Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 18:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆ ಜನರು ಹೊರಟು ದೇಶದಲ್ಲೆಲ್ಲಾ ಸಂಚರಿಸಿ ಒಂದು ಪುಸ್ತಕದಲ್ಲಿ ಅದರ ಗ್ರಾಮ ನಗರಗಳನ್ನೆಲ್ಲಾ ಬರೆದು ಏಳು ಭಾಗಗಳನ್ನಾಗಿ ಮಾಡಿ ಶೀಲೋವಿನಲ್ಲಿದ್ದ ಯೆಹೋಶುವನ ಪಾಳೆಯಕ್ಕೆ ಹಿಂತಿರುಗಿ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಆ ಜನರು ಹೊರಟು ನಾಡಿನಲ್ಲೆಲ್ಲಾ ಸಂಚರಿಸಿ ಒಂದು ಪುಸ್ತಕದಲ್ಲಿ ಗ್ರಾಮ-ನಗರಗಳನ್ನೆಲ್ಲಾ ಬರೆದು ಏಳು ಭಾಗಗಳನ್ನಾಗಿ ಮಾಡಿ ಶೀಲೋವಿನಲ್ಲಿದ್ದ ಯೆಹೋಶುವನ ಪಾಳೆಯಕ್ಕೆ ಹಿಂದಿರುಗಿ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆ ಜನರು ಹೊರಟು ದೇಶದಲ್ಲೆಲ್ಲಾ ಸಂಚರಿಸಿ ಒಂದು ಪುಸ್ತಕದಲ್ಲಿ ಅದರ ಗ್ರಾಮನಗರಗಳನ್ನೆಲ್ಲಾ ಬರೆದು ಏಳು ಭಾಗಗಳನ್ನು ಮಾಡಿ ಶೀಲೋವಿನಲ್ಲಿದ್ದ ಯೆಹೋಶುವನ ಪಾಳೆಯಕ್ಕೆ ಹಿಂದಿರುಗಿ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಅಂತೆಯೇ ಅವರು ಹೋಗಿ ಭೂಮಿಯನ್ನು ಚೆನ್ನಾಗಿ ಪರಿಶೀಲಿಸಿದರು; ಯೆಹೋಶುವನಿಗಾಗಿ ನಕ್ಷೆಗಳನ್ನು ತೆಗೆದರು. ಅವರು ಪ್ರತಿಯೊಂದು ಹಳ್ಳಿಯನ್ನು ಪರಿಶೀಲಿಸಿದರು. ಭೂಮಿಯನ್ನು ಏಳು ಭಾಗಗಳಾಗಿ ವಿಂಗಡಿಸಿದರು. ಅವರು ನಕ್ಷೆಗಳನ್ನು ತೆಗೆದು ಯೆಹೋಶುವನ ಬಳಿಗೆ ಶೀಲೋವಿಗೆ ಹಿಂತಿರುಗಿ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆ ಮನುಷ್ಯರು ಆ ನಾಡಿಗೆ ಹೋಗಿ, ಅದರ ಪಟ್ಟಣಗಳ ಪ್ರಕಾರ ಏಳು ಪಾಲಾಗಿ ಒಂದು ಗ್ರಂಥದಲ್ಲಿ ಬರೆದುಕೊಂಡು ಶೀಲೋವಿನಲ್ಲಿರುವ ಪಾಳೆಯಕ್ಕೆ ಯೆಹೋಶುವನ ಬಳಿಗೆ ತಿರುಗಿ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 18:9
3 ತಿಳಿವುಗಳ ಹೋಲಿಕೆ  

ಕಾನಾನ್ ದೇಶದಲ್ಲಿದ್ದ ಅನ್ಯಜನಗಳ ಏಳು ರಾಜ್ಯಗಳನ್ನು ನಿರ್ಮೂಲಮಾಡಿ, ಆ ಜನರ ದೇಶವನ್ನು ಅವರಿಗೆ ಸ್ವತ್ತಾಗಿ ಹಂಚಿಕೊಟ್ಟನು.


ದೇಶದ ಪಟ್ಟಿಯನ್ನು ಮಾಡತಕ್ಕ ಜನರು ಹೊರಡುವುದಕ್ಕಿಂತ ಮೊದಲು ಯೆಹೋಶುವನು ಅವರಿಗೆ, “ಹೋಗಿ ದೇಶದಲ್ಲೆಲ್ಲಾ ಸಂಚರಿಸಿ ಪಟ್ಟಿಮಾಡಿಕೊಂಡು ಶೀಲೋವಿನಲ್ಲಿರುವ ನನ್ನ ಬಳಿಗೆ ಬನ್ನಿರಿ. ನಾನು ಯೆಹೋವನ ಮುಂದೆ ನಿಮಗೋಸ್ಕರ ಚೀಟು ಹಾಕುವೆನು” ಎಂದು ಹೇಳಿ ಕಳುಹಿಸಿದನು.


ಯೆಹೋಶುವನು ಶೀಲೋವಿನಲ್ಲಿಯೇ ಯೆಹೋವನ ಮುಂದೆ ಅವರಿಗೋಸ್ಕರ ಚೀಟು ಹಾಕಿ ದೇಶವನ್ನು ಅವರ ಕುಲಗಳಿಗೆ ಹಂಚಿಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು