Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 2:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನನ್ನ ತಂದೆ ತಾಯಿಯನ್ನೂ ಸಹೋದರ ಸಹೋದರಿಯರನ್ನೂ ಅವರಿಗಿರುವುದೆಲ್ಲವನ್ನು ನಾಶಮಾಡದೆ ಉಳಿಸುವುದಾಗಿ ಯೆಹೋವನ ಹೆಸರಿನಲ್ಲಿ ವಾಗ್ದಾನ ಮಾಡಬೇಕು ಎಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನನ್ನ ತಂದೆ ತಾಯಿಗಳನ್ನೂ ಸಹೋದರ ಸಹೋದರಿಯರನ್ನೂ ಅವರಿಗಿರುವುದೆಲ್ಲವನ್ನೂ ನಾಶಮಾಡದೆ ಉಳಿಸುವುದಾಗಿ ಸರ್ವೇಶ್ವರನ ಹೆಸರಿನಲ್ಲಿ ಪ್ರಮಾಣ ಮಾಡಬೇಕೆಂದು ಬೇಡಿಕೊಳ್ಳುತ್ತೇನೆ,” ಎಂದಳು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನನ್ನ ತಂದೆತಾಯಿಗಳನ್ನೂ ಸಹೋದರ ಸಹೋದರಿಯರನ್ನೂ ಅವರಿಗಿರುವದೆಲ್ಲವನ್ನೂ ನಾಶಮಾಡದೆ ಉಳಿಸುವದಾಗಿಯೂ ಯೆಹೋವನ ಹೆಸರಿನಲ್ಲಿ ಪ್ರಮಾಣಮಾಡಬೇಕೆಂದು ಬೇಡಿಕೊಳ್ಳುತ್ತೇನೆ ಎಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನನ್ನ ಕುಟುಂಬದವರನ್ನು ಅಂದರೆ ನನ್ನ ತಂದೆತಾಯಿಗಳನ್ನು, ಸಹೋದರ ಸಹೋದರಿಯರನ್ನು ಮತ್ತು ಅವರೆಲ್ಲರ ಕುಟುಂಬ ವರ್ಗದವರನ್ನು ಜೀವಂತವಾಗಿ ಉಳಿಸುವುದಾಗಿ ಪ್ರಮಾಣ ಮಾಡಿರಿ” ಎಂದು ಬೇಡಿಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನನ್ನ ತಂದೆಯನ್ನೂ ನನ್ನ ತಾಯಿಯನ್ನೂ, ನನ್ನ ಸಹೋದರರನ್ನೂ ನನ್ನ ಸಹೋದರಿಯರನ್ನೂ, ಅವರಲ್ಲಿರುವ ಎಲ್ಲರನ್ನೂ ಜೀವದಿಂದಿರಿಸಿ, ನಮ್ಮ ಪ್ರಾಣವನ್ನು ಸಾವಿನಿಂದ ತಪ್ಪಿಸಬೇಕು ಎಂದು ಯೆಹೋವ ದೇವರ ಮೇಲೆ ಪ್ರಮಾಣ ಮಾಡಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 2:13
3 ತಿಳಿವುಗಳ ಹೋಲಿಕೆ  

ಆದುದರಿಂದ ಈಗ ನೀವು ನನಗೆ ನಂಬತಕ್ಕ ಒಂದು ಗುರುತನ್ನು ಕೊಡಬೇಕು. ನಾನು ನಿಮಗೆ ದಯೆತೋರಿಸಿದಂತೆ ನೀವೂ ಸಹ ನನ್ನ ತಂದೆಯ ಮನೆಯವರಿಗೆ ದಯೆತೋರಿಸಬೇಕೆಂದು ಯೆಹೋವನ ಮೇಲೆ ವಾಗ್ದಾನ ನೀಡಬೇಕು.


ಆಗ ಆ ಗೂಢಚಾರರು “ನೀವು ನಮ್ಮ ವಿಷಯವನ್ನು ಬಹಿರಂಗ ಮಾಡದಿದ್ದರೆ ನಾವು ನಿಮ್ಮ ಪ್ರಾಣಕ್ಕೆ ಹೊಣೆಯಾಗಿರುತ್ತೇವೆ; ಯೆಹೋವನು ಈ ದೇಶವನ್ನು ನಮಗೆ ಅನುಗ್ರಹಿಸಿದ ಮೇಲೆ ನಾವು ಕೊಟ್ಟ ಮಾತಿನಂತೆ ನಿನ್ನಲ್ಲಿ ದಯೆಯಿಂದಲೂ ನಂಬಿಗಸ್ತಿಕೆಯಿಂದಲೂ ನಡೆದುಕೊಳ್ಳುವೆವು” ಅಂದರು.


ಆ ಯೌವನಸ್ಥರು ಹೋಗಿ ರಾಹಾಬಳನ್ನೂ ಅವಳ ತಂದೆತಾಯಿಯನ್ನು, ಸಹೋದರರನ್ನು, ಅವಳಿಗಿರುವುದೆಲ್ಲವನ್ನೂ, ಅವಳ ಗೋತ್ರದ ಎಲ್ಲಾ ಜನರನ್ನೂ ತಂದು ಇಸ್ರಾಯೇಲ್ಯರ ಪಾಳೆಯದ ಹೊರಗೆ ಇಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು