Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 17:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಮನಸ್ಸೆಯವರ ಸ್ವತ್ತಿನ ಮೇರೆಯು ಆಶೇರ್ ಊರಿನಿಂದ ಶೆಕೆಮಿನ ಪೂರ್ವದಲ್ಲಿರುವ ಮಿಕ್ಮೆತಾತಿನ ಮೇಲೆ ದಕ್ಷಿಣದಲ್ಲಿರುವ ತಪ್ಪೂಹದ ಬುಗ್ಗೆಗೆ ಹೋಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಮನಸ್ಸೆಯವರ ಸೊತ್ತಿನ ಎಲ್ಲೆ ಆಶೇರ್ ಊರಿನಿಂದ ತೊಡಗಿ ಶೆಕೆಮಿನ ಪೂರ್ವದಲ್ಲಿ ಇರುವ ಮಿಕ್ಮೆತಾತಿನ ಮೇಲೆ ದಕ್ಷಿಣದಲ್ಲಿರುವ ತಪ್ಪೂಹದ ಬುಗ್ಗೆಗೆ ಹೋಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಮನಸ್ಸೆಯವರ ಸ್ವಾಸ್ತ್ಯದ ಮೇರೆಯು ಆಶೇರ್ ಊರಿನಿಂದ ತೊಡಗಿ ಶೆಕೆವಿುನ ಪೂರ್ವದಲ್ಲಿರುವ ವಿುಕ್ಮೆತಾತಿನ ಮೇಲೆ ದಕ್ಷಿಣದಲ್ಲಿರುವ ತಪ್ಪೂಹದ ಬುಗ್ಗೆಗೆ ಹೋಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಮನಸ್ಸೆ ಕುಲದವರ ಪ್ರದೇಶಗಳು ಆಶೇರ್ ಮತ್ತು ಶೆಕಮಿನ ಹತ್ತಿರವಿದ್ದ ಮಿಕ್ಮೆತಾತಿನ ಮಧ್ಯದಲ್ಲಿ ಬರುತ್ತವೆ. ಅದರ ಸೀಮೆಯು ದಕ್ಷಿಣದಲ್ಲಿ ಎನ್‌ತಪ್ಪೂಹ ಪ್ರದೇಶಕ್ಕೆ ಮುಟ್ಟುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಮನಸ್ಸೆಯ ಮೇರೆ, ಆಶೇರಿನಿಂದ ಶೆಕೆಮಿನ ಮುಂದಿರುವ ಮಿಕ್ಮೆತಾತಿನವರೆಗೂ ಇತ್ತು. ಅಲ್ಲಿಂದ ದಕ್ಷಿಣ ಕಡೆಯಿರುವ ಎನ್ ತಪ್ಪೂಹದ ನಿವಾಸಗಳಿಗೆ ಹೋಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 17:7
15 ತಿಳಿವುಗಳ ಹೋಲಿಕೆ  

ಎಫ್ರಾಯೀಮ್ಯರ ಸ್ವತ್ತಿನಿಂದ ಬೆಟ್ಟದಲ್ಲಿರುವ ಶೆಕೆಮ್ ಎಂಬ ಆಶ್ರಯ ನಗರ,


ಎಫ್ರಾಯೀಮ್ ಬೆಟ್ಟದಲ್ಲಿರುವ ಶೆಕೆಮ್ ಎಂಬ ಆಶ್ರಯ ನಗರ, ಗೆಜೆರ್ ಮತ್ತು ಅದರ ಉಪನಗರಗಳನ್ನೂ,


ಯಾರೊಬ್ಬಾಮನು ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿನ ಶೆಕೆಮ್ ಪಟ್ಟಣವನ್ನು ಭದ್ರಪಡಿಸಿ ಅಲ್ಲಿ ವಾಸಿಸಿದನು. ಅಲ್ಲಿಂದ ಪೆನೂವೇಲಿಗೆ ಹೋಗಿ ಅದನ್ನೂ ಭದ್ರಪಡಿಸಿದನು.


ರೆಹಬ್ಬಾಮನು ಶೆಕೆಮಿಗೆ ಹೋದನು. ಅಲ್ಲಿ ಎಲ್ಲಾ ಇಸ್ರಾಯೇಲರೂ ಅವನನ್ನು ಅರಸನನ್ನಾಗಿ ಮಾಡುವುದಕ್ಕೆ ಸೇರಿಬಂದಿದ್ದರು.


ಯೆರುಬ್ಬಾಳನ ಮಗನಾದ ಅಬೀಮೆಲೆಕನು ಶೆಕೆಮಿಗೆ ಹೋಗಿ ತನ್ನ ಸೋದರಮಾವಂದಿರಿಗೂ, ತಾಯಿಯ ಬಂಧುಗಳೆಲ್ಲರಿಗೂ ಹೇಳಿದ್ದೇನೆಂದರೆ,


ಇಸ್ರಾಯೇಲ್ಯರು ಐಗುಪ್ತದಿಂದ ತಂದ ಯೋಸೇಫನ ಎಲುಬುಗಳನ್ನು, ಯಾಕೋಬನು ಶೆಕೆಮಿನ ತಂದೆಯಾದ ಹಮೋರನ ಮಕ್ಕಳಿಂದ ನೂರು ವರಹಾ ಕೊಟ್ಟು ಕೊಂಡು ಕೊಂಡ ಶೆಕೆಮ್ ಊರಿನ ಹೊಲದಲ್ಲಿ ಹೂಣಿಟ್ಟರು. ಆ ಹೊಲವು ಯೋಸೇಫ್ಯರ ಸ್ವತ್ತಾಗಿತ್ತು.


ತರುವಾಯ ಯೆಹೋಶುವನು ಇಸ್ರಾಯೇಲ್ಯರ ಎಲ್ಲಾ ಕುಲದವರನ್ನು ಶೆಕೆಮಿನಲ್ಲಿ ಸಭೆ ಸೇರಿಸಿದನು. ಹಿರಿಯರು, ಪ್ರಧಾನರು, ನ್ಯಾಯಾಧಿಪತಿಗಳು, ಅಧಿಕಾರಿಗಳು ಬಂದು ದೇವರ ಸನ್ನಿಧಿಯಲ್ಲಿ ಕಾಣಿಸಿಕೊಂಡರು.


ಇಸ್ರಾಯೇಲ್ಯರು ನಫ್ತಾಲಿ ಕುಲದವರ ಪರ್ವತಪ್ರದೇಶವಾದ ಗಲಿಲಾಯ ಪ್ರಾಂತ್ಯದಲ್ಲಿನ ಕೆದೆಷ್, ಎಫ್ರಾಯೀಮ್ ಪರ್ವತ ಪ್ರದೇಶದಲ್ಲಿನ ಶೆಕೆಮ್ ಹಾಗೂ ಯೆಹೂದ್ಯರ ಬೆಟ್ಟದ ಸೀಮೆಯಲ್ಲಿ ಹೆಬ್ರೋನ್ ಅನ್ನಿಸಿಕೊಳ್ಳುವ ಕಿರ್ಯತರ್ಬ ಎಂಬ ಪಟ್ಟಣಗಳನ್ನು ನೇಮಿಸಿದರು.


ಇಸ್ರಾಯೇಲ್ಯನು ಅವನಿಗೆ, “ನೀನು ಶೆಕೆಮಿಗೆ ಹೋಗಿ ನಿನ್ನ ಅಣ್ಣಂದಿರ ಯೋಗ ಕ್ಷೇಮವನ್ನೂ, ಆಡುಕುರಿಗಳ ಹಿಂಡಿನ ಯೋಗ ಕ್ಷೇಮವನ್ನೂ ವಿಚಾರಿಸಿಕೊಂಡು ಬಾ” ಎಂದು ಅಪ್ಪಣೆ ಕೊಟ್ಟು, ಅವನನ್ನು ಹೆಬ್ರೋನ್ ಕಣಿವೆಯಿಂದ ಕಳುಹಿಸಲು ಯೋಸೇಫನು ಹೊರಟನು.


ಅವನ ಅಣ್ಣಂದಿರು ತಂದೆಯ ಆಡುಕುರಿ ಹಿಂಡುಗಳನ್ನು ಮೇಯಿಸುವುದಕ್ಕೆ ಶೆಕೆಮಿಗೆ ಹೋದರು.


ದೇಶಾಧಿಪತಿಯಾಗಿರುವ ಹಿವ್ವಿಯನಾದ ಹಮೋರನ ಮಗ ಶೆಕೆಮನು ಆಕೆಯನ್ನು ನೋಡಿ ತೆಗೆದುಕೊಂಡು ಹೋಗಿ ಮಾನಭಂಗಪಡಿಸಿದನು.


ಗಿಲ್ಯಾದ್ ಸೀಮೆಯು ಮನಸ್ಸೆಯ ಉಳಿದ ಗೋತ್ರಗಳಿಗೆ ಸಿಕ್ಕಿತು.


ತಪ್ಪೂಹ ಪಟ್ಟಣಕ್ಕೆ ಸೇರುವ ಭೂಮಿಯು ಮನಸ್ಸೆಯವರದು; ಆದರೆ ಅವರ ಮೇರೆಗೆ ಹೊಂದಿರುವ ತಪ್ಪೂಹ ಪಟ್ಟಣವು ಎಫ್ರಾಯೀಮ್ಯರದು;


ದೇವರು ತನ್ನ ಪವಿತ್ರಸ್ಥಳದಲ್ಲಿ ನುಡಿದಿದ್ದಾನೆ. ಜಯಘೋಷಮಾಡುವೆನು; ಶೆಖೆಮ್ ಪ್ರದೇಶವನ್ನು ಹಂಚುವೆನು. ಸುಖೋತ್ ಬಯಲನ್ನು ಅಳೆದುಕೊಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು