Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 15:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಐಗುಪ್ತದ ಹಳ್ಳಕ್ಕೆ ಬಂದು ಸಮುದ್ರತೀರವನ್ನು ಸೇರುವುದು. ಇದು ಅದರ ತೆಂಕಣ ಮೇರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅಲ್ಲಿಂದ ಕಾದೇಶ್ ಬರ್ನೇಯದ ದಕ್ಷಿಣ ಮಾರ್ಗವಾಗಿ ಹೆಚ್ರೋನಿಗೂ ಅಲ್ಲಿಂದ ಏರುತ್ತಾ ಅದ್ದಾರಿಗೂ ಹೋಗಿ ಕರ್ಕದ ಕಡೆಗೆ ತಿರುಗಿಕೊಳ್ಳುತ್ತದೆ. ಅಚ್ಮೋನಿನ ಮೇಲೆ ಈಜಿಪ್ಟಿನ ನದಿಗೆ ಬಂದು ಸಮುದ್ರತೀರದಲ್ಲಿ ಮುಕ್ತಾಯಗೊಳ್ಳುತ್ತದೆ. ಇದು ಅದರ ತೆಂಕಣ ಎಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅಚ್ಮೋನಿನ ಮೇಲೆ ಐಗುಪ್ತದ ಹಳ್ಳಕ್ಕೆ ಬಂದು ಸಮುದ್ರತೀರದಲ್ಲಿ ಮುಗಿಯುವದು. ಇದು ಅದರ ತೆಂಕಣ ಮೇರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆ ಸೀಮೆಯು ಈಜಿಪ್ಟಿನ ಅಚ್ಮೋನಿನ ಹಳ್ಳಕ್ಕೆ ಮುಂದುವರೆದು ಮೆಡಿಟರೆನಿಯನ್ ಸಮುದ್ರದವರೆಗೆ ಹಬ್ಬಿತ್ತು. ಈ ಭೂಮಿಯೆಲ್ಲಾ ಅವರ ದಕ್ಷಿಣ ಸೀಮೆಯಲ್ಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅಲ್ಲಿಂದ ಈಜಿಪ್ಟನ ಅಚ್ಮೋನ ನದಿಗೆ ಬಂದು ಮೆಡಿಟೆರಿಯನ್ ಸಮುದ್ರದವರೆಗೆ ಹೋಗಿ ಸೇರುವುದು. ಇದೇ ಯೆಹೂದದ ದಕ್ಷಿಣ ಮೇರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 15:4
8 ತಿಳಿವುಗಳ ಹೋಲಿಕೆ  

ಅಚ್ಮೋನಿನಿಂದ ಐಗುಪ್ತ ದೇಶದ ಹಳ್ಳಕ್ಕೆ ಬಂದು ಸಮುದ್ರದ ದಡದಲ್ಲಿ ಮುಗಿಯಬೇಕು.


ಗಾಜಾ, ಅಷ್ಡೋದ್, ಅಷ್ಕೆಲೋನ್, ಗತೂರು, ಎಕ್ರೋನ್ ಎಂಬ ಪಟ್ಟಣಗಳ ಐದು ಮಂದಿ ಫಿಲಿಷ್ಟಿಯ ಪ್ರಭುಗಳ ಸ್ವಾಧೀನದಲ್ಲಿದ್ದ ಫಿಲಿಷ್ಟಿಯ ಪ್ರಾಂತ್ಯ; ಗೆಷೂರ್ಯರ ಸೀಮೆಯು,


ಕೆಂಪುಸಮುದ್ರದಿಂದ ಫಿಲಿಷ್ಟಿಯರ ದೇಶದ ಬಳಿಯಲ್ಲಿರುವ ಸಮುದ್ರದವರೆಗೂ ಮತ್ತು ಈ ಅರಣ್ಯದಿಂದ ಯೂಫ್ರೆಟಿಸ್ ಮಹಾನದಿಯವರೆಗೂ ಇರುವ ದೇಶವನ್ನೆಲ್ಲಾ ನಿಮಗಾಗಿ ನೇಮಿಸಿ ಅದರಲ್ಲಿರುವ ನಿವಾಸಿಗಳನ್ನು ನಿಮಗೆ ಅಧೀನಪಡಿಸುವೆನು. ನೀವು ಅವರನ್ನು ಹೊರಡಿಸುವಿರಿ.


ಆ ದಿನದಲ್ಲಿ ಯೆಹೋವನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು, “ಐಗುಪ್ತ ದೇಶದ ನದಿಯಿಂದ ಯೂಫ್ರೆಟಿಸ್ ಮಹಾ ನದಿಯವರೆಗೂ ಇರುವ ಈ ದೇಶವನ್ನೆಲ್ಲಾ ನಿನ್ನ ಸಂತತಿಯವರಿಗೆ ಕೊಟ್ಟಿದ್ದೇನೆ.


ಅಕ್ರಬ್ಬೀಮ್ ಕಣಿವೆಯ ದಕ್ಷಿಣ ಮಾರ್ಗವಾಗಿ ಚಿನಿಗೆ ಹೋಗುತ್ತದೆ. ಅಲ್ಲಿಂದ ಕಾದೇಶ್ ಬರ್ನೇಯದ ದಕ್ಷಿಣ ಮಾರ್ಗವಾಗಿ ಹೆಚ್ರೋನಿಗೂ ಅಲ್ಲಿಂದ ಏರುತ್ತಾ ಅದ್ದಾರಿಗೂ ಹೋಗಿ ಕರ್ಕದ ಕಡೆಗೆ ತಿರುಗಿಕೊಳ್ಳುತ್ತದೆ ಅಚ್ಮೋನಿನ ಮೇಲೆ,


ಮತ್ತು ಅಷ್ಡೋದ್ ಸಂಸ್ಥಾನ ಮತ್ತು ಅದರ ಗ್ರಾಮ ಪಟ್ಟಣಗಳು; ಗಾಜಾ ಸಂಸ್ಥಾನ ಹಾಗೂ ಐಗುಪ್ತ ನದಿಯ ಹತ್ತಿರದಲ್ಲಿ ಮತ್ತು ಮಹಾಸಾಗರದ ತೀರದಲ್ಲಿ ಇರುವ ಅದರ ಎಲ್ಲಾ ಗ್ರಾಮ, ಪಟ್ಟಣಗಳು.


ಈ ರೀತಿಯಾಗಿ ಸೊಲೊಮೋನನು ಹಮಾತ್ ಪಟ್ಟಣದ ದಾರಿಯಿಂದ ಐಗುಪ್ತದ ಹಳ್ಳದ ವರೆಗಿರುವ ಪ್ರಾಂತ್ಯಗಳಿಂದ ಮಹಾ ಸಮೂಹವಾಗಿ ಕೂಡಿಬಂದಿದ್ದ ಎಲ್ಲಾ ಇಸ್ರಾಯೇಲರೂ ಎರಡು ವಾರ ಅಂದರೆ ಹದಿನಾಲ್ಕು ದಿನಗಳ ವರೆಗೆ ತಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಹಬ್ಬಮಾಡಿದರು.


ಇಸ್ರಾಯೇಲರೇ, ತುಂಬಿತುಳುಕುವ ಯೂಫ್ರೆಟಿಸ್ ನದಿಯಿಂದ ಐಗುಪ್ತ ದೇಶದ ನದಿಯವರೆಗೆ ಯೆಹೋವನು ತೆನೆಗಳನ್ನು ಒಕ್ಕುವ ದಿನವು ಬರುತ್ತದೆ; ಆಗ ನಿಮ್ಮನ್ನು ಒಬ್ಬೊಬ್ಬರನ್ನಾಗಿ ಆರಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು