ಇದಲ್ಲದೆ ಉಪ್ಪಿನ ತಗ್ಗಿನಲ್ಲಿ ಎದೋಮ್ಯರ ಹತ್ತು ಸಾವಿರ ಮಂದಿ ಸೈನಿಕರನ್ನು ಸದೆಬಡಿದು, ಅವರಿಂದ ಸೆಲ ದುರ್ಗವನ್ನು ಕಿತ್ತುಕೊಂಡು ಅದಕ್ಕೆ ಯೊಕ್ತೆಯೇಲ್ ಎಂಬ ಹೆಸರಿಟ್ಟನು. ಅದಕ್ಕೆ ಇಂದಿನವರೆಗೂ ಇದೇ ಹೆಸರಿರುತ್ತದೆ.
ಮತ್ತು ಯೆಹೋವನ ಮುಂದೆ ಸಭೆ ಸೇರಿದಾಗ, ಬಾರದೆ ಇದ್ದಂಥ ಇಸ್ರಾಯೇಲರು ಯಾರಾರೆಂದು ವಿಚಾರಮಾಡಿದರು. ಯಾಕೆಂದರೆ ಮಿಚ್ಪೆಯಲ್ಲಿ, “ಯೆಹೋವನ ಸನ್ನಿಧಿಗೆ ಬಾರದವರನ್ನು ಕೊಂದು ಹಾಕುವೆವು” ಎಂದು ಆಣೆಯಿಟ್ಟು ಪ್ರಮಾಣಮಾಡಿದ್ದರು.
ದಾನ್ ಪಟ್ಟಣದಿಂದ ಬೇರ್ಷೆಬದವರೆಗಿರುವ ಪ್ರಾಂತ್ಯಗಳಲ್ಲಿಯೂ, ಗಿಲ್ಯಾದಿನಲ್ಲಿಯೂ ಇರುವ ಇಸ್ರಾಯೇಲರೆಲ್ಲರೂ ಏಕಮನಸ್ಸಿನಿಂದ ಹೊರಟು ಮಿಚ್ಪೆಗೆ ಬಂದು ಯೆಹೋವನ ಸನ್ನಿಧಿಯಲ್ಲಿ ಸಭೆ ಸೇರಿದರು.