ಯೆಹೋಶುವ 17:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಇವರು ಮಹಾಯಾಜಕನಾದ ಎಲ್ಲಾಜಾರ, ನೂನನ ಮಗನಾದ ಯೆಹೋಶುವ, ಹಾಗೂ ಕುಲಾಧಿಪತಿಗಳ ಬಳಿಗೆ ಬಂದು, “ನಮ್ಮ ಅಣ್ಣತಮ್ಮಂದಿರೊಡನೆ ನಮಗೂ ಪಾಲುಕೊಡಬೇಕೆಂದು ಯೆಹೋವನು ಮೋಶೆಗೆ ಆಜ್ಞಾಪಿಸಿದ್ದನಲ್ಲಾ?” ಎಂದು ಹೇಳಲು ಯೆಹೋಶುವನು ಯೆಹೋವನ ಅಪ್ಪಣೆಯಂತೆ ಅವರಿಗೆ ಅವರ ತಂದೆಯ ಅಣ್ಣತಮ್ಮಂದಿರ ಜೊತೆಗೆ ಸ್ವತ್ತನ್ನು ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಇವರು ಮಹಾಯಾಜಕನಾದ ಎಲ್ಲಾಜಾರ್, ನೂನನ ಮಗ ಯೆಹೋಶುವ ಹಾಗೂ ಕುಲಾಧಿಪತಿಗಳ ಬಳಿಗೆ ಬಂದು, “ನಮ್ಮ ಅಣ್ಣತಮ್ಮಂದಿರೊಡನೆ ನಮಗೂ ಪಾಲುಕೊಡಬೇಕೆಂದು ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದ್ದಾರಲ್ಲವೆ?” ಎಂದು ಹೇಳಿದರು. ಯೆಹೋಶುವನು ಸರ್ವೇಶ್ವರನ ಅಪ್ಪಣೆಯಂತೆ ಅವರಿಗೆ ಅವರ ತಂದೆಯ ಅಣ್ಣತಮ್ಮಂದಿರ ಜೊತೆಗೆ ಸೊತ್ತನ್ನು ಪಾಲಾಗಿಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಇವರು ಮಹಾಯಾಜಕನಾದ ಎಲ್ಲಾಜಾರ್, ನೂನನ ಮಗನಾದ ಯೆಹೋಶುವ, ಕುಲಾಧಿಪತಿಗಳು ಇವರ ಬಳಿಗೆ ಬಂದು - ನಮ್ಮ ಅಣ್ಣತಮ್ಮಂದಿರ ಮಧ್ಯದಲ್ಲಿ ನಮಗೆ ಪಾಲುಕೊಡಬೇಕೆಂದು ಯೆಹೋವನು ಮೋಶೆಗೆ ಆಜ್ಞಾಪಿಸಿದನಲ್ಲಾ ಎಂದು ಹೇಳಲು ಯೆಹೋಶುವನು ಯೆಹೋವನ ಅಪ್ಪಣೆಯಂತೆ ಅವರಿಗೆ ಅವರ ತಂದೆಯ ಅಣ್ಣತಮ್ಮಂದಿರ ಮಧ್ಯದಲ್ಲಿ ಸ್ವಾಸ್ತ್ಯವನ್ನು ಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಆ ಹೆಣ್ಣುಮಕ್ಕಳು ಯಾಜಕನಾದ ಎಲ್ಲಾಜಾರ್, ನೂನನ ಮಗನಾದ ಯೆಹೋಶುವ ಮತ್ತು ಇಸ್ರೇಲರ ನಾಯಕರ ಹತ್ತಿರ ಹೋಗಿ, “ಗಂಡುಮಕ್ಕಳಿಗೆ ಕೊಟ್ಟ ಹಾಗೆ ನಮಗೂ ಭೂಮಿಯನ್ನು ಕೊಡಬೇಕೆಂದು ಯೆಹೋವನು ಮೋಶೆಗೆ ಹೇಳಿದ್ದಾನೆ” ಅಂದರು. ಎಲ್ಲಾಜಾರನು ಯೆಹೋವನ ಆಜ್ಞೆಯನ್ನು ಪಾಲಿಸಿ ಆ ಹೆಣ್ಣುಮಕ್ಕಳಿಗೆ ಸ್ವಲ್ಪ ಭೂಮಿಯನ್ನು ಕೊಟ್ಟನು. ಹೀಗೆ ಈ ಹೆಣ್ಣುಮಕ್ಕಳು ಗಂಡುಮಕ್ಕಳಂತೆಯೇ ಭೂಮಿಯನ್ನು ಪಡೆದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಇವರು ಯಾಜಕನಾದ ಎಲಿಯಾಜರನ ಬಳಿಗೂ ನೂನನ ಮಗ ಯೆಹೋಶುವನ ಬಳಿಗೂ ಪ್ರಧಾನರುಗಳ ಬಳಿಗೂ ಬಂದು ಅವರಿಗೆ, “ನಮ್ಮ ಸಹೋದರರಲ್ಲಿ ನಮಗೂ ಸೊತ್ತನ್ನು ಕೊಡುವಂತೆ ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ್ದರು,” ಎಂದರು. ಆದ್ದರಿಂದ ಅವರ ತಂದೆಗಳ ಸಹೋದರರ ಜೊತೆಗೆ ಅವರಿಗೂ ಯೆಹೋವ ದೇವರ ವಾಕ್ಯದ ಪ್ರಕಾರ ಸೊತ್ತನ್ನು ಕೊಟ್ಟನು. ಅಧ್ಯಾಯವನ್ನು ನೋಡಿ |