Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 17:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಯೆಹೋಶುವನು ಯೋಸೇಫರಾದ ಎಫ್ರಾಯೀಮ್ ಹಾಗೂ ಮನಸ್ಸೆ ಕುಲಗಳ ಜನರಿಗೆ, “ನೀವು ಮಹಾಜನಾಂಗವೂ ಬಹು ಬಲವುಳ್ಳವರೂ ಆಗಿರುವುದು ನಿಜ. ನೀವು ಒಂದು ಭಾಗಕ್ಕಿಂತ ಹೆಚ್ಚು ತೆಗೆದುಕೊಳ್ಳಬಹುದಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಯೆಹೋಶುವನು ಜೋಸೆಫ್ಯರಾದ ಎಫ್ರಯಿಮ್ - ಮನಸ್ಸೆಕುಲದ ಆ ಜನರಿಗೆ, “ನೀವು ಮಹಾಜನಾಂಗ ಹಾಗೂ ಶಕ್ತಿಶಾಲಿಗಳೆಂಬುದೇನೋ ನಿಜ. ನೀವು ಒಂದು ಪಾಲಿಗಿಂತ ಹೆಚ್ಚು ತೆಗೆದುಕೊಳ್ಳಬಹುದಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅವನು ಯೋಸೇಫ್ಯರಾದ ಎಫ್ರಾಯೀಮ್ ಮನಸ್ಸೆ ಕುಲಗಳ ಜನರಿಗೆ - ನೀವು ಮಹಾಜನಾಂಗವೂ ಬಹುಬಲವುಳ್ಳವರೂ ಆಗಿರುವದು ನಿಜ; ನೀವು ಒಂದು ಭಾಗಕ್ಕಿಂತ ಹೆಚ್ಚು ತೆಗೆದುಕೊಳ್ಳಬಹುದಲ್ಲಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆಗ ಯೆಹೋಶುವನು ಯೋಸೇಫನ ಮನೆತನದವರಾದ ಎಫ್ರಾಯೀಮನ ಮತ್ತು ಮನಸ್ಸೆಯ ಜನರಿಗೆ, “ನೀವು ಬಹಳಷ್ಟು ಜನರಿದ್ದೀರಿ. ನೀವು ಬಹಳ ಶಕ್ತಿಶಾಲಿಗಳಾಗಿದ್ದೀರಿ. ಆದ್ದರಿಂದ ನೀವು ದೇಶದ ಒಂದು ಪಾಲಿಗಿಂತಲೂ ಹೆಚ್ಚು ಪಡೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆಗ ಯೆಹೋಶುವನು ಯೋಸೇಫನ ಮಕ್ಕಳಾದ ಎಫ್ರಾಯೀಮನಿಗೂ ಮನಸ್ಸೆಗೂ, “ನೀವು ಮಹಾಜನಾಂಗವೂ ಬಹು ಬಲವುಳ್ಳವರೂ ಆಗಿರುವಿರಿ. ಒಂದೇ ಭಾಗ ನಿಮಗೆ ಇರಬಾರದು. ಆದರೆ ಪರ್ವತವು ನಿಮ್ಮದಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 17:17
4 ತಿಳಿವುಗಳ ಹೋಲಿಕೆ  

ಅವರು ತಿರುಗಿ ಯೆಹೋಶುವನಿಗೆ, “ನಮ್ಮ ಪರ್ವತ ಪ್ರದೇಶವು ನಮಗೆ ಸಾಲುವುದಿಲ್ಲ. ಬೇತಷೆಯಾನ್ ಮತ್ತು ಅದಕ್ಕೆ ಸೇರಿದ ಊರುಗಳಿರುವ ಕಣಿವೆಯಲ್ಲೂ ಹಾಗೂ ಇಜ್ರೇಲಿನ ಕಣಿವೆಯಲ್ಲೂ ವಾಸಮಾಡುವ ಕಾನಾನ್ಯರೆಲ್ಲರೂ ಕಬ್ಬಿಣದ ರಥವುಳ್ಳವರು” ಎಂದರು


ಆ ಬೆಟ್ಟದ ಸೀಮೆಯನ್ನು ನಿಮಗೆ ಕೊಟ್ಟಿರುತ್ತೇನೆ. ಅದರಲ್ಲಿ ಕಾಡುಗಳಿದ್ದರೂ ನೀವು ಅವುಗಳನ್ನು ಕಡಿದುಹಾಕಬಹುದು. ಅದಕ್ಕೆ ಸೇರಿರುವ ಬಯಲು ಭೂಮಿ ನಿಮ್ಮದೇ. ಕಾನಾನ್ಯರು ಬಲಿಷ್ಠರಾಗಿ ಕಬ್ಬಿಣದ ರಥಗಳುಳ್ಳವರಾಗಿದ್ದರೂ ನೀವು ಅವರನ್ನು ಹೊರದೂಡುವಿರಿ” ಎಂದು ಉತ್ತರ ಕೊಟ್ಟನು.


ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿನ ರಾಮಾತಯಿಮ್ ಚೋಫೀಮ್ ಊರಿನಲ್ಲಿ ಎಲ್ಕಾನನೆಂಬ ಒಬ್ಬ ಮನುಷ್ಯನಿದ್ದನು. ಇವನು ಯೆರೋಹಾಮನ ಮಗನೂ ಎಲೀಹುವಿನ ಮೊಮ್ಮಗನೂ ತೋಹುವಿನ ಮರಿಮಗನೂ ಆಗಿದ್ದನು. ತೋಹು ಎಂಬವನು ಎಫ್ರಾಯೀಮ್ಯನಾದ ಚೂಫನ ಮಗನು.


ನನ್ನನ್ನು ಎಲ್ಲಾ ಕೇಡುಗಳಿಂದ ತಪ್ಪಿಸಿ ಕಾಪಾಡುತ್ತಾ ಬಂದ ದೂತನಾಗಿಯೂ ಇರುವಾತನು ಈ ಹುಡುಗರನ್ನು ಆಶೀರ್ವದಿಸಲಿ. ಇವರು ನನ್ನ ಹೆಸರನ್ನು, ನನ್ನ ಪೂರ್ವಿಕರಾದ ಅಬ್ರಹಾಮ ಇಸಾಕರ ಹೆಸರಿನಿಂದ ಇವರ ಹೆಸರುಗಳು ನೆಲೆಗೊಳ್ಳಲಿ, ಇವರು ಭೂಮಿಯ ಮೇಲೆ ಹೆಚ್ಚಿ ಬಹು ಸಂತಾನವನ್ನು ಪಡೆಯಲಿ” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು