Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 19:46 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

46 ಮೇಯರ್ಕೋನ್, ರಕ್ಕೋನ್ ಇವೇ. ಯೊಪ್ಪಕ್ಕೆ ಹೊಂದಿರುವ ಪ್ರದೇಶವೂ ಇವರಿಗೇ ದೊರಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

46 ಗತ್ ರಿಮ್ಮೋನ್, ಮೇಯರ್ಕೋನ್, ರಕ್ಕೋನ್, ಮತ್ತು ಜೊಪ್ಪಕ್ಕೆ ಎದುರಿಗಿರುವ ಪ್ರದೇಶವೂ ಇವರಿಗೆ ದೊರಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

46 ಗತ್‍ರಿಮ್ಮೋನ್, ಮೇಯರ್ಕೋನ್, ರಕ್ಕೋನ್, ಇವೇ. ಯೊಪ್ಪಕ್ಕೆ ಹೊಂದಿರುವ ಪ್ರದೇಶವೂ ಇವರಿಗೇ ದೊರಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

46 ಮೇಯರ್ಕೋನ್ ಮತ್ತು ರಕ್ಕೋನ್, ಯೊಪ್ಪಕ್ಕೆ ಹತ್ತಿರದ ಪ್ರದೇಶಗಳೂ ಇವರಿಗೆ ದೊರೆತವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

46 ಮೇಯರ್ಕೋನ್, ರಕ್ಕೋನ್ ಎಂಬ ಪಟ್ಟಣಗಳು. ಯೊಪ್ಪ ಊರಿಗೆ ಎದುರಾದ ಮೇರೆಯು ಸಹ ದೊರಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 19:46
10 ತಿಳಿವುಗಳ ಹೋಲಿಕೆ  

ಅವರಿಗೆ ಈ ಸಂಗತಿಗಳನ್ನೆಲ್ಲಾ ವಿವರವಾಗಿ ಹೇಳಿ, ಅವರನ್ನು ಯೊಪ್ಪ ಎಂಬ ಪಟ್ಟಣಕ್ಕೆ ಕಳುಹಿಸಿದನು.


ಆ ಮೇಲೆ ಪೇತ್ರನು ಯೊಪ್ಪದಲ್ಲಿ ಚರ್ಮದ ಕೆಲಸ ಮಾಡುವ ಸೀಮೋನನೆಂಬುವನ ಬಳಿಯಲ್ಲಿ ಬಹಳ ದಿನಗಳ ವರೆಗೂ ಇದ್ದನು.


ಯೊಪ್ಪ ಪಟ್ಟಣದಲ್ಲಿ ತಬಿಥಾ ಎಂಬ ಒಬ್ಬ ಶಿಷ್ಯಳಿದ್ದಳು. ಆ ಹೆಸರಿಗೆ ಗ್ರೀಕ್ ಭಾಷೆಯಲ್ಲಿ “ದೊರ್ಕ” ಅಂದರೆ ಜಿಂಕೆ ಎಂದರ್ಥ. ಆಕೆಯು ಸತ್ಕ್ರಿಯೆಗಳನ್ನೂ, ದಾನಧರ್ಮಗಳನ್ನೂ ಬಹಳವಾಗಿ ಮಾಡುತ್ತಿದ್ದಳು.


ಆದರೆ ಯೋನನು ಯೆಹೋವನ ಸನ್ನಿಧಿಯಿಂದ ತಪ್ಪಿಸಿಕೊಳ್ಳಲು ತಾರ್ಷೀಷಿಗೆ ಓಡಿಹೋಗಬೇಕೆಂದು ಯೋಚಿಸಿ ಹೊರಟು ಯೊಪ್ಪ ಎಂಬ ಊರಿಗೆ ಬಂದು ಅಲ್ಲಿ ತಾರ್ಷೀಷಿಗೆ ಹೊರಡುವ ಹಡಗನ್ನು ಕಂಡು ಪ್ರಯಾಣದ ದರವನ್ನು ಕೊಟ್ಟು ತಾರ್ಷೀಷಿಗೆ ಪ್ರಯಾಣಮಾಡುತ್ತಿದ್ದ ಹಡಗಿನವರೊಡನೆ ಅದನ್ನು ಹತ್ತಿದನು.


ನಾವಾದರೋ ನಿನಗೆ ಬೇಕಾದ ಎಲ್ಲಾ ಮರಗಳನ್ನು ಲೆಬನೋನಿನಲ್ಲಿ ಕಡಿದು ತೆಪ್ಪಗಳಾಗಿ ಕಟ್ಟಿ, ಸಮುದ್ರ ಮಾರ್ಗವಾಗಿ ಯೊಪ್ಪಕ್ಕೆ ತೆಗೆದುಕೊಂಡು ಬರುತ್ತೇವೆ. ಅಲ್ಲಿಂದ ನೀನು ಅವುಗಳನ್ನು ಯೆರೂಸಲೇಮಿಗೆ ತರಿಸಿಕೊಳ್ಳಬಹುದು” ಎಂಬುದಾಗಿ ಉತ್ತರ ಕೊಟ್ಟನು.


ಯೊಪ್ಪಕ್ಕೆ ಲುದ್ದವು ಹತ್ತಿರವಾಗಿರಲಾಗಿ ಪೇತ್ರನು ಅಲ್ಲಿ ಇದ್ದಾನೆಂದು ಶಿಷ್ಯರು ಕೇಳಿ ಇಬ್ಬರು ಮನುಷ್ಯರನ್ನು ಅವನ ಬಳಿಗೆ ಕಳುಹಿಸಿ, “ತಡಮಾಡದೆ ನಮ್ಮ ಹತ್ತಿರಕ್ಕೆ ಬರಬೇಕೆಂದು” ಬೇಡಿಕೊಂಡರು.


ಈ ಸಂಗತಿಯು ಯೊಪ್ಪದಲ್ಲೆಲ್ಲಾ ಹರಡಿ ಅನೇಕರು ಕರ್ತನ ಮೇಲೆ ನಂಬಿಕೆಯಿಟ್ಟರು.


ಯೆಹುದ್, ಬೆನೇಬೆರಕ್, ಗತ್ ರಿಮ್ಮೋನ್,


ದಾನ್ ಕುಲದವರು ತಮ್ಮ ಪ್ರಾಂತ್ಯವನ್ನು ವಿಸ್ತರಿಸುವುದಕ್ಕಾಗಿ ಹೊರಟು ಲೆಷೆಮಿನವರೊಡನೆ ಯುದ್ಧಮಾಡಿ ಜಯಿಸಿ ಆ ಜನರನ್ನು ಕತ್ತಿಯಿಂದ ಸಂಹರಿಸಿ ಪಟ್ಟಣವನ್ನು ಸ್ವಾಧೀನ ಮಾಡಿಕೊಂಡು ಅದರಲ್ಲಿ ವಾಸಿಸಿದರು. ಅದಕ್ಕೆ ತಮ್ಮ ಮೂಲಪುರುಷನ ಹೆಸರಾದ ದಾನ್ ಎಂಬ ಹೆಸರಿಟ್ಟರು.


ಈಗ ನನ್ನ ಒಡೆಯನು ಹೇಳಿದ ಮೇರೆಗೆ ಆ ಗೋದಿಯನ್ನು, ಜವೆಗೋದಿಯನ್ನು, ಎಣ್ಣೆಯನ್ನು, ದ್ರಾಕ್ಷಾರಸವನ್ನು ತನ್ನ ಸೇವಕರಿಗೆ ಕಳುಹಿಸಿಕೊಡಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು