Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 20:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಇಸ್ರಾಯೇಲ್ಯರು ನಫ್ತಾಲಿ ಕುಲದವರ ಪರ್ವತಪ್ರದೇಶವಾದ ಗಲಿಲಾಯ ಪ್ರಾಂತ್ಯದಲ್ಲಿನ ಕೆದೆಷ್, ಎಫ್ರಾಯೀಮ್ ಪರ್ವತ ಪ್ರದೇಶದಲ್ಲಿನ ಶೆಕೆಮ್ ಹಾಗೂ ಯೆಹೂದ್ಯರ ಬೆಟ್ಟದ ಸೀಮೆಯಲ್ಲಿ ಹೆಬ್ರೋನ್ ಅನ್ನಿಸಿಕೊಳ್ಳುವ ಕಿರ್ಯತರ್ಬ ಎಂಬ ಪಟ್ಟಣಗಳನ್ನು ನೇಮಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅಂತೆಯೇ ಇಸ್ರಯೆಲರು ನಫ್ತಾಲಿ ಕುಲದವರ ಮಲೆನಾಡಿನ ಪ್ರದೇಶವಾದ ಗಲಿಲೇಯ ಪ್ರಾಂತ್ಯದಲ್ಲಿನ ಕೆದೆಷ್, ಎಫ್ರಯಿಮ್ ಮಲೆನಾಡಿನ ಪ್ರದೇಶದಲ್ಲಿನ ಶೆಕೆಮ್ ಹಾಗೂ ಯೂದವಂಶದ ಮಲೆನಾಡಿನ ಹೆಬ್ರೋನ್ ಎನಿಸಿಕೊಳ್ಳುವ ಕಿರ್ಯತರ್ಬ ಎಂಬ ನಗರಗಳನ್ನು ನೇಮಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಇಸ್ರಾಯೇಲ್ಯರು ನಫ್ತಾಲಿಕುಲದವರ ಪರ್ವತಪ್ರದೇಶವಾದ ಗಲಿಲಾಯ ಪ್ರಾಂತದಲ್ಲಿ ಕೆದೆಷ್, ಎಫ್ರಾಯೀಮ್ ಪರ್ವತಪ್ರದೇಶದಲ್ಲಿ ಶೆಕೆಮ್, ಯೆಹೂದ್ಯರ ಬೆಟ್ಟದ ಸೀಮೆಯಲ್ಲಿ ಹೆಬ್ರೋನ್ ಅನ್ನಿಸಿಕೊಳ್ಳುವ ಕಿರ್ಯತರ್ಬ ಎಂಬೀ ಪಟ್ಟಣಗಳನ್ನು ನೇವಿುಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆದ್ದರಿಂದ ಇಸ್ರೇಲರು “ಆಶ್ರಯನಗರಗಳನ್ನಾಗಿ” ಕೆಲವು ನಗರಗಳನ್ನು ಆರಿಸಿದರು. ಅವು ಯಾವುವೆಂದರೆ: ನಫ್ತಾಲಿ ಕುಲದವರ ಪರ್ವತ ಪ್ರದೇಶವಾದ ಗಲಿಲಾಯ ಪ್ರಾಂತ್ಯದಲ್ಲಿನ ಕೆದೆಷ್; ಎಫ್ರಾಯೀಮ್ ಪರ್ವತ ಪ್ರದೇಶದಲ್ಲಿನ ಶೆಕೆಮ್; ಯೆಹೂದ್ಯರ ಬೆಟ್ಟದ ಸೀಮೆಯಲ್ಲಿನ ಹೆಬ್ರೋನ್ ಎಂಬ ಕಿರ್ಯತರ್ಬ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅದರಂತೆ ನಫ್ತಾಲಿಯ ಬೆಟ್ಟದ ಗಲಿಲಾಯದಲ್ಲಿ ಇರುವ ಕೆದೆಷನ್ನೂ, ಎಫ್ರಾಯೀಮನ ಬೆಟ್ಟಗಳಲ್ಲಿರುವ ಶೆಕೆಮನ್ನೂ, ಯೆಹೂದದ ಬೆಟ್ಟಗಳಲ್ಲಿರುವ ಹೆಬ್ರೋನ್ ಎಂಬ ಕಿರ್ಯತ್ ಅರ್ಬವನ್ನೂ ನೇಮಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 20:7
22 ತಿಳಿವುಗಳ ಹೋಲಿಕೆ  

ಇವುಗಳಲ್ಲಿ ಯೆಹೂದ ಬೆಟ್ಟದ ಸೀಮೆಯ ಹೆಬ್ರೋನೆಂಬ ಗೋಮಾಳ ಸಹಿತವಾದ ಕಿರ್ಯತರ್ಬವೂ ಸೇರಿರುತ್ತದೆ. (ಕಿರ್ಯಾತ ಅರ್ಬ ಎಂದರೆ ಅನಾಕನ ತಂದೆಯಾದ ಅರ್ಬನ ಪಟ್ಟಣ) ಅದರ ಸುತ್ತಲಿರುವ ಉಪನಗರಗಳನ್ನೂ ಅವರಿಗೆ ಕೊಟ್ಟರು.


ಇದಾದ ನಂತರ ಮರಿಯಳು ಎದ್ದು ತ್ವರೆಯಾಗಿ ಯೆಹೂದದ ಮಲೆನಾಡಿನಲ್ಲಿರುವ ಒಂದು ಊರಿಗೆ ಹೋದಳು.


ನಫ್ತಾಲಿ ಕುಲದ ಸ್ವತ್ತಿನಿಂದ ಗಲಿಲಾಯದ ಕೆದೆಷ್, ಹಮ್ಮೋನ್, ಕಿರ್ಯಾತಯಿಮ್ ಎಂಬ ಗೋಮಾಳ ಸಹಿತವಾದ ಪಟ್ಟಣಗಳು ದೊರಕಿದವು.


ನಫ್ತಾಲಿ ಸ್ವತ್ತಿನಿಂದ, ಕೊಲೆ ಮಾಡಿದವನಿಗೆ ಆಶ್ರಯ ನಗರವಾದ ಗಲಿಲಾಯದ ಕೆದೆಷ್ ಹಮ್ಮೋತ್ ದೋರ್, ಕರ್ತಾನ್ ಎಂಬ ಗೋಮಾಳ ಸಹಿತವಾದ ಮೂರು ಪಟ್ಟಣಗಳು ದೊರಕಿದವು.


ಎಫ್ರಾಯೀಮ್ಯರ ಸ್ವತ್ತಿನಿಂದ ಬೆಟ್ಟದಲ್ಲಿರುವ ಶೆಕೆಮ್ ಎಂಬ ಆಶ್ರಯ ನಗರ,


ಮಹಾಯಾಜಕನಾದ ಆರೋನನ ವಂಶದವರಿಗೆ ಮೇಲೆ ಹೇಳಿದ ಎರಡು ಕುಲಗಳಿಂದ ಹೆಬ್ರೋನೆಂಬ ಆಶ್ರಯ ನಗರವಾದ ಲಿಬ್ನಾ,


ಅದರ ಹಿಂದಿನ ಹೆಸರು “ಕಿರ್ಯತ್ಅರ್ಬ” ಎಂಬುದಾಗಿತ್ತು. “ಅರ್ಬ” ಎಂಬುವವನು ಉನ್ನತ ಪುರುಷರಲ್ಲಿ (ಅನಾಕ್ಯರಲ್ಲಿ) ಪ್ರಮುಖನಾಗಿದ್ದನು. ಯುದ್ಧವು ನಿಂತು ದೇಶದಲ್ಲಿ ಸಮಾಧಾನ ಉಂಟಾಯಿತು.


ರೆಹಬ್ಬಾಮನು ಶೆಕೆಮಿಗೆ ಹೋದನು. ಅಲ್ಲಿ ಎಲ್ಲಾ ಇಸ್ರಾಯೇಲರೂ ಅವನನ್ನು ಅರಸನನ್ನಾಗಿ ಮಾಡುವುದಕ್ಕೆ ಕೂಡಿಬಂದಿದ್ದರು.


ಸಾರಳು ಕಾನಾನ್ ದೇಶದಲ್ಲಿರುವ ಹೆಬ್ರೋನೆಂಬ ಕಿರ್ಯತರ್ಬದಲ್ಲಿ ಸತ್ತಳು. ಅಬ್ರಹಾಮನು ಬಂದು ಆಕೆಗಾಗಿ ಗೋಳಾಡಿ ಕಣ್ಣೀರು ಸುರಿಸಿದನು.


ಮನುಷ್ಯನನ್ನು ಹತ್ಯೆಮಾಡಿದವರು ಆಶ್ರಯಕ್ಕಾಗಿ ಓಡಿ ಹೋಗುವುದಕ್ಕೋಸ್ಕರ ನೀವು ನೇಮಿಸುವ ಆರು ಆಶ್ರಯನಗರಗಳನ್ನೂ, ಬೇರೆ ನಲ್ವತ್ತೆರಡು ಪಟ್ಟಣಗಳನ್ನೂ ಅಂತು ನಲ್ವತ್ತೆಂಟು ಪಟ್ಟಣಗಳನ್ನು ಲೇವಿಯರಿಗೆ ಕೊಡಬೇಕು.


ಆ ಕಾಲದಲ್ಲಿ ಮೋಶೆ ಯೊರ್ದನ್ ನದಿಯ ಪೂರ್ವದಿಕ್ಕಿನಲ್ಲಿ ಮೂರು ಆಶ್ರಯ ಪಟ್ಟಣಗಳನ್ನು ಗೊತ್ತುಮಾಡಿದನು.


ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ, ಆತನು ಹೇಳುವ ಮಾರ್ಗದಲ್ಲೇ ಯಾವಾಗಲೂ ನಡೆಯುವುದಾದರೆ, ಆಗ ಯೆಹೋವನು ಈ ಮೂರು ನಗರಗಳನ್ನು ನಿಮಗೆ ಕೊಡುವನು.


ಕೆದೆಷಿನ ಅರಸನು - 1 ಕರ್ಮೆಲ್ ಬೆಟ್ಟದ ಯೊಕ್ನೆಯಾಮದ ಅರಸನು - 1


ಇವುಗಳನ್ನು ಮಾತ್ರವಲ್ಲದೆ, ಯೆರಿಕೋವಿನ ಪೂರ್ವದಲ್ಲಿರುವ ಯೊರ್ದನಿನ ಆಚೆಯಲ್ಲಿ ರೂಬೇನ್ಯರ ಬೆಟ್ಟದ ಮೇಲಿನ ಅರಣ್ಯ ಪ್ರದೇಶದಲ್ಲಿರುವ ಬೆಚೆರ್, ಗಾದ್ಯರಿಗೆ ಸೇರಿದ ಗಿಲ್ಯಾದ್ ಪ್ರಾಂತ್ಯದ ರಾಮೋತ್, ಮನಸ್ಸೆಯವರಿಗೆ ಸೇರಿದ ಬಾಷಾನಿನಲ್ಲಿರುವ ಗೋಲಾನ್ ಎಂಬ ಪಟ್ಟಣಗಳನ್ನು ನೇಮಿಸಿದನು.


ಯೆಹೋಶುವನು ಯೆಹೋವನ ಅಪ್ಪಣೆಯಂತೆ ಯೆಫುನ್ನೆಯ ಮಗನಾದ ಕಾಲೇಬನಿಗೆ ಯೆಹೂದ ಕುಲದವರ ಮಧ್ಯದಲ್ಲಿಯೇ ಅನಾಕನ ತಂದೆಯಾದ ಅರ್ಬನ ಪಟ್ಟಣವಾಗಿದ್ದ ಹೆಬ್ರೋನನ್ನು ಕೊಟ್ಟನು.


ಚಿದ್ದೀಮ್, ಚೇರ್, ಹಮ್ಮತ್, ರಕ್ಕತ್, ಕಿನ್ನೆರೆತ್,


ಕೆದೆಷ್ ಎದ್ರೈ, ಏನ್ ಹಾಚೋರ್,


ತರುವಾಯ ಯೆಹೋಶುವನು ಇಸ್ರಾಯೇಲ್ಯರ ಎಲ್ಲಾ ಕುಲದವರನ್ನು ಶೆಕೆಮಿನಲ್ಲಿ ಸಭೆ ಸೇರಿಸಿದನು. ಹಿರಿಯರು, ಪ್ರಧಾನರು, ನ್ಯಾಯಾಧಿಪತಿಗಳು, ಅಧಿಕಾರಿಗಳು ಬಂದು ದೇವರ ಸನ್ನಿಧಿಯಲ್ಲಿ ಕಾಣಿಸಿಕೊಂಡರು.


ಯೆರುಬ್ಬಾಳನ ಮಗನಾದ ಅಬೀಮೆಲೆಕನು ಶೆಕೆಮಿಗೆ ಹೋಗಿ ತನ್ನ ಸೋದರಮಾವಂದಿರಿಗೂ, ತಾಯಿಯ ಬಂಧುಗಳೆಲ್ಲರಿಗೂ ಹೇಳಿದ್ದೇನೆಂದರೆ,


ರೆಹಬ್ಬಾಮನು ಶೆಕೆಮಿಗೆ ಹೋದನು. ಅಲ್ಲಿ ಎಲ್ಲಾ ಇಸ್ರಾಯೇಲರೂ ಅವನನ್ನು ಅರಸನನ್ನಾಗಿ ಮಾಡುವುದಕ್ಕೆ ಸೇರಿಬಂದಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು