Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 21:45 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45 ಯೆಹೋವನು ಇಸ್ರಾಯೇಲ್ಯರಿಗೆ ಮಾಡಿದ ಅತಿ ಶ್ರೇಷ್ಠ ವಾಗ್ದಾನಗಳಲ್ಲಿ ಒಂದೂ ತಪ್ಪಿ ಹೋಗಲಿಲ್ಲ. ಎಲ್ಲವೂ ನೆರವೇರಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

45 ಸರ್ವೇಶ್ವರ ಇಸ್ರಯೇಲರಿಗೆ ಮಾಡಿದ ಅತ್ಯುನ್ನತ ವಾಗ್ದಾನಗಳಲ್ಲಿ ಒಂದೂ ತಪ್ಪಿಹೋಗಲಿಲ್ಲ. ಎಲ್ಲವೂ ನೆರವೇರಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

45 ಆತನು ಇಸ್ರಾಯೇಲ್ಯರಿಗೆ ಮಾಡಿದ ಅತಿ ಶ್ರೇಷ್ಠವಾಗ್ದಾನಗಳಲ್ಲಿ ಒಂದೂ ತಪ್ಪಿಹೋಗಲಿಲ್ಲ. ಎಲ್ಲಾ ನೆರವೇರಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

45 ಯೆಹೋವನು ಇಸ್ರೇಲರಿಗೆ ಮಾಡಿದ ಪ್ರತಿಯೊಂದು ವಾಗ್ದಾನವನ್ನು ನೆರವೇರಿಸಿದನು. ಆತನು ಕಾರ್ಯರೂಪಕ್ಕೆ ತರದ ವಾಗ್ದನವೇ ಉಳಿಯಲಿಲ್ಲ. ಪ್ರತಿಯೊಂದು ವಾಗ್ದಾನವೂ ನೆರವೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

45 ಯೆಹೋವ ದೇವರು ಇಸ್ರಾಯೇಲರಿಗೆ ಹೇಳಿದ ಅತಿ ಶ್ರೇಷ್ಠವಾಗ್ದಾನಗಳಲ್ಲಿ ಒಂದಾದರೂ ಬಿದ್ದು ಹೋಗಲಿಲ್ಲ. ಎಲ್ಲಾ ನೆರವೇರಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 21:45
13 ತಿಳಿವುಗಳ ಹೋಲಿಕೆ  

“ತಾನು ವಾಗ್ದಾನ ಮಾಡಿದಂತೆ ತನ್ನ ಪ್ರಜೆಗಳಾದ ಇಸ್ರಾಯೇಲರಿಗೆ ವಿಶ್ರಾಂತಿಯನ್ನು ಅನುಗ್ರಹಿಸಿದ ಯೆಹೋವನಿಗೆ ಸ್ತೋತ್ರವಾಗಲಿ. ಆತನು ತನ್ನ ಸೇವಕನಾದ ಮೋಶೆಯ ಮುಖಾಂತರವಾಗಿ ಮಾಡಿದ ಅತಿ ಶ್ರೇಷ್ಠ ವಾಗ್ದಾನಗಳಲ್ಲಿ ಒಂದೂ ತಪ್ಪಿ ಹೋಗಲಿಲ್ಲ.


ದೇವರು ಮನುಷ್ಯನಂತೆ ಎರಡು ಮಾತಿನವನಲ್ಲ. ಮಾನವನಂತೆ ಮನಸ್ಸನ್ನು ಬದಲಾಯಿಸುವವನಲ್ಲ. ತಾನು ಹೇಳಿದ ಪ್ರಕಾರ ನಡೆಯದಿರುತ್ತಾನೆಯೇ? ಮಾತುಕೊಟ್ಟ ನಂತರ ನೆರವೇರಿಸುವುದಿಲ್ಲವೋ?


ನಿಮ್ಮನ್ನು ಕರೆದವನು ನಂಬಿಗಸ್ತನು, ಆತನು ತನ್ನ ಕಾರ್ಯವನ್ನು ಸಾಧಿಸುವನು.


ತನ್ನ ಮಗನೂ ಹಾಗೂ ನಮ್ಮ ಕರ್ತನಾಗಿರುವ ಯೇಸು ಕ್ರಿಸ್ತನ ಅನ್ಯೋನ್ಯತೆಗೆ ನಿಮ್ಮನ್ನು ಕರೆದ ದೇವರು ನಂಬಿಗಸ್ತನು.


ದೇವರ ವಾಗ್ದಾನ ಮತ್ತು ಆಣೆ ಇವೆರಡೂ ನಿಶ್ಚಲವಾದ ಆಧಾರಗಳು ಏಕೆಂದರೆ ದೇವರು ಸುಳ್ಳಾಡುವವನಲ್ಲ. ಅದುದರಿಂದ ಆಶ್ರಯವನ್ನು ಹೊಂದಬೇಕೆಂದು ಓಡಿಬಂದು, ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡಿದುಕೊಂಡವರಾದ ನಮಗೆ ಬಲವಾದ ಪ್ರೋತ್ಸಾಹ ಉಂಟಾಯಿತು.


ತಂದೆಯಾದ ದೇವರಿಂದ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನಿಂದ ನಿನಗೆ ಕೃಪೆ, ಕರುಣೆ ಮತ್ತು ಶಾಂತಿ ದೊರಕಲಿ.


ಯಾಕೋಬನ ಮನೆತನವೇ, ಕೇಳು, ಈವರೆಗೂ ನಡೆದ ಸಂಗತಿಗಳನ್ನು ಪುರಾತನಕಾಲದಲ್ಲಿಯೇ ತಿಳಿಸಿದೆನು. ಹೌದು, ನನ್ನ ಬಾಯಿಂದ ಹೊರಟವು, ನಾನು ಅವುಗಳನ್ನು ಪ್ರಕಟಿಸಿದೆನು. ನಾನು ತಟ್ಟನೆ ನಡೆಸಲು ಅವು ನೆರವೇರಿದವು.


ಸಮುವೇಲನು ದೊಡ್ಡವನಾಗುತ್ತಾ ಬಂದನು. ಯೆಹೋವನು ಅವನೊಡನೆ ಇದ್ದುದ್ದರಿಂದ ಅವನ ಪ್ರವಾದನೆಗಳಲ್ಲಿ ಒಂದೂ ಬಿದ್ದುಹೋಗಲಿಲ್ಲ.


“ಇಸ್ರಾಯೇಲ್ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ. ನನ್ನ ತಂದೆಯಾದ ದಾವೀದನಿಗೆ ಆತನ ಬಾಯಿ ನುಡಿದಿದ್ದನ್ನು ಆತನ ಹಸ್ತವು ಈಗ ನೆರವೇರಿಸಿದೆ.


ಯೆಹೋವನು ತಾನು ಕೊಟ್ಟ ಮಾತನ್ನು ನೆರವೇರಿಸಿದನು. ಆತನ ವಾಗ್ದಾನದಂತೆ ನಾನು ನನ್ನ ತಂದೆಯಾದ ದಾವೀದನಿಗೆ ಬದಲಾಗಿ ಇಸ್ರಾಯೇಲ್ ಸಿಂಹಾಸನದ ಮೇಲೆ ಅರಸನಾಗಿ ಕುಳಿತುಕೊಂಡು ಇಸ್ರಾಯೇಲ್ ದೇವರಾದ ಯೆಹೋವನಿಗೋಸ್ಕರ ಈ ಆಲಯವನ್ನು ಕಟ್ಟಿದೆನು.


ನಿನ್ನ ಸೇವಕನೂ ನನ್ನ ತಂದೆಯೂ ಆದ ದಾವೀದನಿಗೆ ಕೊಟ್ಟ ಮಾತನ್ನು ನೆರವೇರಿಸಿರುವೆ. ನಿನ್ನ ಬಾಯಿ ನುಡಿದಿದ್ದನ್ನು ನಿನ್ನ ಹಸ್ತವು ಈಗ ನೆರವೇರಿಸಿದೆ.


ಅವನು ಯಥಾರ್ಥಚಿತ್ತನೆಂದು ಕಂಡು ಅವನಿಗೆ, ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜ್ಜೀಯರು, ಯೆಬೂಸಿಯರು, ಗಿರ್ಗಾಷಿಯರು ಇವರ ದೇಶವನ್ನು ನಿನ್ನ ಸಂತಾನದವರಿಗೆ ಕೊಡುತ್ತೇನೆಂದು ವಾಗ್ದಾನಮಾಡಿ ಅದನ್ನು ನೆರವೇರಿಸಿದ್ದರಿಂದ ನೀನು ನೀತಿಸ್ವರೂಪನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು