Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 21:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆದ್ದರಿಂದ ಇಸ್ರಾಯೇಲ್ಯರು ಅವರಿಗೆ ಯೆಹೂದ ಸಿಮೆಯೋನ್ ಕುಲಗಳಿಂದ ಕೆಳಗೆ ಹೇಳಿರುವ ಪಟ್ಟಣಗಳನ್ನು ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆದ್ದರಿಂದ ಇಸ್ರಯೇಲರು ಅವರಿಗೆ ಯೆಹೂದ ಮತ್ತು ಸಿಮೆಯೋನ್ ಕುಲಗಳಿಂದ ಕೆಳಗೆ ಹೇಳಿರುವ ನಗರಗಳನ್ನು ಕೊಟ್ಟರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಇಸ್ರಾಯೇಲ್ಯರು ಅವರಿಗೆ ಯೆಹೂದ ಸಿಮೆಯೋನ್ ಕುಲಗಳಿಂದ ಕೆಳಗೆ ಹೇಳಿರುವ ಪಟ್ಟಣಗಳನ್ನು ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಪಟ್ಟಣಗಳನ್ನು ಆರಿಸಿಕೊಳ್ಳುವ ಮೊದಲ ಅಧಿಕಾರವನ್ನು ಕೆಹಾತ್ಯ ಗೋತ್ರದ ಲೇವಿಯರಿಗೆ ಕೊಡಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಲೇವಿಯರಿಗೆ ಮೊದಲನೆಯ ಚೀಟು ಬಿದ್ದ ಕಾರಣ, ಲೇವಿ ಗೋತ್ರಕ್ಕೆ ಸೇರಿದ ಕೊಹಾತ್ಯರಾದ ಆರೋನನ ಸಂತತಿಯರಿಗೆ ಯೆಹೂದ ಗೋತ್ರದಲ್ಲಿಯೂ, ಸಿಮೆಯೋನನ ಗೋತ್ರದಲ್ಲಿಯೂ ಕೂಡಲಾದ ಪಟ್ಟಣಗಳ ವಿವರ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 21:10
10 ತಿಳಿವುಗಳ ಹೋಲಿಕೆ  

ಕೆಹಾತ್ಯರಿಗೋಸ್ಕರ ಚೀಟುಹಾಕಿದಾಗ ಆರೋನನ ವಂಶದವರಾದ ಲೇವಿಯರಿಗೆ ಯೆಹೂದ, ಸಿಮೆಯೋನ್, ಬೆನ್ಯಾಮೀನ್ ಕುಲಗಳಿಂದ ಹದಿಮೂರು ಪಟ್ಟಣಗಳು ದೊರೆತವು.


“ನೀನು ಲೇವಿಯರೊಳಗೆ ಕೆಹಾತ್ಯರನ್ನು ಅವರ ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಬೇಕು.


ಕೆಹಾತ್ ವಂಶದವರಲ್ಲಿ ಅಮ್ರಾಮ್ ಗೋತ್ರದವರು, ಇಚ್ಹಾರ್ ಗೋತ್ರದವರೂ, ಹೆಬ್ರೋನ್ ಗೋತ್ರದವರೂ, ಉಜ್ಜೀಯೇಲ್ ಗೋತ್ರದವರೂ ಇದ್ದರು.


ಗೋತ್ರಸ್ಥಾಪಕರಾದ ಕೆಹಾತನ ಮಕ್ಕಳು: ಅಮ್ರಾಮ್, ಇಚ್ಹಾರ್, ಹೆಬ್ರೋನ್, ಉಜ್ಜೀಯೇಲ್, ಎಂಬುವವರು.


ಕೊಹಾತನ ಮಕ್ಕಳು: ಅಮ್ರಾಮ್, ಇಚ್ಹಾರ್, ಹೆಬ್ರೋನ್, ಉಜ್ಜೀಯೇಲ್. ಕೆಹಾತನು ನೂರ ಮೂವತ್ತಮೂರು ವರ್ಷ ಬದುಕಿದನು.


ಲೇವಿ ಕುಲದವರು ಕೆಹಾತ್ಯರ ಗೋತ್ರದವರೂ ಆದ ಆರೋನನ ಕುಟುಂಬದವರಿಗೆ ಮೊದಲು ಚೀಟು ಬಿದ್ದಿತು.


ಇವುಗಳಲ್ಲಿ ಯೆಹೂದ ಬೆಟ್ಟದ ಸೀಮೆಯ ಹೆಬ್ರೋನೆಂಬ ಗೋಮಾಳ ಸಹಿತವಾದ ಕಿರ್ಯತರ್ಬವೂ ಸೇರಿರುತ್ತದೆ. (ಕಿರ್ಯಾತ ಅರ್ಬ ಎಂದರೆ ಅನಾಕನ ತಂದೆಯಾದ ಅರ್ಬನ ಪಟ್ಟಣ) ಅದರ ಸುತ್ತಲಿರುವ ಉಪನಗರಗಳನ್ನೂ ಅವರಿಗೆ ಕೊಟ್ಟರು.


ಲೇವಿಯರಿಗೆ ಸ್ವತ್ತಾಗಿ ದೊರಕಿದ ಪಟ್ಟಣಗಳು: ಆರೋನನ ಸಂತಾನದವರಾದ ಕೇಹಾತನ ಗೋತ್ರದವರಿಗೆ ಚೀಟು ಮೊದಲು ಬಿದ್ದಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು