Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 19:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ತಾಬೋರ್, ಶಹಚೀಮಾ, ಬೇತ್‌ಷೆಮೆಷ್‌ ಎಂಬ ಊರುಗಳು ಅದರ ಮೇರೆಯೊಳಗಿದ್ದವು. ಮೇರೆಯು ಯೊರ್ದನ್ ನದಿಯ ತೀರದಲ್ಲಿ ಕೊನೆಗೊಳ್ಳುತ್ತದೆ. ಒಟ್ಟಾರೆ ಹದಿನಾರು ಪಟ್ಟಣಗಳು ಮತ್ತು ಅವುಗಳ ಗ್ರಾಮಗಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ತಾಬೋರ್, ಶಹಚೀಮಾ, ಬೇತ್ ಷೆಮೆಷ್ ಎಂಬ ಊರುಗಳೂ ಅದರ ಮೇರೆಯೊಳಗಿದ್ದವು. ಈ ಮೇರೆಯು ಜೋರ್ಡನ್ ನದಿಯ ತೀರದಲ್ಲಿ ಮುಗಿಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ತಾಬೋರ್, ಶಹಚೀಮಾ, ಬೇತ್‍ಷೆಮೆಷ್ ಎಂಬ ಊರುಗಳೂ ಅದರ ಮೇರೆಯೊಳಗಿದ್ದವು. ಮೇರೆಯು ಯೊರ್ದನ್ ಹೊಳೆಯ ತೀರದಲ್ಲಿ ಮುಗಿಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಅವರ ಭೂಮಿಯ ಮೇರೆಯು ತಾಬೋರ್, ಶಹಚೀಮಾ, ಬೇತ್‌ಷೆಮೆಷ್ ಎಂಬ ಊರುಗಳನ್ನು ತಲುಪಿತ್ತು. ಆ ಸೀಮೆಯು ಜೋರ್ಡನ್ ನದಿಗೆ ಮುಕ್ತಾಯಗೊಳ್ಳುತ್ತಿತ್ತು. ಒಟ್ಟಿನಲ್ಲಿ ಹದಿನಾರು ಪಟ್ಟಣಗಳು ಮತ್ತು ಅವುಗಳ ಸುತ್ತಮುತ್ತಲಿನ ಎಲ್ಲಾ ಹೊಲಗದ್ದೆಗಳು ಇದರಲ್ಲಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆ ಎಲ್ಲೆಯು ತಾಬೋರ್, ಶಹಚೀಮಾ, ಬೇತ್ ಷೆಮೆಷ್ ಎಂಬ ಊರುಗಳಿಗೆ ಸೇರಿ ಯೊರ್ದನ್ ನದಿ ತೀರದಲ್ಲಿ ಮುಗಿಯುತ್ತದೆ. ಅಲ್ಲಿ ಹದಿನಾರು ಪಟ್ಟಣಗಳೂ ಅವುಗಳ ಗ್ರಾಮಗಳೂ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 19:22
14 ತಿಳಿವುಗಳ ಹೋಲಿಕೆ  

ಆಕೆ ನಫ್ತಾಲಿ ದೇಶದ ಕೆದೆಷ್ ಊರಿನಲ್ಲಿದ್ದ ಅಬೀನೋವಮನ ಮಗನಾದ ಬಾರಾಕನನ್ನು ಬರಲು ಹೇಳಿ ಅವನಿಗೆ, “ನಿಶ್ಚಯವಾಗಿ ಇಸ್ರಾಯೇಲರ ದೇವರಾದ ಯೆಹೋವನು ನಿನಗೆ, ‘ಎದ್ದು ನಫ್ತಾಲಿ, ಜೆಬುಲೂನ್ ಕುಲಗಳಿಂದ ಹತ್ತು ಸಾವಿರ ಜನರನ್ನು ಕೂಡಿಸಿಕೊಂಡು ತಾಬೋರ್ ಬೆಟ್ಟಕ್ಕೆ ಹೋಗು.


ಸೇನಾಧೀಶ್ವರನಾದ ಯೆಹೋವನೆಂಬ ನಾಮವುಳ್ಳ ರಾಜಾಧಿರಾಜನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ಇಗೋ, ಪರ್ವತಗಳನ್ನು ಮೀರುವ ತಾಬೋರ್ ಬೆಟ್ಟದಂತೆಯೂ, ಸಮುದ್ರದಿಂದ ಎದ್ದಿರುವ ಕರ್ಮೆಲ್ ಬೆಟ್ಟದ ಹಾಗೂ ಉನ್ನತನಾದವನೊಬ್ಬನು ಬರುವನು.


ದಕ್ಷಿಣೋತ್ತರ ದಿಕ್ಕುಗಳನ್ನು ಉಂಟುಮಾಡಿದವನು ನೀನು. ತಾಬೋರ್, ಹೆರ್ಮೋನ್ ಪರ್ವತಗಳು ನಿನ್ನ ನಾಮದಲ್ಲಿ ಆನಂದಧ್ವನಿ ಮಾಡುತ್ತವೆ.


ಮಿಕ್ಕ ಲೇವಿಯರಾದ ಮೆರಾರಿಯರಿಗೆ ಜೆಬುಲೋನ್ ಕುಲದ ಸ್ವತ್ತಿನಿಂದ ರಿಮ್ಮೋನೋ, ತಾಬೋರ್ ಎಂಬ ಗೋಮಾಳ ಸಹಿತವಾದ ಪಟ್ಟಣಗಳೂ,


ಮಾಕಾಚ್, ಶಾಲ್ಬೀಮ್, ಬೇತ್‌ಷೆಮೆಷ್‌, ಏಲೋನ್ ಬೇತ್ ಹಾನಾನ್‌ ಎಂಬ ಊರುಗಳ ಒಡೆಯನಾದ ದೆಕೆರನ ಮಗನು.


ಅಯಿನ್, ಯುಟ್ಟಾ, ಬೇತ್‌ಷೆಮೆಷ್‌ ಎಂಬ ಒಂಭತ್ತು ಗೋಮಾಳ ಸಹಿತವಾದ ಪಟ್ಟಣಗಳು


ಇರೋನ್, ಮಿಗ್ದಲೇಲ್, ಹೊರೇಮ್, ಬೇತ್ ಷೆಮೆಷ್, ಬೆತನಾತ್ ಇವೇ ಮೊದಲಾದ ಹತ್ತೊಂಬತ್ತು ಕೋಟೆಕೊತ್ತಲುಗಳುಳ್ಳ ಪಟ್ಟಣಗಳು ಮತ್ತು ಅವುಗಳ ಗ್ರಾಮಗಳು,


ಅದೇ ಸಾರೀದಿನಿಂದ ಅದು ಪೂರ್ವ ದಿಕ್ಕಿನಲ್ಲಿ ಕಿಸ್ಲೋತ್ ತಾಬೋರಿನ ಮೇರೆಗೆ ಹತ್ತಿ ದಾಬೆರತಿಗೆ ಹೋಗುತ್ತದೆ. ಅಲ್ಲಿಂದ ಏರುತ್ತಾ ಯಾಫೀಯಕ್ಕೆ ಹೋಗುತ್ತದೆ.


ರೆಮೆತ್, ಏಂಗನ್ನೀಮ್, ಏನ್‌ಹದ್ದಾ, ಬೇತ್ ಪಚ್ಚೇಚ್ ಇವುಗಳೇ.


ಇಸ್ಸಾಕಾರನ ಕುಲದ ಗೋತ್ರಗಳಿಗೆ ಸಿಕ್ಕಿದವು.


ಅಬೀನೋವಮನ ಮಗನಾದ ಬಾರಾಕನು ತಾಬೋರ್ ಬೆಟ್ಟವನ್ನೇರಿ ಬಂದಿದ್ದಾನೆಂಬ ವರ್ತಮಾನವು ಸೀಸೆರನಿಗೆ ಮುಟ್ಟಿದಾಗ


ಗೇರ್ಷೋಮ್ಯರ ಕುಟುಂಬಗಳಿಗೆ ಇಸ್ಸಾಕಾರ್, ಆಶೇರ್, ನಫ್ತಾಲಿ, ಬಾಷಾನಿನಲ್ಲಿರುವ ಮನಸ್ಸೆ ಕುಲಗಳ ಸ್ವತ್ತಿನಿಂದ ಹದಿಮೂರು ಪಟ್ಟಣಗಳು ದೊರಕಿದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು