Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 2:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆದರೆ ಆ ಸ್ತ್ರೀಯು ಆ ಇಬ್ಬರನ್ನು ಅಡಗಿಸಿಟ್ಟು ಕೇಳಲು ಬಂದವರಿಗೆ, “ಆ ಮನುಷ್ಯರು ನನ್ನ ಬಳಿಗೆ ಬಂದದ್ದು ನಿಜ; ಅವರು ಎಲ್ಲಿಯವರೆಂಬುದು ನನಗೆ ತಿಳಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ವೇಶ್ಯೆ ಆ ಇಬ್ಬರನ್ನು ಅಡಗಿಸಿಟ್ಟು, ಕೇಳಲು ಬಂದವರಿಗೆ, “ಆ ವ್ಯಕ್ತಿಗಳು ನನ್ನ ಬಳಿಗೆ ಬಂದದ್ದೇನೋ ನಿಜ. ಅವರು ಎಲ್ಲಿಯವರೆಂದು ನನಗೆ ತಿಳಿಯದೆ ಹೋಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆ ಸ್ತ್ರೀಯು ಆ ಇಬ್ಬರನ್ನು ಅಡಗಿಸಿಟ್ಟು ಕೇಳ ಬಂದವರಿಗೆ - ಆ ಮನುಷ್ಯರು ನನ್ನ ಬಳಿಗೆ ಬಂದದ್ದು ನಿಜ; ಅವರು ಎಲ್ಲಿಯವರೆಂಬದು ನನಗೆ ಗೊತ್ತಿದ್ದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ರಾಹಾಬಳು ಈ ಇಬ್ಬರನ್ನು ಅಡಗಿಸಿಟ್ಟಿದ್ದಳು. ಆದರೆ ಆಕೆಯು ಕೇಳಬಂದವರಿಗೆ, “ಇಬ್ಬರು ಮನುಷ್ಯರು ಇಲ್ಲಿಗೆ ಬಂದಿದ್ದರು, ಆದರೆ ಅವರು ಎಲ್ಲಿಂದ ಬಂದಿದ್ದರೆಂಬುದು ನನಗೆ ಗೊತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆದರೆ ಆ ಸ್ತ್ರೀಯು ಆ ಇಬ್ಬರನ್ನು ಅಡಗಿಸಿಟ್ಟು, “ನನ್ನ ಬಳಿಗೆ ಇಬ್ಬರು ಮನುಷ್ಯರು ಬಂದಿದ್ದರು. ಆದರೆ ನಾನು ಅವರನ್ನು ಯಾವ ಕಡೆಯವರೆಂದು ತಿಳಿಯದೆ ಇದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 2:4
9 ತಿಳಿವುಗಳ ಹೋಲಿಕೆ  

ಆಗ ಎಲೀಷನು ಅವರಿಗೆ, “ನೀವು ಹೋಗಬೇಕೆಂದಿದ್ದ ಪಟ್ಟಣವೂ, ದಾರಿಯೂ ಇದಲ್ಲ, ನನ್ನ ಜೊತೆಯಲ್ಲಿ ಬನ್ನಿರಿ, ನೀವು ಹುಡುಕುತ್ತಿರುವ ಮನುಷ್ಯನ ಬಳಿಗೆ ನಿಮ್ಮನ್ನು ಕರೆದುಕೊಂಡು ಹೋಗುತ್ತೇನೆ” ಎಂದು ಹೇಳಿ ಅವರನ್ನು ಸಮಾರ್ಯಕ್ಕೆ ಕರೆದುಕೊಂಡು ಹೋದನು.


ಸೂಲಗಿತ್ತಿಯರು ಫರೋಹನಿಗೆ, “ಇಬ್ರಿಯರ ಸ್ತ್ರೀಯರು ಐಗುಪ್ತ ಸ್ತ್ರೀಯರಂತೆ ಅಲ್ಲ, ಅವರು ಬಹು ಚುರುಕು ಬುದ್ಧಿಯವರು. ಸೂಲಗಿತ್ತಿಯು ಅವರ ಹತ್ತಿರ ಬರುವುದಕ್ಕೆ ಮೊದಲೇ ಮಗುವನ್ನು ಹೆರುತ್ತಿದ್ದರು” ಎಂದು ಹೇಳಿದರು.


ಅದೇ ರೀತಿಯಾಗಿ ವೇಶ್ಯೆಯಾದ ರಾಹಾಬಳು ಗೂಢಚಾರರನ್ನು ತನ್ನ ಮನೆಯಲ್ಲಿ ಸೇರಿಸಿಕೊಂಡು, ಬೇರೆ ದಾರಿಯಿಂದ ಅವರನ್ನು ಕಳುಹಿಸಿದ ಕ್ರಿಯೆಗಳಿಂದಲೇ ನೀತಿವಂತಳೆಂಬ, ನಿರ್ಣಯವನ್ನು ಹೊಂದಿದಳಲ್ಲವೇ?


ಆಗ ಯೆರಿಕೋವಿನ ಅರಸನು ರಾಹಾಬಳಿಗೆ “ನಿನ್ನ ಮನೆಯಲ್ಲಿ ಇಳಿದುಕೊಂಡಿರುವ ಆ ಮನುಷ್ಯರನ್ನು ತಂದೊಪ್ಪಿಸು; ಅವರು ದೇಶವನ್ನೆಲ್ಲಾ ಸಂಚರಿಸಿ ನೋಡಿ ಹೊಂಚುಹಾಕುವುದಕ್ಕೆ ಬಂದವರು” ಎಂದು ಹೇಳಿ ಕಳುಹಿಸಿದನು.


ಊರಬಾಗಿಲನ್ನು ಮುಚ್ಚುವ ಹೊತ್ತಿನಲ್ಲಿ ಕತ್ತಲಲ್ಲೇ ಹೊರಟುಹೋದರು. ಎಲ್ಲಿಗೆ ಹೋದರೆಂಬುದು ಗೊತ್ತಿಲ್ಲ. ಬೇಗನೆ ಅವರನ್ನು ಬೆನ್ನಟ್ಟಿರಿ; ನಿಮಗೆ ಸಿಕ್ಕಾರು” ಎಂದು ಹೇಳಿದಳು.


ಇದೂ ಇದರಲ್ಲಿರುವುದೆಲ್ಲವೂ ಯೆಹೋವನಿಗೆ ಅರ್ಪಿತವಾದವುಗಳೇ ಎಂದು ತಿಳಿಯಿರಿ. ವೇಶ್ಯೆಯಾದ ರಾಹಾಬಳೂ ಅವಳ ಸಂಗಡ ಮನೆಯಲ್ಲಿರುವವರೆಲ್ಲರೂ ಉಳಿಯಲಿ. ಏಕೆಂದರೆ ನಾವು ಕಳುಹಿಸಿದ ಗೂಢಚಾರರನ್ನು ಅವಳು ಅಡಗಿಸಿಟ್ಟಿದ್ದಳಲ್ಲಾ.


ವೇಶ್ಯೆಯಾದ ರಾಹಾಬಳು ಯೆರಿಕೋ ಪಟ್ಟಣವನ್ನು ಸಂಚರಿಸಿ ನೋಡುವುದಕ್ಕೆ ಬಂದಿದ್ದ ಯೆಹೋಶುವನ ಗೂಢಚಾರರನ್ನು ಅಡಗಿಸಿಟ್ಟದ್ದರಿಂದ ಅವನು ಅವಳನ್ನೂ, ಅವಳ ತಂದೆಯ ಮನೆಯವರನ್ನೂ, ಅವಳಿಗಿರುವುದೆಲ್ಲವನ್ನೂ ಉಳಿಸಿದನು. ಅವಳು ಇಂದಿನವರೆಗೂ ಇಸ್ರಾಯೇಲ್ಯರಲ್ಲಿ ವಾಸವಾಗಿದ್ದಾಳೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು