Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 17:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅವರು ತಿರುಗಿ ಯೆಹೋಶುವನಿಗೆ, “ನಮ್ಮ ಪರ್ವತ ಪ್ರದೇಶವು ನಮಗೆ ಸಾಲುವುದಿಲ್ಲ. ಬೇತಷೆಯಾನ್ ಮತ್ತು ಅದಕ್ಕೆ ಸೇರಿದ ಊರುಗಳಿರುವ ಕಣಿವೆಯಲ್ಲೂ ಹಾಗೂ ಇಜ್ರೇಲಿನ ಕಣಿವೆಯಲ್ಲೂ ವಾಸಮಾಡುವ ಕಾನಾನ್ಯರೆಲ್ಲರೂ ಕಬ್ಬಿಣದ ರಥವುಳ್ಳವರು” ಎಂದರು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅವರು ಮತ್ತೆ ಯೆಹೋಶುವನಿಗೆ , “ನಮ್ಮ ಮಲೆನಾಡು ನಮಗೆ ಸಾಲುವುದಿಲ್ಲ. ಬೇತ್ ಷೆಯಾನ್ ಮತ್ತು ಅದಕ್ಕೆ ಸೇರಿದ ಊರುಗಳಿರುವ ಕಣಿವೆಯಲ್ಲೂ ಹಾಗೂ ಇಜ್ರೇಲಿನ ಕಣಿವೆಯಲ್ಲೂ ವಾಸಮಾಡುವ ಕಾನಾನ್ಯರೆಲ್ಲರು ಕಬ್ಬಿಣದ ರಥವುಳ್ಳವರು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅವರು ತಿರಿಗಿ ಯೆಹೋಶುವನಿಗೆ - ನಮ್ಮ ಪರ್ವತಪ್ರದೇಶವು ನಮಗೆ ಸಾಲುವದಿಲ್ಲ; ಬೇತ್‍ಷೆಯಾನ್ ಮತ್ತು ಅದಕ್ಕೆ ಸೇರಿದ ಊರುಗಳಿರುವ ತಗ್ಗಿನಲ್ಲಿಯೂ ಇಜ್ರೇಲಿನ ತಗ್ಗಿನಲ್ಲಿಯೂ ವಾಸಿಸುವ ಕಾನಾನ್ಯರೆಲ್ಲರಿಗೆ ಕಬ್ಬಿಣದ ರಥಗಳಿವೆ ಅನ್ನಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಯೋಸೇಫನ ಜನರು, “ಎಫ್ರಾಯೀಮ್ ಬೆಟ್ಟಪ್ರದೇಶವು ನಮಗೆ ಸಾಕಾಗುವುದಿಲ್ಲ ಎಂಬುದೇನೋ ನಿಜ. ಆದರೆ ಅಲ್ಲಿ ವಾಸಮಾಡುವ ಕಾನಾನ್ಯರಲ್ಲಿ ಬಲವಾದ ಆಯುಧಗಳಿವೆ; ಕಬ್ಬಿಣದ ರಥಗಳಿವೆ. ಇಜ್ರೇಲ್, ಬೇತ್‌ಷೆಯಾನ್ ಕಣಿವೆಗಳು ಮತ್ತು ಆ ಕ್ಷೇತ್ರದ ಎಲ್ಲ ಸಣ್ಣ ಹಳ್ಳಿಗಳು ಅವರ ಅಧೀನದಲ್ಲಿವೆ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಅದಕ್ಕೆ ಯೋಸೇಫನ ಸಂತತಿಯರು, “ಆ ಪರ್ವತವು ನಮಗೆ ಸಾಲದು. ಇದಲ್ಲದೆ ತಗ್ಗಿನ ಸೀಮೆಯಲ್ಲಿರುವ ಬೇತ್ ಷೆಯಾನ್‌ನಲ್ಲಿಯೂ ಇಜ್ರೆಯೇಲ್ ಕಣಿವೆಯಲ್ಲಿಯೂ ವಾಸಿಸಿರುವ ಸಮಸ್ತ ಕಾನಾನ್ಯರ ಬಳಿಯಲ್ಲಿ ಕಬ್ಬಿಣದ ರಥಗಳು ಇವೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 17:16
20 ತಿಳಿವುಗಳ ಹೋಲಿಕೆ  

ತಾಣಕ್ ಮತ್ತು ಮೆಗಿದ್ದೋ, ಚಾರೆತಾನಿನ ಬಳಿಯಲ್ಲಿಯೂ ಇಜ್ರೇಲಿನ ಕೆಳಗಣಭಾಗಗಳೂ, ಬೇತ್ ಷೆಯಾನಿನಿಂದ ಆಬೇಲ್ ಮೆಹೋಲದವರೆಗೂ ಇರುವಂಥ ಯೊಕ್ಮೆಯಾನಿನ ಆಚೆಗೆ ವಿಸ್ತರಿಸಿಕೊಂಡಿರುವಂಥ ಬೇತ್ ಷೆಯಾನಿನ ಎಲ್ಲಾ ಪ್ರದೇಶ ಇವುಗಳಿಗೆ ಅಹೀಲೂದನ ಮಗನಾದ ಬಾಣಾ ಅಧಿಪತಿಯಾಗಿದ್ದನು.


ಒಂಭೈನೂರು ಕಬ್ಬಿಣದ ರಥಗಳುಳ್ಳ ಇವನು ಇಸ್ರಾಯೇಲ್ಯರನ್ನು ಇಪ್ಪತ್ತು ವರ್ಷಗಳ ಕಾಲ ಕಠಿಣವಾಗಿ ಬಾಧಿಸುತ್ತಿರಲು ಅವರು ಯೆಹೋವನಿಗೆ ಮೊರೆಯಿಟ್ಟರು.


ಯೆಹೋವನು ಯೆಹೂದ್ಯರ ಸಂಗಡ ಇದ್ದುದರಿಂದ ಅವರು ಪರ್ವತಪ್ರದೇಶಗಳನ್ನೆಲ್ಲಾ ಸ್ವಾಧೀನಪಡಿಸಿಕೊಂಡರು. ಆದರೆ ತಗ್ಗಿನ ಪ್ರದೇಶಗಳಲ್ಲಿ ವಾಸಿಸುವವರಿಗೆ ಕಬ್ಬಿಣದ ರಥಗಳಿದ್ದುದರಿಂದ ಅವರನ್ನು ಹೊರಡಿಸುವುದಕ್ಕೆ ಆಗಲಿಲ್ಲ.


ಇಷ್ಟರಲ್ಲಿ ಮಿದ್ಯಾನ್ಯರೂ, ಅಮಾಲೇಕ್ಯರೂ, ಮೂಡಣದೇಶದವರೂ ಸೇರಿ ಹೊಳೆದಾಟಿ ಬಂದು ಇಜ್ರೇಲಿನ ತಗ್ಗಿನಲ್ಲಿ ಪಾಳೆಯಮಾಡಿಕೊಂಡರು.


ಆ ಬೆಟ್ಟದ ಸೀಮೆಯನ್ನು ನಿಮಗೆ ಕೊಟ್ಟಿರುತ್ತೇನೆ. ಅದರಲ್ಲಿ ಕಾಡುಗಳಿದ್ದರೂ ನೀವು ಅವುಗಳನ್ನು ಕಡಿದುಹಾಕಬಹುದು. ಅದಕ್ಕೆ ಸೇರಿರುವ ಬಯಲು ಭೂಮಿ ನಿಮ್ಮದೇ. ಕಾನಾನ್ಯರು ಬಲಿಷ್ಠರಾಗಿ ಕಬ್ಬಿಣದ ರಥಗಳುಳ್ಳವರಾಗಿದ್ದರೂ ನೀವು ಅವರನ್ನು ಹೊರದೂಡುವಿರಿ” ಎಂದು ಉತ್ತರ ಕೊಟ್ಟನು.


ಆಕೆಯ ಶವವು ಇಜ್ರೇಲಿನ ಹೊಲಕ್ಕೆ ಗೊಬ್ಬರವಾಗುವುದು. ಇದು ಈಜೆಬೆಲಳ ಶವವೆಂದು ಯಾರಿಗೂ ಗುರುತು ಸಿಕ್ಕದ ಹಾಗಾಗುವುದು” ಎಂದನು.


ಈಜೆಬೆಲಳ ಶವವು ಸಮಾಧಿಯನ್ನು ಸೇರುವುದಿಲ್ಲ. ನಾಯಿಗಳು ಅವಳ ಹೆಣವನ್ನು ಇಜ್ರೇಲಿನ ಹೊಲದಲ್ಲಿ ತಿಂದುಬಿಡುವವು’” ಎನ್ನುತ್ತಾನೆ ಎಂದು ಹೇಳಿ ಬಾಗಿಲನ್ನು ತೆರೆದು ಓಡಿಹೋದನು.


ಇದಲ್ಲದೆ ಆತನು ಈಜೆಬೆಲಳನ್ನು ಕುರಿತು, ‘ನಾಯಿಗಳು ಇಜ್ರೇಲ್ ಪಟ್ಟಣದ ಗೋಡೆಯ ಬಳಿಯಲ್ಲಿ ಆಕೆಯ ಶವವನ್ನು ತಿನ್ನುವವು.


ಅನಂತರ ಸಂಭವಿಸಿದ್ದೇನೆಂದರೆ, ಇಜ್ರೇಲಿನಲ್ಲಿ ಸಮಾರ್ಯದ ಅರಸನಾದ ಅಹಾಬನ ಅರಮನೆಯ ಹತ್ತಿರ ಇಜ್ರೇಲಿನವನಾದ ನಾಬೋತನೆಂಬ ಮನುಷ್ಯನ ದ್ರಾಕ್ಷಿತೋಟವಿತ್ತು.


ಯೆಹೋವನ ಹಸ್ತವು ಎಲೀಯನ ಸಂಗಡ ಇದ್ದುದರಿಂದ ಅವನು ನಡುಕಟ್ಟಿಕೊಂಡು ಅಹಾಬನ ಮುಂದೆ ಓಡುತ್ತಾ ಇಜ್ರೇಲನ್ನು ಸೇರಿದನು.


ಅವನು ತನ್ನ ಒಂಭೈನೂರು ಕಬ್ಬಿಣದ ರಥಗಳನ್ನೂ, ಎಲ್ಲಾ ಸೈನ್ಯವನ್ನೂ ತೆಗೆದುಕೊಂಡು ಅನ್ಯಜನರ ಹರೋಷೆತಿನಿಂದ ಕೀಷೋನ್ ಹಳ್ಳಕ್ಕೆ ಬಂದನು.


ಇಜ್ರೇಲ್, ಕೆಸುಲ್ಲೋತ್, ಶೂನೇಮ್,


ಇದಲ್ಲದೆ ಮನಸ್ಸೆಯವರಿಗೆ ಇಸ್ಸಾಕಾರ್, ಆಶೇರ್ ಎಂಬುವವರ ಪ್ರಾಂತ್ಯಗಳಲ್ಲಿ ಬೇತಷೆಯಾನ್, ಇಬ್ಲೆಯಾಮ, ದೋರ್ ಎಂಬ ಪಟ್ಟಣಗಳೂ ಅವುಗಳ ಗ್ರಾಮಗಳೂ ದುರ್ಗತ್ರಯವಾದ ಎಂದೋರ, ತಾನಾಕ್, ಮೆಗಿದ್ದೋ ಎಂಬ ಪಟ್ಟಣಗಳೂ ಅವುಗಳಿಗೆ ಸೇರಿದ ಊರುಗಳು ಸಿಕ್ಕಿದವು.


ಯೆಹೋಶುವನು ಅವರಿಗೆ, “ಮಹಾಜನಾಂಗವಾದ ನಿಮಗೆ ಎಫ್ರಾಯೀಮ್ ಬೆಟ್ಟದ ಸೀಮೆ ಸಾಲದಿದ್ದರೆ ಪೆರಿಜ್ಜೀಯರ ಮತ್ತು ರೆಫಾಯರ ಸೀಮೆಗಳಿಗೆ ಹೋಗಿ ಅಲ್ಲಿನ ಕಾಡು ಕಡಿದು ಸ್ಥಳಮಾಡಿಕೊಳ್ಳಿ” ಎಂದನು.


ಯೆಹೋಶುವನು ಯೋಸೇಫರಾದ ಎಫ್ರಾಯೀಮ್ ಹಾಗೂ ಮನಸ್ಸೆ ಕುಲಗಳ ಜನರಿಗೆ, “ನೀವು ಮಹಾಜನಾಂಗವೂ ಬಹು ಬಲವುಳ್ಳವರೂ ಆಗಿರುವುದು ನಿಜ. ನೀವು ಒಂದು ಭಾಗಕ್ಕಿಂತ ಹೆಚ್ಚು ತೆಗೆದುಕೊಳ್ಳಬಹುದಾಗಿದೆ.


ಸ್ವಲ್ಪ ಹೊತ್ತಿನಲ್ಲಿಯೇ ಆಕಾಶವು ಮೋಡಗಾಳಿಗಳಿಂದ ಕಪ್ಪಾಗಿ ದೊಡ್ಡ ಮಳೆಯು ಪ್ರಾರಂಭವಾಯಿತು. ಅಹಾಬನು ರಥದಲ್ಲಿ ಕುಳಿತುಕೊಂಡು ಇಜ್ರೇಲಿಗೆ ಹೋದನು.


ಆದುದರಿಂದ ಇಗೋ, ಶತ್ರುಗಳು ನನ್ನ ಅಪ್ಪಣೆಯ ಮೇರೆಗೆ ರಬ್ಬಾ ಎಂಬ ಅಮ್ಮೋನ್ಯರ ಪಟ್ಟಣದ ಮೇಲೆ ಬಿದ್ದು, ಯುದ್ಧ ಘೋಷಿಸುವ ದಿನಗಳು ಬರುವವು; ಆ ಪಟ್ಟಣವು ಹಾಳುದಿಬ್ಬವಾಗುವುದು; ಅದಕ್ಕೆ ಸೇರಿದ ಗ್ರಾಮಗಳು ಬೆಂಕಿಯಿಂದ ಸುಟ್ಟುಹೋಗುವವು; ಆಗ ಇಸ್ರಾಯೇಲು ತನ್ನನ್ನು ವಶಮಾಡಿಕೊಂಡವರನ್ನು ತಾನು ವಶಮಾಡಿಕೊಳ್ಳುವುದು. ಇದು ಯೆಹೋವನ ನುಡಿ.”


ಕರ್ಮೆಲ್, ಜೀಫ್, ಯುಟ್ಟಾ,


ಫಿಲಿಷ್ಟಿಯರು ತಮ್ಮ ಸೈನ್ಯವನ್ನು ಕೂಡಿಸಿಕೊಂಡು ಬಂದು ಅಫೇಕಿನಲ್ಲಿ ಪಾಳೆಯಮಾಡಿಕೊಂಡರು. ಇಸ್ರಾಯೇಲರು ಇಜ್ರೇಲಿನ ಬೈಲಿನಲ್ಲಿರುವ ಬುಗ್ಗೆಯ ಬಳಿಯಲ್ಲಿ ಇಳಿದುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು