Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 19:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಕಾಬೂಲ್, ಎಬ್ರೋನ್, ರೆಹೋಬ್, ಹಮ್ಮೋನ್, ಕಾನಾ ಇವುಗಳ ಮೇಲೆ ಚೀದೋನ್ ಎಂಬ ಮಹಾನಗರಕ್ಕೆ ಹೋಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಕಾಬೂಲ್, ಎಬ್ರೋನ್, ರೆಹೋಬ್, ಹಮ್ಮೋನ್, ಕಾನಾ ಇವುಗಳ ಮೇಲೆ ಸಿದೋನ್ ಎಂಬ ಮಹಾನಗರಕ್ಕೆ ಹೋಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಕಾಬೂಲ್, ಎಬ್ರೋನ್, ರೆಹೋಬ್, ಹಮ್ಮೋನ್, ಕಾನಾ ಇವುಗಳ ಮೇಲೆ ಚೀದೋನ್ ಎಂಬ ಮಹಾನಗರಕ್ಕೆ ಹೋಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಅಲ್ಲಿಂದ ಆ ಮೇರೆಯು ಎಬ್ರೋನ್, ರೆಹೋಬ್, ಹಮ್ಮೋನ್ ಮತ್ತು ಕಾನಾ ಇವುಗಳ ಮೂಲಕ ಚೀದೋನ್ ಎಂಬ ಮಹಾನಗರಕ್ಕೆ ತಲುಪಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಅಲ್ಲಿಂದ ಅಬ್ದೋನ್, ರೆಹೋಬ್, ಹಮ್ಮೋನ್, ಕಾನಾ ಹಾಗೂ ಸೀದೋನ್ ಎಂಬ ಮಹಾನಗರಕ್ಕೆ ಹೋಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 19:28
15 ತಿಳಿವುಗಳ ಹೋಲಿಕೆ  

ಆಶೇರ್ಯರು ಅಕ್ಕೋ, ಚೀದೋನ್, ಅಹ್ಲಾಬ್, ಅಕ್ಜೀಬ್, ಹೆಲ್ಬಾ, ಅಫೀಕ್, ರೆಹೋಬ್ ಎಂಬ ಪಟ್ಟಣಗಳಲ್ಲಿ ವಾಸವಾಗಿದ್ದ ಜನರನ್ನು ಹೊರಡಿಸಿಬಿಡಲಿಲ್ಲ;


ಯೆಹೋವನು ಅವರನ್ನು ಇಸ್ರಾಯೇಲರ ಕೈಗೆ ಒಪ್ಪಿಸಿದನು. ಇವರು ಅವರನ್ನು ದೊಡ್ಡ ಚೀದೋನ್ ಹಾಗೂ ಮಿಸ್ರೆಫೋತ್ಮಯಿಮ್ ಎಂಬ ಊರುಗಳವರೆಗೂ ಪೂರ್ವದಿಕ್ಕಿನಲ್ಲಿರುವ ಮಿಚ್ಪೆಯ ಬೈಲಿನವರೆಗೂ ಅವರನ್ನು ಹಿಂದಟ್ಟಿ ಹೊಡೆದರು. ಒಬ್ಬನಾದರೂ ಉಳಿಯದಂತೆ ಎಲ್ಲರನ್ನೂ ಸಂಹರಿಸಿದರು.


ಹೀಗಿರಲಾಗಿ, ಯೇಸು ತಾನು ನೀರನ್ನು ದ್ರಾಕ್ಷಾರಸವನ್ನಾಗಿ ಮಾಡಿದ ಗಲಿಲಾಯದ ಕಾನಾ ಊರಿಗೆ ಹಿಂತಿರುಗಿ ಬಂದನು. ಆಗ ಕಪೆರ್ನೌಮಿನಲ್ಲಿದ್ದ ಅರಮನೆಯ ಒಬ್ಬ ಅಧಿಕಾರಿಯ ಮಗನು ಅಸ್ವಸ್ಥನಾಗಿದ್ದನು.


ಯೇಸು ಈ ಮೊದಲನೆಯ ಸೂಚಕ ಕಾರ್ಯವನ್ನು ಗಲಿಲಾಯದ ಕಾನಾ ಊರಿನಲ್ಲಿ ಮಾಡಿ, ತನ್ನ ಮಹಿಮೆಯನ್ನು ತೋರ್ಪಡಿಸಿದನು. ಇದರಿಂದ ಆತನ ಶಿಷ್ಯರು ಆತನಲ್ಲಿ ನಂಬಿಕೆಯಿಟ್ಟರು.


ಮೂರನೆಯ ದಿನದಲ್ಲಿ ಗಲಿಲಾಯದ ಕಾನಾ ಎಂಬ ಊರಿನಲ್ಲಿ ಒಂದು ಮದುವೆ ನಡೆಯಿತು. ಯೇಸುವಿನ ತಾಯಿ ಅಲ್ಲಿ ಇದ್ದಳು.


ಆತನು, “ಹಿಂಸೆಗೆ ಈಡಾದ ಕನ್ಯೆಯಂತಿರುವ ಚೀದೋನ್ ನಗರಿಯೇ, ಇನ್ನು ಮೇಲೆ ನಿನಗೆ ಹರ್ಷವೇ ಇಲ್ಲ; ಎದ್ದು ಕಿತ್ತೀಮಿಗೆ ಸಮುದ್ರದ ಮೇಲೆ ಹಾದುಹೋಗು, ಅಲ್ಲಿಯೂ ನಿನಗೆ ವಿಶ್ರಾಂತಿ ಇರದು” ಎಂದು ಹೇಳಿದ್ದಾನೆ.


ಚೀದೋನೇ, ನಾಚಿಕೆಪಡು. ಏಕೆಂದರೆ ಸಮುದ್ರವೂ, ಸಮುದ್ರದ ದುರ್ಗವೂ, “ನಾವು ವೇದನೆ ಪಡಲಿಲ್ಲ, ಪ್ರಸವಿಸಲಿಲ್ಲ, ಯುವತಿ ಯುವಕರನ್ನು ಸಾಕಿ ಸಲಹಲಿಲ್ಲ” ಎಂದು ನುಡಿದಿದೆಯಷ್ಟೆ.


ದ್ವೀಪಗಳ ನಿವಾಸಿಗಳೇ, ಸಮುದ್ರವನ್ನು ಹಾದು ಹೋಗುವ, ಚೀದೋನಿನ ವರ್ತಕರಿಂದ ಸಮೃದ್ಧಿಯನ್ನು ಹೊಂದಿದವರೇ, ಮೌನವಾಗಿರಿ!


ಕಾನಾನ್ಯರ ಸೀಮೆಯು ಸೀದೋನ್ ಪಟ್ಟಣದಿಂದ ಗೆರಾರಿಗೆ ಹೋಗುವ ದಾರಿಯಲ್ಲಿರುವ ಗಾಜಾ ಪಟ್ಟಣದ ವರೆಗೂ ಮತ್ತು ಸೊದೋಮ್, ಗೊಮೋರ, ಅದ್ಮಾ, ಚೆಬೋಯಿಮ್ ಎಂಬ ಪಟ್ಟಣಗಳಿಗೆ ಹೋಗುವ ದಾರಿಯಲ್ಲಿರುವ ಲೆಷಾ ಊರಿನವರೆಗೂ ಇರುತ್ತದೆ.


ಮರುದಿನ ಸೀದೋನಿಗೆ ತಲುಪಿದೆವು. ಯೂಲ್ಯನು ಪೌಲನಿಗೆ ದಯೆಯನ್ನು ತೋರಿಸುವವನಾಗಿ, ಅವನನ್ನು ಸ್ನೇಹಿತರ ಬಳಿಗೆ ಹೋಗಿ ಸತ್ಕಾರ ಹೊಂದುವುದಕ್ಕೆ ಅನುಮತಿಕೊಟ್ಟನು.


ಅಲ್ಲಿಂದ ಗಿಲ್ಯಾದ್ ಪ್ರಾಂತ್ಯ, ತಖ್ತೀಮ್ ಹೂಜೀ ಪ್ರದೇಶ ಇವುಗಳ ಮೇಲೆ ಯಾನಿನ ದಾನ್ ಎಂಬಲ್ಲಿಗೂ ಬಂದರು.


ಹೆಲ್ಕಾತ್ ರೆಹೋಬ್ ಎಂಬ ನಾಲ್ಕು ಗೋಮಾಳ ಸಹಿತವಾದ ಪಟ್ಟಣಗಳು;


ಆ ಪಟ್ಟಣವು ಚೀದೋನಿಗೆ ದೂರವಾಗಿದ್ದುದರಿಂದಲೂ, ಸಮೀಪದಲ್ಲಿ ಪರಿಚಯಸ್ಥರು ಯಾರು ಇಲ್ಲದೆ ಇದ್ದುದರಿಂದಲೂ, ಅವರಿಗೆ ಸಹಾಯದೊರಕಲಿಲ್ಲ. ಬೇತ್‌ರೆಹೋಬಿನ ತಗ್ಗಿನಲ್ಲಿದ್ದ ಈ ಪಟ್ಟಣವನ್ನು ದಾನ್ಯರು ಪುನಃ ಕಟ್ಟಿಸಿ ಅದರಲ್ಲಿ ವಾಸಿಸಿದರು.


ಅಲ್ಲಿಂದ ಚೀದೋನ್ ತೂರ್ ಕೋಟೆ, ಹಿವ್ವಿಯರ ಮತ್ತು ಕಾನಾನ್ಯರ ಪಟ್ಟಣಗಳು, ಇವುಗಳ ಮೇಲೆ ಯೆಹೂದ ಪ್ರಾಂತ್ಯದ ದಕ್ಷಿಣದಿಕ್ಕಿನಲ್ಲಿರುವ ಬೇರ್ಷೆಬಕ್ಕೆ ಬಂದರು.


“ನರಪುತ್ರನೇ, ನೀನು ಚೀದೋನಿಗೆ ಅಭಿಮುಖನಾಗಿ ಅದಕ್ಕೆ ವಿರುದ್ಧವಾಗಿ ಪ್ರವಾದಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು