ಯೆಹೋಶುವ 18:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಅದರ ಮೇರೆಯ ಪಶ್ಚಿಮದ ಮೂಲೆಯಾಗಿರುವ ಈ ಬೆಟ್ಟದಿಂದ ಅದು ದಕ್ಷಿಣಕ್ಕೆ ತಿರುಗಿಕೊಂಡು ಕಿರ್ಯಾತ್ ಬಾಳ್ ಎನ್ನಿಸಿಕೊಳ್ಳುತ್ತಿದ್ದ ಯೆಹೂದ್ಯರ ಕಿರ್ಯಾತ್ಯಾರೀಮ್ ಎಂಬ ಪಟ್ಟಣದಲ್ಲಿ ಕೊನೆಗೊಳ್ಳುತ್ತದೆ. ಇದೇ ಅವರ ಪಡುವಣ ಮೇರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಈ ಎಲ್ಲೆಯ ಪಶ್ಚಿಮದ ಮೂಲೆಯಾಗಿರುವ ಈ ಬೆಟ್ಟದಿಂದ ಅದು ದಕ್ಷಿಣಕ್ಕೆ ತಿರುಗಿಕೊಂಡು, ಕಿರ್ಯತ್ ಬಾಳ್ ಎನಿಸಿಕೊಳ್ಳುತ್ತಿದ್ದ ಯೆಹೂದ್ಯರ ಕಿರ್ಯತ್ಯಾರೀಮ್ ಎಂಬ ನಗರದಲ್ಲಿ ಕೊನೆಗೊಳ್ಳುತ್ತದೆ. ಇದೇ ಅವರ ವಂಶಸ್ಥರ ಪಶ್ಚಿಮದ ಎಲ್ಲೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಮೇರೆಯ ಪಶ್ಚಿಮದ ಮೂಲೆಯಾಗಿರುವ ಈ ಬೆಟ್ಟದಿಂದ ಅದು ದಕ್ಷಿಣಕ್ಕೆ ತಿರುಗಿಕೊಂಡು ಕಿರ್ಯತ್‍ಬಾಳ್ ಅನ್ನಿಸಿಕೊಳ್ಳುತ್ತಿದ್ದ ಯೆಹೂದ್ಯರ ಕಿರ್ಯತ್ಯಾರೀಮ್ ಎಂಬ ಪಟ್ಟಣದಲ್ಲಿ ಮುಗಿಯುತ್ತದೆ. ಇದೇ ಅವರ ಪಡುವಣ ಮೇರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಬೇತ್‌ಹೋರೋನಿನ ದಕ್ಷಿಣದಲ್ಲಿರುವ ಬೆಟ್ಟದಿಂದ ಆ ಸೀಮೆಯು ದಕ್ಷಿಣಕ್ಕೆ ತಿರುಗಿಕೊಂಡು ಆ ಬೆಟ್ಟದ ಪಶ್ಚಿಮಭಾಗದ ಜೊತೆಗೆ ಮುಂದುವರೆಯುತ್ತದೆ. ಆ ಸೀಮೆಯು ಕಿರ್ಯತ್ಯಾರೀಮ್ ಎಂಬ ಕಿರ್ಯತ್‌ಬಾಳ್‌ಗೆ ಹೋಗುತ್ತದೆ. ಈ ಪಟ್ಟಣವು ಯೆಹೂದ್ಯರಿಗೆ ಸೇರಿದ್ದು. ಇದು ಪಶ್ಚಿಮದಿಕ್ಕಿನ ಸೀಮೆಯಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಇದಲ್ಲದೆ ಆ ಮೇರೆಯು ದಕ್ಷಿಣ ಎಲ್ಲೆಗೆ ಎದುರಾಗಿರುವ ಬೇತ್ ಹೋರೋನಿಗೆ ಎದುರಾಗಿ ಬೆಟ್ಟವನ್ನು ಹಿಡಿದು, ದಕ್ಷಿಣವಾಗಿ ಸುತ್ತಿಕೊಂಡು ಕಿರ್ಯತ್ ಯಾರೀಮ್ ಎಂಬ ಯೆಹೂದ ಗೋತ್ರದ ಪಟ್ಟಣವಾದ ಕಿರ್ಯತ್ ಬಾಳದ ಬಳಿಗೆ ಹೋಗಿ ಮುಗಿಯುವುದು. ಇದು ಪಶ್ಚಿಮ ಎಲ್ಲೆಯಾಗಿತ್ತು. ಅಧ್ಯಾಯವನ್ನು ನೋಡಿ |