Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 21:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಲೇವಿ ಕುಲಾಧಿಪತಿಗಳು ಕಾನಾನ್ ದೇಶದ ಶೀಲೋವಿನಲ್ಲಿದ್ದ ಮಹಾಯಾಜಕನಾದ ಎಲ್ಲಾಜಾರ, ನೂನನ ಮಗನಾದ ಯೆಹೋಶುವ ಮತ್ತು ಇಸ್ರಾಯೇಲ ಕುಲಾಧಿಪತಿಗಳು ಇವರ ಬಳಿಗೆ ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಲೇವಿ ಕುಲಾಧಿಪತಿಗಳು ಕಾನಾನ್ ನಾಡಿನ ಶೀಲೋವಿನಲ್ಲಿದ್ದ ಯಾಜಕ ಎಲ್ಲಾಜಾರ್, ನೂನನ ಮಗ ಯೆಹೋಶುವ ಮತ್ತು ಇಸ್ರಯೇಲ್ ಕುಲಾಧಿಪತಿಗಳ ಬಳಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಲೇವಿಕುಲಾಧಿಪತಿಗಳು ಕಾನಾನ್‍ದೇಶದ ಶೀಲೋವಿನಲ್ಲಿದ್ದ ಮಹಾಯಾಜಕನಾದ ಎಲ್ಲಾಜಾರ್, ನೂನನ ಮಗನಾದ ಯೆಹೋಶುವ, ಇಸ್ರಾಯೇಲ್ ಕುಲಾಧಿಪತಿಗಳು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಲೇವಿ ಕುಲಾಧಿಪತಿಗಳು ಮಾತಾಡುವುದಕ್ಕಾಗಿ ಯಾಜಕನಾದ ಎಲ್ಲಾಜಾರನ, ನೂನನ ಮಗನಾದ ಯೆಹೋಶುವನ ಮತ್ತು ಇಸ್ರೇಲಿನ ಬೇರೆ ಕುಲಾಧಿಪತಿಗಳ ಬಳಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಲೇವಿ ಗೋತ್ರದ ಹಿರಿಯರು, ನೂನನ ಮಗನಾದ ಯೆಹೋಶುವನ ಬಳಿಗೂ ಇಸ್ರಾಯೇಲರ ಗೋತ್ರಗಳ ಹಿರಿಯರ ಬಳಿಗೂ ಯಾಜಕನಾದ ಎಲಿಯಾಜರನ ಬಳಿಗೂ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 21:1
9 ತಿಳಿವುಗಳ ಹೋಲಿಕೆ  

ಮಹಾಯಾಜಕನಾದ ಎಲಿಯಾಜರನೂ, ನೂನನ ಮಗನಾದ ಯೆಹೋಶುವನೂ ಹಾಗೂ ಇಸ್ರಾಯೇಲ್ಯರ ಕುಲಾಧಿಪತಿಗಳೂ


ಯಾಜಕನಾದ ಎಲಿಯಾಜರನೂ, ನೂನನ ಮಗ ಯೆಹೋಶುವನೂ, ಇಸ್ರಾಯೇಲ್ಯರ ಕುಲಮುಖ್ಯಸ್ಥರೂ ಸೇರಿ ಇಸ್ರಾಯೇಲ್ಯರಿಗೆ ಶೀಲೋವಿನಲ್ಲಿದ್ದ ದೇವದರ್ಶನ ಗುಡಾರದ ಬಾಗಿಲಲ್ಲಿ ಯೆಹೋವನ ಸನ್ನಿಧಿಯಲ್ಲೇ ಚೀಟು ಹಾಕಿ ಹಂಚಿಕೊಟ್ಟ ಪ್ರಾಂತ್ಯಗಳು ಇವೇ. ಹೀಗೆ ದೇಶ ವಿಭಜನೆಯ ಕಾರ್ಯವು ಪೂರ್ಣಗೊಂಡಿತು.


ಇವರು ಮಹಾಯಾಜಕನಾದ ಎಲ್ಲಾಜಾರ, ನೂನನ ಮಗನಾದ ಯೆಹೋಶುವ, ಹಾಗೂ ಕುಲಾಧಿಪತಿಗಳ ಬಳಿಗೆ ಬಂದು, “ನಮ್ಮ ಅಣ್ಣತಮ್ಮಂದಿರೊಡನೆ ನಮಗೂ ಪಾಲುಕೊಡಬೇಕೆಂದು ಯೆಹೋವನು ಮೋಶೆಗೆ ಆಜ್ಞಾಪಿಸಿದ್ದನಲ್ಲಾ?” ಎಂದು ಹೇಳಲು ಯೆಹೋಶುವನು ಯೆಹೋವನ ಅಪ್ಪಣೆಯಂತೆ ಅವರಿಗೆ ಅವರ ತಂದೆಯ ಅಣ್ಣತಮ್ಮಂದಿರ ಜೊತೆಗೆ ಸ್ವತ್ತನ್ನು ಕೊಟ್ಟನು.


ಆರೋನನ ಮಗನಾದ ಎಲ್ಲಾಜಾರನು ಪೂಟಿಯೇಲನ ಹೆಣ್ಣು ಮಕ್ಕಳಲ್ಲಿ ಒಬ್ಬಾಕೆಯನ್ನು ಮದುವೆ ಮಾಡಿಕೊಂಡನು. ಆಕೆ ಅವನಿಗೆ ಫೀನೆಹಾಸನನ್ನು ಹೆತ್ತಳು. ಅವರವರ ಗೋತ್ರದ ಪ್ರಕಾರ ಇವರೇ ಲೇವಿಯರ ಪೂರ್ವಿಕರು.


ಇಸ್ರಾಯೇಲ್ ಗೋತ್ರಗಳ ಕುಟುಂಬಗಳ ಮುಖ್ಯಸ್ಥರು: ಇಸ್ರಾಯೇಲನ ಚೊಚ್ಚಲು ಮಗನಾದ ರೂಬೇನನ ಮಕ್ಕಳು: ಹನೋಕ್, ಫಲ್ಲು, ಹೆಚ್ರೋನ್, ಕರ್ಮೀ. ಇವರೇ ರೂಬೇನಿನಿಂದ ಉಂಟಾದ ಗೋತ್ರಗಳ ಮೂಲ ಪುರುಷರು.


ಅವರ ಕೋಪವು ಭಯಂಕರವಾಗಿಯೂ ಅವರ ರೌದ್ರವು ಕ್ರೂರವಾಗಿಯೂ ಇದ್ದು ಅದು ಶಾಪಗ್ರಸ್ಥವಾದುದಾಗಿದೆ. ಯಾಕೋಬನ ಕುಲದವರಲ್ಲಿ ಅವರನ್ನು ವಿಭಾಗಿಸುವೆನು. ಇಸ್ರಾಯೇಲರಲ್ಲಿ ಅವರನ್ನು ಚದುರಿಸುವೆನು.


ಯೊರ್ದನ್ ನದಿಯ ತೀರದಲ್ಲಿ ಯೆರಿಕೋ ಪಟ್ಟಣದ ಹತ್ತಿರವಿರುವ ಮೋವಾಬ್ಯರ ಮೈದಾನದಲ್ಲಿ ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,


ಇಸ್ರಾಯೇಲರ ಸ್ವತ್ತಿನಲ್ಲಿ ಆಯಾ ಕುಲದ ಸ್ವತ್ತಿನ ಪ್ರಮಾಣಕ್ಕೆ ತಕ್ಕ ಹಾಗೆ ಹೆಚ್ಚಾದ ಜನರುಳ್ಳವರಿಂದ ಹೆಚ್ಚಾಗಿಯೂ, ಕಡಿಮೆಯಾದ ಜನರಿಂದ ಕಡಿಮೆಯಾಗಿಯೂ ಲೇವಿಯರಿಗೋಸ್ಕರ ಊರುಗಳನ್ನು ಕೊಡಿಸಬೇಕು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು