸೇಫೆರನ್ನು ದಾಳಿಮಾಡಿ ತೆಗೆದುಕೊಳ್ಳುವವನಿಗೆ ನನ್ನ ಮಗಳಾದ ಅಕ್ಸಾ ಎಂಬಾಕೆಯನ್ನು ಮದುವೆ ಮಾಡಿಕೊಡುತ್ತೇನೆ,” ಎಂದು ಹೇಳಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 15:16
6 ತಿಳಿವುಗಳ ಹೋಲಿಕೆ  

ಅದೋನೀಬೆಜೆಕನು ಓಡಿಹೋಗಲು ಅವನನ್ನು ಹಿಂದಟ್ಟಿ ಹಿಡಿದು ಅವನ ಕೈಕಾಲುಗಳ ಹೆಬ್ಬೆರಳುಗಳನ್ನು ಕತ್ತರಿಸಿಬಿಟ್ಟರು.


ಆನಂತರ ಅವನು ಹೊರಟು ಕಿರ್ಯತಸೇಫೆರ್ ಎನ್ನಿಸಿಕೊಳ್ಳುತ್ತಿದ್ದ ದೆಬೀರಿನ ನಿವಾಸಿಗಳೊಡನೆ ಯುದ್ಧ ಮಾಡಿದನು.


ಕೆನಜನ ಮಗನೂ ಕಾಲೇಬನ ತಮ್ಮನೂ ಆದ ಒತ್ನೀಯೇಲನು ಅದನ್ನು ವಶಪಡಿಸಿಕೊಂಡನು. ಅವನಿಗೆ ಕಾಲೇಬನ ಮಗಳಾದ ಅಕ್ಷಾಳನ್ನು ಮದುವೆಮಾಡಿಕೊಟ್ಟನು.


ಅವರು, “ಇಸ್ರಾಯೇಲ್ಯರಾದ ನಮ್ಮನ್ನು ಹೀಯಾಳಿಸುವುದಕ್ಕೋಸ್ಕರ ಬಂದಿರುವ ಈ ಮನುಷ್ಯನನ್ನು ಕಂಡಿರಾ? ಯಾವನು ಇವನನ್ನು ಕೊಲ್ಲುವನೋ ಅಂಥವನಿಗೆ ಅರಸನು ಅಪಾರದ್ರವ್ಯದೊಡನೆ ತನ್ನ ಮಗಳನ್ನು ಕೊಟ್ಟು ಮದುವೆ ಮಾಡುವನು. ಇದಲ್ಲದೆ ಅವನ ತಂದೆಯ ಕುಟುಂಬವನ್ನು ಎಲ್ಲಾ ತೆರಿಗೆಯಿಂದ ವಿಮೋಚಿಸುವನು” ಎಂದು ಮಾತನಾಡಿಕೊಳ್ಳುತ್ತಿದ್ದರು.


ಇವಳಲ್ಲಿ ಮದ್ಮನ್ನದವರ ಮೂಲಪುರುಷನಾದ ಶಾಫ್; ಮಕ್ಬೇನಾ ಮತ್ತು ಗಿಬ್ಯ ಪಟ್ಟಣದವರ ಮೂಲಪುರುಷನಾದ ಶೆವ ಇವರು ಹುಟ್ಟಿದರು. ಕಾಲೇಬನ ಮಗಳು ಅಕ್ಷಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು