Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 21:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಕೆಹಾತ್ಯರಿಗೋಸ್ಕರ ಚೀಟುಹಾಕಿದಾಗ ಆರೋನನ ವಂಶದವರಾದ ಲೇವಿಯರಿಗೆ ಯೆಹೂದ, ಸಿಮೆಯೋನ್, ಬೆನ್ಯಾಮೀನ್ ಕುಲಗಳಿಂದ ಹದಿಮೂರು ಪಟ್ಟಣಗಳು ದೊರೆತವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಕೆಹಾತ್ಯರಿಗಾಗಿ ಚೀಟು ಹಾಕಿದಾಗ ಆರೋನನ ವಂಶದವರಾದ ಲೇವಿಯರಿಗೆ ಯೆಹೂದ, ಸಿಮೆಯೋನ್ ಮತ್ತು ಬೆನ್ಯಾಮೀನ್ ಕುಲಗಳಿಂದ ಹದಿಮೂರು ನಗರಗಳು ದೊರಕಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಕೆಹಾತ್ಯರಿಗೋಸ್ಕರ ಚೀಟುಹಾಕಿದಾಗ ಆರೋನನ ವಂಶದವರಾದ ಲೇವಿಯರಿಗೆ ಯೆಹೂದ, ಸಿಮೆಯೋನ್, ಬೆನ್ಯಾಮೀನ್ ಕುಲಗಳಿಂದ ಹದಿಮೂರು ಪಟ್ಟಣಗಳು ದೊರಕಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಕೆಹಾತ್ಯರ ಒಂದು ಭಾಗಕ್ಕೆ ಯೆಹೂದ, ಸಿಮೆಯೋನ್ ಮತ್ತು ಬೆನ್ಯಾಮೀನ್ ಕುಲಗಳ ಭೂಭಾಗದಿಂದ ಹದಿಮೂರು ಪಟ್ಟಣಗಳನ್ನು ಕೊಡಲಾಯಿತು, ಕೆಹಾತ್ಯರು ಲೇವಿ ಕುಲದವನೂ ಯಾಜಕನೂ ಆದ ಆರೋನನ ಸಂತತಿಯವರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಕೊಹಾತ್ಯರ ಗೋತ್ರಗಳಿಗೆ ಚೀಟು ಬಂದಾಗ ಲೇವಿಯರಲ್ಲಿ ಯಾಜಕನಾದ ಆರೋನನ ಮಕ್ಕಳಿಗೆ ಯೆಹೂದದ ಗೋತ್ರದಲ್ಲಿಯೂ, ಸಿಮೆಯೋನನ ಗೋತ್ರದಲ್ಲಿಯೂ, ಬೆನ್ಯಾಮೀನನ ಗೋತ್ರದಲ್ಲಿಯೂ ಹದಿಮೂರು ಪಟ್ಟಣಗಳು ಚೀಟಿಯಿಂದ ದೊರಕಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 21:4
9 ತಿಳಿವುಗಳ ಹೋಲಿಕೆ  

ಆರೋನನ ಮಗನಾದ ಎಲಿಯಾಜರನು ಮರಣ ಹೊಂದಿದನು. ಅವನ ಶವವನ್ನು ಎಫ್ರಾಯೀಮ್ ಪರ್ವತ ಪ್ರಾಂತ್ಯದಲ್ಲಿ ಅವನ ಮಗನಾದ ಫೀನೆಹಾಸನ ಪಾಲಿಗೆ ಬಂದ ಗುಡ್ಡದಲ್ಲಿ ಸಮಾಧಿಮಾಡಿದರು.


ಕೆಹಾತ್ ವಂಶದವರಲ್ಲಿ ಅಮ್ರಾಮ್ ಗೋತ್ರದವರು, ಇಚ್ಹಾರ್ ಗೋತ್ರದವರೂ, ಹೆಬ್ರೋನ್ ಗೋತ್ರದವರೂ, ಉಜ್ಜೀಯೇಲ್ ಗೋತ್ರದವರೂ ಇದ್ದರು.


ಅವರು ಯೆಹೋವನ ಆಜ್ಞೆಯಂತೆ ತಮ್ಮ ಸ್ವತ್ತಿನಿಂದ ಕೆಳಗೆ ಬರೆದಷ್ಟು ಪಟ್ಟಣಗಳನ್ನೂ ಅವುಗಳಿಗೆ ಸೇರಿದ ಗೋಮಾಳಗಳನ್ನೂ ಅವರಿಗೆ ಕೊಟ್ಟರು.


ಉಳಿದ ಕೆಹಾತ್ಯರಿಗೆ ಎಫ್ರಾಯೀಮ್ ದಾನ್ ಕುಲಗಳಿಂದ ಮನಸ್ಸೆಯ ಅರ್ಧಕುಲದಿಂದಲೂ ಹತ್ತು ಪಟ್ಟಣಗಳು ಸಿಕ್ಕಿದವು.


ವಂಶಾವಳಿಗಳ ಪ್ರಕಾರ ಲೇವಿಯರ ಮಕ್ಕಳು: ಗೇರ್ಷೋನ್, ಕೆಹಾತ್, ಮೆರಾರೀ, ಇವರೇ. ಲೇವಿಯು ನೂರ ಮೂವತ್ತೇಳು ವರ್ಷ ಬದುಕಿದ್ದನು.


ಅಮ್ರಾಮನು ತನ್ನ ತಂದೆಯ ತಂಗಿ ಯೋಕೆಬೆದಳನ್ನು ಮದುವೆಮಾಡಿಕೊಂಡನು. ಆಕೆಯು ಅವನಿಗೆ ಆರೋನನನ್ನೂ, ಮೋಶೆಯನ್ನೂ ಹೆತ್ತಳು. ಅಮ್ರಾಮನು ನೂರಮೂವತ್ತೇಳು ವರ್ಷ ಬದುಕಿದನು.


ಇವನ ಬಲಗಡೆಯಲ್ಲಿ ನಿಲ್ಲುತ್ತಿದ್ದ ಇವನ ಸಹೋದರನಾದ ಆಸಾಫನು ಎರಡನೆಯವನು. ಇವನು ಬೆರೆಕ್ಯನ ಮಗ, ಇವನು ಶಿಮ್ಮನ ಮಗ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು