Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 17:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಯೆಹೋಶುವನು ಅವರಿಗೆ, “ಮಹಾಜನಾಂಗವಾದ ನಿಮಗೆ ಎಫ್ರಾಯೀಮ್ ಬೆಟ್ಟದ ಸೀಮೆ ಸಾಲದಿದ್ದರೆ ಪೆರಿಜ್ಜೀಯರ ಮತ್ತು ರೆಫಾಯರ ಸೀಮೆಗಳಿಗೆ ಹೋಗಿ ಅಲ್ಲಿನ ಕಾಡು ಕಡಿದು ಸ್ಥಳಮಾಡಿಕೊಳ್ಳಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅದಕ್ಕೆ ಯೆಹೋಶುವನು, “ಮಹಾಜನಾಂಗವಾದ ನಿಮಗೆ ಎಫ್ರಯಿಮ್ ಮಲೆನಾಡು ಸಾಲದಿದ್ದರೆ ಪೆರಿಜ್ಜೀಯರ ಮತ್ತು ರೆಫಾಯರ ನಾಡುಗಳಿಗೆ ಹೋಗಿ ಅಲ್ಲಿನ ಕಾಡು ಕಡಿದು ಸ್ಥಳ ಮಾಡಿಕೊಳ್ಳಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಯೆಹೋಶುವನು ಅವರಿಗೆ - ಮಹಾಜನಾಂಗವಾದ ನಿಮಗೆ ಎಫ್ರಾಯೀಮ್ ಬೆಟ್ಟದ ಸೀಮೆ ಸಾಲದಿದ್ದರೆ ಪೆರಿಜ್ಜೀಯರ ಮತ್ತು ರೆಫಾಯರ ಸೀಮೆಗಳಿಗೆ ಹೋಗಿ ಅಲ್ಲಿನ ಕಾಡು ಕಡಿದು ಸ್ಥಳಮಾಡಿಕೊಳ್ಳಿರಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಯೆಹೋಶುವನು, “ನಿಮ್ಮಲ್ಲಿ ಬಹಳ ಜನರಿದ್ದರೆ ಬೆಟ್ಟಪ್ರದೇಶಕ್ಕೆ ಹೋಗಿ ಆ ಭೂಮಿಯನ್ನು ತೆಗೆದುಕೊಳ್ಳಿರಿ. ಆ ಭೂಮಿಯು ಈಗ ಪೆರಿಜ್ಜೀಯರ ಮತ್ತು ರೆಫಾಯರ ಸ್ವತ್ತಾಗಿದೆ. ನಿಮಗೆ ಕೊಟ್ಟಿರುವ ಎಫ್ರಾಯೀಮ್ ಬೆಟ್ಟಪ್ರದೇಶವು ಚಿಕ್ಕದೆನಿಸಿದರೆ ಹೋಗಿ ಆ ಭೂಮಿಯನ್ನು ತೆಗೆದುಕೊಳ್ಳಿರಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅದಕ್ಕೆ ಯೆಹೋಶುವನು ಉತ್ತರವಾಗಿ ಅವರಿಗೆ, “ನೀವು ಹೆಚ್ಚು ಜನರಾಗಿದ್ದರೆ ಮತ್ತು ನಿಮಗೆ ಎಫ್ರಾಯೀಮ್ ಪರ್ವತವು ಸಾಲದಿದ್ದರೆ, ನೀವು ಪೆರಿಜೀಯರ ಮತ್ತು ರೆಫಾಯರ ನಾಡುಗಳಿಗೆ ಹೋಗಿ ಅಲ್ಲಿನ ಕಾಡನ್ನು ಕಡಿದು ನಿಮಗೆ ಸ್ಥಳಮಾಡಿಕೊಳ್ಳಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 17:15
12 ತಿಳಿವುಗಳ ಹೋಲಿಕೆ  

ಹದಿನಾಲ್ಕನೆಯ ವರ್ಷದಲ್ಲಿ ಕೆದೊರ್ಲಗೋಮರನೂ ಅವನಿಗೆ ಸೇರಿದ್ದ ರಾಜರೂ ಬಂದು ಅಷ್ಟರೋತ್ ಕರ್ನಯಿಮಿನಲ್ಲಿ ರೆಫಾಯರನ್ನೂ ಹಾಮಿನಲ್ಲಿ ಜೂಜ್ಯರನ್ನೂ ಶಾವೆಕಿರ್ಯಾತಯಿಮಿನಲ್ಲಿ ಏಮಿಯರನ್ನೂ ಸೋಲಿಸಿದರು.


ಅವರಿಬ್ಬರ ಆಸ್ತಿ ಬಹಳವಾಗಿದ್ದುದರಿಂದ ಅವರು ಒಟ್ಟಿಗೆ ವಾಸವಾಗಿರುವುದು ಅಸಾಧ್ಯವಾಯಿತು. ಇದರಿಂದ ಅಬ್ರಾಮನ ದನ ಕಾಯುವವರಿಗೂ ಲೋಟನ ದನ ಕಾಯುವವರಿಗೂ ಜಗಳವಾಗುತ್ತಿತ್ತು. ಇದಲ್ಲದೆ ಕಾನಾನ್ಯರೂ ಪೆರಿಜೀಯರೂ ಆ ಕಾಲದಲ್ಲಿ ದೇಶದೊಳಗೆ ವಾಸವಾಗಿದ್ದರು.


ತಿಳಿಯದೆ ಅಜಾಗರೂಕನಾಗಿದ್ದರೆ ಕಡಿಮೆ ಶಿಕ್ಷೆಗೆ ಗುರಿಯಾಗುತ್ತಾನೆ. ಯಾವನಿಗೆ ಬಹಳವಾಗಿ ಕೊಡಲ್ಪಟ್ಟಿದೆಯೋ ಅವನ ಕಡೆಯಿಂದ ಬಹಳವಾಗಿ ನಿರೀಕ್ಷಿಸಲ್ಪಡುವುದು. ಇದಲ್ಲದೆ ಯಾವನ ವಶಕ್ಕೆ ಬಹಳವಾಗಿ ಒಪ್ಪಿಸಿದೆಯೋ ಅವನ ಕಡೆಯಿಂದ ಇನ್ನೂ ಹೆಚ್ಚಾಗಿ ಕೇಳಲ್ಪಡುವುದು.


ಇದಾದನಂತರ ಪ್ರಧಾನಪುರುಷರು ನನ್ನ ಬಳಿಗೆ ಬಂದು, “ಇಸ್ರಾಯೇಲರಲ್ಲಿ ಸಾಧಾರಣಜನರೂ, ಯಾಜಕರೂ, ಲೇವಿಯರೂ, ಕಾನಾನ್ಯರು, ಹಿತ್ತಿಯರು, ಪೆರಿಜ್ಜೀಯರು, ಯೆಬೂಸಿಯರು, ಅಮ್ಮೋನಿಯರು, ಮೋವಾಬ್ಯರು, ಐಗುಪ್ತ್ಯರು ಮತ್ತು ಅಮೋರಿಯರು ಎಂಬ ಅನ್ಯ ದೇಶಗಳವರ ಬಳಿಕೆಯನ್ನು ತೊರೆಯದೆ ಅವರ ಅಸಹ್ಯಕಾರ್ಯಗಳನ್ನು ಅನುಸರಿಸಿದ್ದಾರೆ.


ಫಿಲಿಷ್ಟಿಯರು ಇನ್ನೊಮ್ಮೆ ಹೊರಟು ಬಂದು ರೆಫಾಯೀಮ್ ತಗ್ಗಿನಲ್ಲಿ ಇಳಿದುಕೊಂಡರು.


ಫಿಲಿಷ್ಟಿಯರು ದೇಶದೊಳಗೆ ನುಗ್ಗಿ ರೆಫಾಯೀಮ್ ತಗ್ಗಿಗೆ ಬಂದು ಅಲ್ಲಿ ಪಾಳೆಯಮಾಡಿಕೊಂಡಿದ್ದರು.


ನಾನು, ನಿನಗಿಂತ ಮುಂದಾಗಿ ಒಬ್ಬ ದೂತನನ್ನು ಕಳುಹಿಸಿ ಕಾನಾನ್ಯರನ್ನು, ಅಮೋರಿಯರನ್ನು, ಹಿತ್ತಿಯರನ್ನು, ಪೆರಿಜೀಯರನ್ನು, ಹಿವ್ವಿಯರನ್ನು ಹಾಗು ಯೆಬೂಸಿಯರನ್ನು ಹೊರದೂಡುವೆನು.


ಹಿತ್ತಿಯರೂ, ಪೆರಿಜೀಯರೂ, ರೆಫಾಯರೂ,


ಆದರೆ ಯೋಸೇಫನ ಸಂತಾನದವರು ಯೆಹೋಶುವನಿಗೆ, “ನೀನು ಚೀಟು ಹಾಕಿ, ನಮಗೆ ಒಂದೇ ಭಾಗವನ್ನು ಕೊಟ್ಟದ್ದೇಕೆ? ಯೆಹೋವನು ನಮ್ಮನ್ನು ಇಂದಿನವರೆಗೂ ಆಶೀರ್ವದಿಸಿರುವುದರಿಂದ ನಾವು ಮಹಾಜನಾಂಗವಾಗಿದ್ದೇವಲ್ಲಾ?” ಎಂದು ಹೇಳಲು


ಅವರು ತಿರುಗಿ ಯೆಹೋಶುವನಿಗೆ, “ನಮ್ಮ ಪರ್ವತ ಪ್ರದೇಶವು ನಮಗೆ ಸಾಲುವುದಿಲ್ಲ. ಬೇತಷೆಯಾನ್ ಮತ್ತು ಅದಕ್ಕೆ ಸೇರಿದ ಊರುಗಳಿರುವ ಕಣಿವೆಯಲ್ಲೂ ಹಾಗೂ ಇಜ್ರೇಲಿನ ಕಣಿವೆಯಲ್ಲೂ ವಾಸಮಾಡುವ ಕಾನಾನ್ಯರೆಲ್ಲರೂ ಕಬ್ಬಿಣದ ರಥವುಳ್ಳವರು” ಎಂದರು


ಅನಂತರ ಸೈನಿಕರು ಇಸ್ರಾಯೇಲರಿಗೆ ವಿರೋಧವಾಗಿ ಹೊರಟು ಬಯಲಿಗೆ ಬಂದರು. ಎಫ್ರಾಯೀಮಿನ ಕಾಡಿನಲ್ಲಿ ಯುದ್ಧವಾಯಿತು.


ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿ ಮೀಕನೆಂಬ ಒಬ್ಬ ಮನುಷ್ಯನಿದ್ದನು. ಅವನು ಒಂದು ದಿನ ತನ್ನ ತಾಯಿಗೆ, “ಅಮ್ಮಾ, ಕಳವಾಗಿದ್ದ ನಿನ್ನ ಸಾವಿರದ ನೂರು ರೂಪಾಯಿಗಳಿಗೋಸ್ಕರ ನೀನು ನನಗೆ ಕೇಳಿಸುವಂತೆ ಶಪಿಸಿದಿಯಲ್ಲಾ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು