ಯೆಹೋಶುವ 18:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ದೇಶದ ಪಟ್ಟಿಯನ್ನು ಮಾಡತಕ್ಕ ಜನರು ಹೊರಡುವುದಕ್ಕಿಂತ ಮೊದಲು ಯೆಹೋಶುವನು ಅವರಿಗೆ, “ಹೋಗಿ ದೇಶದಲ್ಲೆಲ್ಲಾ ಸಂಚರಿಸಿ ಪಟ್ಟಿಮಾಡಿಕೊಂಡು ಶೀಲೋವಿನಲ್ಲಿರುವ ನನ್ನ ಬಳಿಗೆ ಬನ್ನಿರಿ. ನಾನು ಯೆಹೋವನ ಮುಂದೆ ನಿಮಗೋಸ್ಕರ ಚೀಟು ಹಾಕುವೆನು” ಎಂದು ಹೇಳಿ ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ನಾಡಿನ ಅಳತೆಯನ್ನು ಮಾಡತಕ್ಕ ಜನರು ಹೊರಡುವುದಕ್ಕೆ ಮುಂಚೆ ಯೆಹೋಶುವನು ಅವರಿಗೆ, “ಹೋಗಿ ನಾಡಿನಲ್ಲೆಲ್ಲಾ ಸಂಚರಿಸಿ ಅಳತೆಮಾಡಿ ನನ್ನ ಬಳಿ ಶೀಲೋವಿಗೆ ತನ್ನಿ. ನಾನು ಸರ್ವೇಶ್ವರನ ಮುಂದೆ ನಿಮಗೋಸ್ಕರ ಚೀಟು ಹಾಕುತ್ತೇನೆ,” ಎಂದು ಹೇಳಿ ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ದೇಶದ ಪಟ್ಟಿಯನ್ನು ಮಾಡತಕ್ಕ ಜನರು ಹೊರಡುವದಕ್ಕಿಂತ ಮುಂಚೆ ಯೆಹೋಶುವನು ಅವರಿಗೆ - ಹೋಗಿ ದೇಶದಲ್ಲೆಲ್ಲಾ ಸಂಚರಿಸಿ ಪಟ್ಟಿಮಾಡಿಕೊಂಡು ಶೀಲೋವಿಗೆ ನನ್ನ ಬಳಿಗೆ ಬನ್ನಿರಿ; ನಾನು ಯೆಹೋವನ ಮುಂದೆ ನಿಮಗೋಸ್ಕರ ಚೀಟುಹಾಕುವೆನು ಎಂದು ಹೇಳಿ ಕಳುಹಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಆದ್ದರಿಂದ ಭೂಮಿಯನ್ನು ಪರಿಶೀಲಿಸಲು ಆರಿಸಲ್ಪಟ್ಟ ಜನರಿಗೆ ಯೆಹೋಶುವನು, “ಹೋಗಿ, ಭೂಮಿಯನ್ನು ಸೂಕ್ಷ್ಮವಾಗಿ ಪರಿಶೀಲಿಸಿರಿ; ಅದರ ನಕ್ಷೆಗಳನ್ನು ತೆಗೆಯಿರಿ. ಆಮೇಲೆ ಶೀಲೋವಿನಲ್ಲಿ ನಾನಿರುವ ಸ್ಥಳಕ್ಕೆ ಬನ್ನಿ. ಆಗ ನಾನು ಚೀಟುಹಾಕುತ್ತೇನೆ. ಯೆಹೋವನು ನಿಮ್ಮ ಪಾಲುಗಳನ್ನು ಕೊಡಲಿ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಆ ಮನುಷ್ಯರು ನಾಡನ್ನು ಅಳತೆ ಮಾಡುವುದಕ್ಕಾಗಿ ಹೊರಟು ಹೋಗುವುದಕ್ಕೆ ಮುಂಚೆ ಯೆಹೋಶುವನು ಅವರಿಗೆ, “ನೀವು ಹೋಗಿ ದೇಶವೆಲ್ಲಾ ಸಂಚರಿಸಿ, ಅದನ್ನು ಅಳತೆಮಾಡಿ ನನ್ನ ಬಳಿಗೆ ತೆಗೆದುಕೊಂಡು ಬನ್ನಿರಿ. ನಾನು ಇಲ್ಲಿ ಶೀಲೋವಿನಲ್ಲಿ ಯೆಹೋವ ದೇವರ ಮುಂದೆ ನಿಮಗೆ ಚೀಟುಗಳನ್ನು ಹಾಕುವಂತೆ ನನ್ನ ಬಳಿಗೆ ಬನ್ನಿರಿ,” ಎಂದು ಅಪ್ಪಣೆಕೊಟ್ಟನು. ಅಧ್ಯಾಯವನ್ನು ನೋಡಿ |