Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 18:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅಲ್ಲಿಂದ ಮೇರೆಯು ಬೇತ್ ಹೊಗ್ಲಾ ಎಂಬ ಊರಿನ ಉತ್ತರದಲ್ಲಿರುವ ಗುಡ್ಡದ ಮೇಲೆ ಲವಣಸಮುದ್ರದ ಬಡಗಣ ಮೂಲೆಗೆ ಹೋಗಿ ಯೊರ್ದನ್ ನದಿಯು ಸಮುದ್ರಕ್ಕೆ ಬಂದು ಸೇರುವ ಸ್ಥಳದಲ್ಲಿ ಕೊನೆಗೊಳ್ಳುತ್ತದೆ. ಇದೇ ದಕ್ಷಿಣ ದಿಕ್ಕಿನ ಮೇರೆಯು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅಲ್ಲಿಂದ ಆ ಎಲ್ಲೆ ಬೇತ್ ಹೊಗ್ಲಾ ಎಂಬ ಊರಿನ ಉತ್ತರದಲ್ಲಿರುವ ಗುಡ್ಡದ ಮೇಲೆ ಲವಣಸಮುದ್ರದ ಉತ್ತರ ಮೂಲೆಗೆ ಹೋಗಿ ಜೋರ್ಡನ್ ನದಿಯು ಆ ಸಮುದ್ರಕ್ಕೆ ಕೂಡುವ ಸ್ಥಳದಲ್ಲಿ ಮುಗಿಯುತ್ತದೆ. ಇದೇ ದಕ್ಷಿಣದಿಕ್ಕಿನ ಸರಹದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅಲ್ಲಿಂದ ಮೇರೆಯು ಬೇತ್‍ಹೊಗ್ಲಾ ಎಂಬ ಊರಿನ ಉತ್ತರದಲ್ಲಿರುವ ಗುಡ್ಡದ ಮೇಲೆ ಲವಣಸಮುದ್ರದ ಬಡಗಣ ಮೂಲೆಗೆ ಹೋಗಿ ಯೊರ್ದನ್ ಹೊಳೆಯು ಆ ಸಮುದ್ರಕ್ಕೆ ಕೂಡುವ ಸ್ಥಳದಲ್ಲಿ ಮುಗಿಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಅಲ್ಲಿಂದ ಆ ಮೇರೆಯು ಬೇತ್‌ಹೊಗ್ಲಾವಿನ ಉತ್ತರಭಾಗದಲ್ಲಿ ಮುಂದುವರೆದು ಲವಣಸಮುದ್ರದ ಉತ್ತರ ದಡದಲ್ಲಿ ಮುಕ್ತಾಯಗೊಳ್ಳುತ್ತದೆ. ಜೋರ್ಡನ್ ನದಿಯು ಸಮುದ್ರಕ್ಕೆ ಸೇರುವುದು ಇಲ್ಲಿಯೇ. ಇದು ದಕ್ಷಿಣದಿಕ್ಕಿನ ಸೀಮೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಅಲ್ಲಿಂದ ಆ ಮೇರೆ ಬೇತ್ ಹೊಗ್ಲಾಕ್ಕೆ ಉತ್ತರ ಕಡೆಯಾಗಿ ಹೊರಟು, ಯೊರ್ದನ್ ನದಿ ಮುಖ ದ್ವಾರಕ್ಕೆ ಉತ್ತರವಾದ ಲವಣ ಸಮುದ್ರ ಎಂಬ ಲವಣ ಸಮುದ್ರದ ಉತ್ತರ ಮೂಲೆಯಲ್ಲಿ ಮುಗಿಯುತ್ತದೆ. ಇದೇ ದಕ್ಷಿಣ ಭಾಗದ ಮೇರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 18:19
10 ತಿಳಿವುಗಳ ಹೋಲಿಕೆ  

ಅದರ ದಕ್ಷಿಣದ ಮೇರೆಯು ಲವಣ ಸಮುದ್ರದ ತೆಂಕಣ ಕೊನೆಯಿಂದ


ಈ ಐದು ಅರಸರು ಈಗಿನ ಲವಣಸಮುದ್ರ ಎನ್ನಿಸಿಕೊಳ್ಳುವ ಸಿದ್ದೀಮ್, ತಗ್ಗಿನ ಪ್ರದೇಶದಲ್ಲಿ ಒಟ್ಟಾಗಿ ಕೂಡಿದ್ದರು.


ಆಗ ಯೆಹೋವನು ಐಗುಪ್ತ ಸಮುದ್ರದ ಕೊಲ್ಲಿಯನ್ನು ಸಂಪೂರ್ಣವಾಗಿ ನಾಶಮಾಡುವನು. ಯೂಫ್ರೆಟಿಸ್ ನದಿಯ ಮೇಲೆ ಕೈ ಜಾಡಿಸಿ, ತನ್ನ ಬಿಸಿಗಾಳಿಯಿಂದ ಅದನ್ನು ಏಳು ನದಿಗಳನ್ನಾಗಿ ಒಡೆದು, ಜನರ ಪಾದರಕ್ಷೆಗಳು ನೆನೆಯದಂತೆ ಅವರನ್ನು ದಾಟಿಸುವನು.


ಹಾಗೂ ಯೊರ್ದನ್ ನದಿಯ ಪೂರ್ವದಲ್ಲಿ ಕಿನ್ನೆರೋತ್ ಸಮುದ್ರದಿಂದ ಲವಣಸಮುದ್ರವೆನಿಸಿಕೊಳ್ಳುವ ಅರಾಬ್ ಸಮುದ್ರದ ಹತ್ತಿರವಿರುವ ಬೇತಯೆಷಿಮೋತಿನವರೆಗೂ ದಕ್ಷಿಣದಲ್ಲಿರುವ ಪಿಸ್ಗಾ ಬೆಟ್ಟದ ಬುಡದವರೆಗೂ ಇರುವ ಕಣಿವೆ ಪ್ರದೇಶವು ಇವೇ ಅವನ ರಾಜ್ಯ:


ಮೇಲಿನಿಂದ ಹರಿದು ಬರುತ್ತಿದ್ದ ನೀರು ಬಹುದೂರದಲ್ಲಿದ್ದ ಚಾರೆತಾನಿನ ಹತ್ತಿರವಿರುವ ಆದಾಮ್ ಊರಿನ ತನಕ ರಾಶಿಯಾಗಿ ನಿಂತಿತು. ಕೆಳಗಿನ ನೀರು ಅರಾಬಾ ತಗ್ಗಿನಲ್ಲಿರುವ ಲವಣಸಮುದ್ರಕ್ಕೆ ಹರಿದು ಹೋಯಿತು ಜನರು ಯೆರಿಕೋವಿನ ಎದುರಿನಲ್ಲಿ ಹೊಳೆದಾಟಿದರು.


ಅದಲ್ಲದೆ ಆರಾಬಾ ಎಂಬ ತಗ್ಗನ್ನೂ ಅವರಿಗೆ ಕೊಟ್ಟೆನು; ಅದರಲ್ಲಿ ಕಿನ್ನೆರೆತ್ ಸಮುದ್ರದಿಂದ ಪಿಸ್ಗಾ ಬೆಟ್ಟದ ಪಶ್ಚಿಮದಲ್ಲಿರುವ ಅರಾಬದ ಸಮುದ್ರವೆನಿಸಿಕೊಳ್ಳುವ ಲವಣಸಮುದ್ರದ ವರೆಗೆ ಯೊರ್ದನ್ ನದಿಯು ಅವರ (ಪಶ್ಚಿಮದ ವರೆಗೆ) ಮೇರೆ.


ನೀವು ಅಲ್ಲಿ ಸೇರಿದಾಗ ಎದೋಮ್ಯರ ಗಡಿಗಳ ಬಳಿಯಲ್ಲಿರುವ ಚಿನ್ ಅರಣ್ಯವು ನಿಮ್ಮ ದಕ್ಷಿಣದ ಮೇರೆಯಾಗಿರಬೇಕು. ಆ ಮೇರೆಯ ಪೂರ್ವದಿಕ್ಕಿನಲ್ಲಿರುವ ಲವಣಸಮುದ್ರದ ಕೊನೆಯಿಂದ ಪ್ರಾರಂಭಿಸಬೇಕು.


ಆ ಪಟ್ಟಣಗಳನ್ನೂ ಸುತ್ತಲಿರುವ ಸೀಮೆಯೆಲ್ಲವನ್ನೂ ಊರುಗಳಲ್ಲಿದ್ದ ಜನರೆಲ್ಲರನ್ನೂ ಭೂಮಿಯ ಮೇಲಣ ಎಲ್ಲಾ ಬೆಳೆಯನ್ನೂ ಹಾಳುಮಾಡಿದನು.


ಅರಾಬದ ಉತ್ತರದಲ್ಲಿರುವ ಬೆಟ್ಟ ಇವುಗಳ ಮೇಲೆ ಅರಾಬಾ ಎಂಬ ಕಣಿವೆ ಪ್ರದೇಶಕ್ಕೆ ಹೋಗುತ್ತದೆ.


ಯೊರ್ದನ್ ನದಿಯೇ ಅವರ ಪೂರ್ವ ದಿಕ್ಕಿನ ಮೇರೆಯು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು