ಯೆಹೋಶುವ 2:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆಗ ಯೆರಿಕೋವಿನ ಅರಸನು ರಾಹಾಬಳಿಗೆ “ನಿನ್ನ ಮನೆಯಲ್ಲಿ ಇಳಿದುಕೊಂಡಿರುವ ಆ ಮನುಷ್ಯರನ್ನು ತಂದೊಪ್ಪಿಸು; ಅವರು ದೇಶವನ್ನೆಲ್ಲಾ ಸಂಚರಿಸಿ ನೋಡಿ ಹೊಂಚುಹಾಕುವುದಕ್ಕೆ ಬಂದವರು” ಎಂದು ಹೇಳಿ ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಅವನು ರಾಹಾಬಳಿಗೆ, “ನಿನ್ನ ಮನೆಯಲ್ಲಿ ಇಳಿದುಕೊಂಡಿರುವ ಆ ವ್ಯಕ್ತಿಗಳನ್ನು ತಂದೊಪ್ಪಿಸು. ಅವರು ನಾಡನ್ನೆಲ್ಲಾ ಸಂಚರಿಸಿ ಬೇಹು ಮಾಡಲು ಬಂದವರು” ಎಂದು ಹೇಳಿ ಕಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಯೆರಿಕೋವಿನ ಅರಸನು ರಾಹಾಬಳಿಗೆ - ನಿನ್ನ ಮನೆಯಲ್ಲಿಳುಕೊಂಡಿರುವ ಮನುಷ್ಯರನ್ನು ತಂದೊಪ್ಪಿಸು; ಅವರು ದೇಶವನ್ನೆಲ್ಲಾ ಸಂಚರಿಸಿ ನೋಡುವದಕ್ಕೆ ಬಂದವರು ಎಂದು ಹೇಳಿ ಕಳುಹಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಆಗ ಜೆರಿಕೊ ನಗರದ ಅರಸನು ರಾಹಾಬಳಿಗೆ, “ನಿನ್ನ ಮನೆಗೆ ಬಂದು ಇಳಿದುಕೊಂಡ ಆ ಜನರನ್ನು ಬಚ್ಚಿಡಬೇಡ. ಅವರನ್ನು ಹೊರಗೆ ಕರೆದುಕೊಂಡು ಬಾ. ಅವರು ನಮ್ಮ ದೇಶದ ಬಗ್ಗೆ ತಿಳಿದುಕೊಳ್ಳುವುದಕ್ಕೆ ಬಂದಿದ್ದಾರೆ” ಎಂದು ಹೇಳಿ ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆಗ ಯೆರಿಕೋವಿನ ಅರಸನು ರಾಹಾಬಳಿಗೆ, “ನಿನ್ನ ಬಳಿಗೆ ಬಂದು ನಿನ್ನ ಮನೆಯಲ್ಲಿ ಪ್ರವೇಶಿಸಿದ ಮನುಷ್ಯರನ್ನು ಹೊರಗೆ ಕರೆದುಕೊಂಡು ಬಾ. ಏಕೆಂದರೆ ಅವರು ದೇಶವನ್ನೆಲ್ಲಾ ಗೂಢಚಾರ ಮಾಡಲು ಬಂದಿದ್ದಾರೆ,” ಎಂದನು. ಅಧ್ಯಾಯವನ್ನು ನೋಡಿ |